CrimeNEWSನಮ್ಮಜಿಲ್ಲೆ

KSRTC ಬಸ್‌ -ಕಾರು ನಡುವೆ ಅಪಘಾತ: ಅನಾರೋಗ್ಯದ ನಡುವೆ ಕಾರು ಚಲಾಯಿಸಿದ ಪತಿ ಮೃತ- ಪತ್ನಿ ಪ್ರಾಣಾಪಾಯದಿಂದ ಪಾರು

ವಿಜಯಪಥ ಸಮಗ್ರ ಸುದ್ದಿ

ಶಿರಸಿ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್‌ ಮತ್ತು ಕಾರು ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಕಾರಿನಲ್ಲಿದ್ದ ಇಬ್ಬರಲ್ಲಿ ಒಬ್ಬ ಮೃತಪಟ್ಟು ಮತ್ತೊಬ್ಬರು ಗಾಯಗೊಂಡಿರುವ ಘಟನೆ ಶಿರಸಿ ಸಮೀಪ ಕಾನೂಗೋಡು ಬಳಿ ನಡೆದಿದೆ.

ಕಾನೂಗೋಡು ಸಮೀಪ ಸಂಸ್ಥೆಯ ಶಿವಮೊಗ್ಗ ವಿಭಾಗದ ಸಾಗರ ಘಟಕದ ಬಸ್‌ ಎಡಭಾಗದಲ್ಲೇ ಹೋಗುತ್ತಿದ್ದಾಗ ಎದುರಿನಿಂದ ಬಲಭಾಗಕ್ಕೆ ಏಕಾಏಕಿ ಬಂದ ಕಾರು ಬಸ್‌ಗೆ ಡಿಕ್ಕಿ ಹೊಡೆದಿದೆ. ಈ ಅವಘಡಲ್ಲಿ ಕಾರು ಚಲಾಯಿಸುತ್ತಿದ್ದ ಅನಾರೋಗ್ಯದಿಂದ ಬಳಲುತ್ತಿದ್ದ 54 ವರ್ಷದ ಚಂದ್ರಶೇಖರ್‌ ಪಲ್ಲೆ ಅವರು ಸಣ್ಣಪುಟ್ಟ ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಿತಾದರೂ ಚಿಕಿತ್ಸೆ ಫಲಿಸದೆ ಅಸುನೀಗಿದ್ದಾರೆ ಎಂದು ತಿಳಿದು ಬಂದಿದೆ.

ಇನ್ನು ಈ ಅಪಘಾತ ಸಂಭವಿಸಿದ ಕಾರಿನಲ್ಲೇ ಇದ್ದ ಕಾರು ಮಾಲೀಕ ಚಂದ್ರಶೇಖರ್‌ ಪಲ್ಲೆ ಅವರ ಪತ್ನಿ ಸುಜಾತ (47) ಅವರಿಗೂ ಸಣ್ಣಪುಟ್ಟ ಗಾಯವಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸದ್ಯ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.

ಘಟನೆ ವಿವರ: ಸಾಗರ ಘಟಕದ ಸಾರಿಗೆ ಬಸ್‌ ಇಂದು ಮಧ್ಯಾಹ್ನ ಸುಮಾರು 1:15ಎಲ್ಲಿ ಶಿರಸಿ ಕಾನೂಗೋಡು ಸಮೀಪ ಹೋಗುತ್ತಿದ್ದಾಗ ಎದುರಿನಿಂದ ಬಂದ ಕಾರು ಬಸ್‌ಗೆ ಡಿಕ್ಕಿಹೊಡೆದಿದೆ. ಪರಿಣಾಮ ಕಾರಿನಲ್ಲಿದ್ದ ಗಂಡ- ಹೆಂಡತಿ ಇಬ್ಬರಿಗೂ ಪೆಟ್ಟಾಗಿದೆ.

