ಅಹಮದಾಬಾದ್: ಟೇಕಾಫ್ ಆದ ಕೆಲವೇ ಕ್ಷಣಗಳಲ್ಲಿ ತಾಂತ್ರಿಕ ದೋಷದಿಂದ ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಏರ್ ಇಂಡಿಯಾ ವಿಮಾನ ಪತನಗೊಂಡ ಘಟನೆಗೆ ಸಂಬಂಧಿಸಿದಂತೆ 240 ಮಂದಿ ಪ್ರಯಾಣಿಕರು ಸಾವನ್ನಪ್ಪಿದ್ದಾರೆ.
ವಿಮಾನದಲ್ಲಿ 10ಮಂದಿ ಸಿಬ್ಬಂದಿ ಸೇರಿದಂತೆ 240 ವಯಸ್ಕರು ಹಾಗೂ ಇಬ್ಬರು ಮಕ್ಕಳು. ಅದರಲ್ಲಿ ಇಬ್ಬರು ಪ್ರಯಾಣಿಕರು ಸಾವನ್ನು ಗೆದ್ದು ಬಂದಿದ್ದಾರೆ. ಇನ್ನು ಈ 242ರ ಪೈಕಿ 169 ಮಂದಿ ಭಾರತೀಯರು ಇದ್ದರು. ಟೇಕಾಫ್ ಆದ ಒಂದೇ ನಿಮಿಷದಲ್ಲಿ ಸಂಪರ್ಕ ಕಡಿದುಕೊಂಡ ವಿಮಾನ ಇಂಜಿನ್‌ನಲ್ಲಿ ತಾಂತ್ರಿಕ ದೋಷದಿಂದಾಗಿ ಮೇಘಾನಿ ಪ್ರದೇಶದಲ್ಲಿ ಪತನಗೊಂಡಿದೆ.
ವಿಷಯ ತಿಳಿದ ಕೂಡಲೇ ಹತ್ತಾರು ಅಂಬುಲೆನ್ಸ್‌ಗಳಲ್ಲಿ ಸುಟ್ಟು ಕರಕಲಾದ ದೇಹಗಳನ್ನು ಅಹಮದಾಬಾದ್‌ನ ಸಿವಿಲ್ ಆಸ್ಪತ್ರೆಗೆ ರವಾನಿಸಲಾಯಿತು. ಮೇಘಾನಿ ಪ್ರದೇಶದ ಬಿಜೆ ಮೆಡಿಕಲ್ ಕಾಲೇಜು ಹಾಸ್ಟೆಲ್‌ಗೆ ವಿಮಾನ ಬಡಿದ್ದಿದ್ದು, ಹಾಸ್ಟೆಲ್‌ನಲ್ಲಿದ್ದ ಎಂಬಿಬಿಎಸ್ ವಿದ್ಯಾರ್ಥಿಗಳು ಕೂಡ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ವಿಮಾನದಲ್ಲಿ ಇಬ್ಬರು ಪೈಲಟ್ ಹಾಗೂ 10 ಮಂದಿ ಸಿಬ್ಬಂದಿ ಇದ್ದರು. 300ರಿಂದ 600 ಅಡಿ ಎತ್ತರದಿಂದ ವಿಮಾನ ನೆಲಕ್ಕಪ್ಪಳಿಸಿದೆ.
ಇದೇ ವಿಮಾನದಲ್ಲಿ ಗುಜರಾತ್ ಮಾಜಿ ಸಿಎಂ ವಿಜಯ್ ರೂಪಾನಿ ಪ್ರಯಾಣಿಸುತ್ತಿದ್ದು, ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ವರದಿಗಳು ತಿಳಿಸಿವೆ. ವಿಮಾನಯಾನ ಸಚಿವ ರಾಮ್‌ಮೋಹನ್ ನಾಯ್ಡು ಹಾಗೂ ಕೇಂದ್ರ ಗೃಹಸಚಿವ ಅಮಿತ್ ಶಾ ಘಟನಾ ಸ್ಥಳಕ್ಕೆ ಆಗಮಿಸಲಿದ್ದಾರೆ.
ಇನ್ನು ಈ ಏರ್ ಇಂಡಿಯಾ ಎಐ-171 ಎಂಬ ಟಾಟಾ ಒಡೆತನಕ್ಕೆ ಸೇರಿದ ವಿಮಾನವು ಅಹಮದಾಬಾದ್ ನಿಂದ ಲಂಡನ್ ನತ್ತ ತೆರಳುತ್ತಿದ್ದ ಕೆಲವೆ ನಿಮಿಷಕ್ಕೆ ಪತನವಾಗಿದ್ದು, ವಿಮಾನದಲ್ಲಿದ್ದ 240 ಜನ ಸಾವನ್ನಪ್ಪಿದ್ದು, ಇಬ್ಬರು ಪ್ರಯಾಣಿಕರು ಮಾತ್ರ ಪವಾಡ ಸದೃಶ್ಯ ಪಾರಾಗಿದ್ದಾರೆ.


ಇದೇ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ಗುಜರಾತ್‌ನ ಮಾಜಿ ಮುಖ್ಯಮಂತ್ರಿ ಮತ್ತು ಬಿಜೆಪಿ ನಾಯಕ ವಿಜಯ್ ರೂಪಾನಿ ಸೇರಿದಂತೆ ಎಲ್ಲ ಪ್ರಯಾಣಿಕರು ಸಾವನ್ನಪ್ಪಿದ್ದಾರೆ, ಆದರೆ ಎಕನಾಮಿ ವಿಭಾಗದಲ್ಲಿ 11 A ಸೀಟ್ ಮೇಲೆ ಕುಳಿತಿದ್ದ ರಮೇಶ್ ಕುಮಾರ ಎನ್ನುವವರು ಬಚಾವ್ ಆಗಿದ್ದಾರೆ.
ವಿಮಾನ ಟೇಕ್ ಆಫ್ ಆದ 30 ಸೆಕೆಂಡ್ ನಲ್ಲೇ ಪತನವಾಯ್ತು. ನನ್ನ ಸುತ್ತ ಸುಟ್ಟ ಮೃತ ದೇಹ ಬಿದಿದ್ದವು, ನನ್ನನ್ನು ಯಾರೋ ಆಸ್ಪತ್ರೆಗೆ ಸೇರಿಸಿದರು ಎಂದು ಬಚಾವ್ ಆದ ರಮೇಶ್ ತಿಳಿಸಿದ್ದಾರೆ.
Related

 










