CrimeNEWSನಮ್ಮರಾಜ್ಯ

ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಗೌರಿ ಹಬ್ಬದ ದಿನ ರಾಜ್ಯದ ಆರು ಪ್ರತ್ಯೇಕ ಸ್ಥಳಗಲ್ಲಿ ರಸ್ತೆ ಅಪಘಾತ ಸಂಭವಿಸಿದ್ದು 13 ಮಂದಿ ಭೀಕರ ದುರಂತದಲ್ಲಿ ಇಹಲೋಕ ತ್ಯಜಿಸಿರುವ ಘಟನೆ ನಡೆದಿದೆ.

ರಾಯಚೂರು: ಟಂಟಂ ವಾಹನ ಹಾಗೂ ಲಾರಿ ನಡುವೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಲಾರಿ ಕ್ಲೀನರ್ ಮೃತಪಟ್ಟಿದ್ದಾನೆ. ಇಂದು ಬೆಳಗ್ಗೆ ಓವರ್ ಟೆಕ್ ಮಾಡುವ ವೇಳೆ ರಾಯಚೂರು-ಹೈದ್ರಾಬಾದ್ ಹೆದ್ದಾರಿಯಲ್ಲಿ ಎದುರಿಗೆ ಬರುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದು ಈ ಅವಘಡ ಸಂಭವಿಸಿದೆ.

ಅಪಘಾತದ ವೇಳೆ ತರಕಾರಿ ಲಾರಿ ಸಂಪೂರ್ಣ ನುಜ್ಜುಗುಜ್ಜಾಗಿದೆ. ಟಂಟಂ ವಾಹನ ಚಾಲಕರು, ಕ್ಲೀನರ್ ಸಣ್ಣ ಪುಟ್ಟ ಗಾಯಗಳಿಂದ ಪಾರಾಗಿದ್ದಾರೆ. ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯಪುರ: ಬೈಕ್​ ಸವಾರ ವೀಲ್ಹಿಂಗ್​ ಮಾಡಿದ ಪರಿಣಾಮ ಜಾತ್ರೆಗೆಂದು ಬಂದ ನಾಲ್ವರ ಮೇಲೆ ಬೈಕ್‌ ಹರಿದು ಸಾವನ್ನಪ್ಪಿದ ಘಟನೆ ಮುದ್ದೇಬಿಹಾಳ ತಾಲೂಕಿನ ಕುಂಟೋಜಿ ಗ್ರಾಮದ ಹೊರವಲಯದಲ್ಲಿ ನಡೆದಿದೆ. ಜಾತ್ರೆಗೆಂದು ಬಂದಿದ್ದವರ ಮೇಲೆ ಪಲ್ಸರ್ ಬೈಕ್ ಹರಿದಿದ್ದು, ಅಪಘಾತದಲ್ಲಿ ಒಟ್ಟು ನಾಲ್ವರು ಯುವಕರ ಸಾವನ್ನಪ್ಪಿದ್ದರೆ ಮೂವರ ಸ್ಥಿತಿ ಗಂಭೀರವಾಗಿದೆ.

