Please assign a menu to the primary menu location under menu

NEWSನಮ್ಮಜಿಲ್ಲೆರಾಜಕೀಯ

ಪ್ರಿಯಾಕ್‌ ಖರ್ಗೆ ವಿರುದ್ಧ ಮಹಿಳಾ ಆಯೋಗಕ್ಕೆ ಎಎಪಿ ದೂರು

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಯುವತಿಯರು ಸರಕಾರಿ ಕೆಲಸ ಪಡೆಯಲು ಮಂಚ ಹತ್ತಬೇಕು ಎಂದು ವಿವಾದಾತ್ಮಕ ಹೇಳಿಕೆ ನೀಡಿರುವ ಮಾಜಿ ಸಚಿವ ಪ್ರಿಯಾಂಕ ಖರ್ಗೆ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಆಮ್‌ ಆದ್ಮಿ ಪಾರ್ಟಿಯ ಮಹಿಳಾ ಘಟಕವು ರಾಜ್ಯ ಮಹಿಳಾ ಆಯೋಗಕ್ಕೆ ಇಂದು ಮನವಿ ಸಲ್ಲಿಸಿತು.

ಈ ವೇಳೆ ಸುದ್ದಿಗಾರರ ಜತೆ ಮಾತನಾಡಿದ ಎಎಪಿಯ ಬೆಂಗಳೂರು ನಗರ ಮಹಿಳಾ ಘಟಕದ ಅಧ್ಯಕ್ಷೆ ಕುಶಲಸ್ವಾಮಿ, “ಮಾಜಿ ಸಚಿವ ಪ್ರಿಯಾಂಕ ಖರ್ಗೆಯವರು ಆ.12 ರಂದು ಕಲಬುರಗಿಯಲ್ಲಿ ಆಯೋಜಿಸಿದ್ದ ಸುದ್ದಿಗೊಷ್ಠಿಯಲ್ಲಿ ಮಾತನಾಡುವಾಗ ಮಹಿಳೆಯರ ವಿರುದ್ಧ ನಾಲಿಗೆ ಹರಿಬಿಟ್ಟಿದ್ದಾರೆ ಎಂದು ಕಿಡಿಕಾರಿದರು.

ಇನ್ನು ಇದು ಲಂಚ-ಮಂಚದ ಸರಕಾರ, ಯುವಕರಿಗೆ ನೌಕರಿ ಬೇಕಂದ್ರೆ ಲಂಚ ಕೊಡಬೇಕು. ಯುವತಿಯರಿಗೆ ನೌಕರಿ ಬೇಕೆಂದರೆ ಮಂಚ ಹತ್ತಬೇಕು ಎನ್ನುವ ಕೀಳು ಹೇಳಿಕೆ ನೀಡಿದ್ದಾರೆ. ಇದು ಉದ್ಯೋಗಸ್ಥ ಹಾಗೂ ಉದ್ಯೋಗಾಕಾಂಕ್ಷಿ ಮಹಿಳೆಯರಿಗೆ ಮಾಡಿರುವ ಅವಮಾನವಾಗಿದ್ದು, ಮಹಿಳಾ ಆಯೋಗವು ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಮಾಧ್ಯಮ ವಕ್ತಾರೆ ಉಷಾ ಮೋಹನ್ ಮಾತನಾಡಿ, ರಾಜಕೀಯವಾಗಿ ತಮ್ಮ ಬೇಳೆ ಬೇಯಿಸಿಕೊಳ್ಳುವ ನಿಟ್ಟಿನಲ್ಲಿ ಬಿಜೆಪಿ, ಕಾಂಗ್ರೆಸ್‌ ಹಾಗೂ ಜೆಡಿಎಸ್‌ ನಾಯಕರು ಕೀಳು ಹೇಳಿಕೆ ನೀಡುವುದು ಹೊಸತೇನಲ್ಲ.

