CrimeNEWSನಮ್ಮರಾಜ್ಯ

ಮಾಜಿ ಸಚಿವ ಸುಧಾಕರ್ ವಿರುದ್ಧ ಕ್ರಿಮಿನಲ್ ಕೇಸ್‌ದಾಖಲಿಸಲು ಐಸಿಎಂಆರ್‌ಗೆ ಎಎಪಿ ದೂರು

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಆಮ್ ಆದ್ಮಿ ಪಕ್ಷವು ಕಳೆದ ಮೂರು ದಿನಗಳ ಹಿಂದೆ ಪತ್ರಿಕಾಗೋಷ್ಠಿಯನ್ನು ನಡೆಸಿ ಕಿದ್ವಾಯಿ ಸ್ಮಾರಕ ಕ್ಯಾನ್ಸರ್ ಆಸ್ಪತ್ರೆಯ 140 ಕೋಟಿ ರೂ.ಗಳ ಬೃಹತ್ ಹಗರಣವನ್ನು ಬಯಲು ಗೆಳೆದಿತ್ತು ಈ ಸಂಬಂಧ 330 ಪುಟಗಳ ದಾಖಲೆಯನ್ನು ಸಹ ಬಹಿರಂಗಗೊಳಿಸಿತ್ತು. ಅಕ್ರಮ ಕೋವಿಡ್ ಟೆಸ್ಟ್ ಗಳನ್ನು ಮಾಡಿ ನೂರಾರು ಕೋಟಿ ಅಕ್ರಮ ಅವ್ಯವಹಾರಗಳನ್ನು ನಡೆಸಿದ ಹಗರಣವನ್ನು ಬಯಲು ಮಾಡಲಾಗಿತ್ತು.

ಈ ಸಂಬಂಧ ಸುದ್ದಿಗಾರರೊಂದಿಗೆ ಮಾತನಾಡಿದ ಪಕ್ಷದ ಸಂಘಟನಾ ಕಾರ್ಯದರ್ಶಿ ಬಿ.ಟಿ.ನಾಗಣ್ಣ “ಪಕ್ಷದ ಕಾನೂನು ಘಟಕವು ಈ ಬೃಹತ್ ಹಗರಣದ ರೂವಾರಿ ಹಾಗೂ ಪ್ರಮುಖ ಆರೋಪಿ ಅಂದಿನ ಆರೋಗ್ಯ ಮತ್ತು ವೈದ್ಯಕೀಯ ಸಚಿವ ಡಾ. ಸುಧಾಕರ್, ಕಿದ್ವಾಯಿ ಗ್ರಂಥೀ ಸಂಸ್ಥೆಯ ಮಾಜಿ ನಿರ್ದೇಶಕ ಡಾ. ಸಿ.ರಾಮಚಂದ್ರ ಹಾಗೂ ಬಿಎಂಸಿ ( ಬೆಂಗಳೂರು ಮೆಡಿಕಲ್ ಕೌನ್ಸಿಲ್ ) ಮಾಲೀಕ ಎಸ್.ಪಿ.ರಕ್ಷಿತ್ ಅವರ ಮೇಲೆ ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆಗೆ (ಐಸಿಎಂಆರ್) ದೂರು ನೀಡಲಾಗಿದೆ ಎಂದು ತಿಳಿಸಿದರು.

ಇನ್ನು ಈ ಕೂಡಲೇ ಕಿದ್ವಾಯಿ ಸ್ಮಾರಕ ಗ್ರಂಥಿ ಕ್ಯಾನ್ಸರ್ ಆಸ್ಪತ್ರೆ ಹಾಗೂ ಆರೋಪಿತ ಬಿಎಂಎಸ್ ಸಂಸ್ಥೆಯ ನಡುವಿನ ಒಪ್ಪಂದ ಪತ್ರ (MOU) ರದ್ದುಗೊಳಿಸಬೇಕು. ಹಗರಣದಲ್ಲಿ ಪಾಲ್ಗೊಂಡಿದ್ದ ಎಲ್ಲ ಪ್ರಭಾವಿಗಳ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲು ಕ್ರಮ ತೆಗೆದುಕೊಳ್ಳಬೇಕು ಮತ್ತು ತಪ್ಪಿತಸ್ತರ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳುವ ಮೂಲಕ ಅಕ್ರಮ ಎಸಗಿರುವ ನೂರಾರು ಕೋಟಿ ರೂಪಾಯಿಗಳನ್ನು ವಸೂಲು ಮಾಡಬೇಕೆಂದು ದೂರಿನಲ್ಲಿ ವಿವರಿಸಲಾಗಿದೆ ಎಂದು ನಾಗಣ್ಣ ವಿವರಿಸಿದರು.

