CrimeNEWSದೇಶ-ವಿದೇಶ

ಬಹುಕೋಟಿ ಹಗರಣ ಆರೋಪ: ಬೆಳ್ಳಂಬೆಳಗ್ಗೆ ಮಾಜಿ ಮುಖ್ಯಮಂತ್ರಿ ಬಂಧನ

ವಿಜಯಪಥ ಸಮಗ್ರ ಸುದ್ದಿ

ಹೈದರಾಬಾದ್:‌ ಕೌಶಲಾಭಿವೃದ್ಧಿ ಯೋಜನೆಯಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಮಾಜಿ ಮುಖ್ಯಮಂತ್ರಿ, ತೆಲುಗು ದೇಶಂ ಪಾರ್ಟಿ (TDP) ಮುಖ್ಯಸ್ಥ ಎನ್‌. ಚಂದ್ರಬಾಬು ನಾಯ್ಡು ಅವರನ್ನು ಶನಿವಾರ (ಸೆ.9) ಬಂಧಿಸಲಾಗಿದೆ.

ಹಗರಣದ ಮೊದಲ ಆರೋಪಿಯಾಗಿರುವ ಚಂದ್ರಬಾಬು ನಾಯ್ಡು ಅವರನ್ನು ಇಂದು ಬೆಳಗಿನ ಜಾವ 6 ಗಂಟೆಗೆ ನಂದ್ಯಾಲದಲ್ಲಿ ಸಿಐಡಿ ಅಧಿಕಾರಿಗಳು ಬಂಧಿಸಿದ್ದಾರೆ.

ಭ್ರಷ್ಟಾಚಾರ ಪ್ರಕರಣದಲ್ಲಿ ಬಂಧನಕ್ಕೀಡಾಗಿರುವ ಚಂದ್ರಬಾಬು ನಾಯ್ಡು ಅವರನ್ನು ವೈದ್ಯಕೀಯ ಪರೀಕ್ಷೆಗಾಗಿ ನಂದ್ಯಾಲ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದ್ದು, ಬಳಿಕ ಅವರನ್ನು ವಿಜಯವಾಡ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು.

ಕೆಲ ದಿನಗಳಿಂದ ಚಂದ್ರಬಾಬು ನಾಯ್ಡು ಅವರಿಗೆ ಬಂಧನದ ಭೀತಿ ಎದುರಾಗಿತ್ತು. ಇದನ್ನು ಅವರು ಬಹಿರಂಗವಾಗಿಯೇ ಹೇಳಿಕೊಂಡಿದ್ದರು. ನನ್ನ ಮೇಲೆ ದಾಳಿ ನಡೆಯುತ್ತದೆ, ನನ್ನನ್ನು ಬಂಧಿಸಲಾಗುತ್ತದೆ ಎಂದು ಅವರು ಹೇಳಿಕೊಂಡೇ ತಿರುಗಾಡುತ್ತಿದ್ದರು. ಈಗ ಕೊನೆಗೂ ಸಿಐಡಿ ಅಧಿಕಾರಿಗಳು ಮಾಜಿ ಮುಖ್ಯಮಂತ್ರಿಯನ್ನು ಬಂಧಿಸಿದ್ದು, ಇದು ಅವರು ಹೇಳಿದಂತೆಯೇ ಆಗಿದೆ ಎಂಬ ಗುಸುಗುಸು ಕೂಡ ರಾಜಕೀಯ ಮೊಗಶಾಲೆಯಲ್ಲಿ ಹರಿದಾಡುತ್ತಿದೆ.

ಏನಿದು ಪ್ರಕರಣ? ಚಂದ್ರಬಾಬು ನಾಯ್ಡು ಅವರು ಮುಖ್ಯಮಂತ್ರಿಯಾಗಿದ್ದಾಗ ಆಂಧ್ರಪ್ರದೇಶ ರಾಜ್ಯ ಕೌಶಲಾಭಿವೃದ್ಧಿ ನಿಗಮದಲ್ಲಿ (APSSDC) ಸುಮಾರು 3,300 ಕೋಟಿ ರೂಪಾಯಿ ಹಗರಣ ನಡೆದಿದೆ ಎಂದು ತಿಳಿದುಬಂದಿದೆ. ನಿರುದ್ಯೋಗಿ ಯುವಕರು ಹಾಗೂ ಯುವತಿಯರ ಕೌಶಲಾಭಿವೃದ್ಧಿಗೊಳಿಸುವ ದಿಸೆಯಲ್ಲಿ 2016ರಲ್ಲಿ ನಿಗಮ ಸ್ಥಾಪಿಸಲಾಗಿದ್ದು, ಯೋಜನೆ ಜಾರಿಯಲ್ಲಿ ಭಾರಿ ಹಗರಣ ನಡೆದಿದೆ ಎನ್ನಲಾಗಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ತನಿಖೆ ನಡೆಸುತ್ತಿದ್ದು, ಚಂದ್ರಬಾಬು ನಾಯ್ಡು ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಬಂಧಿಸಲಾಗಿದ್ದು, ಈ ಬಂಧನಕ್ಕೆ ಕಾರಣ ಅಧಿಕಾರಿಗಳು ಕೇಳಿದ ದಾಖಲೆಗಳನ್ನು ನೀಡುವಲ್ಲಿ ಚಂದ್ರಬಾಬು ನಾಯ್ಡು ವಿಫಲರಾಗಿದ್ದಾರೆ ಹೀಗಾಗಿ ಬಂಧನಕ್ಕೊಳಗಾಗಿದ್ದಾರೆ ಎಂದು ಹೇಳಲಾಗುತ್ತಿದೆ.

