NEWSನಮ್ಮರಾಜ್ಯರಾಜಕೀಯ

ದೆಹಲಿ ಮಾದರಿಯಲ್ಲಿ ಷರತ್ತುಗಳಿಲ್ಲದೆ 200 ಯೂನಿಟ್ ವಿದ್ಯುತ್ ನೀಡದ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಜೂ.9ರಂದು ಎಎಪಿ ಪ್ರತಿಭಟನೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರವು ತನ್ನ 5 ಗ್ಯಾರಂಟಿಗಳನ್ನು ನೇರವಾಗಿ ನೀಡದೆ ಅನೇಕ ಷರತ್ತುಗಳನ್ನು ವಿಧಿಸಿ ರಾಜ್ಯದ ಜನರ ಕಿವಿಗಳಿಗೆ ಹೂವನ್ನು ಮುಡಿಸುವ ಮೂಲಕ ಪರಮ ಅನ್ಯಾಯ ಮತ್ತು ಮೋಸವನ್ನು ಮಾಡಲಾಗುತ್ತಿದೆ ಎಂದು ಪಕ್ಷದ ರಾಜ್ಯ ಕಾರ್ಯಾಧ್ಯಕ್ಷ ಮೋಹನ್ ದಾಸರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬುಧವಾರ (ಜೂನ್‌ 7) ನಗರದ ಆಮ್ ಆದ್ಮಿ ಪಕ್ಷದ ಮಾಧ್ಯಮ ಕಚೇರಿಯಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರ ಅವರು, ದೆಹಲಿ ಮಾದರಿಯಲ್ಲಿ ಯಾವುದೇ ಷರತ್ತುಗಳಿಲ್ಲದೆ 200 ಯೂನಿಟ್ ವಿದ್ಯುತ್ ನೀಡಲಾಗದೆ ಅನೇಕ ಷರತ್ತುಗಳನ್ನು ವಿಧಿಸಿ ಬಡವರು ಬಡವರಾಗಿ ಇರುವಂತಹ ಗ್ಯಾರಂಟಿಯನ್ನು ನೀಡಿದ್ದಾರೆ ಎಂದು ಕಿಡಿಕಾರಿದರು.

ಇನ್ನು ಕಾಂಗ್ರೆಸ್ ನೇತೃತ್ವದ ಸರ್ಕಾರದ ಈ ಜನ ವಿರೋಧಿ ನೀತಿಯನ್ನು ವಿರೋಧಿಸಿ ಇದೇ ಜೂನ್‌ 9ರ ಶುಕ್ರವಾರ ರಾಜ್ಯಾದ್ಯಂತ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಮೋಹನ್ ದಾಸರಿ ತಿಳಿಸಿದರು.

ಅಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಎಎಪಿ ಪಕ್ಷದ ಕಾರ್ಯಕರ್ತರು ಚೆಂಡು ಹೂವು ಮುಡಿಸಿಕೊಂಡು ಸರ್ಕಾರದ ವಿರುದ್ಧ ವಿನೂತನ ಪ್ರತಿಭಟನೆಯನ್ನು ಮಾಡಲಿದ್ದಾರೆ ಎಂದು ವಿವರಿಸಿದರು.

ಇದೇ ಸಂದರ್ಭದಲ್ಲಿ ಮಾತನಾಡಿದ ರಾಜ್ಯ ಮಾಧ್ಯಮ ಸಂಚಾಲಕ ಜಗದೀಶ್ ವಿ. ಸದಂ ಕಾಂಗ್ರೆಸ್ ಪಕ್ಷಕ್ಕೆ ನೀಡಿರುವ ಬಹುಮತ 40% ಕಮಿಷನ್ ಹಾಗೂ ಜನ ವಿರೋಧಿ ಬಿಜೆಪಿ ಸರ್ಕಾರದ ವಿರುದ್ಧ ನೀಡಿದ ಮತವೆ ಹೊರತು ಕಾಂಗ್ರೆಸ್ ಪಕ್ಷಕ್ಕೆ ನೀಡಿರುವ ಮತವಲ್ಲ. ಈ ಇಂದಿನ ಅಧಿಕಾರವಧಿಯಲ್ಲಿ ಮಾಡಿದ್ದಂತಹ ಅನೇಕ ಭ್ರಷ್ಟಾಚಾರ ಪ್ರಕರಣಗಳು ಹಾಗೂ ಜನ ವಿರೋಧಿ ನೀತಿಯನ್ನು ಮತ್ತೊಮ್ಮೆ ಮುಂದುವರಿಸಿದಲ್ಲಿ ಜನತೆ ತಕ್ಕ ಪಾಠವನ್ನು ಕಲಿಸಿಕೊಡುತ್ತದೆ ಎಂದು ಎಚ್ಚರಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ರಾಜ್ಯವು ಈಗಾಗಲೇ ಎಲ್ಲವನ್ನೂ ನೀಡಿದೆ. ಇವರು ರಾಜ್ಯದ ಜನತೆಗೆ ಮರಳಿ ನೀಡಿ ಋಣವನ್ನು ತೀರಿಸಿಕೊಳ್ಳುವಂತಹ ಅವಕಾಶವಿರುವಾಗ ಪ್ರಾಮಾಣಿಕವಾಗಿ ಯೋಜನೆಗಳನ್ನು ಜಾರಿಗೊಳಿಸಿ ಎಂದು ಆಗ್ರಹಿಸಿದರು.

ಸುದ್ದಿಗೋಷ್ಠಿಯಲ್ಲಿ ಬೆಂಗಳೂರು ನಗರ ಪ್ರಧಾನ ಕಾರ್ಯದರ್ಶಿ ಜಗದೀಶ್ ಚಂದ್ರ ಇದ್ದರು.

Leave a Reply

error: Content is protected !!
LATEST
NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು