NEWSನಮ್ಮಜಿಲ್ಲೆನಮ್ಮರಾಜ್ಯ

KSRTCಗೆ100 ಹೊಸ ಬಸ್‌ಗಳ ಸೇರ್ಪಡೆ: ಇಂದಿನಿಂದ “ಪಲ್ಲಕ್ಕಿ ಉತ್ಸವ” – ಸಿಎಂ ಡಿಸಿಎಂರಿಂದ ಅದ್ದೂರಿ ಚಾಲನೆ

ಪಲ್ಲಕ್ಕಿ ಬಸ್‌ನ ವಿಶೇಷತೆ l ಪ್ರತಿ ಪ್ರಯಾಣಿಕರಿಗೂ ಚಪ್ಪಲಿ ಇಡಲೂ ಸ್ಥಳಾವಕಾಶ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ರಾಜ್ಯ ಸಾರಿಗೆಯ ಪಲ್ಲಕ್ಕಿ ಉತ್ಸವ ಇಂದಿನಿಂದ ಆರಂಭವಾಗಿದ್ದು, ವಿಧಾನಸೌಧದ ಮುಂಭಾಗ ಶನಿವಾರ ರಾಜ್ಯ ಸಾರಿಗೆಯ ಪಲ್ಲಕ್ಕಿ ಕ್ಲಾಸ್ ಬಸ್‌ಗಳು ಸೇರಿದಂತೆ 100 ನೂತನ ಕರ್ನಾಟಕ ಸಾರಿಗೆ ಹಾಗೂ 40 ಹವಾನಿಯಂತ್ರಣ ರಹಿತ ಸ್ಲೀಪರ್ ಬಸ್‌ಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಚಾಲನೆ ನೀಡಿದರು.

ಈ ವೇಳೆ ಮಾತನಾಡಿ ಡಿಸಿಎಂ ಡಿಕೆಶಿ ಅವರು, ಇಂದು ನಾವು ಹೊಸ ಅಧ್ಯಾಯಕ್ಕೆ ಕಾಲಿಟಿದ್ದೇವೆ. ಹೆಣ್ಣು ಕುಟುಂಬದ ಕಣ್ಣು ಇದ್ದಂತೆ. ಬೆಲೆಯೇರಿಕೆ ಸಮಸ್ಯೆಗೆ ಮುಕ್ತಿ ನೀಡಿ ಆರ್ಥಿಕವಾಗಿ ಮಹಿಳೆಯರಿಗೆ ಶಕ್ತಿ ನೀಡಬೇಕು ಎಂಬ ಉದ್ದೇಶದೊಂದಿಗೆ ನಮ್ಮ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದ್ದೇವೆ ಎಂದು ಹೇಳಿದರು.

ಇನ್ನು ರಾಜ್ಯ ಸಾರಿಗೆಯ ನಾಲ್ಕೂ ನಿಗಮಗಳ ಬಸ್‌ಗಳಲ್ಲಿ ಶಕ್ತಿ ಯೋಜನೆಯಡಿ ರಾಜ್ಯದ 72 ಕೋಟಿಯಷ್ಟು ಮಹಿಳೆಯರು ಉಚಿತವಾಗಿ ಪ್ರಯಾಣಿಸಿದ್ದಾರೆ. ಸರ್ಕಾರಿ ಸಂಸ್ಥೆಗಳು ಲಾಭದ ಜೊತೆಗೆ ನಾಡಿನ ಜನತೆಗೆ ಅನುಕೂಲ ಆಗುವ ದೃಷ್ಟಿಯಿಂದ ಜನರ ಸೇವೆಯನ್ನು ಸರ್ಕಾರ ಮಾಡುತ್ತಿದೆ ಎಂದು ತಿಳಿಸಿದರು.

