NEWSಬೆಂಗಳೂರುಸಿನಿಪಥ

ರೆಬೆಲ್ ಸ್ಟಾರ್ ಅಂಬರೀಶ್‌ಗೆ ಕರ್ನಾಟಕ ರತ್ನ ನೀಡಲು ಅಖಿಲ ಕರ್ನಾಟಕ ಡಾ.ಅಂಬರೀಶ್ ಅಭಿಮಾನಿ ಸಂಘ ಒತ್ತಾಯ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ರೆಬೆಲ್ ಸ್ಟಾರ್ ಅಂಬರೀಶ್ ಅವರಿಗೆ ಕರ್ನಾಟಕ ರತ್ನ ನೀಡಬೇಕು ಎಂದು ಒತ್ತಾಯಿಸಿ ಅಖಿಲ ಕರ್ನಾಟಕ ಡಾ.ಅಂಬರೀಶ್ ಅಭಿಮಾನಿ ಸಂಘ ಫಿಲ್ಮ್ ಚೇಂಬರ್‌ಗೆ ಮನವಿ ಮಾಡಿದೆ.

ರಾಜ್ಯಾಧ್ಯಕ್ಷರಾದ ಶ್ರೀನಿವಾಸ್, ಉಪಾಧ್ಯಕ್ಷರು, ಕಲಾವಿದೆ ಶಶಿಕಲಾ, ನಿರ್ಮಾಪಕ ರಾಮಮೂರ್ತಿ, ಧರ್ಮರಾಯ ಅಂಬರೀಶ್ ಅಭಿಮಾನಿಗಳ ಸಂಘದ ಅಧ್ಯಕ್ಷ ನಂಜೇಗೌಡ, ಬೆಂಗಳೂರು ಜಿಲ್ಲಾ ಅಂಬರೀಶ್ ಸಂಘದ ಅಧ್ಯಕ್ಷ ಚಂದ್ರಶೇಖರ್ ಸೇರಿ ಹಲವರು ಭಾಗಿಯಾಗಿದ್ದರು.

ಫಿಲ್ಮ್ ಚೇಂಬರ್ ಅಧ್ಯಕ್ಷರಾದ ಎಂ.ನರಸಿಂಹಲು, ಮಾಜಿ ಅಧ್ಯಕ್ಷ ಸಾರಾ ಗೋವಿಂದು ಮನವಿ ಸ್ವೀಕರಿಸಿ ಈ ಬಗ್ಗೆ ನಾವು ಸಿಎಂ ಗಮನಕ್ಕೆ ತರುತ್ತೇವೆ.

ಡಾ.ವಿಷ್ಣುವರ್ಧನ್ ಹಾಗೂ ಸರೋಜಾದೇವಿ ಅವರಿಗೆ ಕರ್ನಾಟಕ ರತ್ನ ನೀಡುವ ದಿನವೇ ಅಂಬರೀಶ್ ಅವರಿಗೂ ನೀಡುವಂತೆ ಸರ್ಕಾರದ ಗಮನಕ್ಕೆ ತರುತ್ತೇವೆ ಎಂದಿದ್ದಾರೆ.

ಚಿತ್ರರಂಗ ಹಾಗೂ ರಾಜಕೀಯ ರಂಗದಲ್ಲಿ ಅಂಬರೀಶ್ ಅವರು ಸಲ್ಲಿಸಿದ ಸೇವೆ ಗುರುತಿಸಿ ಅಂಬರೀಶ್ ಅವರಿಗೂ ಕರ್ನಾಟಕ ರತ್ನ ಘೋಷಣೆ ಮಾಡಬೇಕು.

ವಿಷ್ಣುವರ್ಧನ್ ಅವರ ಕುಚಿಕು ಗೆಳೆಯರಾಗಿದ್ದ ಅಂಬರೀಶ್ ಅವರಿಗೂ ಗೆಳೆಯ ವಿಷ್ಣುವರ್ಧನ್ ಅವರಿಗೆ ಗೌರವ ಪ್ರದಾನದ ದಿನವೇ ರೆಬೆಲ್ ಸ್ಟಾರ್ ಅವರಿಗೂ ಕರ್ನಾಟಕ ರತ್ನ ಪ್ರದಾನವಾಗಲಿ ಎನ್ನುವುದು ಅಭಿಮಾನಿಗಳ ಮನವಿ.

