NEWSನಮ್ಮಜಿಲ್ಲೆನಮ್ಮರಾಜ್ಯ

ಕೋರಮಂಗಲದ ಬಿಡಿಎ ಕಾಂಪ್ಲೆಕ್ಸ್ ಕೆಡವಿ ಮಾಲ್ ಕಟ್ಟುವ ಬಿಡಿಎ ನಿರ್ಧಾರಕ್ಕೆ ಎಎಪಿ ವಿರೋಧ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ವಿವಾದಾದತ್ಮಕ ಒಪ್ಪಂದಕ್ಕೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಮರುಜೀವ ನೀಡಲು ಮುಂದಾಗಿದ್ದು, ಏಳು ಬಿಡಿಎ ಕಾಂಪ್ಲೆಕ್ಸ್‌ಗಳನ್ನು ಶಾಪಿಂಗ್ ಮಾಲ್‌ಗಳನ್ನಾಗಿ ಪರಿವರ್ತಿಸಲು ಮುಂದಾಗಿದೆ. ಬಿಡಿಎ ವಾಣಿಜ್ಯ ಸಂಕೀರ್ಣಗಳನ್ನು ಹೊಡೆದು ಮಾಲ್ ಕಟ್ಟುವ ಬಿಡಿಎ ನೀತಿಯ ವಿರುದ್ಧ ಆಮ್ ಆದ್ಮಿ ಪಾರ್ಟಿ ತೀವ್ರ ವಿರೋಧ ವ್ಯಕ್ತಪಡಿಸಿದೆ.

ಬೆಂಗಳೂರು ಮಹಿಳಾ ಘಟಕದ ಅಧ್ಯಕ್ಷೆ ವೀಣಾ ಸೆರಾವು ನೇತೃತ್ವದಲ್ಲಿ ಕೋರಮಂಗಲದ ಬಿಡಿಎ ಕಾಂಪ್ಲೆಕ್ಸ್‌ಗೆ ಭೇಟಿ ನೀಡಿದ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಬಿಡಿಎ ನಿರ್ಧಾರದ ವಿರುದ್ಧ ತೀವ್ರ ವಿರೋಧ ವ್ಯಕ್ತಪಡಿಸಿದರು.

ಈ ವೇಳೆ ಮಾತನಾಡಿದ ವೀಣಾ ಸೆರಾವು, ಒಂದು ಪ್ರದೇಶಕ್ಕೆ ಒಂದು ಮಾಲ್ ಸಾಕು. ಯಶಸ್ವಿಯಾಗಿ ನಡೆಯುತ್ತಿರುವ ಬಿಡಿಎ ಕಾಂಪ್ಲೆಕ್ಸ್ ಅನ್ನು ಒಡೆಯುವುದು ಸರಿಯಲ್ಲ. ಈಗಾಗಲೇ ಸಾಕಷ್ಟು ಸಂಚಾರ ದಟ್ಟಣೆಯಿಂದ ಸಾರ್ವಜನಿಕರಿಗೆ ಕಿರಿಕಿರಿ ಉಂಟಾಗಿದೆ. ಈ ಪ್ರದೇಶಕ್ಕೆ ಸರಿಯಾದ ಫ್ಲೈಓವರ್ ಮತ್ತು ಮೆಟ್ರೋ ಸಂಪರ್ಕವಿಲ್ಲ. ಹೀಗಿರುವಾಗ ಸರ್ಕಾರಿ ಆಸ್ತಿಯನ್ನು ಖಾಸಗೀಕರಣ ಮಾಡುತ್ತಿರುವ ನಿರ್ಧಾರ ಸರಿಯಲ್ಲ. ಮರಗಳನ್ನೆಲ್ಲ ಕಡಿಯಲಾಗಿದೆ. ಇವತ್ತು ಕಾಂಕ್ರೀಟ್ ಕಾಡಾಗಿ ಬೆಂಗಳೂರು ಮಾರ್ಪಟ್ಟಿದೆ ಎಂದರು.