ಬಳಿಕ ಡ್ರೈವಿಂಗ್ ನಲ್ಲಿದ್ದ ಚಂದ್ರಶೇಖರ್‌ ಪಲ್ಲೆ ಮೃತಾಪಟ್ಟಿದ್ದಾರೆ. ಈ ಇಬ್ಬರು ಸಹ ಡಯಾಲಿಸಿಸ್‌ಗೆ ಶಿರಸಿ ಆಸ್ಪತ್ರೆಗೆ ಹೋಗುತ್ತಿದ್ದರು ಎಂದು ತಿಳಿದು ಬಂದಿದೆ. ಈ ಅಪಘಾತದಲ್ಲಿ ಬಸ್‌ ಚಾಲಕನ ತಪ್ಪಿಲ್ಲ ಬಸ್ಸು ಸಂಪೂರ್ಣ ಎಡ ಭಾಗದಲ್ಲೇ ಚಲಿಸುತ್ತಿತ್ತು ಅಪಘಾತ ಸಂಭವಿಸುತ್ತದೆ ಎಂದು ಚಾಲಕ ರೋಡ್‌ ಬಿಟ್ಟು ಎಡಭಾಗಕ್ಕೆ ಬಸ್‌ ತೆಗೆದುಕೊಂಡರೂ ಈ ಅವಘಡ ಸಂಭವಿಸಿದೆ ಎಂದು ಹೇಳಲಾಗುತ್ತಿದೆ.

ಕಾರು ಚಾಲಕ ಚಂದ್ರಶೇಖರ್‌ ಪಲ್ಲೆ ಅವರು ಅನಾರೋಗ್ಯದಿಂದ ಬಳಲುತ್ತಿದ್ದರೂ ಡ್ರೈವಿಂಗ್ ಮಾಡಿದ್ದೆ ಅಪಘಾತಕ್ಕೆ ಕಾರಣ ಎನ್ನಲಾಗುತ್ತಿದೆ. ಇತ್ತ ಕಾರು ಚಾಲನೆ ಮಾಡಿಕೊಂಡು ಹೋಗುವುದು ಬೇಡ ಎಂದು ಪತ್ನಿ ಹೇಳಿದರೂ ಪರವಾಗಿಲ್ಲ ನಿಧಾನಕ್ಕೆ ಹೋಗೋಣ ಎಂದು ಕಾರು ಚಲಾಯಿಸಿದ್ದರಿಂದ ಈ ಅವಘಡ ಸಂಭವಿಸಿದೆ ಎನ್ನಲಾಗುತ್ತಿದೆ.

ಈ ಸಂಬಂಧ ಶಿರಸಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ಮುಂದಿನ ಕ್ರಮ ತೆಗೆದುಕೊಂಡಿದ್ದಾರೆ.

Leave a Reply

error: Content is protected !!
LATEST
KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ ಮೇಲುಸೇತುವೆ-ಕೆಳಸೇತುವೆಗಳ ನಿರ್ವಹಣೆ ಸರಿಯಾಗಿ ಮಾಡಿ: ತುಷಾರ್ ಗಿರಿನಾಥ್ ದೆಹಲಿ ನೂತನ ಮುಖ್ಯಮಂತ್ರಿಯಾಗಲಿದ್ದಾರೆ ಅತಿಶಿ: ಎಎಪಿ ನಾಯಕರ ಸಭೆಯಲ್ಲಿ ನಿರ್ಧಾರ BMTC 1500 ನಿವೃತ್ತ ನೌಕರರ ಗ್ರಾಚ್ಯುಟಿ, EL ಹಣ 400 ಕೋಟಿ ರೂ.ಬಾಕಿ: 16-18 ತಿಂಗಳಿನಿಂದ ಕೇಂದ್ರ ಕಚೇರಿಗೆ ಅಲೆದಾಟ!! ಸುಪ್ರೀಂ ಕೋರ್ಟ್ ಅಧಿಕೃತ  ಭಾಷೆ ಇಂಗ್ಲಿಷ್- ಹಿಂದಿಯಲ್ಲಿ ವಾದಕ್ಕೆ ಅನುಮತಿ ಇಲ್ಲ: ವಕೀಲರಿಗೆ ನೆನಪಿಸಿದ ಕೋರ್ಟ್‌ ಕೃಷಿ ಉತ್ಪನ್ನಗಳ ಬೆಂಬಲ ಬೆಲೆಗಿಂತ ಕಡಿಮೆ ದರಕ್ಕೆ ಖರೀದಿ ಮಾಡದಂತ ಕಟ್ಟುನಿಟ್ಟಿನ ಕಾನೂನು ಜಾರಿಗೆ ರೈತ ಮುಖಂಡರ ಆಗ್ರಹ KSRTC ಬಸ್‌ -ಕಾರು ನಡುವೆ ಅಪಘಾತ: ಅನಾರೋಗ್ಯದ ನಡುವೆ ಕಾರು ಚಲಾಯಿಸಿದ ಪತಿ ಮೃತ- ಪತ್ನಿ ಪ್ರಾಣಾಪಾಯದಿಂದ ಪಾರು