NEWSದೇಶ-ವಿದೇಶನಮ್ಮರಾಜ್ಯರಾಜಕೀಯ

ಪ್ರಧಾನಿ ಮೋದಿ, ಅಮಿತ್‌ ಶಾಗೆ ಎಎಪಿಯ ಕೇಜ್ರಿವಾಲ್‌, ಮಾನ್‌ ಎಂದರೆ ಭಯ: ಪೃಥ್ವಿ ರೆಡ್ಡಿ

ವಿಜಯಪಥ ಸಮಗ್ರ ಸುದ್ದಿ

ದಾವಣಗೆರೆ: ಬದಲಾವಣೆಯು ಪ್ರಕೃತಿಯ ಸಹಜ ನಿಯಮ. ಕರ್ನಾಟಕದಲ್ಲಿ ಸರ್ಕಾರ ಹಾಗೂ ಆಡಳಿತ ಪಕ್ಷವನ್ನು ಹಲವು ಬಾರಿ ಬದಲಿಸಿದ್ದೇವೆ. ಆದರೆ ಕರ್ನಾಟಕದ ರಾಜಕೀಯ ಪರಿಸ್ಥಿತಿಯನ್ನು ಬದಲಿಸಲು ಇನ್ನೂ ಕೂಡ ಮಾತ್ರ ಸಾಧ್ಯವಾಗಿಲ್ಲ. ಆ ಬದಲಾವಣೆಗಾಗಿ ಎಎಪಿಯನ್ನು ಬೆಂಬಲಿಸಿ ಎಂದು ಪಕ್ಷದ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ ಮನವಿ ಮಾಡಿದರು.

ಇಂದು ದಾವಣಗೆರೆಯಲ್ಲಿ ನಡೆದ ಆಮ್‌ ಆದ್ಮಿ ಪಾರ್ಟಿಯ ಬೃಹತ್‌ ಸಮಾವೇಶದಲ್ಲಿ ಮಾತನಾಡಿದ ಅವರು, ಕರ್ನಾಟಕವನ್ನು ಆಳಿದ ಮೂರು ಪಕ್ಷಗಳಲ್ಲೂ ದುರಹಂಕಾರವಿದೆ. ಐದೂ ವರ್ಷಗಳು ಕೆಲಸ ಮಾಡದಿದ್ದರೂ, ಚುನಾವಣೆ ಸಮೀಪಿಸಿದಾಗ ಹಣ ಹಾಗೂ ಇತರೆ ಆಮಿಷಗಳನ್ನು ಹಂಚಿ ಜಯಗಳಿಸಬಹುದು ಎಂದು ಅವು ಭಾವಿಸಿವೆ. ಈ ದುರಹಂಕಾರವನ್ನು ಮುರಿಯಲು ಪೊರಕೆಯೊಂದೇ ಪರಿಹಾರ ಎಂದರು.

ಇನ್ನು ಕರ್ನಾಟಕದಲ್ಲಿ ಆಮ್‌ ಆದ್ಮಿ ಪಾರ್ಟಿ ಚುನಾವಣೆಗೆ ಸ್ಪರ್ಧಿಸುವುದು ಖಚಿತವಾದ ನಂತರ ಇಲ್ಲಿನ ಜನರಲ್ಲಿ ಬದಲಾವಣೆಗಳಾಗಿವೆ. ಬಿಜೆಪಿ, ಕಾಂಗ್ರೆಸ್‌, ಜೆಡಿಎಸ್‌ ಪಕ್ಷಗಳಿಂದ ಸೀರೆ, ಕುಕ್ಕರ್‌, ಟಿವಿ, ಫ್ರಿಜ್‌ ಮುಂತಾದವುಗಳನ್ನು ಪಡೆದ ಜನರು ಕೂಡ ಕರ್ನಾಟಕದಲ್ಲಿ ದೆಹಲಿ ಮಾದರಿಯ ಸರ್ಕಾರಿ ಶಾಲೆ, ಆಸ್ಪತ್ರೆಗಳು ಯಾಕಿಲ್ಲ ಎಂದು ಕೇಳುತ್ತಿದ್ದಾರೆ ಎಂದು ಹೇಳಿದರು.