ಬ್ರಾಂಡ್ ಬೆಂಗಳೂರು ಎನ್ನುವ ಡಿ.ಕೆ. ಶಿವಕುಮಾರ್ ಅವರೇ, ಇದೇನಾ ನಿಮ್ಮ ಯೋಜನೆ. ಸಾರ್ವಜನಿಕರಿಗೆ ಉಪಯೋಗವಾಗುವಂತ ಯಾವ ಕೆಲಸವನ್ನು ಮಾಡಿದ್ದೀರಿ. ಖಾಸಗೀಕರಣ ಮಾಡಿ ಅವರಿಂದ ಲಾಭ ಪಡೆಯುವ ಉದ್ದೇಶ ಸರಿಯಲ್ಲ. ಸಾರ್ವಜನಿಕರಿಗೆ ಇದರಿಂದ ಯಾವುದೇ ಉಪಯೋಗವಾಗುವುದಿಲ್ಲ. ಯಾವುದೇ ಕಾರಣಕ್ಕೂ ನಾವು ಬಿಡಿಎ ಕಾಂಪ್ಲೆಕ್ಸ್‌ಗಳನ್ನು ಕೆಡವಲು ಬಿಡುವುದಿಲ್ಲ. ಒಂದು ವೇಳೆ ನೀವು ಕೆಡವಲು ಮುಂದಾದರೆ ನಾವಿಲ್ಲಿಗೇ ಬಂದು ಪ್ರತಿಭಟನೆ ನಡೆಸುತ್ತೇವೆ ಎಂದು ಹೇಳಿದರು.

ಆಮ್ ಆದ್ಮಿ ಪಾರ್ಟಿಯ ರಾಜ್ಯ ಸಂಘಟನಾ ಕಾರ್ಯದರ್ಶಿ ಮೋಹನ್ ದಾಸರಿ ಮಾತನಾಡಿ, ಬಿಡಿಎ ಕಾಂಪ್ಲೆಕ್ಸ್ ಕಟ್ಟಡದ ಕೆಳಭಾಗದಲ್ಲಿ ಹಲವು ಅಂಗಡಿಗಳಿನ್ನು ಕಾರ್ಯನಿರ್ವಹಿಸುತ್ತಿವೆ. ಹೀಗಿದ್ದರೂ, ಮೇಲ್ಭಾಗದಲ್ಲಿ ಕಟ್ಟಡವನ್ನು ಕೆಡವಲು ಮುಂದಾಗಿದ್ದಾರೆ. ನಮ್ಮ ಹೋರಾಟದ ಬಳಿಕ ಕಟ್ಟಡ ಕೆಡವುವ ಪ್ರಕ್ರಿಯೆ ಸದ್ಯಕ್ಕೆ ಸ್ಥಗಿತಗೊಳಿಸಿದ್ದು, ನಾವು ನಮ್ಮ ಹೋರಾಟವನ್ನು ಇಲ್ಲಿಗೆ ನಿಲ್ಲಿಸುತ್ತಿದ್ದೇವೆ. ಮುಂದಿನ ದಿನಗಳಲ್ಲಿ ಮತ್ತೆ ಇದು ಮುಂದುವರಿದರೆ ನಮ್ಮ ಹೋರಾಟವೂ ಮುಂದುವರಿಯಲಿದೆ ಎಂದು ಎಚ್ಚರಿಕೆ ನೀಡಿದರು.

