NEWSನಮ್ಮಜಿಲ್ಲೆನಮ್ಮರಾಜ್ಯ

ಪೆಟ್ರೋಲ್‌, ಡೀಸೆಲ್‌ ದರ ಏರಿಕೆ ವಿರೋಧಿಸಿ ನಾಳೆ ರಾಜ್ಯಾದ್ಯಂತ ಎಎಪಿ ಪ್ರತಿಭಟನೆ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ರಾಜ್ಯ ಸರ್ಕಾರವು ಪೆಟ್ರೋಲ್‌, ಡೀಸೆಲ್‌ ಮೇಲಿನ ಚಿಲ್ಲರೆ ಮಾರಾಟ ತೆರಿಗೆಯನ್ನು ತಲಾ ₹3 ಮತ್ತು ₹3.5 ಹೆಚ್ಚಿಸಿರುವ ಕ್ರಮವನ್ನು ಖಂಡಿಸಿ ಬೆಂಗಳೂರಿನ ಸ್ವತಂತ್ರ ಉದ್ಯಾನವನ ಸೇರಿದಂತೆ ರಾಜ್ಯಾದ್ಯಂತ ಆಮ್‌ ಆದ್ಮಿ ಪಾರ್ಟಿ ಜೂನ್‌ 18, ಮಂಗಳವಾರ ಬೃಹತ್‌ ಪ್ರತಿಭಟನೆ ಹಮ್ಮಿಕೊಂಡಿದೆ.

ಬೆಳಗ್ಗೆ 11 ಗಂಟೆಗೆ ಪ್ರತಿಭಟನೆ ನಡೆಯಲಿದೆ. ಬಳಿಕ ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳಿಗೆ ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ಕ್ರಮವನ್ನು ಖಂಡಿಸಿ, ಜನಸಾಮಾನ್ಯರಿಗೆ ಅನುಕೂಲವಾಗುವ ರೀತಿಯಲ್ಲಿ ದರ ಕಡಿಮೆ ಮಾಡುವಂತೆ ಆಗ್ರಹಿಸಿ ಎಎಪಿ ಮನವಿ ಪತ್ರ ನೀಡಲಿದೆ ಎಂದು ಪಕ್ಷದ ರಾಜ್ಯ ಪ್ರಧಾನಕಾರ್ಯದರ್ಶಿ ಮೋಹನ್‌ ದಾಸರಿ ಮಾಧ್ಯಮಕ್ಕೆ ತಿಳಿಸಿದರು.

ಲೋಕಸಭೆ ಚುನಾವಣೆ ಮುಗಿಯುತ್ತಿದ್ದಂತೆ ಪೆಟ್ರೋಲ್‌, ಡೀಸೆಲ್‌ ದರವನ್ನು ಭಾರಿ ಪ್ರಮಾಣದಲ್ಲಿ ದಿಢೀರ್‌ ಏರಿಕೆ ಮಾಡಿರುವುದು ಜನಸಾಮಾನ್ಯರಿಗೆ ಸಂಕಷ್ಟವನ್ನು ತಂದೊಡ್ಡಿದ್ದೆ. ಗ್ಯಾರಂಟಿ ಯೋಜನೆಗಳ ಮೂಲಕ ಒಂದು ಕೈಯಲ್ಲಿ ಕೊಟ್ಟಂತೆ ಮಾಡಿ, ಇನ್ನೊಂದು ಕೈಯಲ್ಲಿ ದುಪ್ಪಟ್ಟು ಹಣವನ್ನು ಕಸಿದುಕೊಳ್ಳುತ್ತಿದೆ.

ಇಂಥ ರಾಜ್ಯ ಸರ್ಕಾರದ ಜನ ವಿರೋಧಿ ಧೋರಣೆಯನ್ನು ಪಕ್ಷಾತೀತವಾಗಿ ಎಲ್ಲರೂ ಖಂಡಿಸಬೇಕಿದೆ. ಈ ನಿಟ್ಟಿನಲ್ಲಿ ರಾಜ್ಯಾದ್ಯಂತ ಎಎಪಿ ನೇತೃತ್ವದಲ್ಲಿ ಪ್ರತಿಭಟನೆ ನಡೆಯಲಿದೆ ಎಂದು ಮೋಹನ್‌ ದಾಸರಿ ಹೇಳಿದರು.

Leave a Reply

error: Content is protected !!
LATEST
ನ.3ರಂದುಇಪಿಎಸ್ ಪಿಂಚಿಣಿದಾರರ ಮಾಸಿಕ ಸಭೆ: ನಿವೃತ್ತ ನೌಕರರ ಸಂಘದ ಕಾರ್ಯಧ್ಯಕ್ಷ ನಂಜುಂಡೇಗೌಡ KSRTCಯ ಸಮಸ್ತ ನೌಕರರ ಸಮಸ್ಯೆ, ಅಸಮಾಧಾನದ ನಡುವೆಯೂ ಕನ್ನಡ ರಾಜ್ಯೋತ್ಸವ ಆಚರಣೆ ತುಂಬಾ ವಿಜೃಂಭಣೆ ಕನ್ನಡ- ಕನ್ನಡಿಗರ ನಿಂದಿಸಿದರೆ ಕಠಿಣ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ಅನ್ಯ ಭಾಷಿಕರಿಗೆ ಅಭಿಮಾನದಿಂದ ಕನ್ನಡ ಕಲಿಸಿ: ಪುರಸಭೆ ಅಧ್ಯಕ್ಷೆ ಪಂಕಜಾ ಕನ್ನಡ ಭಾಷೆ ಅತ್ಯಂತ ಶ್ರೀಮಂತ ಭಾಷೆ: ಶ್ರೀಗಂಗಾಧರ ಶಿವಾಚಾರ್ಯ ಸ್ವಾಮೀಜಿ KSRTC: ದೀಪಾವಳಿ ಹಬ್ಬದಲ್ಲೂ ಕರ್ತವ್ಯ ನಿರತ ನಾಡಿನ ಸೈನಿಕರಾದ ಸಾರಿಗೆ ನೌಕರರಿಗೆ ಸಲಾಮ್‌! ಬೆಲೆ ಏರಿಕೆ ಬಿಸಿ ನಡುವೆಯೂ ಹಣತೆ, ಹೂವು, ಪಟಾಕಿ, ಹಣ್ಣುಗಳ ವ್ಯಾಪಾರ ವಹಿವಾಟು ಜೋರು ಚನ್ನಪಟ್ಟಣದಲ್ಲಿ ಬಿಜೆಪಿ ಜೆಡಿಎಸ್ ಕಾರ್ಯಕರ್ತರ ಬೃಹತ್ ಸಮಾವೇಶ: ನಿಖಿಲ್ ಗೆಲುವಿಗೆ ಒಗ್ಗಟ್ಟು ಪ್ರದರ್ಶನ ತೂಬಗೆರೆ ಗ್ರಾಮ ಪಂಚಾಯಿತಿಗೆ ಅವಿರೋಧವಾಗಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ - ಸರ್ಕಾರ, ಅಧಿಕಾರಿಗಳ ವಿರುದ್ಧ ಆಕ್ರೋಶ