ಇಂದಿನಿಂದ ಆರಂಭವಾಗಿರುವ ಪಲ್ಲಕ್ಕಿ ಬಸ್‌ನ ವಿಶೇಷತೆಗಳನ್ನು ಗಮನಿಸಲಾಗಿದೆ. ಮನೆಯ ಯಜಮಾನಿಯರನ್ನು ದೇವಸ್ಥಾನ ಸೇರಿದಂತೆ ಹಲವು ಪ್ರದೇಶಗಳಿಗೆ ರಾಜ್ಯ ಸಾರಿಗೆ ಬಸ್‌ಗಳು ತಲುಪಿಸುತ್ತಿವೆ. ಕೊಟ್ಟ ಮಾತು ಉಳಿಸಿಕೊಳ್ಳುವ ಮೂಲಕ ರಾಜ್ಯದಲ್ಲಿ ಉತ್ತಮವಾದ ಆಡಳಿತ ನೀಡುತ್ತೇವೆ ಎಂದು ತಿಳಿಸಿದರು.

ಬೆಳಗ್ಗೆ ವಿಧಾನ ಸೌಧದ ಗ್ರ್ಯಾಂಡ್‌ ಸ್ಟೆಪ್ ಮುಂಭಾಗ ನಡೆದ ಕಾರ್ಯಕ್ರಮದಲ್ಲಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಸಚಿವರಾದ ಕೆ.ಎಚ್ ಮುನಿಯಪ್ಪ, ಈಶ್ವರ್ ಖಂಡ್ರೆ, ದಿನೇಶ್ ಗುಂಡೂರಾವ್ ಮತ್ತು ಶಾಸಕರು ಹಾಗೂ ಅಧಿಕಾರಿಗಳು ಭಾಗಿಯಾಗಿದ್ದರು.

ಪಲ್ಲಕ್ಕಿ ಬಸ್‌ನ ವಿಶೇಷತೆ: 11.3 ಮೀಟರ್ ಉದ್ದದ ನಾನ್ ಎಸಿ ಬಸ್​ಗಳು. ಬಿಎಸ್-6 ತಂತ್ರಜ್ಞಾನದ ಮಾದರಿಯ ಎಚ್.ಪಿ ಇಂಜಿನ್. ಹೈಟೆಕ್ ವಿನ್ಯಾಸದ 30 ಸ್ಲೀಪರ್ ಬರ್ತ್ ಸೀಟ್​ಗಳು. ಪ್ರತಿ ಸೀಟಿಗೆ ಮೊಬೈಲ್, ಲ್ಯಾಪ್​ಟಾಪ್​ಗಳ ಚಾರ್ಜಿಂಗ್, ಮೊಬೈಲ್ ಸ್ಟ್ಯಾಂಡ್ ಇದೆ.

ಸೀಟ್ ನಂಬರ್ ಮೇಲೆ ಎಲ್​ಇಡಿ ಅಳವಡಿಕೆ. ಓದಲು ಉತ್ತಮ ಬೆಳಕಿನ ಎಲ್.ಇ.ಡಿ ಲೈಟ್ ಅಳವಡಿಕೆ. ಬಸ್​ನಲ್ಲಿ ಆಡಿಯೋ ಸ್ವೀಕರ್​ಗಳ ಮೂಲಕ ಜನರಿಗೆ ಮಾಹಿತಿ ನೀಡುವ ವ್ಯವಸ್ಥೆ. ಡಿಜಿಟಲ್ ಗಡಿಯಾರ, ಹಾಗೇ ಎಲ್.ಇ.ಡಿ. ಫ್ಲೋರ್. ಪ್ರತಿ ಪ್ರಯಾಣಿಕರಿಗೆ ಚಪ್ಪಲಿ ಇಡಲು ಸ್ಥಳಾವಕಾಶದ ವ್ಯವಸ್ಥೆ.

ಪ್ರಯಾಣಿಕರಿಗೆ ತಲೆದಿಂಬಿನ ವ್ಯವಸ್ಥೆ. ಚಾಲಕರಿಗೆ ಸಹಾಯವಾಗಲು ಬಸ್ ಹಿಂಭಾಗದಲ್ಲಿ ಹೈಟೆಕ್ -ಕ್ಯಾಮೆರಾ ಅಳವಡಿಕೆ. 40 ಬಸ್‌ಗಳ ಪೈಕಿ 30 ಬಸ್‌ಗಳನ್ನು ರಾಜ್ಯದೊಳಗೆ ಸಂಚರಿಸಲಿವೆ. ಉಳಿದ 10 ಬಸ್‌ಗಳು ಬೆಂಗಳೂರಿನಿಂದ‌ ಹೊರ ರಾಜ್ಯಗಳಿಗೆ ಸಂಚರಿಸಲಿವೆ.

