NEWSಕೃಷಿರಾಜಕೀಯ

ರೈತರ ಹೋರಾಟ ಹತ್ತಿಕ್ಕುವ ಪ್ರಯತ್ನಕ್ಕೆ ಎಎಪಿ ಖಂಡನೆ : ರಾಜ್ಯ ಕಾರ್ಯದರ್ಶಿ ನಾಗಣ್ಣ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕಬ್ಬು ಸೇರಿದಂತೆ ವಿವಿಧ ಬೆಳೆಗಳಿಗೆ ವೈಜ್ಞಾನಿಕ ಬೆಲೆ ನಿಗದಿ ಮಾಡಬೇಕು ಎಂದು ಆಗ್ರಹಿಸಿ ಮಂಡ್ಯದಲ್ಲಿ ರೈತರ ನಡೆಸುತ್ತಿದ್ದ ಪ್ರತಿಭಟನೆಯನ್ನು ಬಲವಂತವಾಗಿ ಹತ್ತಿಕ್ಕಿದ ಪೊಲೀಸರ ಕ್ರಮವನ್ನು ಆಮ್‌ ಆದ್ಮಿ ಪಾರ್ಟಿ ರಾಜ್ಯ ಕಾರ್ಯದರ್ಶಿ ಬಿ.ಟಿ.ನಾಗಣ್ಣ ಖಂಡಿಸಿದ್ದಾರೆ.

ಆಮ್‌ ಆದ್ಮಿ ಪಾರ್ಟಿಯ ರಾಜ್ಯ ಕಚೇರಿಯಲ್ಲಿ ಇಂದು ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನ್ಯಾಯಯುತ ಬೇಡಿಕೆಗಳನ್ನು ಮುಂದಿಟ್ಟುಕೊಂಡು ರೈತರು ಕಳೆದ 52 ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದರೂ ರಾಜ್ಯ ಬಿಜೆಪಿ ಸರ್ಕಾರ ಸ್ಪಂದಿಸಿರಲಿಲ್ಲ.

ಈಗ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಬಂದಾಗ ಸರ್ಕಾರಕ್ಕೆ ಮುಜುಗರವಾಗಬಾರದು ಎಂದು ಕಾರಣಕ್ಕೆ ಪೊಲೀಸರನ್ನು ಬಳಸಿಕೊಂಡು ಬಲವಂತವಾಗಿ ಅವರ ಹೋರಾಟವನ್ನು ಹತ್ತಿಕ್ಕಲಾಗಿದೆ. ರೈತರ ಟೆಂಟುಗಳನ್ನು ಕಿತ್ತೆಸೆದು, ಅವರನ್ನು ಬಂಧಿಸುವ ಮೂಲಕ ಪೊಲೀಸರು ರೈತರ ಮೇಲೆ ದೌರ್ಜನ್ಯ ಎಸಗಿದ್ದಾರೆ. ಪ್ರತಿಭಟಿಸುವ ಹಕ್ಕನ್ನು ಈ ರೀತಿ ಹತ್ತಿಕ್ಕುವುದು ಖಂಡನೀಯ ಎಂದು ಹೇಳಿದರು.

ಸಿಎಂ ಬಸವರಾಜ ಬೊಮ್ಮಾಯಿಯವರಿಗೆ ರೈತರ ಬಗ್ಗೆ ಸ್ವಲ್ಪವಾದರೂ ಕಾಳಜಿಯಿದ್ದರೆ ಪ್ರತಿಭಟನಾನಿರತ ರೈತ ಮುಖಂಡರ ಜೊತೆ ಮಾತುಕತೆ ನಡೆಸಬೇಕಿತ್ತು. ಆದರೆ ಚುನಾವಣಾ ತಯಾರಿ, ಸಂಪುಟ ವಿಸ್ತರಣೆ ಕಸರತ್ತಿನಲ್ಲೇ ಮಗ್ನವಾಗಿರುವ ಮುಖ್ಯಮಂತ್ರಿಯವರಿಗೆ ರೈತರ ಹಿತರಕ್ಷಣೆ ಬೇಕಾಗಿಲ್ಲ.

ಸಿಎಂ ಬೊಮ್ಮಾಯಿಯವರು ಕೇವಲ ಬಿಜೆಪಿ ಹೈಕಮಾಂಡ್‌ ಮೆಚ್ಚಿಸಲು ಅಧಿಕಾರ ನಡೆಸುತ್ತಿದ್ದಾರೆ. ಜನಸಾಮಾನ್ಯರ ಹಿತವನ್ನು ನಿರ್ಲಕ್ಷಿಸುತ್ತಿರುವ ಬಿಜೆಪಿ ಆಡಳಿತಕ್ಕೆ ಅಂತ್ಯ ಹಾಡಲು ನಾಡಿನ ರೈತರು ಒಂದುಗೂಡಬೇಕು ಎಂದು ಬಿ.ಟಿ.ನಾಗಣ್ಣ ಹೇಳಿದರು.

ಅಮಿತ್‌ ಶಾ ಬರುತ್ತಾರೆಂಬ ಕಾರಣಕ್ಕೆ ವಿಧಾನಮಂಡಲ ಅಧಿವೇಶನವನ್ನು ಒಂದು ದಿನ ಮೊದಲೇ ಅಂತ್ಯಗೊಳಿಸಲಾಗುತ್ತಿದೆ. ಡಿಸೆಂಬರ್‌ 30ರ ತನಕ ಅಧಿವೇಶನ ನಡೆಯಲಿದೆ ಎಂದು ತಿಳಿಸಿದ್ದ ಸರ್ಕಾರವು 29ಕ್ಕೇ ಕೊನೆಗೊಳಿಸುತ್ತಿದೆ. ಈ ಮೂಲಕ ನಾಡಿನ ಹಿತಕ್ಕಿಂತ ಪಕ್ಷದ ನಾಯಕರೇ ಮುಖ್ಯವೆಂಬ ಕೆಟ್ಟ ಸಂದೇಶವನ್ನು ಸಿಎಂ ಬಸವರಾಜ ಬೊಮ್ಮಾಯಿ ನೀಡುತ್ತಿದ್ದಾರೆ. ನಾಡಿನ ಜ್ವಲಂತ ಸಮಸ್ಯೆಗಳ ಬಗ್ಗೆ ಸರಿಯಾದ ಚರ್ಚೆಯನ್ನೇ ನಡೆಸದೇ ಕಲಾಪವನ್ನು ವ್ಯರ್ಥ ಮಾಡಿದ್ದಾರೆ ಎಂದು ಬಿ.ಟಿ.ನಾಗಣ್ಣ ಹೇಳಿದರು.

Leave a Reply

error: Content is protected !!
LATEST
ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ?