Thursday, October 31, 2024
NEWSಶಿಕ್ಷಣ-

ಶಾಲಾ ನಿರ್ವಹಣೆಗೆ ಪೋಷಕರಿಂದ ಶುಲ್ಕ ವಸೂಲಿಗೆ ಆಮ್‌ ಆದ್ಮಿ ಪಾರ್ಟಿ ವಿರೋಧ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಮುಖ್ಯಮಂತ್ರಿ ಹಾಗೂ ಸಚಿವರ 40% ಕಮಿಷನ್‌ ದಂಧೆಯಿಂದಾಗಿ ರಾಜ್ಯ ಸರ್ಕಾರದ ಬೊಕ್ಕಸ ಬರಿದಾಗಿರುವುದರಿಂದ, ಶಿಕ್ಷಣ ಇಲಾಖೆಯು ಶಾಲಾ ಮಕ್ಕಳ ಪೋಷಕರಿಂದ ತಿಂಗಳಿಗೆ 100 ರೂಪಾಯಿ ಪಡೆಯುವ ಹಂತಕ್ಕೆ ತಲುಪಿದೆ ಎಂದು ಆಮ್‌ ಆದ್ಮಿ ಪಾರ್ಟಿಯ ಬೆಂಗಳೂರು ನಗರಾಧ್ಯಕ್ಷ ಮೋಹನ್ ದಾಸರಿ ಹೇಳಿದರು.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಪ್ರೆಸ್‌ಕ್ಲಬ್‌ನಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮೋಹನ್ ದಾಸರಿ , “ದಾನಿಗಳಿಂದ ದೇಣಿಗೆ ಸಂಗ್ರಹಿಸಿ ಶೂಗಳನ್ನು ಖರೀದಿಸುವಂತೆ ರಾಜ್ಯ ಸರ್ಕಾರವು ಶಾಲೆಗಳಿಗೆ ಈ ಹಿಂದೆ ಆದೇಶ ಹೊರಡಿಸಿತ್ತು.

ಈಗ ಡೆಸ್ಕ್‌, ವಿದ್ಯುತ್‌ ಬಿಲ್‌ ಇನ್ನಿತರ ಖರ್ಚುಗಳಿಗಾಗಿ ವಿದ್ಯಾರ್ಥಿಗಳ ಪೋಷಕರಿಂದ ಪ್ರತಿ ತಿಂಗಳು 100 ರೂಪಾಯಿ ಶುಲ್ಕ ಪಡೆಯುವಂತೆ ರಾಜ್ಯ ಶಿಕ್ಷಣ ಇಲಾಖೆಯು ಶಾಲೆಗಳ ಆಡಳಿತ ಮಂಡಳಿಗಳಿಗೆ ಸುತ್ತೋಲೆ ಹೊರಡಿಸಿದೆ. ಬಿಜೆಪಿ ಆಡಳಿತದಲ್ಲಿ ಮಿತಿಮೀರಿದ ಭ್ರಷ್ಟಾಚಾರದಿಂದ ಸರ್ಕಾರ ದಿವಾಳಿಯಾಗಿರುವುದು ಇದರಿಂದ ಸ್ಪಷ್ಟವಾಗುತ್ತದೆ ಎಂದು ಹೇಳಿದರು.

ಖಾಸಗಿ ಶಾಲೆಗಳಿಗೆ ಹೋಗಲು ಸಾಧ್ಯವಾಗದ ಹಾಗೂ ಸರ್ಕಾರಿ ಶಾಲೆಯಲ್ಲಿ ಓದಬೇಕೆಂದು ಬಯಸುವ ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡುವುದು ರಾಜ್ಯ ಸರ್ಕಾರಗಳ ಹೊಣೆ ಎಂದು ಸಂವಿಧಾನದ 21 ಎ ವಿಧಿಯು ಸ್ಪಷ್ಟವಾಗಿ ಹೇಳಿದೆ. ಶಿಕ್ಷಣ ಹಕ್ಕು ಕಾಯಿದೆಯ ಸೆಕ್ಷನ್‌ 3ರ ಪ್ರಕಾರ ಎಂಟನೇ ತರಗತಿ ತನಕ ಯಾವುದೇ ಅಡ್ಡಿಯಿಲ್ಲದೇ ಸರ್ಕಾರವು ಶಿಕ್ಷಣ ನೀಡಬೇಕಿದೆ.

ಆದರೆ ರಾಜ್ಯ ಸರ್ಕಾರವು ಈ ಎರಡೂ ಕಾನೂನಿನ ಉದ್ದೇಶವನ್ನು ಗಾಳಿಗೆ ತೂರಿ, ಪೋಷಕರಿಂದ ಹಣ ವಸೂಲಿ ಮಾಡಲು ಮುಂದಾಗಿದೆ. ಹಣ ಪಾವತಿಸಲು ಸಾಧ್ಯವಾಗುವ ಪೋಷಕರ ಮಕ್ಕಳಿಗೆ ಮಾತ್ರ ಶಿಕ್ಷಣ ನೀಡಲು ಸರ್ಕಾರ ನಿರ್ಧರಿಸಿದಂತಿದೆ ಎಂದು ಮೋಹನ್ ದಾಸರಿ ಕಿಡಿಕಾರಿದರು.