ಬಿಡಿಎ ಕಾಂಪ್ಲೆಕ್ಸ್ ಇರುವುದು ಕೋರಮಂಗಲದ ಸ್ಥಳೀಯರಿಗೆ. ಇಲ್ಲಿ ಏನು ಬೇಕು ಎಂಬುದರ ತೀರ್ಮಾನವನ್ನು ಸಾರ್ವಜನಿಕರೇ ಮಾಡಬೇಕಿದೆ. ಆದರೆ, ರಾತ್ರೋರಾತ್ರಿ ನಿರ್ಧಾರ ಕೈಗೊಂಡು ಕಟ್ಟಡವನ್ನು ಕೆಡವಿ ಮಾಲ್ ನಿರ್ಮಿಸುತ್ತೇವೆ ಎನ್ನುವುದು ಸರಿಯಲ್ಲ. ಈಗಾಗಲೇ ಇಡೀ ಬೆಂಗಳೂರಿನಲ್ಲಿ ಸಂಚಾರ ದಟ್ಟಣೆ ಸಮಸ್ಯೆ ಹೆಚ್ಚಾಗಿದೆ. ಇಷ್ಟು ಶಾಂತಿಯುತವಾಗಿರುವ ಕೋರಮಂಗಲದಲ್ಲಿ ಮತ್ತೊಂದು ಮಾಲ್ ನಿರ್ಮಿಸುವ ಅಗತ್ಯವಿಲ್ಲ ಎಂದು ತಿಳಿಸಿದರು.

ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬೆಂಗಳೂರು ನಗರ ಮಾಧ್ಯಮ ಉಸ್ತುವಾರಿ ಅನಿಲ್ ನಾಚಪ್ಪ ಮಾಧ್ಯಮಗಳೊಂದಿಗೆ ಮಾತನಾಡಿ ” ಕಾಂಪ್ಲೆಕ್ಸ್‌ಗಳನ್ನು ಶಾಪಿಂಗ್ ಮಾಲ್‌ಗಳನ್ನಾಗಿ ಪರಿವರ್ತಿಸಲು 60 ವರ್ಷಗಳಿಗೆ ಒಪ್ಪಂದ ಮಾಡಿಕೊಂಡಿದ್ದು, ಪ್ರತಿವರ್ಷ ಬಿಡಿಎಗೆ 40 ಕೋಟಿ ರೂ.ಗೂ ಅಧಿಕ ಆದಾಯ ಬರಲಿದೆ ಎನ್ನಲಾಗಿದೆ. ಕಳೆದ ಸೆಪ್ಟೆಂಬರ್‌ನಲ್ಲಿ ಈ ಯೋಜನೆಯ ಒಪ್ಪಂದಕ್ಕೆ ರಾಜ್ಯ ಸರ್ಕಾರ ಅನುಮತಿ ನೀಡಿದೆ.

ಕೋರಮಂಗಲ, ಎಚ್‌ಎಸ್‌ಆರ್ ಲೇಔಟ್, ಆರ್‌ಟಿ ನಗರ ಮತ್ತು ಸದಾಶಿವನಗರದಲ್ಲಿರುವ ಬಿಡಿಎ ಕಾಂಪ್ಲೆಕ್ಸ್‌ಗಳನ್ನು ಎಂ-ಎಫ್‌ಎಆರ್ ಡೆವಲಪರ್ಸ್‌ಗೆ ಬಿಡಿಎ ಗುತ್ತಿಗೆ ನೀಡಿದ್ದು, ಇಂದಿರಾನಗರದಲ್ಲಿರುವ ಕಾಂಪ್ಲೆಕ್ಸ್ ಅನ್ನು ಎಂಬೆಸ್ಸಿ ಗ್ರೂಪ್ ಮರು ಅಭಿವೃದ್ಧಿಗೊಳಿಸಲಿದೆ. ಇದು ಭೂಮಾಫಿಯಗಳೊಂದಿಗೆ ಮಾಡಿಕೊಂಡಿರುವ ಅನೈತಿಕ ವ್ಯವಹಾರ ” ಎಂದು ಆರೋಪಿಸಿದರು.

ಪ್ರತಿಭಟನೆಯಲ್ಲಿ ಪಕ್ಷದ ಅನೇಕ ಮುಖಂಡರುಗಳು ಕಾರ್ಯಕರ್ತರುಗಳು ಭಾಗವಹಿಸಿದ್ದರು.

