NEWSನಮ್ಮರಾಜ್ಯರಾಜಕೀಯ

ರಾಷ್ಟ್ರಪತಿ ಜತೆ ಸಚಿವ ಸೋಮಶೇಖರ್ ವೇದಿಕೆ ಹಂಚಿಕೊಳ್ಳುವುದಕ್ಕೆ ತಡೆ ಕೋರಿ ರಾಜ್ಯಪಾಲರಿಗೆ ಎಎಪಿ ಮನವಿ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕೋನದಾಸಪುರದ ವಸತಿ ಯೋಜನೆಯಲ್ಲಿ ಅಕ್ರಮ ಎಸಗಿದ ಕಳಂಕ ಹೊತ್ತಿರುವ ಸಚಿವ ಎಸ್.ಟಿ.ಸೋಮಶೇಖರ್‌ರವರಿಗೆ ಮೈಸೂರಿನ ದಸರಾ ಉತ್ಸವದಲ್ಲಿ ರಾಷ್ಟ್ರಪತಿಯವರ ಜೊತೆ ವೇದಿಕೆ ಹಂಚಿಕೊಳ್ಳಲು ಅವಕಾಶ ನೀಡಬಾರದು ಎಂದು ಕೋರಿ ಆಮ್‌ ಆದ್ಮಿ ಪಾರ್ಟಿಯ ರಾಜ್ಯ ವಕ್ತಾರ ಹಾಗೂ ಮಾಜಿ ಕೆಎಎಸ್‌ ಅಧಿಕಾರಿ ಕೆ.ಮಥಾಯಿ ನೇತೃತ್ವದ ನಿಯೋಗವು ರಾಜ್ಯಪಾಲರಿಗೆ ಮನವಿ ಸಲ್ಲಿಸಿತು.

ಇದೇ ವೇಳೆ ಮಾಧ್ಯಮಗಳ ಜೊತೆ ಮಾತನಾಡಿದ ಕೆ.ಮಥಾಯಿ, ಮೈಸೂರಿನ ದಸರಾ ಉತ್ಸವಕ್ಕೆ ಐತಿಹಾಸಿಕ ಹಾಗೂ ಧಾರ್ಮಿಕವಾಗಿ ಬಹಳ ಮಹತ್ವವಿದೆ. ನಾಡಿಗೆ ಅಪಾರ ಕೊಡುಗೆ ನೀಡಿ ರಾಜರುಗಳು, ನಾಯಕರು ಹಾಗೂ ಗಣ್ಯ ವ್ಯಕ್ತಿಗಳು ದಸರಾದಲ್ಲಿ ಭಾಗವಹಿಸಿದ್ದಾರೆ. ಈ ವರ್ಷ ಕೂಡ ರಾಷ್ಟ್ರಪತಿ ಸೇರಿದಂತೆ ಅನೇಕ ಗಣ್ಯರು ದಸರಾ ಉತ್ಸವದಲ್ಲಿ ಭಾಗವಹಿಸಲಿದ್ದಾರೆ.

ಕೋನದಾಸಪುರದಲ್ಲಿ ಬಹುಮಹಡಿ ವಸತಿ ಸಮುಚ್ಚಯ ನಿರ್ಮಾಣ ಅಕ್ರಮಕ್ಕೆ ಸಂಬಂಧಿಸಿ ಸಹಕಾರ ಸಚಿವ ಎಸ್.ಟಿ.ಸೋಮಶೇಖರ್‌ ವಿರುದ್ಧ ಎಫ್‌ಐಆರ್‌ ದಾಖಲಾಗಿದ್ದು, ಅವರು ದಸರಾ ಉತ್ಸವದಲ್ಲಿ ಭಾಗವಹಿಸಿ ಕಾರ್ಯಕ್ರಮಕ್ಕೆ ಕಳಂಕ ತರಬಾರದು ಎಂದು ಹೇಳಿದರು.

