CrimeNEWSನಮ್ಮಜಿಲ್ಲೆ

ನಟ ದರ್ಶನ್‌ ಸ್ಥಿತಿಗೆ ಮರುಗಿ ಅಭಿಮಾನಿ ಅನ್ನನೀರು ಬಿಟ್ಟು ಆತ್ಮಹತ್ಯೆಗೆ ಶರಣು?

ವಿಜಯಪಥ ಸಮಗ್ರ ಸುದ್ದಿ

ಚನ್ನಪಟ್ಟಣ: ನಟ ದರ್ಶನ್ ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣ ಸಂಬಂಧ ಬಂಧಿಯಾಗಿರುವುದಕ್ಕೆ ಅಭಿಮಾನಿಯೊಬ್ಬ ಮನನೊಂದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚನ್ನಪಟ್ಟಣ ತಾಲೂಕಿನ ಮಾಳೆ ದೊಡ್ಡಿಯಲ್ಲಿ ವರದಿಯಾಗಿದೆ.

ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಮಾಳೆ ದೊಡ್ಡಿಯ ನಿವಾಸಿ ದರ್ಶನ್ ಅಭಿಮಾನಿ ಭೈರೇಶ್ ಆತ್ಮಹತ್ಯೆ ಮಾಡಿಕೊಂಡವ ಎಂದು ಹೇಳಲಾಗುತ್ತಿದೆ.

ಇತ್ತ ಭೈರೇಶ್‌ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂಬ ವಿಷಯ ತಿಳಿಯುತ್ತಿದ್ದಂತೆ ಅನೇಕರು ಪೊಲೀಸ್ ಠಾಣೆಯ ಎದುರು ಜಮಾಯಿಸಿ ದರ್ಶನ್ ಪರ ಘೋಷಣೆ ಕೂಗುತ್ತಿದ್ದಾರೆ. ಇನ್ನು ದರ್ಶನ್ ಸ್ಥಿತಿಗೆ ಮನನೊಂದು ಅಭಿಮಾನಿ ಬೈರೇಶ್‌ ಆತ್ಮಹತ್ಯೆ ಮಾಡಿಕೊಂಡರೇ ಎಂಬ ಪ್ರಶ್ನೆ ಮೂಡಿದೆ.

ಭೈರೇಶ್‌ ಮೃತದೇಹ ಮೋರಿಯಲ್ಲಿ ಸಿಕ್ಕಿದ್ದು ಆತ ಮೋರಿಗೆ ಬಿದ್ದು ಪ್ರಾಣ ಕಳೆದುಕೊಂಡಿದ್ದಾರೆಯೇ ಎಂಬ ಪ್ರಶ್ನೆಯೂ ಎದ್ದಿದ್ದು, ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಭೈರೇಶ್ ತಮ್ಮ ಹೀರೋಗೆ ಈ ಸ್ಥಿತಿ ಬರಬಾರದಿತ್ತೆಂದು ಆತ್ಮಹತ್ಯೆ ಮಾಡಿಕೊಂಡಿರೋ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. 2-3 ದಿನಗಳಿಂದ ಭೈರೇಶ್ ಅನ್ನ ನೀರು ಬಿಟ್ಟಿದ್ದರು. ದರ್ಶನ್​ಗಾದ ಪರಿಸ್ಥಿತಿ ನೆನೆದು ಮರುಗಿದ್ದರು. ನಿತ್ರಾಣಗೊಂಡು ಮೋರಿಗೆ ಬಿದ್ದು ಮೃತಪಟ್ಟಿದ್ದಾರೆ ಎಂಬ ಶಂಕೆ ಸದ್ಯ ವ್ಯಕ್ತವಾಗುತ್ತಿದೆ.

ಇನ್ನು ಸೋಶಿಯಲ್ ಮೀಡಿಯಾದಲ್ಲಿ ಈ ಬಗ್ಗೆ ಭಾರಿ ಚರ್ಚೆ ನಡೆಯುತ್ತಿದೆ. ನಿಜವಾಗಲೂ ನೋವಿನಲ್ಲೇ ಆತ ಮೃತಪಟ್ಟಿದ್ದಾನೆ ಎಂಬುದಕ್ಕೆ ಬಲವಾದ ಸಾಕ್ಷ್ಯವನ್ನು ಇನ್ನಷ್ಟೇ ಪೊಲೀಸರು ಕಲೆಹಾಕಬೇಕಿದ್ದು, ಆ ಬಳಿಕ ಸತ್ಯಾಸತ್ಯತೆ ತಿಳಿಯಲಿದೆ.

ನಟ ದರ್ಶನ್ ರೇಣುಕಾಸ್ವಾಮಿ ಕೊಲೆ ಆರೋಪದಡಿ ಬಂಧನಕ್ಕೊಳಗಾಗಿದ್ದು, ಜತೆಗೆ 19 ಮಂದಿ ಬಂಧನಕ್ಕೆ ಒಳಗಾಗಿದ್ದಾರೆ. ಈಗಾಗಲೇ ಬಂಧವಾಗಿ ವಾರ ಕಳೆದಿದೆ. ಸದ್ಯಕ್ಕೆ ಅವರಿಗೆ ಜಾಮೀನು ಸಿಗೋದು ಸ್ವಲ್ಪಕಷ್ಟ ಎಂದು ಹೇಳಲಾಗುತ್ತಿದೆ.

Leave a Reply

error: Content is protected !!
LATEST
ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