CRIMENEWSದೇಶ-ವಿದೇಶನಮ್ಮರಾಜ್ಯ

ಸಚಿವ ಪ್ರಿಯಾಂಕ ಖರ್ಗೆ ಬೆದರಿಕೆ ಹಾಕಿದ್ದ ಆರೋಪಿ ಮಹಾರಾಷ್ಟ್ರದಲ್ಲಿ ಬಂಧನ- ಹಿಂದಿನ ಕೈಗಳ ಬಗ್ಗೆಯೂ ತನಿಖೆ: ಗೃಹ ಸಚಿವ

ವಿಜಯಪಥ ಸಮಗ್ರ ಸುದ್ದಿ

ತುಮಕೂರು: ರಾಜ್ಯದಲ್ಲಿ ಆರ್‌ಆರ್‌ಎಸ್ ಚಟುವಟಿಕೆ ನಿಷೇಧಿಸುವಂತೆ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿರುವ ಸಚಿವ ಪ್ರಿಯಾಂಕ ಖರ್ಗೆಯವರಿಗೆ ಬೆದರಿಕೆಯೊಡ್ಡುವ ಪೋಸ್ಟ್ ಮಾಡಿದ್ದ ವ್ಯಕ್ತಿಯನ್ನು ಮಹಾರಾಷ್ಟ್ರದಲ್ಲಿ ಬಂಧಿಸಲಾಗಿದೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ,

ಇಂದು ನಗರದ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಪ್ರಿಯಾಂಕ ಖರ್ಗೆಯವರಿಗೆ ಎಲ್ಲ ರೀತಿಯ ಭದ್ರತೆ ವ್ಯವಸ್ಥೆ ಮಾಡಲಾಗಿದೆ.  ಜತೆಗೆ ಇದರ ಹಿಂದೆ ಯಾರಾದರೂ ಇದ್ದಾರೆ ಎಂಬ ಬಗ್ಗೆಯೂ ತನಿಖೆ ನಡೆಯುತ್ತಿದೆ ಎಂದರು.

ಸರ್ಕಾರಿ ಜಾಗಗಳಲ್ಲಿ ಹಾಗೂ ಧಾರ್ಮಿಕ ಸ್ಥಳಗಳಲ್ಲಿ ಖಾಸಗಿಯವರು ಕಾರ್ಯಕ್ರಮ ಮಾಡಬೇಕಾದರೆ ಅನುಮತಿ ಕಡ್ಡಾಯ. ಈ ಹಿಂದೆ ಜಗದೀಶ್‌ಶೆಟ್ಟರ್‌ ಅವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಖಾಸಗಿಯವರು ಸರ್ಕಾರಿ ಜಾಗದಲ್ಲಿ ಕಾರ್ಯಕ್ರಮ ಮಾಡುವುದನ್ನು ನಿಷೇಧ ಮಾಡಿ ಅಥವಾ ಅನುಮತಿ ಪಡೆಯುವಂತೆ ಆದೇಶ ಮಾಡಿದ್ದರು. ಆದರೆ ಇತ್ತೀಚೆಗೆ ಕೆಲವು ಸಂಘಟನೆಗಳು ಇದನ್ನು ದುರುಪಯೋಗ ಮಾಡಿಕೊಳ್ಳುತ್ತಿವೆ ಎಂದು ಹೇಳಿದರು.

ಶಾಲಾ-ಕಾಲೇಜು ಹಾಗೂ ಧಾರ್ಮಿಕ ಸ್ಥಳಗಳಲ್ಲಿ ಆರ್‌ಎಸ್‌ಎಸ್ ಸೇರಿ ಬೇರೆ ಬೇರೆ ಖಾಸಗಿ ಸಂಸ್ಥೆಗಳಿಗೆ ಕಾರ್ಯಕ್ರಮ ಮಾಡಲು ಅವಕಾಶ ಕೊಡಬಾರದು ಎಂದು ನಿನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ ಎಂದರು.

ಆರ್‌ಎಸ್‌ಎಸ್‌ನವರು ಪಥಸಂಚಲನ ನಡೆಸುವ ಸಂಬಂಧ ಪೊಲೀಸರ ಅನುಮತಿ ಪಡೆಯಬೇಕು. ಕಾನೂನು ಕ್ರಮಗಳನ್ನು ಪಾಲಿಸಿ ಪಥಸಂಚಲನ ನಡೆಸಬೇಕು ಎಂದು ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯಿಸಿದರು.

