ಬೆಂಗಳೂರು: ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರವು ಗುಡುಗು ಮತ್ತು ಸಿಡಿಲು ಬಡಿತದಿಂದ ಉಂಟಾಗುವ ಪ್ರತಿಕೂಲ ಪರಿಣಾಮಗಳನ್ನು ತಗ್ಗಿಸಲು ಸಲಹೆ ಸೂಚನೆಗಳನ್ನು ರಾಜ್ಯ ಸರ್ಕಾರದಿಂದ ನೀಡಲಾಗಿದೆ.
ಕರ್ನಾಟಕದ ಹಲವು ಭಾಗಗಳಲ್ಲಿ ಗುಡುಗು-ಸಿಡಿಲು ಸಾಮಾನ್ಯವಾಗಿ ಮುಂಗಾರು ಪೂರ್ವದಲ್ಲಿ ಹಾಗೂ ಮುಂಗಾರಿನಲ್ಲಿ ಕಾಣಿಸಿಕೊಳ್ಳುತ್ತದೆ. ಸಿಡಿಲು ಸಾಮಾನ್ಯವಾಗಿ ಮಧ್ಯಾಹ್ನ ಅಥವಾ ಸಂಜೆ ಸಂಭವಿಸುವ ಸಾಧ್ಯತೆ ಹೆಚ್ಚಾಗಿರುತ್ತದೆ. ಸಾರ್ವಜನಿಕರು ಗುಡುಗು-ಸಿಡಿಲಿನಿಂದಾಗುವ ಅಪಾಯಗಳನ್ನು ತಗ್ಗಿಸಲು ಈ ಕೆಳಕಂಡ ಕ್ರಮಗಳನ್ನು ಕೈಗೊಳ್ಳಬೇಕು ಸಲಹೆ ಸೂಚನೆಗಳನ್ನು ನೀಡಿದೆ.
ಗುಡುಗು ಮತ್ತು ಸಿಡಿಲು ಸಂದರ್ಭದಲ್ಲಿ ಸಾರ್ವಜನಿಕರು ಪಾಲಿಸಬೇಕಾದ ಸಲಹೆ ಸೂಚನೆಗಳು:
ಹೊರಗೆ ಹೋಗುವ ಅನಿವಾರ್ಯವಿದ್ದಲ್ಲಿ ಹವಾಮಾನ ಮುನ್ಸೂಚನೆ ಹಾಗೂ Common Alerting Protocol (CAP) ಮುಖಾಂತರ ಬರುವ Alerts / ಸಂದೇಶಗಳನ್ನು ಮೊಬೈಲ್ನಲ್ಲಿ ಗಮನಿಸುವುದು.
ಇನ್ನು ಪ್ರತಿಕೂಲ ಹವಾಮಾನದ ಸಮಯದಲ್ಲಿ ವಿಶೇಷವಾಗಿ ಕೃಷಿ ಕ್ಷೇತ್ರದಲ್ಲಿ ಕೆಲಸ ಮಾಡಲು, ಜಾನುವಾರುಗಳನ್ನು ಮೇಯಿಸಲು, ಮೀನುಗಾರಿಕೆ ಮತ್ತು ದೋಣಿಗಳನ್ನು ಓಡಿಸಲು ಅಥವಾ ಸಾಮಾನ್ಯ ಪ್ರಯಾಣಕ್ಕಾಗಿ ಮನೆಯಿಂದ ಹೊರಗೆ ಹೋಗದಿರುವುದು. ಗುಡುಗು-ಸಿಡಿಲಿನ ಸಂದರ್ಭದಲ್ಲಿ ಲೋಹದ ತಗಡನ್ನು ಹೊದಿಸಿರುವ ಮನೆಗಳು ಸುರಕ್ಷಿತವಲ್ಲ, ಸುರಕ್ಷಿತವಾದ ಕಟ್ಟಡಗಳಲ್ಲಿ ಆಶ್ರಯ ಪಡೆಯುವುದು.