ಆಮ್‌ ಆದ್ಮಿ ಪಾರ್ಟಿ ಇಡೀ ದೇಶದಲ್ಲಿ ಜನರ ಪ್ರೀತಿ, ವಿಶ್ವಾಸ ಗಳಿಸುತ್ತಿದೆ. ಇದನ್ನು ಗಮನಿಸಿದ ಬಿಜೆಪಿಯ ನರೇಂದ್ರ ಮೋದಿ ಹಾಗೂ ಅಮಿತ್‌ ಶಾ ಅವರಿಗೆ ಅರವಿಂದ್‌ ಕೇಜ್ರಿವಾಲ್‌ ಹಾಗೂ ಭಗವಂತ್‌ ಮಾನ್‌ ಅವರ ಬಗ್ಗೆ ಭಯ ಶುರುವಾಗಿದೆ. ಕೇಜ್ರಿವಾಲ್‌ ಹಾಗೂ ಮಾನ್‌ ಬಗ್ಗೆ ಭಯಕ್ಕಿಂತಲೂ ಮುಖ್ಯವಾಗಿ ಕರ್ನಾಟಕದ ಜನತೆಯ ಬಗ್ಗೆ ಬಿಜೆಪಿಯವರಿಗೆ ಭಯ ಶುರುವಾಗಿದೆ ಎಂದರು.

ಎರಡು ಜೊತೆ ಸಮವಸ್ತ್ರ ನೀಡಲೂ ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಕರ್ನಾಟಕ ಸರ್ಕಾರವು 24,000 ಶಾಲಾ ತರಗತಿ ಕೊಠಡಿಗಳನ್ನು ನಿರ್ಮಿಸುವುದಾಗಿ ಘೋಷಿಸಿದೆ. ಆದರೆ ವಾಸ್ತವವಾಗಿ ವಿದ್ಯಾರ್ಥಿಗಳಿಗೆ ಎರಡು ಜೊತೆ ಸಮವಸ್ತ್ರ ನೀಡಲೂ ಸರ್ಕಾರಕ್ಕೆ ಸಾಧ್ಯವಾಗಿಲ್ಲ. 192 ರೂಪಾಯಿ ಮೊತ್ತದ ಶೂಗಳನ್ನು 320 ರೂಪಾಯಿಗೆ ಖರೀದಿಸಿ, ಅದರಲ್ಲೂ ಕಮಿಷನ್‌ ಹೊಡೆದಿದೆ ಎಂದು ಪೃಥ್ವಿ ರೆಡ್ಡಿ ಹೇಳಿದರು.

ಆಮ್‌ ಆದ್ಮಿ ಪಾರ್ಟಿಯು ದೆಹಲಿ ಎಂಬ ಸಣ್ಣ ರಾಜ್ಯದಲ್ಲೇ 500ಕ್ಕೂ ಹೆಚ್ಚು ಮೊಹಲ್ಲಾ ಕ್ಲಿನಿಕ್‌ಗಳನ್ನು ತೆರೆದಿದೆ. ಆದರೆ ಅದನ್ನು ನಕಲು ಮಾಡಲು ಹೊರಟಿರುವ ರಾಜ್ಯ ಬಿಜೆಪಿ ಸರ್ಕಾರವು ಇಡೀ ಕರ್ನಾಟಕಕ್ಕೆ ಕೇವಲ 483 ನಮ್ಮ ಕ್ಲಿನಿಕ್‌ಗಳನ್ನು ಘೋಷಿಸಿದೆ. ಆಮ್‌ ಆದ್ಮಿ ಪಾರ್ಟಿಯು ದೆಹಲಿಯಲ್ಲಿ 200 ಯೂನಿಟ್‌ ಉಚಿತ ಕರೆಂಟ್‌ ನೀಡುತ್ತಿದೆ. ಕಾಂಗ್ರೆಸ್‌ ಪಕ್ಷವು ಇದನ್ನೇ ನಕಲು ಮಾಡಿ ಇಲ್ಲಿ ಭರವಸೆ ನೀಡುತ್ತಿದೆ. ಕಾಂಗ್ರೆಸ್‌ ಪಕ್ಷವೇ ಆಡಳಿತದಲ್ಲಿರುವ ಹಿಮಾಚಲ ಪ್ರದೇಶ, ರಾಜಸ್ಥಾನ, ಛತ್ತೀಸ್‌ಗಡ ಮತ್ತಿತರ ರಾಜ್ಯಗಳಲ್ಲಿ ಉಚಿತ ವಿದ್ಯುತ್‌ ಏಕಿಲ್ಲ ಎಂದು ಪ್ರಶ್ನಿಸಿದರು.

