NEWSನಮ್ಮರಾಜ್ಯಬೆಂಗಳೂರುರಾಜಕೀಯ

ಮತನೀಡಿದ ನಾವೆಲ್ಲರೂ ಸಾಲಗಾರರಿಗೆ ಲಕ್ಷಾಂತರ ಕೋಟಿ ಬಡ್ಡಿ ಕಟ್ಟುತ್ತಾ ಬಡ್ಡಿ ಮಕ್ಕಳಾಗಿದ್ದೇವೆ: ಮುಖ್ಯಮಂತ್ರಿ ಚಂದ್ರು

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಇದುವರೆಗೂ ರಾಷ್ಟ್ರ ಹಾಗೂ ರಾಜ್ಯದಲ್ಲಿ ಅಧಿಕಾರ ನಡೆಸಿದ ಕಾಂಗ್ರೆಸ್, ಬಿಜೆಪಿ ಪಕ್ಷಗಳ ಭ್ರಷ್ಟಾಚಾರ, ದುರಾಡಳಿತದಿಂದಾಗಿ ಮತನೀಡಿದ ನಾವುಗಳೆಲ್ಲರೂ ಸಾಲಗಾರರಿಗೆ ಲಕ್ಷಾಂತರ ಕೋಟಿ ಬಡ್ಡಿ ಕಟ್ಟುತ್ತಾ ಬಡ್ಡಿ ಮಕ್ಕಳಾಗಿದ್ದೇವೆ ಎಂದು ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಹೇಳಿದರು.

ಇಂದು (ಜು.22) ನಗರದ ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್ ಸಭಾಂಗಣದಲ್ಲಿ ನಡೆದ ಪದಗ್ರಹಣ ಸಮಾರಂಭದಲ್ಲಿ ರಾಜ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಮಾತನಾಡಿದ ಮುಖ್ಯಮಂತ್ರಿ ಚಂದ್ರು, ಅವರು, ರಾಷ್ಟ್ರದ ಸಾಲ 175 ಲಕ್ಷ ಕೋಟಿ ರೂಪಾಯಿಗಳಾಗಿದ್ದು , ರಾಜ್ಯದ ಸಾಲ 5.5 ಲಕ್ಷ ಕೋಟಿ ರೂ. ಮುಟ್ಟಿದೆ. 35 ಸಾವಿರ ಕೋಟಿ ರೂಪಾಯಿಗಳಷ್ಟು ಬಡ್ಡಿಯನ್ನು ಕಟ್ಟಬೇಕಾಗಿದೆ. ಹೀಗಿರುವಾಗ ನಾವೆಲ್ಲ ಬಡ್ಡಿ ಮಕ್ಕಳು ಅಲ್ಲದೆ ಮತ್ತೇನು ಎಂದು ಪ್ರಶ್ನಿಸಿದರು.

ದೆಹಲಿ ರಾಜ್ಯದಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷದ ಸರ್ಕಾರ ಅಲ್ಲಿನ ಪ್ರಜೆಗಳಿಗೆ ಉಚಿತ ವಿದ್ಯುತ್, ಉಳಿಯುವ ನೀರು, ಶಿಕ್ಷಣ, ಆರೋಗ್ಯ, ಸಾರಿಗೆ ಸೇರಿದಂತೆ ಎಲ್ಲ ಸವಲತ್ತುಗಳನ್ನು ಉಚಿತವಾಗಿ ನೀಡುತ್ತಿದ್ದರೂ ಸಹ ಸಾಲರಹಿತ ಬಜೆಟ್ ಮಂಡಿಸುತ್ತಿರುವುದು ಆಮ್ ಆದ್ಮಿ ಪಕ್ಷದ ವಿಶೇಷತೆ ಎಂದು ಬಣ್ಣಿಸಿದರು.

ಕೌಟಿಲ್ಯನ ಅರ್ಥಶಾಸ್ತ್ರ ದ ಬಗ್ಗೆ ಮಾತನಾಡಿದ ಮುಖ್ಯಮಂತ್ರಿ ಚಂದ್ರು, ಗಳಿಕೆ- ಉಳಿಕೆ – ಬಳಕೆ ” ಬಜೆಟ್‌ನ ಮೂಲ ಸ್ವರೂಪ. ದೇಶದಲ್ಲಿ ಗಳಿಕೆ ತೆರಿಗೆ ರೂಪದಲ್ಲಿ ಅತಿ ಹೆಚ್ಚಾಗಿದ್ದರೂ ಭ್ರಷ್ಟರ ಅಕ್ರಮ, ದುರಾಡಳಿತಗಳಿಂದಾಗಿ ಅವರುಗಳ ಸ್ವಾರ್ಥ ಗಳಿಕೆ ಹೆಚ್ಚಾಗಿದ್ದು, ಉಳಿಕೆ ಶೂನ್ಯಕ್ಕೆ ತಲುಪುತ್ತಿರುವುದು ದುರಂತ ಎಂದರು.

ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಆಮ್ ಆದ್ಮಿ ಪಕ್ಷದ ಗ್ಯಾರೆಂಟಿಗಳನ್ನು ಕಾಪಿ ಮಾಡಿಲ್ಲ, ನೀಚತನದಿಂದ ಕದ್ದಿದೆ. ಇವರುಗಳ ಬಣ್ಣ ಆರು ತಿಂಗಳಲ್ಲಿ ಬಟಾ ಬಯಲಾಗಲಿದೆ. ರಾಜ್ಯದ ರೈತರಿಗೆ 24 ಗಂಟೆ ಉಚಿತ ವಿದ್ಯುತ್, ಸೂಕ್ತ ಬೆಂಬಲ ಬೆಲೆ, ಯುವಕರಿಗೆ ಉದ್ಯೋಗ, ಸಾಮಾನ್ಯ ಮಕ್ಕಳ ಭವಿಷ್ಯಗಾಗಿ ಉತ್ತಮ ಶಿಕ್ಷಣ ಹಾಗೂ ಆರೋಗ್ಯ ನೀಡಬೇಕೆ ಹೊರತು ಒಂದು ದಿವಸದ ಗ್ಯಾರಂಟಿಗಳಲ್ಲ ಎಂದು ಟೀಕಿಸಿದರು.

ಮಣಿಪುರ ಘಟನೆ ಯ ಬಗ್ಗೆ ಆತಂಕ: ಪ್ರಧಾನಿ ಮೋದಿ ರಾಷ್ಟ್ರದ ಜನತೆಯ ಮುಂದೆ ಕ್ಷಮೆ ಕೇಳಬೇಕು. ಸದಾ ಸಂವಿಧಾನ, ಪ್ರಜಾಪ್ರಭುತ್ವವನ್ನು ಉಳಿಸಲು ನಾವು ಮಹಾ ಮೈತ್ರಿಯಲ್ಲಿ ಜೋಡಣೆಯಾಗಿದ್ದೇವೆ. ಕರ್ನಾಟಕ ರಾಜ್ಯವನ್ನು ಭ್ರಷ್ಟರ ಕೈಯಿಂದ ಕಿತ್ತುಕೊಳ್ಳುವುದೇ ನಮ್ಮ ಹೆಗ್ಗುರಿ.

ಮುಂಬರುವ ರಾಜ್ಯದ ಜಿಲ್ಲಾ – ತಾಲೂಕು ಪಂಚಾಯಿತಿ, ಬಿಬಿಎಂಪಿ ಹಾಗೂ ಲೋಕಸಭಾ ಚುನಾವಣೆಯಲ್ಲಿ ನಾವು ಸ್ಪರ್ಧೆ ಮಾಡಲಿದ್ದೇವೆ. ಪಕ್ಷದ ಕಾರ್ಯಕರ್ತರುಗಳು ಹಾಗೂ ನಾಯಕರುಗಳು ಹಗಲಿರುಳು ದುಡಿಯಬೇಕು ಎಂದು ಮುಖ್ಯಮಂತ್ರಿ ಚಂದ್ರು ಕರೆ ನೀಡಿದರು.

ಪದಗ್ರಹಣ ಸಮಾರಂಭದಲ್ಲಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಪಂಕಜ್ ಗುಪ್ತ, ರಾಷ್ಟ್ರೀಯ ಜಂಟಿ ಕಾರ್ಯದರ್ಶಿ ಪೃಥ್ವಿ ರೆಡ್ಡಿ , ನೂತನವಾಗಿ ರಾಜ್ಯ ಸಂಘಟನಾ ಕಾರ್ಯದರ್ಶಿಗಳಾಗಿ ನೇಮಕಗೊಂಡಿರುವ ಬಿ.ಟಿ. ನಾಗಣ್ಣ , ಅರ್ಜುನ ಪರಪ್ಪ ಹಲಗಿ ಗೌಡರ ಸೇರಿದಂತೆ ನೂತನವಾಗಿ ಆಯ್ಕೆಗೊಂಡಿರುವ ಉಪಾಧ್ಯಕ್ಷರು ಸಹ ಭಾಗವಹಿಸಿದ್ದರು.

Leave a Reply

error: Content is protected !!
LATEST
KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು ಗಂಭೀರ ಸ್ವರೂಪ ಪಡೆಯುತ್ತಿದೆ ದೆಹಲಿ ರೈತರ ಹೋರಾಟ: ನ.26ರಿಂದ ಉಪವಾಸ ಸತ್ಯಾಗ್ರಹ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಸಾಗರದಂತೆ ಬನ್ನಿ: ಮೀರಾ ಶಿವಲಿಂಗಯ್ಯ ಕರೆ SC, ST ಅಲೆಮಾರಿ ಸಮುದಾಯಗಳ ಯೋಜನೆಗಳು ಸದ್ಬಳಕೆ ಆಗಬೇಕು: ಡಿಸಿ ಶಿವಶಂಕರ