“ಕಳಂಕಿತ ಸಚಿವ ಎಸ್.ಟಿ.ಸೋಮಶೇಖರ್‌ರವರು ದಸರಾ ಉತ್ಸವದಲ್ಲಿ ರಾಷ್ಟ್ರಪತಿಯವರ ಜೊತೆ ವೇದಿಕೆ ಹಂಚಿಕೊಳ್ಳುವುದನ್ನು ತಡೆಹಿಡಿಯಬೇಕೆಂದು ಕೋರಿ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಗಿದೆ. ನಾಡಹಬ್ಬದ ಘನತೆ ಉಳಿಸಲು ಅವರು ನಮ್ಮ ಮನವಿಗೆ ಸೂಕ್ತ ರೀತಿಯಲ್ಲಿ ಸ್ಪಂದಿಸುತ್ತಾರೆ ಎಂಬ ವಿಶ್ವಾಸವಿದೆ.

ಭ್ರಷ್ಟ ಸಚಿವರು ಸರ್ಕಾರದ ಉನ್ನತ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದಕ್ಕೆ ರಾಜ್ಯಪಾಲರು ಅವಕಾಶ ನೀಡದಿದ್ದರೆ, ಎಲ್ಲ ಭ್ರಷ್ಟ ಜನಪ್ರತಿನಿಧಿಗಳಿಗೂ ಇದೊಂದು ಎಚ್ಚರಿಕೆಯ ಗಂಟೆಯಾಗುತ್ತದೆ” ಎಂದು ಕೆ.ಮಥಾಯಿ ಹೇಳಿದರು.

ಇದೇ ಸಂದರ್ಭದಲ್ಲಿ ಹಾಜರಿದ್ದ ಸಂಘಟನ ಕಾರ್ಯದರ್ಶಿ ಸುರೇಶ್ ರಾಥೋಡ್ ಮಾತನಾಡುತ್ತಾ “ಕೋನದಾಸಪುರದಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು ₹567 ಕೋಟಿ ವೆಚ್ಚದಲ್ಲಿ ಬಹುಮಹಡಿ ವಸತಿ ಸಮುಚ್ಚಯ ನಿರ್ಮಾಣ ಹಗರಣಕ್ಕೆ ಸಂಬಂಧಿಸಿ ಲೋಕಾಯುಕ್ತ ಕಚೇರಿಯಲ್ಲಿ ಸಾಕ್ಷಿ ಸಹಿತ ದೂರು ದಾಖಲಾಗಿದೆ.

29.5 ಕೋಟಿ ರೂಪಾಯಿ ಲಂಚ ಪಡೆದಿರುವ ಆರೋಪದಲ್ಲಿ ಎಸ್‌.ಟಿ. ಸೋಮಶೇಖರ್‌, ಬಿ.ಎಸ್‌.ಯಡಿಯೂರಪ್ಪ, ಬಿ.ವೈ. ವಿಜಯೇಂದ್ರ ಸೇರಿದಂತೆ ಒಟ್ಟು ಒಂಬತ್ತು ಮಂದಿಯು ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ಇಂತಹ ಗಂಭೀರ ಆರೋಪ ಹೊತ್ತಿರುವ ಸಚಿವ ಸೋಮಶೇಖರ್‌ರವರು ಸಚಿವ ಸ್ಥಾನದಲ್ಲಿ ಮುಂದುವರಿದಿರುವುದೇ ತಪ್ಪು. ಅದರಲ್ಲೂ ಅವರು ರಾಷ್ಟ್ರಪತಿಯವರ ಜೊತೆ ವೇದಿಕೆ ಹಂಚುಕೊಳ್ಳುವುದು ಇನ್ನೂ ದೊಡ್ಡ ತಪ್ಪು” ಎಂದು ಹೇಳಿದರು.

ನಿಯೋಗದಲ್ಲಿ ಚನ್ನಪ್ಪಗೌಡ ನೆಲ್ಲೂರು, ವಿಶ್ವನಾಥ್, ವೇಣುಗೋಪಾಲ್, ಮಹೇಶ್ ಬಾಬು ಸೇರಿದಂತೆ ಇನ್ನಿತರರು ಇದ್ದರು.

Leave a Reply

error: Content is protected !!
LATEST
ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು ಗಂಭೀರ ಸ್ವರೂಪ ಪಡೆಯುತ್ತಿದೆ ದೆಹಲಿ ರೈತರ ಹೋರಾಟ: ನ.26ರಿಂದ ಉಪವಾಸ ಸತ್ಯಾಗ್ರಹ