NEWSನಮ್ಮರಾಜ್ಯರಾಜಕೀಯ

ಎಎಪಿ ರಾಜ್ಯಾಧ್ಯಕ್ಷ ಡಾ. ಮು.ಚಂದ್ರು ರಾಜ್ಯ ಪ್ರವಾಸ: ಅರಳಿಕಟ್ಟೆ ಸಂವಾದ – ಬನ್ನಿ ಮಾತನಾಡೋಣ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷರಾದ ಮುಖ್ಯಮಂತ್ರಿ ಚಂದ್ರು ಅವರು ಪಕ್ಷ ಸಂಘಟನೆ ಮತ್ತು ಬಲವರ್ಧನೆ ನಿಟ್ಟಿನಲ್ಲಿ ನಡೆಸುತ್ತಿರುವ ರಾಜ್ಯ ಪ್ರವಾಸವನ್ನು ಮುಂದುವರಿಸಿದ್ದಾರೆ.

ಅಕ್ಟೋಬರ್‌ 12ರಿಂದ ನಾಲ್ಕು ದಿನಗಳ ಕಾಲ ಕೊಪ್ಪಳ, ಬಳ್ಳಾರಿ, ರಾಯಚೂರು ಹಾಗೂ ವಿಜಯಪುರ ಜಿಲ್ಲೆಗಳಿಗೆ ಭೇಟಿ ನೀಡಿ, ಅಲ್ಲಿನ ಮುಖಂಡರ ಜೊತೆ ಮಾತುಕತೆ ನಡೆಸಲಿದ್ದಾರೆ. ಪಕ್ಷದ ಪದಾಧಿಕಾರಿಗಳ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ  ಹಾಗೂ ಆಯ್ದ ಗ್ರಾಮಗಳಲ್ಲಿ ನಡೆಯುವ ಅರಳಿಕಟ್ಟೆ ಸಂವಾದ – ಬನ್ನಿ ಮಾತನಾಡೋಣ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಗ್ರಾಮಸ್ಥರ ಜೊತೆ ನೇರವಾಗಿ ಮಾತುಕತೆ ನಡೆಸುವ ಮೂಲಕ ಸ್ಥಳೀಯರ ಸಮಸ್ಯೆಗಳನ್ನು, ಭೇಡಿಕೆಗಳನ್ನು ಆಲಿಸಲಿದ್ದಾರೆ.

ಜಿಲ್ಲಾ ಭೇಟಿ ವಿವರ: ಅಕ್ಟೋಬರ್‌ 12, ಗುರುವಾರ, ಕೊಪ್ಪಳ ಜಿಲ್ಲೆಗೆ ಭೇಟಿ ನೀಡಲಿದ್ದಾರೆ. ಪತ್ರಿಕಾ ಗೋಷ್ಠಿ ,ಸ್ಥಳೀಯ ಮುಖಂಡರ ಜೊತೆ ಸಭೆ ಹಾಗೂ ಪದಾಧಿಕಾರಿಗಳ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಸಂಜೆ ನವಲಿ ಗ್ರಾಮದಲ್ಲಿ ಬನ್ನಿ ಮಾತನಾಡೋಣ ಸಂವಾದದಲ್ಲಿ ಭಾಗವಹಿಸಲಿದ್ದಾರೆ.

ಅಕ್ಟೋಬರ್‌ 13, ಶುಕ್ರವಾರ, ಬಳ್ಳಾರಿ ಜಿಲ್ಲೆಗೆ ಭೇಟಿ ನೀಡಲಿದ್ದಾರೆ. ಪತ್ರಿಕಾಗೋಷ್ಠಿ , ಸ್ಥಳೀಯ ಮುಖಂಡರ ಜೊತೆ ಸಭೆ ಹಾಗೂ ಪದಾಧಿಕಾರಿಗಳ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಸಂಜೆ ಶ್ರೀಧರ ಗಡ್ಡೆ ಗ್ರಾಮದ ಮಾರಮ್ಮ ದೇವಸ್ಥಾನದ ಆವರಣದಲ್ಲಿ ನಡೆಯಲಿರುವ ಬನ್ನಿ ಮಾತನಾಡೋಣ ಸಂವಾದದಲ್ಲಿ ಭಾಗವಹಿಸಲಿದ್ದಾರೆ.

