NEWSನಮ್ಮಜಿಲ್ಲೆನಮ್ಮರಾಜ್ಯ

ಧಾರ್ಮಿಕ ಭಾವನೆ ಕೆರಳಿಸುತ್ತಿರುವ ಆರೋಪ: ಸಂಸದ ತೇಜಸ್ವಿ ಸೂರ್ಯ ವಿರುದ್ಧ ದೂರು ದಾಖಲು

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಮೊಬೈಲ್ ಶಾಪ್‌ನಲ್ಲಿ ಹನುಮಾನ್ ಚಾಲೀಸಾ ಹಾಕಿದ್ದಕ್ಕೆ ದಾಳಿ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಚುನಾವಣೆ ವೇಳೆ ಧಾರ್ಮಿಕ ಭಾವನೆ ಕೆರಳಿಸುತ್ತಿರುವ ಆರೋಪದ ಮೇಲೆ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಕಾಂಗ್ರೆಸ್​ ದೂರು ದಾಖಲಿಸಿದೆ.

ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಕಾಂಗ್ರೆಸ್​ನ ಲೀಗಲ್ ಟೀಂನ ಸೂರ್ಯ ಮುಕುಂದ ರಾಜ್​ ಅವರು ಇ- ಮೇಲ್ ಮೂಲಕ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದ್ದಾರೆ.

ಮೊಬೈಲ್ ಅಂಗಡಿಯಲ್ಲಿ ಹನುಮಾನ್ ಚಾಲೀಸಾವನ್ನು ಮುಕೇಶ್ ಎನ್ನುವರು ಹಾಕಿದ್ದರು. ಆದರೆ ಅನ್ಯ ಕೋಮಿನವರು ಬಂದು ಯುವಕನ ಮೇಲೆ ಹಲ್ಲೆ ಮಾಡಿದ್ದರು. ಹೀಗಾಗಿ ಇದನ್ನು ವಿರೋಧಿಸಿ ಇಂದು (ಮಾ.19) ಪ್ರತಿಭಟನೆ ಮಾಡಲಾಗುತ್ತಿದೆ. ಕೇಸರಿ ಧ್ವಜ ಮತ್ತು ಹನುಮಾನ್ ಚಾಲೀಸಾ ಪಠಣೆ ಮಾಡುವ ಮೂಲಕ ಅಲ್ಲಿ ಪ್ರತಿಭಟನೆ ಮಾಡಿ ಹಲ್ಲೆ ಮಾಡಿರುವುದನ್ನು ಖಂಡಿಸಿ ಕೋಮು ದ್ವೇಷ ಬಿತ್ತಲಾಗುತ್ತಿದೆ ಎಂದು ಆರೋಪಿಸಿದೆ.

ಸದ್ಯ ಕಾಂಗ್ರೆಸ್​ನ ಲೀಗಲ್ ಟೀಂನ ಸೂರ್ಯ ಮುಕುಂದ ರಾಜ್ ಅವರು ಸಂಸದ ತೇಜಸ್ವಿ ಸೂರ್ಯ, ರವಿ ಸುಬ್ರಮಣ್ಯ ಮತ್ತು ಇತರರ ಮೇಲೆ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದ್ದಾರೆ. ಚುನಾವಣೆ ದಿನಾಂಕ ಘೋಷಣೆಯಾಗಿದ್ದು ಪ್ರತಿಭಟನೆ ಮಾಡಲಾಗುತ್ತಿದೆ. ಇದು ನೀತಿ ಸಂಹಿತೆ ಉಲ್ಲಂಘಿಸಿದಂತೆ ಆಗುತ್ತಿದೆ. ಆದ್ದರಿಂದ ಇವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ದೂರಿನಲ್ಲಿ ತಿಳಿಸಲಾಗಿದೆ.

Leave a Reply

error: Content is protected !!
LATEST
ಸೆ.12ರಂದು 5 ಭಾಷೆಗಳಲ್ಲಿ ಬೆಳ್ಳಿತೆರೆ ಮೇಲೆ ARM- ಚಿತ್ರದ ಟ್ರೈಲರ್‌ಗೆ ಭಾರೀ ಮೆಚ್ಚುಗೆ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಬೇಕೇಬೇಕು: ಮಾಜಿ ಸಂಸದ ಪ್ರತಾಪ್ ಸಿಂಹ ಮೈಸೂರು: ಕಲುಷಿತ ನೀರು ಸೇವಿಸಿ 12ಮಂದಿಗೆ ವಾಂತಿ, ‌ಭೇದಿ, ಓರ್ವ ಮೃತ ಬಾಲಿವುಡ್‌ ನಟಿ ಮಲೈಕಾ ಅರೋರಾ ತಂದೆ ಆತ್ಯಹತ್ಯೆ KSRTC ನೌಕರರ ಕಿತ್ತು ತಿನ್ನುವ ಭ್ರಷ್ಟರು: ಹೋಟೆಲ್‌ಗೆ ತಿನ್ನಲು ಹೋಗಿ ನೌಕರನಿಗೆ ಫೋನ್‌ ಪೇ ಮಾಡಲು ಹೇಳಿದ ಎಟಿಐ ಗಂಗಾಧ... KSRTC ಮಂಡ್ಯ: ಓವರ್‌ಟೇಕ್‌ ನೆಪದಲ್ಲಿ ತಾನೇ ಬಸ್‌ಗೆ ಬೈಕ್‌ ಡಿಕ್ಕಿ ಹೊಡೆಸಿ ಅಪಘಾತದ ಹೈಡ್ರಾಮ ಮಾಡಿದ ಬೈಕ್‌ ಸವಾರ ಯೋಗ... KSRTC: ಆ‌ರ್‌ಟಿಒ ಚಾಲನಾ ಪರವಾನಗಿ ಅಮಾನತುಗೊಳಿಸಿದ ಚಾಲಕರಿಗೆ ಡ್ಯೂಟಿ ಕೊಟ್ಟರೆ ಕ್ರಮ- ಡಿಸಿ ಸೂಚನೆ ಆರೋಗ್ಯ ಶಿಬಿರ ಸಾಮಾಜಿಕ ಜವಾಬ್ದಾರಿ: ನ್ಯಾಯ ಸಮಿತಿ ಅಧ್ಯಕ್ಷ ಸಚಿನ್ ಶಿರವಾಳ ಚಾರ್ಜ್‌ಶೀಟ್ ಗೌಪ್ಯ ದಾಖಲಾತಿ ಏನಲ್ಲ: ಗೃಹ ಸಚಿವ ಪರಮೇಶ್ವರ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಕೊಡುವುದರಲ್ಲಿ ಎಳ್ಳಷ್ಟೂ ಅನುಮಾನವಿಲ್ಲ : ಬಿವೈವಿ