ನಿನ್ನೆ ರಾತ್ರಿ 11.30ಋಲ್ಲಿ ಈ ಘಟನೆ ನಡೆದಿದ್ದು, ಅನಿಲ ಖೈನೂರ (23), ನಿಂಗರಾಜ್ ಚೌಧರಿ (ಬೈಕ್ ಸವಾರ 22 ), ಕುಮಾರ ಪ್ಯಾಟಿ (18), ರಾಯಪ್ಪ ಬಾಗೇವಾಡಿ (24) ಮೃತಪಟ್ಟಿದ್ದಾರೆ. ಇನ್ನು ಶಾಹಿದ ಹುನಗುಂದ, ಪ್ರಶಾಂತ ಕುರುಬಗೌಡರ, ಹನಮಂತ ಕರುಬಗೌಡರ ಸ್ಥಿತಿ ಚಿಂತಾಜನಕವಾಗಿದೆ. ಗಾಯಾಳುಗಳನ್ನು ಬಾಗಲಕೋಟ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ನಾಟಕ‌ ನೋಡಲು ಗುಂಪಾಗಿ ಹೋಗುತ್ತಿದ್ದವರ ಮೇಲೆ ಈ ಪಲ್ಸರ್ ಬೈಕ್ ಡಿಕ್ಕಿ ಹೊಡೆದಿದೆ. ಬೈಕ್ ಸವಾರನ ವೇಗ ಮತ್ತು ವೀಲ್ಹಿಂಗ್​ ಈ ಅಪಘಾತಕ್ಕೆ ಕಾರಣವಾಗಿದೆ. ಈ ಸಂಬಂಧ ಮುದ್ದೇಬಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಮನಗರ: ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಮೂವರ ಸ್ಥಳದಲ್ಲೇ ಸಾವನ್ನಪ್ಪಿ ಓರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ತಾಲೂಕಿನ ಮಾಯಗಾನಹಳ್ಳಿ ಬಳಿ ನಡೆದಿದೆ.

ಗಾರೆ ಕೆಲಸಗಾರರಾದ ಗುರುಮೂರ್ತಿ (39), ಶೇಕ್ ಅಫೀಸ್ (45), ವೆಂಕಟೇಶ್ (50) ಮೃತರು ಎಂದು ಗುರುತಿಸಲಾಗಿದೆ. ಗಾಯಾಳು ಹನುಮಂತನನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ಹೈವೆಯ ಸರ್ವೀಸ್ ರಸ್ತೆಯಲ್ಲಿ ಅವಘಡ ಸಂಭವಿಸಿದೆ. ರಾಮನಗರದಿಂದ ಬಿಡದಿ ಕಡೆಗೆ ಹೋಗುತ್ತಿದ್ದಾಗ ಬೈಕ್​​ ಲಾರಿಗೆ ಡಿಕ್ಕಿ ಹೊಡೆದಿದೆ. ಒಂದೇ ಬೈಕ್‌ನಲ್ಲಿ ನಾಲ್ವರು ಪ್ರಯಾಣ ಮಾಡ್ತಿದ್ದರು. ಈ ವೇಳೆ ಲಾರಿ ಅಡ್ಡ ಬಂದ ಹಿನ್ನೆಲೆ ಬೈಕ್ ಡಿಕ್ಕಿ ಹೊಡೆದು ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಸ್ಥಳಕ್ಕೆ ಅಪಘಾತ ಸಂಬಂಧ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ, ಎಎಸ್ಪಿ ಸುರೇಶ್ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ರಾಮನಗರ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಶಿರಸಿ: ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಅರಬೈಲ್‌ನ ರಾಷ್ಟ್ರೀಯ ಹೆದ್ದಾರಿ 63 ರಲ್ಲಿ ಸರಣಿ ಅಪಘಾತ ಸಂಭವಿಸಿದೆ. ಸಿಮೆಂಟ್ ತುಂಬಿದ್ದ ಲಾರಿ ನಿಯಂತ್ರಣ ತಪ್ಪಿ ಕಂಟೈನರ್ ಹಾಗೂ ಮಂಗಳೂರಿಗೆ ತೆರಳುತ್ತಿದ್ದ ಬಸ್​ಗೆ ಹಿಂಭಾಗದಲ್ಲಿ ಡಿಕ್ಕಿ ಹೊಡೆದಿದೆ.