ಈ ಬಸ್‌ ಸೇವೆಯೂ ಇಂದಿನಿಂದಲೇ ಆರಂಭವಾಗಿದ್ದು, ನಾನ್ ಎಸಿ ಬಸ್‌ಗಳಿಗೆ ಯಾವುದೇ ಹೆಸರಿಟ್ಟು ಬ್ರ್ಯಾಂಡಿಂಗ್‌ ಮಾಡಿರಲಿಲ್ಲ. ಸದ್ಯ ಪಲ್ಲಕ್ಕಿ ಎಂಬ ಬ್ರ್ಯಾಂಡ್‌ ನೇಮ್‌ ಇಡಲಾಗಿದೆ. ಈ ಹೆಸರನ್ನು ಸ್ವತಃ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸೂಚಿಸಿದ್ದರು.

Leave a Reply

error: Content is protected !!
LATEST
KSRTC: ₹8.76 ಲಕ್ಷ ನಷ್ಟವುಂಟು ಮಾಡಿರುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ಸರ್ಕಾರದ ಮುಖ್ಯ ಕಾರ್ಯದರ್ಶ... BMTC ಚಾಲಕರಿಗೆ ಕೂಡಲೇ ವೇತನ ಪಾವತಿಸಿ: ಎಎಪಿಯ ಜಗದೀಶ್ ವಿ. ಸದಂ ಆಗ್ರಹ ಬಸವನಹಳ್ಳಿ: ನಿವೃತ್ತ ಸಹಾಯಕ ತೋಟಗಾರಿಕಾ ಇಲಾಖೆಯ ನಿರ್ದೇಶಕ ಚಿಕ್ಕಮಾಯಿಗೌಡರ ಪತ್ನಿ ಸಿದ್ದಮ್ಮ ನಿಧನ KSRTC ನೌಕರರ 2024ರ ವೇತನ ಪರಿಷ್ಕರಣೆ, 38 ತಿಂಗಳ ಹಿಂಬಾಕಿ ಬಿಡುಗಡೆಗೆ ಜೂನ್‌ 6ರಬಳಿಕ ನಿರ್ಧಾರ: ರಾಮಲಿಂಗಾರೆಡ್ಡಿ ಚಿಕ್ಕಮಗಳೂರಲ್ಲಿ ಧಾರಾಕಾರ ಮಳೆ- ಬೆಂಗಳೂರಿಗೂ ಆಗಮಿಸಲಿದ್ದಾನೆ ವರುಣ BMTC: ವೇತನಕ್ಕೆ ಆಗ್ರಹಿಸಿ ಬಿಎಂಟಿಸಿ ಎಲೆಕ್ಟ್ರಿಕ್‌ ಬಸ್‌ ಚಾಲಕರ ದಿಢೀರ್‌ ಪ್ರತಿಭಟನೆ ನಮ್ಮಲ್ಲಿ ಒಳಜಗಳ ಗಿಳಜಗಳ ಯಾವುದೂ ಇಲ್ಲ : ಸಿಎಂ ಸಿದ್ದರಾಮಯ್ಯ ಲೋಕಸಮರ 2024: 7ನೇ ಹಂತದ ಚುನಾವಣೆ - ವಾರಣಾಸಿಯಿಂದ 3ನೇ ಬಾರಿಗೆ ಪರೀಕ್ಷೆಗಿಳಿದ ಪ್ರಧಾನಿ ಮೋದಿ KSRTC: ಕರ್ತವ್ಯದ ವೇಳೆಯೇ ಬ್ರೈನ್‌ಸ್ಟ್ರೋಕ್‌ - ಸಾರಿಗೆ ನೌಕರನಿಗೆ ಬೇಕಿದೆ ಆರ್ಥಿಕ ನೆರವು ನಾಲ್ಕನೇ ಹಂತದ ಲೋಕಸಭಾ ಚುನಾವಣೆ: 10 ರಾಜ್ಯಗಳ 96 ಕ್ಷೇತ್ರಗಳಲ್ಲಿ ಒಟ್ಟಾರೆ ಶೇ. 62.84ರಷ್ಟು ಮತದಾನ