ಬೆಟ್ಟಗಳು, ಪರ್ವತ ಶ್ರೇಣಿಗಳು ಅಥವಾ ಶಿಖರಗಳಂತಹ ಎತ್ತರದ ಪ್ರದೇಶಗಳಿಂದ ಕೆಳಗೆ ಇಳಿದು ಪ್ರವಾಹ ಬರದಂತಹ ತಗ್ಗು ಪ್ರದೇಶವನ್ನು ಖಚಿತಪಡಿಸಿಕೊಂಡು ಆಶ್ರಯ ಪಡೆಯುವುದು. ನೀರಿನ ಮೂಲಗಳಾದ ಕೆರೆ ಮತ್ತು ನದಿಗಳಿಂದ ದೂರವಿರುವುದು. ವಿದ್ಯುತ್ ಉಪಕರಣ ಹಾಗೂ ವಿದ್ಯುತ್ ಸರಬರಾಜು, ಮಾರ್ಗ, ದೂರವಾಣಿ ಸಂಪರ್ಕ, ಮೊಬೈಲ್ ಟವರ್, ಪವನ ವಿದ್ಯುತ್ ಗೋಪುರ ಹಾಗೂ ರೈಲು ಹಳಿಗಳಿಂದ ದೂರವಿರುವುದು.
ವಾಹನ ಚಾಲನೆಯಲ್ಲಿದ್ದರೆ ತಕ್ಷಣವೇ ವಾಹನ ನಿಲ್ಲಿಸಿ ವಾಹನದಲ್ಲಿಯೇ ಆಶ್ರಯ ಪಡೆಯುವುದು. ಗುಡುಗು ಸಿಡಿಲಿನ ಸಮಯದಲ್ಲಿ ಗುಂಪಿನಲ್ಲಿದ್ದರೆ ಅಪಾಯವನ್ನು ಕಡಿಮೆ ಮಾಡಲು ಸಾಕಷ್ಟು ಅಂತರವನ್ನು ಕಾಯ್ದುಕೊಳ್ಳುವುದು. ಗುಡುಗು ಮತ್ತು ಸಿಡಿಲು ಸಂದರ್ಭದಲ್ಲಿ ಹೊರಾಂಗಣದಲ್ಲಿ ಕೆಲಸ ಮಾಡುತ್ತಿದ್ದರೆ ಮತ್ತು ಸುರಕ್ಷಿತ ಸ್ಥಳದಲ್ಲಿ ಆಶ್ರಯ ಪಡೆಯಲು ಸಾಕಷ್ಟು ಸಮಯವಿಲ್ಲದಿದ್ದರೆ ಎರಡು ಕಾಲುಗಳನ್ನು ಜೋಡಿಸಿ ಮಂಡಿಯೂರಿ ಕುಳಿತುಕೊಂಡು ತಲೆಯನ್ನು ಬಗ್ಗಿಸಿ ಕಿವಿಗಳನ್ನು ಮುಚ್ಚಿಕೊಳ್ಳುವುದು.
ವಿದ್ಯುತ್ ಅಥವಾ ಟೆಲಿಫೋನ್ ಕಂಬಗಳು ಅಥವಾ ಮರಗಳ ಕೆಳಗೆ ಆಶ್ರಯ ಪಡೆಯಬಾರದು ಇವು ಸಿಡಿಲನ್ನು ಆಕರ್ಷಿಸುತ್ತವೆ. ಅರಣ್ಯ ಪ್ರದೇಶದಲ್ಲಿದ್ದರೆ ಸಣ್ಣ/ಚಿಕ್ಕ ಮರಗಳ ಕೆಳಗೆ ಆಶ್ರಯ ಪಡೆಯುವುದು. ಲೋಹದ ವಸ್ತುಗಳನ್ನು ಬಳಸಬಾರದು ಮತ್ತು ದ್ವಿಚಕ್ರ ವಾಹನಗಳು, ವಿದ್ಯುತ್ ಅಥವಾ ದೂರವಾಣಿ ಕಂಬಗಳು, ತಂತಿ ಬೇಲಿ, ಯಂತ್ರಗಳು ಇತ್ಯಾದಿಗಳಿಂದ ದೂರವಿರುವುದು.
