NEWSರಾಜಕೀಯ

ಡಿಕೆಶಿ ಸಹೋದರಿಯ ಪತಿ, ಕೆಪಿಸಿಸಿ ಕಾರ್ಯಕಾರಿಣಿ ಸಮಿತಿ ಸದಸ್ಯ ಸಿ.ಪಿ.ಶರತ್‌ ಚಂದ್ರ ಆಮ್‌ ಆದ್ಮಿ ಪಾರ್ಟಿ ಸೇರ್ಪಡೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕೆಪಿಸಿಸಿ ಕಾರ್ಯಕಾರಿಣಿ ಸಮಿತಿ ಸದಸ್ಯ ಹಾಗೂ ಡಿ.ಕೆ.ಶಿವಕುಮಾರ್‌ ಅವರ ಸಹೋದರಿಯ ಪತಿ ಸಿ.ಪಿ.ಶರತ್‌ ಚಂದ್ರ ಅವರು ಆಮ್‌ ಆದ್ಮಿ ಪಾರ್ಟಿಗೆ ಇಂದು ಸೇರ್ಪಡೆಯಾದರು.

ಪಕ್ಷದ ಪ್ರಚಾರ ಹಾಗೂ ಜನಸಂಪರ್ಕ ಸಮಿತಿ ಅಧ್ಯಕ್ಷ ಮುಖ್ಯಮಂತ್ರಿ ಚಂದ್ರು ಹಾಗೂ ಪ್ರಣಾಳಿಕೆ ಸಮಿತಿ ಅಧ್ಯಕ್ಷ ಭಾಸ್ಕರ್‌ ರಾವ್‌ ಅವರ ಸಮ್ಮುಖದಲ್ಲಿ ಪಕ್ಷ ಸೇರ್ಪಡೆ ಕಾರ್ಯಕ್ರಮ ನಡೆಯಿತು.

ಆಮ್‌ ಆದ್ಮಿ ಪಾರ್ಟಿಯ ರಾಜ್ಯ ಕಚೇರಿಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಮಾತನಾಡಿದ ಮುಖ್ಯಮಂತ್ರಿ ಚಂದ್ರು, ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಜನಾನುರಾಗಿ ನಾಯಕ ಸಿ.ಪಿ.ಶರತ್‌ ಚಂದ್ರರವರು ಆಮ್‌ ಆದ್ಮಿ ಪಾರ್ಟಿಗೆ ಸೇರ್ಪಡೆಯಾಗುತ್ತಿರುವುದು ಆ ಭಾಗದಲ್ಲಿನ ಪಕ್ಷದ ಸಂಘಟನೆಗೆ ಆನೆಬಲ ತಂದುಕೊಡಲಿದೆ.

ಬಿಜೆಪಿ, ಕಾಂಗ್ರೆಸ್‌, ಜೆಡಿಎಸ್‌ ಮುಂತಾದ ಸಾಂಪ್ರದಾಯಿಕ ಪಕ್ಷಗಳ ನಿಷ್ಕ್ರಿಯತೆ, ಭ್ರಷ್ಟಾಚಾರ ಹಾಗೂ ಜನವಿರೋಧಿ ನಿಲುವುಗಳಿಂದಾಗಿ ಆ ಪಕ್ಷಗಳ ಪ್ರಾಮಾಣಿಕ ನಾಯಕರು ಆಮ್‌ ಆದ್ಮಿ ಪಾರ್ಟಿ ಸೇರುತ್ತಿದ್ದಾರೆ ಎಂದು ಹೇಳಿದರು.

ಸಿ.ಪಿ.ಶರತ್‌ ಚಂದ್ರರವರನ್ನು ಪರಿಚಯಿಸಿದ ಭಾಸ್ಕರ್‌ ರಾವ್, “ಕಾನೂನು ಪದವೀಧರರಾದ ಸಿ.ಪಿ.ಶರತ್‌ ಚಂದ್ರ ಅವರು ಉದ್ಯಮಿ ಹಾಗೂ ರೈತರು ಕೂಡ ಹೌದು. ವಿಜಯ ಬ್ಯಾಂಕ್‌ ಉದ್ಯೋಗಿಯಾಗಿದ್ದ ಸಂದರ್ಭದಲ್ಲಿ ಅಲ್ಲಿನ ಉದ್ಯೋಗಿಗಳ ಸಂಘದ ಉಪಾಧ್ಯಕ್ಷರಾಗಿ, ಬ್ಯಾಂಕ್‌ ನೌಕರರ ಸಮಸ್ಯೆಗಳನ್ನು ಬಗೆಹರಿಸಲು ಶ್ರಮಿಸಿದ್ದರು.

