ಬೆಂಗಳೂರು: ದೆಹಲಿ ಸುಗ್ರೀವಾಜ್ಞೆಯ ವಿರುದ್ಧ ಹೋರಾಡಲು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರಿಗೆ ಆಪ್ ಮುಖಂಡರು ಮನವಿ ಮಾಡಿದ್ದಾರೆ.
ಇಂದು (ಜು.26) ಸಂಜೆ ದೇವೇಗೌಡ ಅವರನ್ನು ಅವರ ಮನೆಯಲ್ಲಿ ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಸೇರಿದಂತೆ ಎಎಪಿಯ ಮುಖಂಡರು ಸೌಹಾರ್ದಯುತ ಭೇಟಿಮಾಡಿ ಗೌಡರ ಆರೋಗ್ಯ ವಿಚಾರಿಸಿದರು.
ಈ ವೇಳೆ ರಾಷ್ಟ್ರದಲ್ಲಿ ಪ್ರಜಾಪ್ರಭುತ್ವ , ಸಂವಿಧಾನ ಹಾಗೂ ದೇಶದ ಒಕ್ಕೂಟ ವ್ಯವಸ್ಥೆಯನ್ನು ಉಳಿಸಲು ದೆಹಲಿ ರಾಜ್ಯ ಸರ್ಕಾರದ ವಿರುದ್ಧ ಹೊರಡಿಸಿರುವ ಸುಗ್ರೀವಾಜ್ಞೆಗೆ ರಾಜ್ಯ ಸಭೆಯಲ್ಲಿ ವಿರೋಧ ವ್ಯಕ್ತಪಡಿಸಬೇಕೆಂದು ಮುಖ್ಯಮಂತ್ರಿ ಚಂದ್ರು ದೇವೇಗೌಡ ಅವರಲ್ಲಿ ಮನವಿ ಮಾಡಿದರು.
ಇದೇ ಸಂದರ್ಭದಲ್ಲಿ ಪಕ್ಷದ ರಾಷ್ಟ್ರೀಯ ಜಂಟಿ ಕಾರ್ಯದರ್ಶಿ ಪೃಥ್ವಿ ರೆಡ್ಡಿ, ರಾಜ್ಯ ಸಂಘಟನಾ ಕಾರ್ಯದರ್ಶಿ ಬಿ.ಟಿ. ನಾಗಣ್ಣ , ಸಂವಹನ ಉಸ್ತುವಾರಿ ಬ್ರಿಜೇಶ್ ಕಾಳಪ್ಪ, ಜಗದೀಶ್ ವಿ ಸದಂ, ದರ್ಶನ್ ಜೈನ್, ಬಸವರಾಜ್ ಸೇರಿದಂತೆ ಪಕ್ಷದ ಅನೇಕ ಮುಖಂಡರು ಭಾಗವಹಿಸಿದ್ದರು.