ಸಿಡಿಲು ಸಂದರ್ಭದಲ್ಲಿ ಮೊಬೈಲ್ ಫೋನ್ಗಳನ್ನು ಬಳಸಬಾರದು. ಕಬ್ಬಿಣದ ಸರಳುಗಳಿಂದ ಕೂಡಿದ ಛತ್ರಿಗಳನ್ನು ಬಳಸಬಾರದು. ಗುಡುಗು ಸಿಡಿಲಿನ ಸಮಯದಲ್ಲಿ ಕಿಟಕಿ, ಬಾಗಿಲುಗಳನ್ನು ಮುಚ್ಚಿ. ಬೆಂಕಿ ಮತ್ತು ವಿದ್ಯುತ್ ಶಕ್ತಿ ಸಂಪರ್ಕದಿಂದ ದೂರವಿರುವುದು.
ಮಕ್ಕಳು, ವಯೋವೃದ್ಧರು, ಜಾನುವಾರುಗಳನ್ನು ಹಾಗೂ ಸಾಕು ಪ್ರಾಣಿಗಳನ್ನು ಸುರಕ್ಷಿತ ಸ್ಥಳಗಳಲ್ಲಿ ಇರುವಂತೆ ಗಮನಹರಿಸುವುದು. ಹಾರುವ ಮತ್ತು ಅಪಘಾತಕ್ಕೆ ಕಾರಣವಾಗಬಹುದಾದ ಮರದ ಕಟ್ಟಿಗೆ ಅಥವಾ ಇತರೆ ಯಾವುದೇ ಅವಶೇಷಗಳನ್ನು ತೆಗೆದುಹಾಕುವುದು. ಸಿಡಿಲು ಸಂದರ್ಭದಲ್ಲಿ ಕಟ್ಟಡದ ಕೊಳಾಯಿ ಮತ್ತು ಲೋಹದ ಕೊಳವೆಗಳ ಮೂಲಕ ವಿದ್ಯುತ್ ಹರಿಯುವ ಸಾಧ್ಯತೆ ಇರುವುದರಿಂದ ಸಿಡಿಲು ಉಂಟಾಗುವ ಸಂದರ್ಭದಲ್ಲಿ ಸ್ನಾನ ಅಥವಾ ಶವರ್ ತೆಗೆದುಕೊಳ್ಳಬಾರದು, ಪಾತ್ರೆಗಳನ್ನು ತೊಳೆಯಬಾರದು, ಬಟ್ಟೆ ಒಗೆಯಬಾರದು.
ವಿದ್ಯುತ್ ಸಂಪರ್ಕ ಹೊಂದಿರುವ ದೂರವಾಣಿಯನ್ನು ಬಳಸಬಾರದು. ಗುಡುಗು ಸಿಡಿಲಿನ ಮುನ್ಸೂಚನೆ ಅಥವಾ ಮುನ್ನೆಚ್ಚರಿಕೆ ಇದ್ದಲ್ಲಿ ಪ್ರಯಾಣವನ್ನು ಮುಂದೂಡುವುದು. ಗುಡುಗು ಸಿಡಿಲಿನ ಸಮಯದಲ್ಲಿ ಮೋಟಾರ್ ಸೈಕಲ್ ಅಥವಾ ಇನ್ನಿತರೆ ಯಾವುದೇ ತೆರೆದ ವಾಹನಗಳ ಸಂಚಾರವನ್ನು ಮಾಡದಿರುವುದು. ಆಟದ ಮೈದಾನ, ಉದ್ಯಾನವನಗಳು, ಈಜುಕೊಳ ಮತ್ತು ಕಡಲ ತೀರಗಳಿಗೆ ಹೋಗುವುದನ್ನು ತಪ್ಪಿಸುವುದು.
ದೋಣಿ ವಿಹಾರ ಅಥವಾ ಈಜುತ್ತಿದ್ದರೆ ಸಾಧ್ಯವಾದಷ್ಟು ಸುರಕ್ಷಿತ ಸ್ಥಳದಲ್ಲಿ ಆಶ್ರಯ ಪಡೆಯುವುದು. ಸಿಡಿಲಿನ ಸಂದರ್ಭದಲ್ಲಿ ವಾಹನ ಕಿಟಕಿಗಳನ್ನು ಮುಚ್ಚಿ ವಾಹನದ ಒಳಗೆ ಇರುವುದು. ಮಿಂಚಿನ ಒಡೆತದಿಂದಾಗಿ ಕಾಡ್ಗಿಚ್ಚು ಸಂಭವಿಸುವ ಸಾಧ್ಯತೆ ಇರುವುದರಿಂದ ಅರಣ್ಯ ಪ್ರದೇಶದಿಂದ ದೂರವಿದ್ದು ಗಿಡಗಡ್ಡೆಗಳಿಲ್ಲದ ಸ್ವಚ್ಛ ಪ್ರದೇಶದ ಕಡೆಗೆ ಚಲಿಸಿ ಎಂಬ ಸಲಹೆಗಳನ್ನು ನೀಡಿದೆ.
