CrimeNEWSನಮ್ಮಜಿಲ್ಲೆ

ಅಪಘಾತ ಪ್ರಕರಣ: ನಟ ನಾಗಭೂಷಣ್ ವಿರುದ್ಧ ನ್ಯಾಯಾಲಯಕ್ಕೆ ಚಾರ್ಜ್​ಶೀಟ್ ಸಲ್ಲಿಕೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕಾರು ಅಪಘಾತ ಪ್ರಕರಣದಲ್ಲಿ ಪಾದಚಾರಿಯೊಬ್ಬರು ಮೃತಪಟ್ಟ ಸಂಬಂಧ ನಟ ನಾಗಭೂಷಣ್ ವಿರುದ್ಧ ನ್ಯಾಯಾಲಯಕ್ಕೆ ಚಾರ್ಜ್​ಶೀಟ್ ಸಲ್ಲಿಕೆ ಮಾಡಲಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಸದ್ಯ 60 ಸಾಕ್ಷಿಗಳನ್ನು ಪೊಲೀಸರು ಕಲೆಹಾಕಿದ್ದಾರೆ. ಇದರಿಂದ ನಾಗಭೂಷಣ್ ಅವರಿಗೆ ಸಂಕಷ್ಟ ಎದುರಾಗಲಿದೆ ಎಂದು ಹೇಳಲಾಗುತ್ತಿದೆ. ಇನ್ನು ಮುಂದಿನ ದಿನಗಳಲ್ಲಿ ಪ್ರಕರಣ ಯಾವ ರೀತಿ ಸಾಗಲಿದೆ ಎಂಬುದರ ಬಗ್ಗೆ ಕಾದು ನೋಡಬೇಕಿದೆ.

ಕಳೆದ ಅಕ್ಟೋಬರ್ 30ರಂದು ಬೆಂಗಳೂರಿನ ಕೋಣನಕುಂಟೆ ಸಮೀಪ ಕಾರು ಅಪಘಾತ ಸಂಭವಿಸಿತ್ತು. ನಾಗಭೂಷಣ್ ಓಡಿಸುತ್ತಿದ್ದ ಕಾರು ಪಾದಚಾರಿಗಳಿಗೆ ಡಿಕ್ಕಿ ಹೊಡೆದ ಬಳಿಕ ವಿದ್ಯುತ್ ಕಂಬಕ್ಕೆ ಗುದ್ದಿತ್ತು.

ಈ ವೇಳೆ ಪ್ರೇಮಾ ಎಂಬುವವರು ಮೃತಪಟ್ಟರೆ, ಅವರ ಪತಿ ಕೃಷ್ಣ ಅವರಿಗೆ ಗಂಭೀರ ಗಾಯವಾಗಿತ್ತು. ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಈಗ ಚೇತರಿಕೆ ಕಂಡಿದ್ದು, ಅವರು ಹೇಳಿಕೆ ದಾಖಲು ಮಾಡಿದ್ದಾರೆ.

Leave a Reply

error: Content is protected !!
LATEST
KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು ಗಂಭೀರ ಸ್ವರೂಪ ಪಡೆಯುತ್ತಿದೆ ದೆಹಲಿ ರೈತರ ಹೋರಾಟ: ನ.26ರಿಂದ ಉಪವಾಸ ಸತ್ಯಾಗ್ರಹ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಸಾಗರದಂತೆ ಬನ್ನಿ: ಮೀರಾ ಶಿವಲಿಂಗಯ್ಯ ಕರೆ SC, ST ಅಲೆಮಾರಿ ಸಮುದಾಯಗಳ ಯೋಜನೆಗಳು ಸದ್ಬಳಕೆ ಆಗಬೇಕು: ಡಿಸಿ ಶಿವಶಂಕರ