ಇನ್ನು ಕಾಂಗ್ರೆಸ್‌ಗೆ ಧೈರ್ಯ ಹಾಗೂ ಬದ್ಧತೆಯಿದ್ದರೆ ಆ ರಾಜ್ಯಗಳಲ್ಲಿ ಯೋಜನೆಯನ್ನು ಜಾರಿಗೆ ತಂದು ನಂತರ ಕರ್ನಾಟಕದಲ್ಲಿ ಭರವಸೆ ನೀಡಲಿ. ಇತ್ತೀಚಿನ ದಿನಗಳಲ್ಲಿ ಚುನಾವಣೆ ಸಮೀಪಿಸಿದಾಗ ಶಾಲೆಗಳ ಬಗ್ಗೆ ಮಾತನಾಡುತ್ತಿರುವ ಜೆಡಿಎಸ್‌ನ ಎಚ್.ಡಿ.ಕುಮಾರಸ್ವಾಮಿ ಅವರು ತಾವು ಮುಖ್ಯಮಂತ್ರಿಯಾಗಿದ್ದಾಗ ನಿರ್ಮಿಸಿದ ಒಂದೇ ಒಂದು ಸರ್ಕಾರಿ ಶಾಲೆಯನ್ನು ತೋರಿಸಲಿ ಎಂದು ಪೃಥ್ವಿ ರೆಡ್ಡಿ ಸವಾಲು ಹಾಕಿದರು.

ಬಿಜೆಪಿಯವರು ಡಬಲ್‌ ಇಂಜಿನ್‌ ಸರ್ಕಾರ ಕೊಡುತ್ತೇವೆ ಎಂದು ಹೇಳುತ್ತಾರೆ. ಆದರೆ ನಿಜವಾದ ಡಬಲ್‌ ಇಂಜಿನ್‌ಗಳೆಂದರೆ ಅರವಿಂದ್‌ ಕೇಜ್ರಿವಾಲ್‌ ಹಾಗೂ ಭಗವಂತ್‌ ಮಾನ್‌ ಎಂಬ ಎರಡು ಇಂಜಿನ್‌ಗಳನ್ನು ಹೊಂದಿರುವ ಆಮ್‌ ಆದ್ಮಿ ಪಾರ್ಟಿ. ಇದು ಜೀರೋ ಪರ್ಸೆಂಟ್‌ ಕಮಿಷನ್‌ ಇಂಜಿನ್‌ಗಳು ಎಂದು ಹೇಳಿದರು.

ಇನ್ನು ನೀವು ರಕ್ತ ನೀಡಿದರೆ ನಾನು ಸ್ವಾತಂತ್ರ್ಯ ನೀಡುತ್ತೇನೆ ಎಂದು ಸುಭಾಷ್‌ ಚಂದ್ರ ಬೋಸ್‌ ಅವರು ಸ್ವಾತಂತ್ರ್ಯ ಹೋರಾಟದ ಸಂದರ್ಭದಲ್ಲಿ ಹೇಳಿದ್ದರು. ಆದರೆ ಆಮ್‌ ಆದ್ಮಿ ಪಾರ್ಟಿಯು ಕಾರ್ಯಕರ್ತರಿಂದ ರಕ್ತ ಕೇಳುತ್ತಿಲ್ಲ. ನೀವು ಪಕ್ಷಕ್ಕಾಗಿ ಸಮಯ ಹಾಗೂ ಶ್ರಮ ನೀಡಿದರೆ, ಕರ್ನಾಟಕದಲ್ಲಿ ಆಮ್‌ ಆದ್ಮಿ ಪಾರ್ಟಿ ಅಧಿಕಾರಕ್ಕೆ ಬರಲಿದೆ ಎಂದು ಪೃಥ್ವಿ ರೆಡ್ಡಿ ಭರವಸೆಯ ಮಾತುಗಳನ್ನಾಡಿದರು.