ಆದರೆ ರಾಜ್ಯದ ರಾಜಕೀಯ ಇತಿಹಾಸದಲ್ಲಿ ಪ್ರಮುಖ ಪಾತ್ರವಹಿಸಿರುವ ರಾಜಕೀಯ ಕುಟುಂಬದ ಕುಡಿಯಾಗಿರುವ ಪ್ರಿಯಾಂಕ್‌ ಅವರು ಸರಕಾರಿ ಕೆಲಸ ಪಡೆಯುವ ಎಲ್ಲ ಮಹಿಳಾ ಅಭ್ಯರ್ಥಿಗಳ ಮೇಲೆ ಕಪ್ಪು ಚುಕ್ಕೆ ಬರುವಂತಹ ಹೇಳಿಕೆ ನೀಡಿದ್ದಾರೆ. ಈ ಹೇಳಿಕೆಯ ತೀವ್ರತೆಯನ್ನು ಗಮನಿಸಿ ರಾಜ್ಯ ಮಹಿಳಾ ಆಯೋಗವು ಸ್ವಯಂಪ್ರೇರಿತ ದೂರು ದಾಖಲಿಸಿಕೊಳ್ಳಬೇಕು ಎಂದು ಒತ್ತಾಯಿಸಿದರು.

ಆಮ್‌ ಆದ್ಮಿ ಪಾರ್ಟಿಯ ಮಹಿಳಾ ಮುಖಂಡರು ಭಾಗವಹಿಸಿದ್ದರು.

Leave a Reply

error: Content is protected !!
LATEST
KSRTC: ಯಾರದೋ ಆರ್ಥಿಕ ಲಾಭಕ್ಕಾಗಿ 4 ವರ್ಷಕ್ಕೊಮ್ಮೆ ನಡೆಯೋ ಈ ಚೌಕಾಸಿ ಪದ್ಧತಿ ಬಿಟ್ಟು ಶಾಶ್ವತ ಪರಿಹಾರಕ್ಕೆ ಬದ್ಧರಾಗೋ... KSRTC: ರಸ್ತೆಗಿಳಿದ 20 ಹೊಸ ಅಂಬಾರಿ ಉತ್ಸವ ಸ್ಲೀಪರ್​​ ಬಸ್​ಗಳು- ಸಚಿವರಿಂದ ಲೋಕಾರ್ಪಣೆ KSRTCಗೆ ₹6543 ಕೋಟಿ ಅನುದಾನ ಬಿಡುಗಡೆ ಮಾಡಿರುವ ನಮಗೆ ₹414 ಕೋಟಿ ಬಿಡುಗಡೆ ಮಾಡುವುದು ಕಷ್ಟವೇ: ರಾಮಲಿಂಗಾರೆಡ್ಡಿ ಗಾಯಾಳು ಅಯ್ಯಪ್ಪ ಮಾಲಾಧಾರಿಗಳ ಆರೋಗ್ಯ ವಿಚಾರಿಸಿದ ಸಚಿವ ಪರಮೇಶ್ವರ್‌ KSRTC ಅಧಿಕಾರಿಗಳಿಲ್ಲದ ಡಿ.31ರ ಸಾರಿಗೆ ಮುಷ್ಕರ ನೌಕರರ ಹರಕೆ ಕುರಿ ಮಾಡುವ ಹೋರಾಟವೇ..!? BBMP- ₹2 ಕೋಟಿ ವೆಚ್ಚದಲ್ಲಿ ರಾಜಕಾಲುವೆ ಅಭಿವೃದ್ಧಿ : ಆಯುಕ್ತ ತುಷಾರ್ ಗಿರಿನಾಥ್ ಡಿ.31 ರಂದು ಇಳಕಲ್‌ನಲ್ಲಿ ಇಪಿಎಸ್ 95 ಪಿಂಚಣಿದಾರರ ಬೃಹತ್‌ ಸಮಾವೇಶ ಚನ್ನರಾಯಪಟ್ಟಣ ರೈತ ನಿಯೋಗದಿಂದ ಸಿಎಂ ಭೇಟಿ: ಭೂ ಸ್ವಾಧೀನ ಕೈಬಿಡಲು ಮನವಿ KSRTC: ಟಿಸಿಗಳಿಂದ ಪ್ರತಿ ತಿಂಗಳು ಸಾವಿರ ರೂ. ಭಿಕ್ಷೆ ಬೇಡುತ್ತಿರುವ ಡಿಸಿ, ಡಿಟಿಒಗಳು..! ಇ-ಖಾತಾ ಕಾಲಮಿತಿಯೊಳಗೆ ಅಧಿಕಾರಿಗಳು ವಿಲೇಮಾಡಿ: ತುಷಾರ್ ಗಿರಿನಾಥ್