Megha
the authorMegha

Leave a Reply

error: Content is protected !!
Latest news
NWKRTC: ಧಾರವಾಡ ಗ್ರಾ.ವಿಭಾಗದ ನಿವೃತ್ತ ಅಧಿಕಾರಿಗಳಿಗೆ ಹೃದಯಸ್ಪರ್ಷಿ ಬೀಳ್ಕೊಡುಗೆ KSRTC: ಮೂರು ದಶಕಗಳ ಸುದೀರ್ಘ ಸೇವೆ ಬಳಿಕ ಸಂಸ್ಥೆಯ ಬಸ್‌ ಚಾಲಕ ನಿವೃತ್ತಿ-  ಮರೆಯಲಾಗದ ಸಂದರ್ಭ ಸೆರೆ! ಇಂಧನ, ಗ್ಯಾಸ್ ಬೆಲೆಯೇರಿಕೆ, ವಿದ್ಯುತ್ ಖಾಸಗೀಕರಣ ವಿರೋಧಿಸಿ ರಾರೈಸಂ ಪ್ರತಿಭಟನೆ -ಸರ್ಕಾರಗಳ ವಿರುದ್ಧ ಘೋಷಣೆ KKRTC: ಬಸ್ ನಿಲ್ದಾಣದಲ್ಲಿ ಮಹಿಳೆ ಜತೆ ಅನುಚಿತ ವರ್ತನೆ-ಕಿಡಿಗೇಡಿಗೆ ಚಪ್ಪಲಿ ಏಟು ಪ್ರಮಾಣ ವಚನ ಸ್ವೀಕಾರಕ್ಕೆ ಮುಹೂರ್ತ ಫಿಕ್ಸ್ – ಜೂ.3ರಂದು ನೂತನ ಸಿಎಂಆಗಿ ಗದ್ದುಗೆ ಏರಲಿರುವ ಡಿ.ಕೆ.ಶಿವಕುಮಾರ್‌ ಪೆಟ್ರೋಲ್‌, ಡೀಸೆಲ್‌ ಬಳಿಕ CNG ದರದಲ್ಲೂ ಏರಿಕೆ- ಎರಡನೇ ಬಾರಿಗೆ 2ರೂ. ಹೆಚ್ಚಳ -ಗ್ರಾಹಕರಿಗೆ ಶಾಕ್‌ ಕೊಟ್ಟ MGL ಆದೇಶ ಕಾಯ್ದಿರಿಸಿದ 3 ತಿಂಗಳೊಳಗಾಗಿ ಎಲ್ಲ ಕೋರ್ಟ್‌ಗಳಲ್ಲೂ ಅಂತಿಮ ತೀರ್ಪು ಹೊರಬೀಳಬೇಕು: ಸುಪ್ರೀಂ ಮಹತ್ವದ ಆದೇಶ ಗೃಹಲಕ್ಷ್ಮಿ ಹಣ ಮೃತರ ಖಾತೆಗೆ ಜಮೆ ಆಗದಂತೆ ನೋಡಿಕೊಳ್ಳಿ: ಅಧಿಕಾರಿಗಳಿಗೆ ಗ್ಯಾರಂಟಿ ಯೋಜನೆ ಅಧ್ಯಕ್ಷ ತಾಕೀತು ವಿದ್ಯುತ್ ಗ್ರಾಹಕರಿಗೆ ಗುಡ್‌ನ್ಯೂಸ್‌: ಬಿಲ್‌ಗಳಿಗೆ ಕನಿಷ್ಠ 15 ದಿನಗಳ ಪಾವತಿ ಅವಧಿ ಕಡ್ಡಾಯ ಮಾಡಿ KERC ಆದೇಶ- ಜೂನ್‌... BMTC KSRTC ನಿವೃತ್ತ ನೌಕರರ ಪ್ರತಿಭಟನೆ: ಕನಿಷ್ಠ ಪಿಂಚಣಿ 7500 ರೂ. ನೀಡಲು ಆಗ್ರಹ