ಆಮ್‌ ಆದ್ಮಿ ಪಾರ್ಟಿಯ ಪ್ರಚಾರ ಸಮಿತಿ ಅಧ್ಯಕ್ಷ ಮುಖ್ಯಮಂತ್ರಿ ಚಂದ್ರು, ಹಾಸ್ಯನಟ ಟೆನಿಸ್ ಕೃಷ್ಣ, ರಾಜ್ಯ ಸಮಿತಿ ಉಪಾಧ್ಯಕ್ಷ ವಿಜಯ್ ಶರ್ಮಾ, ರಾಜ್ಯ ಕಾರ್ಯದರ್ಶಿ ಸಂಚಿತ್ ಸಹನಿ ಸೇರಿದಂತೆ ನೂರಾರು ಮಂದು ಮುಖಂಡರು ಹಾಗೂ ಸಾವಿರಾರು ಮಂದಿ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

Leave a Reply

error: Content is protected !!
LATEST
ರೈಲ್ವೆ ನೌಕರರಿಗೆ ದಸರಾ ಹಬ್ಬದ ಬಂಪರ್: 78 ದಿನಗಳ ಸಂಬಳಕ್ಕೆ ಸಮನಾದ ಬೋನಸ್ ಘೋಷಣೆ ಅ.6ರಂದು ನಿವೃತ್ತ ನೌಕರರ ಸಭೆ: BMTC & KSRTC ನಿವೃತ್ತ ನೌಕರರ ಸಂಘದ ಕಾರ್ಯಧ್ಯಕ್ಷ ನಂಜುಂಡೇಗೌಡ KSRTC ತುಮಕೂರು: ಖಾಸಗಿ ಚಾಲಕರಿಗೆ ಮಣೆ ಹಾಕುವ ಡಿಸಿ, ಡಿಎಂಇ 20-30ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಚಾಲಕರ ಕಡೆಗಣನೆ... ಕರ್ನಾಟಕ - ಆಂಧ್ರ ಗಡಿಯಲ್ಲಿ ಕೆಎಸ್‌ಆರ್‌ಟಿಸಿ ಬಸ್‌ ಸೇವೆ ಹೆಚ್ಚಿಸಿ: ಎರಡೂ ನಿಗಮಗಳ ಎಂಡಿಗಳಿಗೆ ಪ್ರಯಾಣಿಕರ ಒತ್ತಾಯ ಹೆಚ್ಚುವರಿ ಪಿಂಚಣಿಗೆ ಆಗ್ರಹಿಸಿ ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ KSRTC ನಿವೃತ್ತ ನೌಕರರಿಗೆ ಹೆಚ್ಚಿನ ಪಿಂಚಣಿ ಅನುಷ್ಠಾನ ಶೀಘ್ರ ಜಾರಿಗೊಳಿಸಿ: ಕೇಂದ್ರದ ರಾಜ್ಯ ಕಾರ್ಮಿಕ ಸಚಿವರಿಗೆ ಸಂಸದ... ಬಿಸ್ಮಿಲ್ಲ ನಗರದ ಸಮುದಾಯ ಭವನ ಕಾಮಗಾರಿ ಪೂರ್ಣಗೊಳಿಸಲು ಎಎಪಿ ಆಗ್ರಹ KSRTC ಹೊಳೆನರಸೀಪುರ ಘಟಕದ ನೌಕರರಿಗೆ ಕಿರುಕುಳ ಕೊಡುತ್ತಿರುವ DME- ದೂರು ನೀಡಿ 5 ತಿಂಗಳಾದರೂ ಸ್ಪಂದಿಸದ ಎಂಡಿ! BMTC ಚಾಲನಾ ಸಿಬ್ಬಂದಿಗಳಿಗೆ ಗನ್ ಲೈಸನ್ಸ್ ಪಡೆಯಲು ಅನುಮತಿ ನೀಡಬೇಕು: ಲಿಖಿತವಾಗಿ ಎಂಡಿಗೆ ಮನವಿ ಸಲ್ಲಿಸಿದ ನೌಕರ ಅರ್ಕಾವತಿ ಡಿನೋಟಿಫಿಕೇಷನ್ ಪ್ರಕರಣ ಕುರಿತ ಕೆಂಪಣ್ಣ ಆಯೋಗದ ವರದಿ ತಕ್ಷಣ ಬಹಿರಂಗ ಪಡಿಸಿ, ಸದನದಲ್ಲಿ ಮಂಡಿಸಿ: ಎಎಪಿ ಒತ್...