Leave a Reply

error: Content is protected !!
LATEST
BMTC ದಕ್ಷಿಣ ವಿಭಾಗದ 7 ಘಟಕಗಳಲ್ಲೂ ಚಾಲನಾ ಸಿಬ್ಬಂದಿಯೇ ಕಸಗುಡಿಸಬೇಕು- ಕಂಡು ಕಾಣದಂತೆ ವರ್ತಿಸುವ ಡಿಸಿ ಆಶಾಲತಾ ಮೇಡಂ! KKRTC: ಬಾಲ ಬಿಚ್ಚಿದರೇ ನಿಮ್ಮ ತಲೆಗಳನ್ನು ಉರುಳಿಸಬೇಕಾಗುತ್ತದೆ ಎಂದು ನೌಕರರಿಗೆ ಜೀವ ಬೇದರಿಕೆ ಹಾಕಿದ ಡಿಎಂ ಎತ್ತಂಗಡಿ ಸಿಎಂ ಸ್ವಕ್ಷೇತ್ರ ರಂಗಸಮುದ್ರ ಸ್ಮಶಾನ ಭೂಮಿ ಮೇಲು ಬಿದ್ದ ವಕ್ಫ್‌ ಕಣ್ಣು- ಪಹಣಿಯಲ್ಲಿ 2021-22ರಿಂದ ವಕ್ಫ್‌ ಬೋರ್ಡ್ ಹ... BMTC: ಆದಾಯ ಸಂಗ್ರಹಣೆಯಲ್ಲಿ 2ನೇ ಘಟಕ ಪ್ರಥಮ-ಎಲ್ಲರನ್ನೂ ಅಭಿನಂದಿಸಿದ ಸಾರಿಗೆ ಸಚಿವರು, ಅಧಿಕಾರಿಗಳು KKRTC ವಿಜಯಪುರ ವಿಭಾಗದಲ್ಲಿ ಅಂದು ಡ್ಯೂಟಿಗೆ ಹತ್ತಿಸಿದ ಅಧಿಕಾರಿಗಳೇ ಇಂದು ಚಾಲಕನಿಗೆ ಮುಳುವಾಗಿ ನಿಂತಿದ್ದಾರಾ? ನಾಳೆ KSRTC ನೌಕರರಿಗೆ ನಗದು ರಹಿತಾ ವೈದ್ಯಕೀಯ ಚಿಕಿತ್ಸಾ ಯೋಜನೆ ಜಾರಿ ಸಂಬಂಧ ಎಂಡಿ ಅಧ್ಯಕ್ಷತೆಯಲ್ಲಿ ಸಭೆ BMTC: 7ದಿನಗಳಿಂದ LMSನಲ್ಲಿ ರಜೆ ಹಾಕಲಾಗದೆ ನೌಕರರ ಪರದಾಟ- ಸಮಸ್ಯೆ ಗೊತ್ತಿದ್ದರೂ ಅಧಿಕಾರಿಗಳು ಮೌನ BMTC: ಬಸ್‌ ಚಲಾಯಿಸುತ್ತಿದ್ದಾಗಲೇ ಹೃದಯಾಘಾತದಿಂದ ಚಾಲಕ ನಿಧನ- ಸಾರಿಗೆ ಸಚಿವರು, ಎಂಡಿ ಸಂತಾಪ BMTC ಚಿಕ್ಕಲ್ಲಸಂದ್ರ: ಅವೈಜ್ಞಾನಿಕ ಸುತ್ತುವಳಿ ಸಮಯ ನಿಗದಿ ಮಾಡಿರುವುದಲ್ಲದೆ ವ್ಯಕ್ತಿಯೊಬ್ಬನ ದೂರಿಗೆ ಮಣೆಹಾಕಿ ನೌಕರರ... "ಲೋಕಾ"ವಿಚಾರಣೆ ಬಳಿಕ ಮುಗುಳ್ನಗುತ್ತಲೇ ಹೊರ ಬಂದ ಸಿಎಂ ಸಿದ್ದರಾಮಯ್ಯ