ಪಕ್ಷದ ರಾಜ್ಯ ಯುವ ಘಟಕದ ಅಧ್ಯಕ್ಷ ಹಾಗೂ ಪಕ್ಷದ ಕಾನೂನು ಘಟಕದ ವಕೀಲರಾದ ಲೋಹಿತ್ ಜಿ. ಹನುಮಪುರ ಮಾತನಾಡಿ , ರಾಜ್ಯದಲ್ಲಿನ ಎಲ್ಲ ಆರೋಗ್ಯ ಇಲಾಖೆ ಹಾಗೂ ವೈದ್ಯಕೀಯ ಇಲಾಖೆಗಳ ಆಸ್ಪತ್ರೆಗಳಲ್ಲಿ ನಡೆಯುತ್ತಿರುವ ರೋಗ ತಪಾಸಣೆ ವಿಭಾಗವನ್ನು ಖಾಸಗಿ ಲ್ಯಾಬೋರೇಟರಿಗಳಿಗೆ ನೀಡಿ ಸಾವಿರಾರು ಕೋಟಿ ರೂ. ತೆರಿಗೆದಾರರ ಹಣವನ್ನು ಲೂಟಿ ಮಾಡುತ್ತಿರುವ ವ್ಯವಸ್ಥೆಯನ್ನು ಸಮಗ್ರವಾಗಿ ದಾಖಲೆಗಳ ಸಮೇತ ಮುಂಬರುವ ದಿನಗಳಲ್ಲಿ ಬಹಿರಂಗಗೊಳಿಸಲಾಗುವುದು, ಸರ್ಕಾರ ಕೂಡಲೇ ಎಚ್ಚೆತ್ತುಕೊಂಡು ಇಂತಹ ಖಾಸಗಿ ಲ್ಯಾಬೋರೇಟರಿಗಳ ಹಗಲು ದರೋಡೆ ನಿಲ್ಲಿಸಬೇಕು ಎಂದು ಒತ್ತಾಯಿಸಿದರು.

Leave a Reply

error: Content is protected !!
LATEST
ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು ಗಂಭೀರ ಸ್ವರೂಪ ಪಡೆಯುತ್ತಿದೆ ದೆಹಲಿ ರೈತರ ಹೋರಾಟ: ನ.26ರಿಂದ ಉಪವಾಸ ಸತ್ಯಾಗ್ರಹ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಸಾಗರದಂತೆ ಬನ್ನಿ: ಮೀರಾ ಶಿವಲಿಂಗಯ್ಯ ಕರೆ SC, ST ಅಲೆಮಾರಿ ಸಮುದಾಯಗಳ ಯೋಜನೆಗಳು ಸದ್ಬಳಕೆ ಆಗಬೇಕು: ಡಿಸಿ ಶಿವಶಂಕರ ಸಿಮೆಂಟ್ ಲಾರಿಗೆ ಕಾರು ಡಿಕ್ಕಿ: ತಂದೆ, 2ವರ್ಷದ ಮಗು ಮೃತ, ತಾಯಿ ಸ್ಥಿತಿ ಗಂಭೀರ KSRTC: ವಾರದೊಳಗೆ ವೇತನ ಹೆಚ್ಚಳದ 38ತಿಂಗಳ ಹಿಂಬಾಕಿ ನಿವೃತ್ತ ನೌಕರರ ಬ್ಯಾಂಕ್‌ ಖಾತೆಗೆ ಜಮಾ!