ನಾಯ್ಡು ಅವರನ್ನು ಬಂಧಿಸುವ ಮುನ್ನ ಅಂದರೆ ಶುಕ್ರವಾರ ತಡರಾತ್ರಿ ನಂದ್ಯಾಲದಲ್ಲಿ ಹೈಡ್ರಾಮಾ ನಡೆದಿದೆ. ಕಾರ್ಯಕ್ರಮವೊಂದರ ನಿಮಿತ್ತ ನಾಯ್ಡು ಅವರು ನಂದ್ಯಾಲದಲ್ಲಿರುವ ಆರ್‌.ಕೆ. ಫಂಕ್ಷನ್‌ ಹಾಲ್‌ಗೆ ಆಗಮಿಸಿದ್ದರು. ಆಗ ಸಿಐಡಿ ಅಧಿಕಾರಿಗಳು ಅವರಿಗೆ ಅರೆಸ್ಟ್‌ ವಾರೆಂಟ್‌ ನೀಡಿದರು. ಇದಾದ ಬಳಿಕ ಟಿಡಿಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ ಕಾರಣ ಹೈಡ್ರಾಮಾ ನಡೆಯಿತು. ಕೊನೆಗೂ ಶನಿವಾರ ಬೆಳಗ್ಗೆ ಮಾಜಿ ಮುಖ್ಯಮಂತ್ರಿಯನ್ನು ಬಂಧಿಸುವಲ್ಲಿ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ.

Leave a Reply

error: Content is protected !!
LATEST
ಸ್ಯಾಂಡಲ್‌ವುಡ್‌ ಹಿರಿಯ ನಟ ಟಿ.ತಿಮ್ಮಯ್ಯ ಹೃದಯಾಘಾತದಿಂದ ನಿಧನ NWKRTCಯ 27ನೇ ಸಂಸ್ಥಾಪನಾ ದಿನ- 2023-24 ನೇ ಸಾಲಿನ ಅತ್ಯುತ್ತಮ ವಿಭಾಗ, ಉತ್ತಮ ಘಟಕ, ಅತ್ಯುತ್ತಮ ಅಧಿಕಾರಿಗಳಿಗೆ ಪುರಸ... KKRTC ಅಧಿಕಾರಿಗಳ ನಡೆಯಿಂದ ನೊಂದ ತಾಳಿಕೋಟೆ ಘಟಕ ಚಾಲಕನಿಂದ ದಯಾಮರಣಕ್ಕಾಗಿ ರಾಜ್ಯಪಾಲರಿಗೆ ಅರ್ಜಿ KSRTC: ₹30 ಸಾವಿರ ಲಂಚ ಪಡೆದ ಬಳಿಕ ಗುತ್ತಿಗೆ ಚಾಲಕರ ನೇಮಕ - 11 ತಿಂಗಳ ಬಳಿಕ ₹30 ಸಾವಿರದಿಂದ ₹18 ಸಾವಿರಕ್ಕೆ ಇಳಿದ ... ಅಕ್ರಮ ಹಣ ಸಂಪಾದನೆ: ಅಬಕಾರಿ ಉಪ ನಿರೀಕ್ಷಕನಿಗೆ 3 ವರ್ಷ ಕಠಿಣ ಶಿಕ್ಷೆ, ₹50 ಲಕ್ಷ ದಂಡ ಪೋಸ್ಟ್ ಆಫೀಸ್ ಸೇವೆಗಳು ಈಗ ಗ್ರಾಮ ಒನ್ ಕೇಂದ್ರಗಳಲ್ಲೂ ಲಭ್ಯ 5ವರ್ಷದೊಳಗಿನ ಮಕ್ಕಳಿಗೆ PCV ಲಸಿಕೆ ಹಾಕಿಸಿ: ಸುರಳ್ಕರ್ ವಿಕಾಸ್ ಕಿಶೋರ್ KSRTC: ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ತುಮಕೂರು ಘಟಕ 1-2ರ ಗುತ್ತಿಗೆ ಚಾಲಕರಿಂದ ದಿಢೀರ್‌ ಪ್ರತಿಭಟನೆ ಮೆಜೆಸ್ಟಿಕ್‌: KSRTC ಟಿಸಿಗಳಿಗೆ ಕಂಡಕ್ಟರ್‌ಗಳು ₹10 ಕೊಟ್ಟರಷ್ಟೆ ಲಾಗ್‌ಶೀಟ್‌ ಮೇಲೆ ಸಹಿ ಇಲ್ಲದಿದ್ದರೆ ಕ್ಲಾಸ್‌ !!? ಕನಸನ್ನು ನನಸಾಗಿಸಲು ಪ್ರಯತ್ನ ಮುಖ್ಯ: ಮಕ್ಕಳಿಗೆ ಡಿಸಿಎಂ ಶಿವಕುಮಾರ್ ಕಿವಿಮಾತು