2013, 2014, 2019ರ ಚುನಾವಣೆಗಳ ಸಂದರ್ಭದಲ್ಲಿ ಬೆಂಗಳೂರು ಗ್ರಾಮಾಂತರದಲ್ಲಿ ಕಾಂಗ್ರೆಸ್‌ ಪರ ಪ್ರಚಾರ ಮಾಡಿದ ಅನುಭವ ಹೊಂದಿದ್ದಾರೆ. ಸಿಎಎ, ಎನ್‌ಆರ್‌ಸಿ, ಎನ್‌ಪಿಆರ್‌, ನೋಟು ಅಮಾನ್ಯೀಕರಣ ವಿರುದ್ಧದ ಹೋರಾಟಗಳಲ್ಲಿ ಕೂಡ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು.

ಕೋವಿಡ್‌ ಸಮಯದಲ್ಲಿ ರೇಷನ್‌ ಕಿಟ್‌ ವಿತರಣೆ, ಔಷಧ ವಿತರಣೆ, ರಕ್ತದಾನ ಶಿಬಿರಗಳ ಆಯೋಜನೆ, ಆಸ್ಪತ್ರೆಗೆ ದಾಖಲಾಗಲು ನೆರವು, ಮೃತ ರೋಗಿಗಳ ಅಂತ್ಯಕ್ರಿಯೆಗೆ ಸಹಾಯ ಸೇರಿದಂತೆ ಹತ್ತುಹಲವು ರೀತಿಯ ಸೇವೆಯಲ್ಲಿ ಭಾಗಿಯಾಗಿ ಜನರ ಮೆಚ್ಚುಗೆಗೆ ಪಾತ್ರರಾಗಿದ್ದರು. 2021-22ರ ಪ್ರವಾಹದ ಸಂದರ್ಭದಲ್ಲಿ ಸಂಕಷ್ಟದಲ್ಲಿದ್ದ ಚನ್ನಪಟ್ಟಣದ ಜನರಿಗೆ ವಸತಿ, ರೇಷನ್‌ ಕಿಟಿ, ಹಣಕಾಸು ನೆರವು ಮುಂತಾದ ಸಹಾಯ ಮಾಡಿದ್ದರು” ಎಂದು ತಿಳಿಸಿದರು.

ಪಕ್ಷ ಸೇರಿ ಮಾತನಾಡಿದ ಸಿ.ಪಿ.ಶರತ್‌ ಚಂದ್ರ, ಆಮ್‌ ಆದ್ಮಿ ಪಾರ್ಟಿಯು ದೆಹಲಿ ಹಾಗೂ ಪಂಜಾಬ್‌ನಲ್ಲಿ ನೀಡುತ್ತಿರುವ ಆಡಳಿತವು ಅತ್ಯಂತ ಜನಪರ ಹಾಗೂ ದಕ್ಷವಾಗಿದೆ. ದೆಹಲಿಯಲ್ಲಿ ಶಿಕ್ಷಣ, ಆರೋಗ್ಯ ಹಾಗೂ ಮೂಲಸೌಕರ್ಯಗಳಲ್ಲಿ ತಂದಿರುವ ಕ್ರಾಂತಿಕಾರಿ ಬದಲಾವಣೆಗಳು ಇಡೀ ದೇಶಕ್ಕೆ ಮಾದರಿಯಾಗಿವೆ. ಕರ್ನಾಟಕದಲ್ಲೂ ಪ್ರಾಮಾಣಿಕ, ದಕ್ಷ ಹಾಗೂ ಜನಪರ ಆಡಳಿತ ಬರಬೇಕೆಂಬ ಸದುದ್ದೇಶದಿಂದ ಆಮ್‌ ಆದ್ಮಿ ಪಾರ್ಟಿಗೆ ಸೇರ್ಪಡೆಯಾಗುತ್ತಿದ್ದೇನೆ ಎಂದು ಹೇಳಿದರು.

Leave a Reply

error: Content is protected !!
LATEST
KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು ಗಂಭೀರ ಸ್ವರೂಪ ಪಡೆಯುತ್ತಿದೆ ದೆಹಲಿ ರೈತರ ಹೋರಾಟ: ನ.26ರಿಂದ ಉಪವಾಸ ಸತ್ಯಾಗ್ರಹ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಸಾಗರದಂತೆ ಬನ್ನಿ: ಮೀರಾ ಶಿವಲಿಂಗಯ್ಯ ಕರೆ SC, ST ಅಲೆಮಾರಿ ಸಮುದಾಯಗಳ ಯೋಜನೆಗಳು ಸದ್ಬಳಕೆ ಆಗಬೇಕು: ಡಿಸಿ ಶಿವಶಂಕರ