Related

You Might Also Like
KSRTC: ನೌಕರರ ವೇತನ ಹೆಚ್ಚಳ ಸಂಬಂಧ ಸಿಎಂ-ಸಾರಿಗೆ ಸಚಿವರ ನಡುವೆ ಏನೋ ಸರಿ ಇಲ್ಲ..!
ಇಂದು ನಡೆಯಬೇಕಿದ್ದ ಸಭೆ ಮಾಹಿತಿಯೇ ಇಲ್ಲದೆ ರದ್ದು ಇದಕ್ಕೆ ಸಿಎಂ ಸಾರಿಗೆ ಸಚಿವರ ನಡುವೆ ಹೊಂದಾಣಿಕೆ ಕೊರತೆ ಕಾರಣವೆ? ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ...
BMTC: ಸಾಮಾನ್ಯ ಪಾಳಿಯ ಕರ್ತವ್ಯಕ್ಕೆ ಸೀನಿಯರ್ ಚಾಲನಾ ಸಿಬ್ಬಂದಿಗಳ ನಿಯೋಜನೆ ಮಾಡದಿರಲು ತೀರ್ಮಾನ
ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಬಸ್ಗಳ ಸಾಮಾನ್ಯ ಪಾಳಿಯಲ್ಲಿ ಕರ್ತವ್ಯಕ್ಕೆ ಸೀನಿಯರ್ ಚಾಲನಾ ಸಿಬ್ಬಂದಿಗಳನ್ನು ನಿಯೋಜನೆ ಮಾಡದಿರಲು ಸಂಸ್ಥೆಯ ಮುಖ್ಯ ಸಂಚಾರ ವ್ಯವಸ್ಥಾಪಕರ (ಆ) ಅಧ್ಯಕ್ಷತೆಯಲ್ಲಿ...
BMTC: 79ರ ಬದಲು 34ಕಿಮೀ ಕಾರ್ಯಾಚರಣೆ ಮಾಡಿ ಆರ್ಥಿಕ ನಷ್ಟಮಾಡಿದ ಆರೋಪ- ಚಾಲನಾ ಸಿಬ್ಬಂದಿಗೆ ಡಿಎಂ ಮೆಮೋ
ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಗೆ ಸುಮಾರು 3500 ರೂ.ಗಳಷ್ಟು ಆರ್ಥಿಕ ನಷ್ಟವುಂಟಾಗಲು ಕಾರಣರಾಗಿರುತ್ತೀರಿ ಎಂದು ಆರೋಪಿಸಿ ಚಾಲನಾ ಸಿಬ್ಬಂದಿ ವಿರುದ್ಧ ಘಟಕ ವ್ಯವಸ್ಥಾಪಕರು ಆರೋಪಣ ಪತ್ರ...
ಹಾಳಾಗಿರುವ ಒಳಚರಂಡಿ ಸ್ಲ್ಯಾಬ್ ಬದಲಾಯಿಸಿ: ಅಧಿಕಾರಿಗಳಿಗೆ ಸ್ನೇಹಲ್ ತಾಕೀತು
ಬೆಂಗಳೂರು: ಪೂರ್ವ ವಲಯ ವ್ಯಾಪ್ತಿಯಲ್ಲಿ ಹಾಳಾಗಿರುವ ಒಳಚರಂಡಿ ಮೇಲ್ಭಾಗದ ಕವರ್ ಸ್ಲ್ಯಾಬ್ ಬದಲಾಯಿಸಲು ಪೂರ್ವ ವಲಯ ಆಯುಕ್ತರಾದ ಸ್ನೇಹಲ್ ಜಲಮಡಂಳಿ ಅಧಿಕಾರಿಗಳಿಗೆ ತಾಕೀತು ಮಾಡಿದರು. ಪೂರ್ವ ವಲಯ...