ಹಣ ಮಾಡುವುದಕ್ಕೋಸ್ಕರ ಭೂಪರಿವರ್ತನೆ ಮಾಡಲಾಗುತ್ತಿದೆ ಎಂಬ ಕೇಂದ್ರ ಸಚಿವ ಕುಮಾರಸ್ವಾಮಿ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿದ್ದವರು, ಈಗ ಕೇಂದ್ರ ಸಚಿವರಾಗಿದ್ದಾರೆ. ಅವರ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸುತ್ತೇವೆ. ಭೂ ಪರಿವರ್ತನೆ ವಿಚಾರದಲ್ಲಿ ಹಣ ಮಾಡಲಾಗುತ್ತಿದೆ ಎಂಬುದನ್ನು ಅವರು ನಿರ್ದಿಷ್ಟವಾಗಿ ಹೇಳಬೇಕು ಆಗ ತನಿಖೆ ಮಾಡುತ್ತೇವೆ ಎಂದರು.

Megha
the authorMegha

Leave a Reply

error: Content is protected !!
Latest news
KSRTC ಮೈಸೂರು ಡಿಸಿಗೆ- RC, FC ಚಾಲಕ ನಿರ್ವಾಹಕರ ಜವಾಬ್ದಾರಿನಾ?: ಹೇ ತಲೆಕೆಟ್ಟ ಡಿಸಿ ನೀನು ನಿಜವಾಗಲು ಜವಾಬ್ದಾರಿಯಿಂ... ಭಾರೀ ಮಳೆಗೆ ನೆಲಕಚ್ಚಿದ ಪರಂಗಿ ಅಡಿಕೆ ಗಿಡಗಳು -ಅಪಾರ ಪ್ರಮಾಣದ ಬೆಳೆ ಹಾನಿ ರೈತರ ಗೋಳಾಟ ಪ್ರೀತಿ ನಿರಾಕರಿಸಿದ್ದಕ್ಕೆ ಹೈಟೆನ್ಷನ್ ಕಂಬ ಹತ್ತಿ ಕುಳಿತಿರುವ ಪಾಗಲ್‌ ನಾಳೆಯಿಂದ ಹಮ್ಮಿಕೊಂಡಿದ್ದ ಅರ್ನಿದಿಷ್ಟವಾಧಿ ಸಾರಿಗೆ ನೌಕರರ ಮುಷ್ಕರ ವಾಪಸ್‌: ಜಂಟಿ ಕ್ರಿಯಾ ಸಮಿತಿ ಜಂಟಿ ಕ್ರಿಯಾ ಸಮಿತಿಗೆ ಶಾಕ್‌: KSRTC ನೌಕರರ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಹೈ ಕೋರ್ಟ್‌ ತಡೆ ಸಾರಿಗೆ ಕಾರ್ಮಿಕರ ಜಂಟಿ ಕ್ರಿಯಾ ಸಮಿತಿ ಕರೆ ಕೊಟ್ಟಿದ್ದ ಮುಷ್ಕರದಿಂದ ಹಿಂದೆ ಸರಿದ ಮತ್ತೊಂದು KSRTC ನೌಕರರ ಸಂಘ ದುಬಾರೆ ಸಾಕಾನೆ ಶಿಬಿರದಲ್ಲಿ ನಡೆದ ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಸಾವು ಇಂದು ರಾತ್ರಿ 8.30ರಿಂದ 9.30ರವರೆಗೆ KSRTC ಎಂಡಿ ಅಕ್ರಮ್‌ ಪಾಷರ ಭೇಟಿ ಮಾಡಿ ಗೌಪ್ಯ ಸಭೆ ನಡೆಸಿದ ಜಂಟಿ ಮುಖಂಡರು! ಸಾರಿಗೆ ಕಾರ್ಮಿಕರ ಜಂಟಿ ಕ್ರಿಯಾ ಸಮಿತಿ ಕರೆ ಕೊಟ್ಟಿದ್ದ ಮುಷ್ಕರದಿಂದ ಹಿಂದೆ ಸರಿದ KSRTC ಪ.ಜಾ.-ಪ.ಪಂ ನೌಕರರ ಸಂಘ ಗುಡುಗು ಸಿಡಿಲಿನ ಆರ್ಭಟ: ಮನೆ ಮುಂದೆ ನಿಂತಿದ್ದ ಶಿಕ್ಷಕ ಹೃದಯಾಘಾತಕ್ಕೆ ಬಲಿ