ಅಕ್ಟೋಬರ್‌ 14, ಶನಿವಾರ, ರಾಯಚೂರು ಜಿಲ್ಲೆಗೆ ಭೇಟಿ ನೀಡಲಿದ್ದಾರೆ. ಪತ್ರಿಕಾ ಗೋಷ್ಠಿ ,ಸ್ಥಳೀಯ ಮುಖಂಡರ ಜೊತೆ ಸಭೆ ಹಾಗೂ ಪದಾಧಿಕಾರಿಗಳ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಸಂಜೆ ಸೋಮೇಶ್ವರ ಗ್ರಾಮದಲ್ಲಿ ನಡೆಯಲಿರುವ ಬನ್ನಿ ಮಾತನಾಡೋಣ ಸಂವಾದದಲ್ಲಿ ಭಾಗವಹಿಸಲಿದ್ದಾರೆ.

ಅಕ್ಟೋಬರ್‌ 15, ಭಾನುವಾರ, ವಿಜಯಪುರ ಜಿಲ್ಲೆಗೆ ಭೇಟಿ ನೀಡಲಿದ್ದಾರೆ. ಜಿಲ್ಲಾ ಪತ್ರಿಕಾಗೋಷ್ಠಿ ,ಸ್ಥಳೀಯ ಮುಖಂಡರ ಜೊತೆ ಸಭೆ ಹಾಗೂ ಪದಾಧಿಕಾರಿಗಳ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಸಂಜೆ ಕೊಂಡಗೂಳಿ ಗ್ರಾಮದಲ್ಲಿ ನಡೆಯಲಿರುವ ದೇವಿ ಪುರಾಣ ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

Leave a Reply

error: Content is protected !!
LATEST
ಕೋರಮಂಗಲದ ಬಿಡಿಎ ಕಾಂಪ್ಲೆಕ್ಸ್ ಕೆಡವಿ ಮಾಲ್ ಕಟ್ಟುವ ಬಿಡಿಎ ನಿರ್ಧಾರಕ್ಕೆ ಎಎಪಿ ವಿರೋಧ ಜೈಲಲ್ಲೇ ದೇವರಾಜೇಗೌಡರ ಜೀವಕ್ಕೆ ಅಪಾಯವಿದೆ : ಸುರೇಶಗೌಡ ಆತಂಕ KSRTC ಬಸ್‌- ಕಾರು ನಡುವೆ ಭೀಕರ ಅಪಘಾತ: ಕಾರು ಚಾಲಕ ಸಾವು, ನಾಲ್ವರ ಸ್ಥಿತಿ ಗಂಭೀರ ಜಿಆರ್ ಫಾರ್ಮ್ ಹೌಸ್‌ನಲ್ಲಿ ರೇವ್​ ಪಾರ್ಟಿ: ನಟಿಯರು ಸೇರಿ 80ಕ್ಕೂ ಹೆಚ್ಚು ಬಂಧನ KSRTC: ಹೆದ್ದಾರಿಯಲ್ಲಿ ಕೆಟ್ಟುನಿಂತ ಬಸ್‌ಗಳು - ಕಿಮೀ ವರೆಗೆ ಟ್ರಾಫಿಕ್ ಜಾಮ್ KSRTC: ₹185 ಟಿಕೆಟ್‌ ಕೊಟ್ಟು ₹200 ಕೇಳಿದ ಕಂಡಕ್ಟರ್‌ - ದೂರು ಕೊಟ್ಟ ಪ್ರಯಾಣಿಕ ಧೈರ್ಯವಿದ್ದರೆ ಎಎಪಿ ಮುಖಂಡರೆಲ್ಲರನ್ನೂ ಜೈಲಿಗೆ ಹಾಕಿ: ಪ್ರಧಾನಿ ಮೋದಿಗೆ ಪೃಥ್ವಿ ರೆಡ್ಡಿ ಸವಾಲು ಪತ್ನಿ, ಮಗನಿಗೆ ಮಾಸಿಕ ಜೀವನಾಂಶ ಪಾವತಿಸದ ಪತಿ ಆಸ್ತಿ ಮುಟ್ಟುಗೋಲು: ಹೈಕೋರ್ಟ್ ಮಹತ್ವದ ಆದೇಶ ಬೆಳ್ಳಂಬೆಳಗ್ಗೆ ಸರಣಿ ಅಪಘಾತ: ಕಾರು ನಜ್ಜುಗುಜ್ಜು - ಪ್ರಯಾಣಿಕರು ಸೇಫ್ ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ:‌ ಶೇ.25.5 ವೇತನ ಹೆಚ್ಚಳ ಬಹುತೇಕ ಖಚಿತ