ಬೆಂಗಳೂರು: ಬಿಜೆಪಿಯ 40 % ಕಮಿಷನ್ ಮೇಲ್ಸೇತುವೆ ನಾಮ ಫಲಕ ಉದ್ಘಾಟಿಸಿದ ಎಎಪಿ – ಪೊಲೀಸರಿಂದ ಬಂಧನ
ಬೆಂಗಳೂರು: ಶಿವಾನಂದ ಮೇಲ್ಸೇತುವೆಯ ಬಳಿ ಆಮ್ ಆದ್ಮಿ ಪಕ್ಷದ ನೂರಾರು ಕಾರ್ಯಕರ್ತರು 40 % ಕಮಿಷನ್ ಮೇಲ್ಸೇತುವೆ ಎಂಬ ನಾಮ ಫಲಕವನ್ನು ಉದ್ಘಾಟಿಸುವ ಮೂಲಕ ಬೆಂಗಳೂರಿಗರಿಗೆ ಲೋಕಾರ್ಪಣೆ ಮಾಡುವ ಸಂದರ್ಭದಲ್ಲಿ ಪೊಲೀಸರು ಪಕ್ಷದ ಕಾರ್ಯಕರ್ತರನ್ನು ಬಂಧಿಸಿದರು.
ಪ್ರತಿಭಟನೆಯ ನೇತೃತ್ವವನ್ನು ವಹಿಸಿ ಮಾತನಾಡಿದ ಬೆಂಗಳೂರು ನಗರ ಅಧ್ಯಕ್ಷ ಮೋಹನ್ ದಾಸರಿ, ಈ ಸ್ಟೀಲ್ ಮೇಲ್ಸೇತುವೆಯು 19 ಕೋಟಿ ರೂ.ಗೆ ಆರಂಭಗೊಂಡು ಇಂದು 7 ವರ್ಷಗಳ ನಂತರ 39ಕೋಟಿ ರೂ.ವೆಚ್ಚ ಮಾಡಿಯೂ ಸಹ ಅತ್ಯಂತ ಕಳಪೆ ಕಾಮಗಾರಿಯ ಮೂಲಕ ಇಂದು ಬಿಜೆಪಿ ಸರಕಾರ ಬೆಂಗಳೂರಿಗರ ತೆರಿಗೆ ಹಣವನ್ನು ಲೂಟಿ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಬೆಂಗಳೂರಿನಲ್ಲಿ ಇದೇ ರೀತಿಯ ಅನೇಕ ಕಾಮಗಾರಿಗಳನ್ನು ಬಿಜೆಪಿ ಸರ್ಕಾರವು 3ಮತ್ತು 4ಪಟ್ಟು ಹೆಚ್ಚಿಸಿ ಸಮಯ ವ್ಯರ್ಥ ಮಾಡಿ ಎಂದು 40 %ಕಮಿಷನ್ ದಂಧೆಯಲ್ಲಿ ಮುಳುಗಿರುವುದನ್ನು ಮುಂದಿನ ದಿನಗಳಲ್ಲಿ ಜನತೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಮೋಹನ್ ದಾಸ್ ಎಚ್ಚರಿಸಿದರು.
ಪ್ರತಿಭಟನೆಯಲ್ಲಿ ಪಕ್ಷದ ಉಪಾಧ್ಯಕ್ಷ ವಿಜಯ್ ಶರ್ಮಾ, ಮುಖಂಡರಾದ ಜಗದೀಶ್ ವಿ.ಸದಂ , ಸುರೇಶ್ ರಾಥೋಡ್, ಚನ್ನಪ್ಪಗೌಡ ನಲ್ಲೂರು,ಶಾಶಾವಲಿ, ಉಷಾ ಮೋಹನ್, ಸುಹಾಸಿನಿ ಪಣಿರಾಜ್, ಗೋಪಿನಾಥ್ ಸೇರಿದಂತೆ ಅನೇಕ ಕಾರ್ಯಕರ್ತರು ಉಪಸ್ಥಿತರಿದ್ದರು.