NEWSನಮ್ಮರಾಜ್ಯಶಿಕ್ಷಣ-

ರಾಜ್ಯದಲ್ಲಿ ಹೆಚ್ಚುತ್ತಿರುವ ಖಾಸಗಿ ಶಿಕ್ಷಣ ಸಂಸ್ಥೆಗಳ ಶುಲ್ಕ ದಂಧೆಗೆ ಕಡಿವಾಣ ಹಾಕಿ: AAP ಆಗ್ರಹ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ರಾಜ್ಯದಲ್ಲಿ ಸರ್ಕಾರಿ ಶಿಕ್ಷಣ ವ್ಯವಸ್ಥೆ ಹದಗೆಟ್ಟಿದೆ. ಸರ್ಕಾರಿ ಶಿಕ್ಷಣ ಸಂಸ್ಥೆಗಳ ಅವ್ಯವಸ್ಥೆಯಿಂದಾಗಿಯೇ ಖಾಸಗಿ ಶಾಲೆಗಳ ಮೊರೆಹೋಗುತ್ತಿದ್ದಾರೆ. ಖಾಸಗಿ ಶಿಕ್ಷಣ ಸಂಸ್ಥೆಗಳ ಶುಲ್ಕ ದಂಧೆ ಮಿತಿಮೀರುತ್ತಿದ್ದು, ಇದಕ್ಕೆ ಕಡಿವಾಣ ಬೀಳಬೇಕು ಎಂದು ಆಮ್ ಆದ್ಮಿ ಪಾರ್ಟಿಯ ರಾಜ್ಯ ಮಾಧ್ಯಮ ಸಂಚಾಲಕ ಜಗದೀಶ್ ವಿ.ಸದಂ ಒತ್ತಾಯಿಸಿದರು.

ನಗರದಲ್ಲಿ ನಡೆದ ಇಂದು ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೆಹಲಿಯಲ್ಲಿ ಖಾಸಗಿ ಶಾಲೆಗಳ ಮೇಲೆ ಕಟ್ಟುನಿಟ್ಟಿನ ನಿಯಂತ್ರಣ ಹೇರಿದೆ. ರಾಜ್ಯದಲ್ಲಿ ಖಾಸಗಿ ಶಿಕ್ಷಣ ಸಂಸ್ಥೆಗಳು ಪ್ರತಿವರ್ಷ ಶೇ.15 ರಷ್ಟು ಶುಲ್ಕ ಹೆಚ್ಚಳ ಮಾಡುವ ಕುರಿತು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿವೆ.

ಆದರೆ, ರಾಜ್ಯದಲ್ಲಿ ಶುಲ್ಕ ನಿಯಂತ್ರಣ ಪ್ರಾಧಿಕಾರ ಇದೆಯಾ ಎನ್ನುವ ಪ್ರಶ್ನೆ ಮೂಡುತ್ತಿದೆ. ಖಾಸಗಿ ಶಾಲೆಗಳಿಗೆ ಶುಲ್ಕ ನಿಗದಿ ಅಧಿಕಾರ ರಾಜ್ಯ ಸರ್ಕಾರಕ್ಕಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ. ರಾಜ್ಯ ಸರ್ಕಾರ ಹೈಕೋರ್ಟ್ ಮುಂದೆ ಸಮರ್ಪಕ ವಾದ ಮಂಡಿಸದಿರುವುದೇ ಇದಕ್ಕೆ ಕಾರಣ ಎಂದು ಹೇಳಿದರು.

ರಾಜ್ಯ ಸರ್ಕಾರ ಸಹ ಖಾಸಗಿ ಶಾಲೆಗಳೊಂದಿಗೆ ಕೈಜೋಡಿಸಿದೆ. ಈ ಶೈಕ್ಷಣಿಕ ವರ್ಷದಲ್ಲಾದರೂ ಖಾಸಗಿ ಶಾಲೆಗಳ ಶುಲ್ಕ ದಂಧೆಯಿಂದ ಪೋಷಕರನ್ನು ರಕ್ಷಿಸಲು ಕ್ರಮ ಕೈಗೊಳ್ಳಬೇಕು. ಖಾಸಗಿ ಶಾಲೆಗಳ ವಸೂಲಿಗೆ ಶುಲ್ಕ ನಿಯಂತ್ರಣ ಪ್ರಾಧಿಕಾರವು ತಡೆ ನೀಡಬೇಕು ಎಂದು ಆಗ್ರಹಿಸಿದರು.

ಇನ್ನು ರಾಜ್ಯದಲ್ಲಿ ಇದೀಗ ಚುನಾವಣೆ ಮುಗಿದಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇತ್ತ ಗಮನಹರಿಸಬೇಕು. ಕೂಡಲೇ ಸಭೆ ಕರೆದು, ನ್ಯಾಯಾಲಯದ ಆದೇಶ ಕುರಿತು ಕಾನೂನು ತಜ್ಞರೊಂದಿಗೆ ಚರ್ಚಿಸಿ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಜಗದೀಶ್ ಸದಂ ಒತ್ತಾಯಿಸಿದರು.

ಬೆಂಗಳೂರಿನಲ್ಲಿ ಬಡ ಕುಟುಂಬವೊಂದು ತನ್ನ ಗಳಿಕೆಗಿಂತ ಶೇ.40ರಷ್ಟು ಹೆಚ್ಚುವರಿಯಾಗಿ ಮಗುವೊಂದರ ಶಿಕ್ಷಣಕ್ಕೆ ಖರ್ಚು ಮಾಡಬೇಕಿದೆ. ಖಾಸಗಿ ಶಾಲೆಗಳು ಶುಲ್ಕ ಏರಿಕೆ ಮಾಡಿದಾಗ, ಪೋಷಕರು ಮಕ್ಕಳ ಶಾಲೆ ಬದಲಿಸುವ ಅನಿವಾರ್ಯತೆ ಎದುರಾಗುತ್ತದೆ. ಸರ್ಕಾರ ಶುಲ್ಕ ದಂಧೆಗೆ ಕಡಿವಾಣ ಹಾಕಬೇಕಿದೆ ಎಂದು ಆಮ್ ಆದ್ಮಿ ಪಾರ್ಟಿಯ ರಾಜ್ಯ ಖಜಾಂಚಿ ಪ್ರಕಾಶ್ ನೆಡುಂಗಡಿ ಹೇಳಿದರು.

ಇನ್ನು ಕ್ಷೇತ್ರ ಶಿಕ್ಷಣಾಧಿಕಾರಿಗಳು ಪ್ರತಿ ಶಾಲೆಗೆ ಭೇಟಿ ನೀಡಿ ಎಷ್ಟು ಶುಲ್ಕ ಹೆಚ್ಚಿಸಲಾಗಿದೆ ಎಂಬುದರ ಮೇಲೆ ನಿಗಾ ಇಡಬೇಕು. ಹೆಚ್ಚು ಶುಲ್ಕ ಏರಿಕೆ ಕಂಡುಬಂದಲ್ಲಿ ಅಂತಹ ಶಾಲೆಗಳೊಂದಿಗೆ ಚರ್ಚಿಸಿ ಶುಲ್ಕ ಏರಿಕೆಯನ್ನು ಕಡಿಮೆ ಮಾಡಬೇಕು ಎಂದು ನೆಡುಂಗಡಿ ಹೇಳಿದರು.

ಶಿಕ್ಷಣದ ಹಕ್ಕು ಪ್ರತಿಯೊಬ್ಬರಿಗೂ ಇದೆ. ಹೀಗಿದ್ದರೂ, ಅಧಿಕ ಶುಲ್ಕ ನೀಡಬೇಕಾಗಿದೆ. ರಾಜ್ಯ ರಾಜಕಾರಣಿಗಳ ಒಡೆತನದಲ್ಲಿಯೇ ಬಹುತೇಕ ಖಾಸಗಿ ಶಾಲೆಗಳು ಮತ್ತು ವೈದ್ಯಕೀಯ ಸಂಸ್ಥೆಗಳಿವೆ. ಹೀಗಾಗಿಯೇ ಶುಲ್ಕ ದಂಧೆ ಬಗ್ಗೆ ತಲೆಕೆಡಿಸಿಕೊಳ್ಳುತ್ತಿಲ್ಲ ಎಂದು ರಾಜ್ಯ ಯುವ ಘಟಕದ ರಾಜ್ಯಾಧ್ಯಕ್ಷ ಲೋಹಿತ್ ಹನುಮಾಪುರ ಕಿಡಿಕಾರಿದರು.

ಇನ್ನು ಬಟ್ಟೆ, ಶೂಗಳನ್ನು ಎಲ್ಲಿಂದ ಕೊಂಡುಕೊಳ್ಳಬೇಕು ಎಂಬುದನ್ನು ಶಾಲೆಗಳೇ ನಿರ್ಧರಿಸುತ್ತಿವೆ. ಇದು ವ್ಯಾಪಾರವಾಗಿ ಮಾರ್ಪಟ್ಟಿದೆ. ಈ ಬಗ್ಗೆ ಪೋಷಕರು ಎಚ್ಚೆತ್ತುಕೊಳ್ಳಬೇಕು. ಶುಲ್ಕವನ್ನಷ್ಟೇ ಅಲ್ಲದೆ ಶಾಲೆಗಳು ಬೇರೆ ಯಾವುದಕ್ಕೆಲ್ಲ ಹಣ ವಸೂಲಿ ಮಾಡುತ್ತಿವೆ ಎಂಬುದರತ್ತ ಗಮನಹರಿಸಬೇಕು ಎಂದು ತಿಳಿಸಿದರು.

Leave a Reply

error: Content is protected !!
LATEST
KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