ಬೆಂಗಳೂರು: ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷರಾದ ಮುಖ್ಯಮಂತ್ರಿ ಚಂದ್ರು ಅವರು ಪಕ್ಷ ಸಂಘಟನೆ ಮತ್ತು ಬಲವರ್ಧನೆ ನಿಟ್ಟಿನಲ್ಲಿ ನಡೆಸುತ್ತಿರುವ ರಾಜ್ಯ ಪ್ರವಾಸವನ್ನು ಮುಂದುವರಿಸಿದ್ದಾರೆ.
ಅಕ್ಟೋಬರ್ 12ರಿಂದ ನಾಲ್ಕು ದಿನಗಳ ಕಾಲ ಕೊಪ್ಪಳ, ಬಳ್ಳಾರಿ, ರಾಯಚೂರು ಹಾಗೂ ವಿಜಯಪುರ ಜಿಲ್ಲೆಗಳಿಗೆ ಭೇಟಿ ನೀಡಿ, ಅಲ್ಲಿನ ಮುಖಂಡರ ಜೊತೆ ಮಾತುಕತೆ ನಡೆಸಲಿದ್ದಾರೆ. ಪಕ್ಷದ ಪದಾಧಿಕಾರಿಗಳ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಹಾಗೂ ಆಯ್ದ ಗ್ರಾಮಗಳಲ್ಲಿ ನಡೆಯುವ ಅರಳಿಕಟ್ಟೆ ಸಂವಾದ – ಬನ್ನಿ ಮಾತನಾಡೋಣ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಗ್ರಾಮಸ್ಥರ ಜೊತೆ ನೇರವಾಗಿ ಮಾತುಕತೆ ನಡೆಸುವ ಮೂಲಕ ಸ್ಥಳೀಯರ ಸಮಸ್ಯೆಗಳನ್ನು, ಭೇಡಿಕೆಗಳನ್ನು ಆಲಿಸಲಿದ್ದಾರೆ.
ಜಿಲ್ಲಾ ಭೇಟಿ ವಿವರ: ಅಕ್ಟೋಬರ್ 12, ಗುರುವಾರ, ಕೊಪ್ಪಳ ಜಿಲ್ಲೆಗೆ ಭೇಟಿ ನೀಡಲಿದ್ದಾರೆ. ಪತ್ರಿಕಾ ಗೋಷ್ಠಿ ,ಸ್ಥಳೀಯ ಮುಖಂಡರ ಜೊತೆ ಸಭೆ ಹಾಗೂ ಪದಾಧಿಕಾರಿಗಳ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಸಂಜೆ ನವಲಿ ಗ್ರಾಮದಲ್ಲಿ ಬನ್ನಿ ಮಾತನಾಡೋಣ ಸಂವಾದದಲ್ಲಿ ಭಾಗವಹಿಸಲಿದ್ದಾರೆ.
ಅಕ್ಟೋಬರ್ 13, ಶುಕ್ರವಾರ, ಬಳ್ಳಾರಿ ಜಿಲ್ಲೆಗೆ ಭೇಟಿ ನೀಡಲಿದ್ದಾರೆ. ಪತ್ರಿಕಾಗೋಷ್ಠಿ , ಸ್ಥಳೀಯ ಮುಖಂಡರ ಜೊತೆ ಸಭೆ ಹಾಗೂ ಪದಾಧಿಕಾರಿಗಳ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಸಂಜೆ ಶ್ರೀಧರ ಗಡ್ಡೆ ಗ್ರಾಮದ ಮಾರಮ್ಮ ದೇವಸ್ಥಾನದ ಆವರಣದಲ್ಲಿ ನಡೆಯಲಿರುವ ಬನ್ನಿ ಮಾತನಾಡೋಣ ಸಂವಾದದಲ್ಲಿ ಭಾಗವಹಿಸಲಿದ್ದಾರೆ.
ಅಕ್ಟೋಬರ್ 14, ಶನಿವಾರ, ರಾಯಚೂರು ಜಿಲ್ಲೆಗೆ ಭೇಟಿ ನೀಡಲಿದ್ದಾರೆ. ಪತ್ರಿಕಾ ಗೋಷ್ಠಿ ,ಸ್ಥಳೀಯ ಮುಖಂಡರ ಜೊತೆ ಸಭೆ ಹಾಗೂ ಪದಾಧಿಕಾರಿಗಳ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಸಂಜೆ ಸೋಮೇಶ್ವರ ಗ್ರಾಮದಲ್ಲಿ ನಡೆಯಲಿರುವ ಬನ್ನಿ ಮಾತನಾಡೋಣ ಸಂವಾದದಲ್ಲಿ ಭಾಗವಹಿಸಲಿದ್ದಾರೆ.
ಅಕ್ಟೋಬರ್ 15, ಭಾನುವಾರ, ವಿಜಯಪುರ ಜಿಲ್ಲೆಗೆ ಭೇಟಿ ನೀಡಲಿದ್ದಾರೆ. ಜಿಲ್ಲಾ ಪತ್ರಿಕಾಗೋಷ್ಠಿ ,ಸ್ಥಳೀಯ ಮುಖಂಡರ ಜೊತೆ ಸಭೆ ಹಾಗೂ ಪದಾಧಿಕಾರಿಗಳ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಸಂಜೆ ಕೊಂಡಗೂಳಿ ಗ್ರಾಮದಲ್ಲಿ ನಡೆಯಲಿರುವ ದೇವಿ ಪುರಾಣ ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.