ಮಂಗಳೂರಿಗೆ ತೆರಳುತ್ತಿದ್ದ ರೇಷ್ಮಾ ಹೆಸರಿನ ಬಸ್ ಹಿಂಬಂದಿಗೆ ಡಿಕ್ಕಿ ಹೊಡೆದಿದೆ. ಲಾರಿ ಹಿಂಭಾಗದಿಂದ ಡಿಕ್ಕಿ ಹೊಡೆದ ಪರಿಣಾಮ ಬಸ್ ಚಾಲಕ ನಿಯಂತ್ರಣ ತಪ್ಪಿ ಮುಂಭಾಗದಲ್ಲಿ ಬರುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದಿದ್ದಾನೆ. ಬಸ್ ನಲ್ಲಿದ್ದ ಚಾಲಕ ಅಯೂಬ್ ಗೆ ಗಾಯವಾಗಿದೆ. ಯಲ್ಲಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಾಗಲಕೋಟೆ: ಎರಡು ಬೈಕ್​ಗಳ ನಡುವೆ ಡಿಕ್ಕಿ ಹೊಡೆದ ಪರಿಣಾಮ ಮೂವರ ಸಾವನ್ನಪ್ಪಿದ ಘಟನೆ ಬಾಗಲಕೋಟೆಯ ನವನಗರದಲ್ಲಿ ತಡರಾತ್ರಿ ನಡೆದಿದೆ. ಸ್ಕೂಟಿಯಲ್ಲಿದ್ದ ಗೆಳತಿಯರಿಬ್ಬರು ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಇನೊಂದು ಬೈಕ್‌ನಲ್ಲಿದ್ದ ಇಬ್ಬರು ಯುವಕರ ಪೈಕಿ ಓರ್ವ ಸಾವನ್ನಪ್ಪಿದ್ದು, ಮತ್ತೊಬ್ಬನಿಗೆ ಗಾಯವಾಗಿದೆ.

ನವನಗರದ ಅಬಕಾರಿ ಇಲಾಖೆ ಸಮೀಪದಲ್ಲಿ ನಡೆದಿರುವ ಘಟನೆ ಇದಾಗಿದೆ. ಪ್ರೊಫೆಸರ್ ಕೃತಿಕಾ ಒಂಟಕುದರಿ (32), ಸ್ನೇಹಿತೆ ರಜನಿ ಒಂಟಕುದರಿ (34), ಅಭಿಷೇಕ ಬಂಡಿವಡ್ಡರ ಮೃತರು ಎಂದು ಗುರುತಿಸಲಾಗಿದೆ.

ಕೃತಿಕಾ ಖಾಸಗಿ ದಂತ ವೈದ್ಯಕೀಯ ಕಾಲೇಜಿನಲ್ಲಿ ಪ್ರೊಫೆಸರ್ ಆಗಿದ್ದರು. ರಜನಿ ಬೆಂಗಳೂರಿನಲ್ಲಿ ಸಾಫ್ಟ್‌ವೇರ್ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದರು. ಕೆಲಸ ಮುಗಿಸಿ ಸ್ನೇಹಿತೆ ಜೊತೆಗೆ ಸ್ಕೂಟಿಯಲ್ಲಿ ಹೊರಟಿದ್ದ ವೇಳೆ ಬೈಕ್ ನಲ್ಲಿ ಕಾಳಿದಾಸ್ ಸರ್ಕಲ್ ನಿಂದ ಬಸ್ ನಿಲ್ದಾಣದ ಕಡೆಗೆ ಹೊರಟಿದ್ದ ಯುವಕರು ವೇಗವಾಗಿ ಬಂದು ಸ್ಕೂಟಿಗೆ ಡಿಕ್ಕಿ ಹೊಡೆದಿದ್ದಾರೆ.

ಅಪಘಾತದಲ್ಲಿ ರಜನಿ, ಅಭಿಷೇಕ್ ಸ್ಥಳದಲ್ಲಿಯೇ ಸಾವನ್ನಪ್ಪಿದರೆ, ಕೃತಿಕಾ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ನವನಗರ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮಂಗಳೂರು: ತಡರಾತ್ರಿ ಬೈಕ್‌ ಅಪಘಾತ ಸವಾರರಿಬ್ಬರ ಸಾವನ್ನಪ್ಪಿದ ಘಟನೆ ಮಂಗಳೂರು ಹೊರವಲಯದ ಯೆಯ್ಯಾಡಿ ಎಂಬಲ್ಲಿ ನಡೆದಿದೆ. ಅಲ್ಲಿನ ಹರಿಪದವು ಎಂಬಲ್ಲಿ ದುರ್ಘಟನೆ ಸಂಭವಿಸಿದೆ.

ಉಪ್ಪಿನಂಗಡಿಯ ಚೇತನ್ (24) ಮತ್ತು ಕೋಡಿಕಲ್​ನ ಕಾಶೀನಾಥ್ (17) ಮೃತ ದುರ್ದೈವಿಗಳು. ಲಾರಿಯೊಂದಕ್ಕೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋದಾಗ ಬೈಕ್ ನಿಯಂತ್ರಣ ತಪ್ಪಿದೆ. ಬೈಕ್‌ನಿಂದ ಬಿದ್ದು ಸವಾರರು ಸಾವನ್ನಪ್ಪಿದ್ದಾರೆ. ಅಪಘಾತದ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

Leave a Reply

error: Content is protected !!
LATEST
KSRTC : ಗಣಪತಿ ಪ್ರತಿಷ್ಠಾಪಿಸಿದ್ದರಿಂದ ಡಿಪೋ ಮುಂದೆ ಚಾಲಕ ರವಿ ಪಾರ್ಥಿವ ಶರೀರ ಇಡಲಾತ್ತು, ಪ್ರಮಾದವಾಗಿಲ್ಲ- ಡಿಎಂ ಸಮ... 10 ವರ್ಷದ ಆಧಾರ್‌ ನವೀಕರಣಕ್ಕೆ ಡೆಡ್‌ಲೈನ್‌ ಫಿಕ್ಸ್‌: ನಾಳೆ ಅಂತಿಮ ಗಡುವು- ಬಳಿಕ ದಂಡ ನಾಗಮಂಗಲ ಕೋಮುಗಲಭೆ ಪ್ರಕರಣ: ಇನ್ಸ್‌ಪೆಕ್ಟರ್ ಅಶೋಕ್ ಕುಮಾರ್ ಅಮಾನತು KSRTC ಸಿಬ್ಬಂದಿಯಿಂದಲೇ ಡಿಸಿಗೆ ಇರಿಯಲು ಯತ್ನ- ಕೈ ಅಡ್ಡಹಾಕಿ ಪ್ರಾಣಾಪಾಯದಿಂದ ಪಾರಾದ ಜಗದೀಶ್ ಕುಮಾರ್‌ "ARM" ಸಿನಿಮಾ ಇಂದು ಪ್ರಪಂಚದಾದ್ಯಂತ ಐದು ಭಾಷೆಗಳಲ್ಲಿ ಬಿಡುಗಡೆ ಸೆ.14ರಂದು ಸಾರಿಗೆ ಸಿಬ್ಬಂದಿಗಳಿಗೆ ಔಷಧೀಯ ಸಸ್ಯಗಳ  ಉಚಿತ ವಿತರಣೆ: ಅಧಿಕಾರಿಗಳು ಭಾಗಿ ಟೊವಿನೋ ಥಾಮಸ್ ಸಿನಿಮಾ ವಿತರಿಸಲಿದೆ ಹೊಂಬಾಳೆ ಫಿಲ್ಮ್! ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌ ಬಂಧನ ಅವಧಿ ಮತ್ತೆ ಒಂದು ದಿನ ವಿಸ್ತರಣೆ KSRTC ಚಿಕ್ಕಮಗಳೂರು: ಘಟಕದ ಗೇಟ್‌ ಬಳಿ ತ್ಯಾಜ್ಯಗಳ ನಡುವೆ ಚಾಲಕನ ಪಾರ್ಥಿವ ಶರೀರವಿಟ್ಟು ಅಂತಿಮ ದರ್ಶನಕ್ಕೆ ವ್ಯವಸ್ಥೆ-... ವಾಲ್ಮೀಕಿ ಹಗರಣ: ಬಳ್ಳಾರಿಯಿಂದ ಬಿಜೆಪಿ ಪಾದಯಾತ್ರೆ - ಛಲವಾದಿ ನಾರಾಯಣಸ್ವಾಮಿ