CrimeNEWSನಮ್ಮಜಿಲ್ಲೆನಮ್ಮರಾಜ್ಯ

ಸಾರಿಗೆ ನೌಕರರ ಆತ್ಮಹತ್ಯೆಗೆ ನ್ಯಾಯ ದೊರಕಿಸಲು ಡಿಪೋ ಬಳಿ ಶವ ಇಟ್ಟು ಆಮ್ ಆದ್ಮಿ ಪಕ್ಷ ಭಾರಿ ಪ್ರತಿಭಟನೆ, ನೌಕರರು ಭಾಗಿ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಬಿಎಂಟಿಸಿ ಚನ್ನಸಂದ್ರ ಘಟಕ 21ರ ನೌಕರ ಹೊಳೆಬಸಪ್ಪ ಆತ್ಮಹತ್ಯೆ ಖಂಡಿಸಿ ಆಮ್ ಆದ್ಮಿ ಪಕ್ಷದ ನೂರಾರು ಕಾರ್ಯಕರ್ತರು ರಾಜರಾಜೇಶ್ವರಿನಗರದ ಚನ್ನಸಂದ್ರ ಡಿಪೋ ಬಳಿ ಪ್ರತಿಭಟನೆ ಇಂದು ನಡೆಸಿದರು.

ಬೆಂಗಳೂರು ನಗರ ಅಧ್ಯಕ್ಷ ಮೋಹನ್ ದಾಸರಿ ಅವರ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಸಾರಿಗೆ ಸಚಿವ ಶ್ರೀರಾಮುಲು ಸ್ಥಳಕ್ಕೆ ಆಗಮಿಸಬೇಕೆಂದು ಶವವನ್ನು ಇಟ್ಟುಕೊಂಡು ಪ್ರತಿಭಟನೆ ನಡೆಸಿದರು.

ಕೇವಲ 24ಗಂಟೆಗಳಲ್ಲಿ ಜಿಗಣಿ, ಬನಶಂಕರಿ ಹಾಗೂ ಚನ್ನಸಂದ್ರ ಡಿಪೋಗಳ ಮೂವರು ಸಾರಿಗೆ ನೌಕರರು ಆತ್ಮಹತ್ಯೆಗೆ ಶರಣಾಗಿರುವುದು ಭಾರಿ ದುರಂತ. ಸರ್ಕಾರ ಇಷ್ಟೆಲ್ಲ ಅನಾಹುತಗಳು ಆಗುತ್ತಿದ್ದರೂ ಸಹ ಕಣ್ಣು ಕಿವಿ ಕೇಳಿಸದಂತೆ ಮೂಕ ಪ್ರೇಕ್ಷಕನಾಗಿರುವುದು ದುರದೃಷ್ಟಕರ ಎಂದು ಮೋಹನ್ ದಾಸರಿ ಕಿಡಿಕಾರಿದರು.

ಆತ್ಮಹತ್ಯೆಗೆ ಕಾರಣರಾದ ಡಿಪೋ ಮ್ಯಾನೇಜರ್ ಬಂಧಿಸಿ – ಅಮಾನತುಗೊಳಿಸಲು , ಮೃತರ ಕುಟುಂಬಗಳಿಗೆ ತಲಾ 50 ಲಕ್ಷ ರೂಪಾಯಿ ಪರಿಹಾರವನ್ನು ಸ್ಥಳದಲ್ಲೇ ಘೋಷಿಸಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಸಾರಿಗೆ ಇಲಾಖೆ ನೌಕರರಿಗೆ ನಿರಂತರ ಕಿರುಕುಳ ಲಂಚಕೋರತನ ಇವುಗಳೆಲ್ಲವೂ ಶಾಶ್ವತವಾಗಿ ಪರಿಹಾರವಾಗಬೇಕು ಹಾಗೂ ಸಾರಿಗೆ ನೌಕರರ ವಿರುದ್ಧ ಸರ್ಕಾರದ ದ್ವೇಷ ನೀತಿಯನ್ನು ಆಮ್ ಆದ್ಮಿ ಪಕ್ಷದ ಕಾರ್ಯಕರ್ತರು ಖಂಡಿಸಿದರು.

ಪ್ರತಿಭಟನೆಯಲ್ಲಿ ಮುಖಂಡರಾದ ಚನ್ನಪ್ಪಗೌಡ ನಲ್ಲೂರು, ಸುರೇಶ್ ರಾಥೋಡ್, ನಂಜಪ್ಪ ಕಾಳೇಗೌಡ, ಶ್ಯಾಮಸುಂದರ್ ಮನಂ ಶಶಿಧರ ಆರಾಧ್ಯ ಸೇರಿದಂತೆ ನೂರಾರು ಕಾರ್ಯಕರ್ತರು ಭಾಗವಹಿಸಿದ್ದರು.

Leave a Reply

error: Content is protected !!
LATEST
KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು ಗಂಭೀರ ಸ್ವರೂಪ ಪಡೆಯುತ್ತಿದೆ ದೆಹಲಿ ರೈತರ ಹೋರಾಟ: ನ.26ರಿಂದ ಉಪವಾಸ ಸತ್ಯಾಗ್ರಹ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಸಾಗರದಂತೆ ಬನ್ನಿ: ಮೀರಾ ಶಿವಲಿಂಗಯ್ಯ ಕರೆ SC, ST ಅಲೆಮಾರಿ ಸಮುದಾಯಗಳ ಯೋಜನೆಗಳು ಸದ್ಬಳಕೆ ಆಗಬೇಕು: ಡಿಸಿ ಶಿವಶಂಕರ