ಪಕ್ಷದ ನೀತಿ ಮತ್ತು ಸಂಶೋಧನಾ ವಿಭಾಗದ ಮುಖ್ಯಸ್ಥ ಪ್ರಕಾಶ್ ನೆಡುಂಗಡಿ ಮಾತನಾಡಿ, ದೆಹಲಿಯ ಸಿಎಂ ಅರವಿಂದ್‌ ಕೇಜ್ರಿವಾಲ್‌ ನೇತೃತ್ವದ ಆಮ್‌ ಆದ್ಮಿ ಪಾರ್ಟಿ ಸರ್ಕಾರವು ಬಜೆಟ್‌ನಲ್ಲಿ ಶಿಕ್ಷಣ ಕ್ಷೇತ್ರಕ್ಕಾಗಿ ಸುಮಾರು ಶೇ. 25ರಷ್ಟು ಅನುದಾನವನ್ನು ಮೀಸಲಿಡುತ್ತಿದೆ. ಅಲ್ಲಿನ ಶಾಲೆಗಳಿಗೆ ವಿಶ್ವದರ್ಜೆಯ ಮೂಲಸೌಕರ್ಯಗಳನ್ನು ಎಎಪಿ ಸರ್ಕಾರ ಒದಗಿಸುತ್ತಿದೆ.

ಆದರೆ ಕರ್ನಾಟಕದ ಬಿಜೆಪಿ ಸರ್ಕಾರವು ಶಿಕ್ಷಣಕ್ಕೆ ಹೆಚ್ಚಿನ ಅನುದಾನ ನೀಡುವ ಬದಲು ಪೋಷಕರಿಂದ ಹಣ ವಸೂಲಿ ಮಾಡಲು ಮುಂದಾಗಿರುವುದು ನಾಚಿಕೆಗೇಡಿನ ಸಂಗತಿ. ಈವರೆಗೆ ವಿವಿಧ ತೆರಿಗೆಗಳನ್ನು ಏರಿಕೆ ಮಾಡಿ ಜನರ ಜೇಬಿಗೆ ಕತ್ತರಿ ಹಾಕುತ್ತಿದ್ದ ಬಿಜೆಪಿ ಸರ್ಕಾರವು ಈಗ ಪೋಷಕರಿಂದ ಹಣ ಪಡೆಯುವ ಮೂಲಕ ಹಗಲು ದರೋಡೆಗೆ ಇಳಿದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಪಕ್ಷದ ಬೆಂಗಳೂರು ನಗರ ಸಂಘಟನಾ ಕಾರ್ಯದರ್ಶಿ ಸುರೇಶ್ ರಾಥೋಡ್ ಸೇರಿದಂತೆ ಅನೇಕ ಮುಖಂಡರು ಇದ್ದರು.

Leave a Reply

error: Content is protected !!
LATEST
ಚನ್ನಪಟ್ಟಣದಲ್ಲಿ ಬಿಜೆಪಿ ಜೆಡಿಎಸ್ ಕಾರ್ಯಕರ್ತರ ಬೃಹತ್ ಸಮಾವೇಶ: ನಿಖಿಲ್ ಗೆಲುವಿಗೆ ಒಗ್ಗಟ್ಟು ಪ್ರದರ್ಶನ ತೂಬಗೆರೆ ಗ್ರಾಮ ಪಂಚಾಯಿತಿಗೆ ಅವಿರೋಧವಾಗಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ - ಸರ್ಕಾರ, ಅಧಿಕಾರಿಗಳ ವಿರುದ್ಧ ಆಕ್ರೋಶ ವರ್ಷ ಮೂರು ಮರೆಯದ ನೆನಪು ನೂರಾರು: ಸಹೋದರ ಪುನೀತ್‌ ಸ್ಮರಿಸಿದ ರಾಘಣ್ಣ ಕೌಟುಂಬಿಕ ಕಲಹ: ರೈಲಿಗೆ ತಲೆಕೊಟ್ಟು ಜೀವನ ಕೊನೆಗಾಣಿಸಿಕೊಂಡ ಮಹಿಳೆ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಸಾವಿರಕ್ಕೂ ಹೆಚ್ಚು ಹುದ್ದೆಗಳು ಖಾಲಿ: ಈಗಲೇ ಅರ್ಜಿ ಹಾಕಿ ಬಿಬಿಎಂಪಿ: ಅನಧಿಕೃತ ಹೆಚ್ಚುವರಿ ಮಹಡಿಗಳು, ಪಾದಚಾರಿ ಮಾರ್ಗ ಒತ್ತುವರಿ ತೆರವು KSRTC ಸಮಸ್ತ 4ನಿಗಮಗಳ ಅಧಿಕಾರಿಗಳು ನೌಕರರು ಒಗ್ಗಟ್ಟಾಗಿ: ಇಟ್ಟಿರುವ ಬೇಡಿಕೆಗಳ ಈಡೇರಿಸಿಕೊಳ್ಳುವತ್ತ ಚಿಂತಿಸಿದರೆ ಅಸಾ... KSRTC ಬಸ್‌ ಫುಟ್‌ಬೋರ್ಡ್‌ ಮೇಲೆ ಪ್ರಯಾಣಿಸಿದ್ದು ಜನರು - ಆದರೆ 500 ರೂ. ದಂಡ ಕಟ್ಟಿದ್ದು ಮಾತ್ರ ನೌಕರ!! BMTC ಚಾಲಕರ ಮೇಲೆ ಹಲ್ಲೆ ಖಂಡಿಸಿ ಎಲೆಕ್ಟ್ರಿಕ್‌ ಡಿಪೋ 30ರಲ್ಲಿ ಪ್ರತಿಭಟನೆ - ಸಂಸ್ಥೆ ಬಸ್‌ಗಳ ಕಾರ್ಯಾಚರಣೆ