ಮತದಾನ ಪ್ರಮಾಣ ಹೆಚ್ಚಿಸಲು ಕ್ರಮ ವಹಿಸಿ: ರಾಜ್ಯ ಸ್ವೀಪ್ ನೋಡಲ್ ಅಧಿಕಾರಿ ವಸ್ತ್ರದ್ ಸಲಹೆ
ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ಸ್ವೀಪ್ ಕಾರ್ಯ ಚಟುವಟಿಕೆಗಳನ್ನು ನಿರಂತರವಾಗಿ ಕೈಗೊಳ್ಳುವ ಮೂಲಕ ಮತದಾರರಿಗೆ ಜಾಗೃತಿ ಮೂಡಿಸಿ ಚುನಾವಣೆಯಲ್ಲಿ ಮತದಾನ ಪ್ರಮಾಣ ಹೆಚ್ಚಿಸಲು ಕ್ರಮ ವಹಿಸಿ ಎಂದು ಅಧಿಕಾರಿಗಳಿಗೆ...
ಗ್ರಾಪಂ- ಮನೆ ಬಾಗಿಲಿಗೆ ಇ-ಸ್ವತ್ತು ಖಾತೆ ವಿತರಣೆ: ಜಿಪಂ ಸಿಇಒ ಡಾ.ಅನುರಾಧ
ಪಂಚಾಯತ್ ರಾಜ್ ಇಲಾಖೆಯಿಂದ ಮಹತ್ವಕಾಂಕ್ಷಿ ಕಾರ್ಯಕ್ರಮ ಗ್ರಾಮಠಾಣಾ ವ್ಯಾಪ್ತಿಯ ಮನೆ ಬಾಗಿಲಿಗೇ ಈ ಸ್ವತ್ತು ಖಾತೆ ನೀಡುವ ಯೋಜನೆ ಆರಂಭ ಬೆಂಗಳೂರು ಗ್ರಾಮಾಂತರ: ಪಂಚಾಯತ್ ರಾಜ್ ಮತ್ತು...
ರೈತರಿಗಾಗಿ ಜಿಲ್ಲಾ ಮಟ್ಟದ ಮಾವು- ಹಲಸು ಮೇಳ: ಸಚಿವ ಮುನಿಯಪ್ಪ
ಬೆಂಗಳೂರು ಗ್ರಾಮಾಂತರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ತೋಟಗಾರಿಕೆ ಇಲಾಖೆ, ಕೃಷಿ ಇಲಾಖೆ ಸಂಯುಕ್ತಾಶ್ರಯದಲ್ಲಿ ದೇವನಹಳ್ಳಿಯಲ್ಲಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ಮಾವು, ಹಲಸು ಮತ್ತು ಇತರೆ ಹಣ್ಣುಗಳ ಪ್ರದರ್ಶನ...
ಖಾಸಗಿ ಕಂಪನಿಯ ಮುಖ್ಯ ಕಾನೂನು ಸಲಹೆಗಾರರಾಗಿ ನೇಮಕಗೊಂಡ ವಕೀಲ ಶಿವರಾಜುರಿಗೆ ಅಭಿನಂದನೆಗಳು
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ಹಲವು ನೌಕರರು ಸೇರಿದಂತೆ ಇತರರಿಗೆ ಉಚಿತವಾಗಿ ಕಾನೂನು ಸೇವೆ ನೀಡಿದ ಫಲವಾಗಿ ವಕೀಲರಾದ ಎಚ್.ಬಿ.ಶಿವರಾಜು ಅವರಿಗೆ ಕೈ...
KSRTC ನೂತನ ಎಂಡಿ ಅಕ್ರಮ್ ಪಾಷಗೆ ಸ್ವಾಗತ ಕೋರಿದ ನಿಗಮದ ಪ್ರಭಾರ ಎಂಡಿ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ನೂತನ ವ್ಯವಸ್ಥಾಪಕ ನಿರ್ದೇಶಕರಾಗಿ ಐಎಎಸ್ ಅಧಿಕಾರಿ ಅಕ್ರಮ್ ಪಾಷ ಇಂದು ಅಧಿಕಾರ ಸ್ವೀಕರಿಸಿದರು. ನಿಗಮದ ಪ್ರಭಾರ ಎಂಡಿಯಾಗಿದ್ದ ಬಿಎಂಟಿಸಿ...