NEWSನಮ್ಮಜಿಲ್ಲೆನಮ್ಮರಾಜ್ಯ

ಅಭಿನಯ ಸರಸ್ವತಿ, ಹಿರಿಯ ಚಲನಚಿತ್ರ ನಟಿ ಸರೋಜಾದೇವಿ ನಿಧನ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಅಭಿನಯ ಸರಸ್ವತಿ, ಹಿರಿಯ ನಟಿ ಬಿ.ಸರೋಜಾದೇವಿ (87) ಇಂದು ಮುಂಜಾನೆ ವಯೋಸಹಜ ನಿಧನರಾಗಿದ್ದಾರೆ.

ಜನವರಿ 7.1938 ರಲ್ಲಿ ಜನಿಸಿದ್ದ ಸರೋಜಾದೇವಿ ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು. ಹೀಗಾಗಿ ಅವರನ್ನು ಮಲ್ಲೇಶ್ವರಂನಲ್ಲಿರುವ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ನಿಧರಾಗಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಸರೋಜಾದೇವಿ ಅವರ ಪಾರ್ಥಿವ ಶರೀರವನ್ನು ಅವರ ಮಲ್ಲೇಶ್ವರಂ ನಿವಾಸದಲ್ಲಿಡಲಾಗಿದೆ. ಪೊಲೀಸರು ಭದ್ರತೆ ವ್ಯವಸ್ಥೆ ಮಾಡಿದ್ದಾರೆ. ಇನ್ನು ಹಲವು ಗಣ್ಯರು ನಿವಾಸಕ್ಕೆ ಬಂದು ಅಂತಿಮ ದರ್ಶನ ಪಡೆಯುತ್ತಿದ್ದಾರೆ. ಜುಲೈ 15ರಂದು ಬಿ.ಸರೋಜಾದೇವಿ ಅವರ ಅಂತ್ಯಕ್ರಿಯೆ ನಡೆಯಲಿದೆ.

ಸುಮಾರು 6 ದಶಕಗಳ ಕಾಲ ಚಿತ್ರರಂಗದ ಸೇವೆ ಮಾಡಿರುವ ಸರೋಜಾದೇವಿ 5 ಭಾಷೆಗಳಲ್ಲಿ 200ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ. ಚಿತ್ರರಂಗದ ಸಾಧನೆಗೆ ಇವರಿಗೆ ಕೇಂದ್ರ ಸರ್ಕಾರ ಪದ್ಮಭೂಷಣ ನೀಡಿ ಪುರಸ್ಕರಿಸಿತ್ತು.

ತನ್ನ 17ನೇ ವಯಸ್ಸಿನಲ್ಲಿಯೇ ಕನ್ನಡ ಚಿತ್ರರಂಗದ ಭೀಷ್ಮ ಹೊನ್ನಪ್ಪ ಭಾಗವತರ್ ಅವರ `ಮಹಾಕವಿ ಕಾಳಿದಾಸ’ ಚಿತ್ರದಲ್ಲಿ ಅಭಿನಯಿಸುವ ಮೂಲಕ ಚಿತ್ರರಂಗಕ್ಕೆ ಪಾದರ್ಪಣೆ ಮಾಡಿದ್ದರು.

ಸರೋಜಾದೇವಿ ಅವರು ಕನ್ನಡದಲ್ಲಿ ಡಾ. ರಾಜ್‌ಕುಮಾರ್ ಅವರೊಂದಿಗೆ ಅಮರಶಿಲ್ಪಿ ಜಕಣಾಚಾರಿ, ಕಥಾಸಾಗರ, ಬಬ್ರುವಾಹನ, ಭಾಗ್ಯವಂತರು, ಆಷಾಡಭೂತಿ, ಶ್ರೀರಾಮಪೂಜಾ, ಕಚ ದೇವಯಾನಿ, ರತ್ನಗಿರಿ ರಹಸ್ಯ, ಕೋಕಿಲವಾಣಿ, ಸ್ಕೂಲ್‌ಮಾಸ್ಟರ್, ಪಂಚರತ್ನ, ಲಕ್ಷ್ಮೀಸರಸ್ವತಿ, ಚಿಂತಾಮಣಿ, ಭೂಕೈಲಾಸ, ಅಣ್ಣತಂಗಿ, ಜಗಜ್ಯೋತಿ ಬಸವೇಶ್ವರ, ದೇವಸುಂದರಿ, ವಿಜಯನಗರದ ವೀರಪುತ್ರ, ಮಲ್ಲಮ್ಮನ ಪವಾಡ, ಶ್ರೀಕೃಷ್ಣರುಕ್ಮಿಣಿ ಸತ್ಯಭಾಮ, ಪೂರ್ಣಿಮಾ, ಗೃಹಿಣಿ, ಪಾಪಪುಣ್ಯ, ಸಹಧರ್ಮಿಣಿ, ಶ್ರೀನಿವಾಸಕಲ್ಯಾಣ, ಚಾಮುಂಡೇಶ್ವರಿ ಮಹಿಮೆ, ಚಿರಂಜೀವಿ, ಶನಿಪ್ರಭಾವ ಮುಂತಾದ ಚಿತ್ರಗಳಲ್ಲಿ ನಟಿಸಿದ್ದಾರೆ.

Advertisement

ಸರೋಜಾದೇವಿ ಅವರು ತಮಿಳಿನಲ್ಲಿ ಜೆಮಿನಿ ಗಣೇಶನ್, ಶಿವಾಜಿ ಗಣೇಶನ್, ಮತ್ತು ಎಂ.ಜಿ. ರಾಮಚಂದ್ರನ್ ಅವರೊಂದಿಗೆ ಅನೇಕ ಹಿಟ್ ಚಿತ್ರಗಳಲ್ಲಿ ಅಭಿನಯಿಸಿದ್ದರು. ಅವರು ಹಿಂದಿಯಲ್ಲಿ ದಿಲೀಪ್ ಕುಮಾರ್, ರಾಜೇಂದ್ರ ಕುಮಾರ್, ಶಮ್ಮಿ ಕಪೂರ್ ಮತ್ತು ಸುನೀಲ್ ದತ್ ಅವರೊಂದಿಗೆ ನಟಿಸಿದ್ದಾರೆ.

ಇನ್ನು 90ರ ದಶಕದ ಬಳಿಕ ಸರೋಜಾ ದೇವಿ ಚಿತ್ರರಂಗದಲ್ಲಿ ಹೆಚ್ಚು ಆಕ್ಟೀವ್ ಆಗಿರಲಿಲ್ಲ. ಪುನೀತ್ ರಾಜ್‌ ಕುಮಾರ್‌ ನಟನೆಯ 2019ರ ‘ನಟಸಾರ್ವಭೌಮ’ ಚಿತ್ರದಲ್ಲಿ ಅವರು ಅತಿಥಿ ಪಾತ್ರ ಮಾಡಿದರು. ಸರೋಜಾದೇವಿ ಆಗಿಯೇ ಅವರು ಸಿನಿಮಾದಲ್ಲಿ ಕಾಣಿಸಿಕೊಂಡರು.

ವಿಜಯಪಥ - vijayapatha
Megha
the authorMegha

Leave a Reply

error: Content is protected !!