Friday, November 1, 2024
CrimeNEWSರಾಜಕೀಯ

ಶಾಸಕ ಹ್ಯಾರಿಸ್‌ ಬೆಂಬಲಿಗರಿಂದ ಗೂಂಡಾ ವರ್ತನೆ : ಪೊಲೀಸರಿಗೆ ಮಥಾಯಿ ದೂರು

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಸರ್ಕಾರಿ ಶಾಲೆಯ ಮೂಲಸೌಕರ್ಯಗಳ ಪರಿಶೀಲನೆ ಸಂದರ್ಭದಲ್ಲಿ ಶಾಸಕ ಎನ್‌.ಎ.ಹ್ಯಾರಿಸ್‌ ಜತೆಗೆ ಆಗಮಿಸಿದ ಅವರ ಬೆಂಬಲಿಗರು ನಿಂದಿಸಿ ಬೆದರಿಕೆ ಹಾಕಿದ್ದು, ಅವರನ್ನು ಶೀಘ್ರ ಬಂಧಿಸಿ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಆಮ್‌ ಆದ್ಮಿ ಪಾರ್ಟಿ ರಾಜ್ಯ ಕಾರ್ಯದರ್ಶಿ ಹಾಗೂ ಶಾಂತಿನಗರ ವಿಧಾನಸಭಾ ಕ್ಷೇತ್ರದ ಸ್ಪರ್ಧಾಕಾಂಕ್ಷಿ ಕೆ.ಮಥಾಯಿ ಪೊಲೀಸರಿಗೆ ದೂರು ನೀಡಿದ್ದಾರೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಆಶೋಕನಗರ ಪೊಲೀಸ್‌ ಠಾಣೆಗೆ ದೂರು ನೀಡಿ ಮಾತನಾಡಿದ ಕೆ.ಮಥಾಯಿ, “ಶಾಂತಿನಗರ ವಿಧಾನಸಭಾ ಕ್ಷೇತ್ರದಲ್ಲಿ ಆಮ್‌ ಆದ್ಮಿ ಪಾರ್ಟಿ ಪರ ಮನೆಮನೆ ಪ್ರಚಾರ ಮಾಡಿದ ಸಂದರ್ಭದಲ್ಲಿ, ಇಲ್ಲಿನ ಸರ್ಕಾರಿ ಶಾಲೆಗಳು ಹಾಗೂ ಆರೋಗ್ಯ ಕೇಂದ್ರಗಳಲ್ಲಿ ಕನಿಷ್ಠ ಮೂಲಸೌಕರ್ಯಗಳು ಕೂಡ ಸರಿಯಾಗಿಲ್ಲ ಎಂದು ಜನರು ಅಳಲು ತೋಡಿಕೊಂಡರು. ಈ ಕುರಿತು ಪರಿಶೀಲನೆಗೆ ಮುಂದಾದೆವು ಎಂದು ತಿಳಿಸಿದರು.

ಇನ್ನು ನೀಲಸಂದ್ರದ ಸರ್ಕಾರಿ ಉರ್ದು ಶಾಲೆಗೆ ಶಾಸಕ ಎನ್.ಎ.ಹ್ಯಾರಿಸ್‌ ಅವರೇ ಅಧ್ಯಕ್ಷರಾಗಿದ್ದು, ಅಲ್ಲಿ ಬಾಲಕಿಯರ ಶೌಚಾಲಯಕ್ಕೆ ಸರಿಯಾದ ಬಾಗಿಲಿಲ್ಲದೇ ಹೆಣ್ಣುಮಕ್ಕಳು ಮುಜುಗರ ಅನುಭವಿಸುತ್ತಿದ್ದಾರೆ. ಶಾಂತಿನಗರದ ಇನ್ನೂ ಹಲವು ಸರ್ಕಾರಿ ಶಾಲೆಗಳಲ್ಲಿ ಮಕ್ಕಳು ಶೌಚಾಲಯಕ್ಕೆ ಹೋಗಬೇಕಾದ ಸಂದರ್ಭ ಬಂದರೆ, ಪಾಠ ಕೇಳುವುದನ್ನು ಅರ್ಧಕ್ಕೆ ನಿಲ್ಲಿಸಿ ತಮ್ಮ ಮನೆಗೆ ಹೋಗಿಬರಬೇಕಾಗಿದೆ.

ಆಸ್ಪತ್ರೆಯೊಂದರ ಕಟ್ಟಡವು ಸಂಜೆ-ರಾತ್ರಿ ವೇಳೆ ಗಾಂಜಾ ಸೇವನೆ, ಮದ್ಯ ಸೇವನೆ ಬಳಕೆಯಾಗುತ್ತಿದೆ ಎಂಬ ಆರೋಪದ ಕುರಿತು ಪರಿಶೀಲಿಸಿದಾಗ, ಅಲ್ಲಿ ಸಾಲುಸಾಲು ಮದ್ಯದ ಬಾಟಲಿಗಳು ಕಂಡುಬಂದವು ಎಂದು ಹೇಳಿದರು.

ಸರ್ಕಾರಿ ತಮಿಳು ಶಾಲೆಯಲ್ಲಿ ಕೇವಲ ಒಬ್ಬರು ಶಿಕ್ಷಕರು ಒಂದರಿಂದ ಐದನೇ ತರಗತಿಯ ಎಲ್ಲ ಹತ್ತು ವಿದ್ಯಾರ್ಥಿಗಳಿಗೆ ಪಾಠ ಮಾಡುತ್ತಿದ್ದಾರೆ. ಇದನ್ನು ಪರಿಶೀಲಿಸುತ್ತಿದ್ದಾಗ ಶಾಸಕ ಎನ್.ಎ.ಹ್ಯಾರಿಸ್‌ ಹಾಗೂ ಅವರ ಬೆಂಬಲಿಗರು ಆಗಮಿಸಿದರು. ಗೂಂಡಾ ಬೆಂಬಲಿಗರು ನಮ್ಮನ್ನು ನಿಂದಿಸಿ, ಬೆದರಿಕೆ ಒಡ್ಡಿದರು ಎಂದು ಆರೋಪಿಸಿದರು.

ಈ ಕ್ಷೇತ್ರದಲ್ಲಿನ ಗೂಂಡಾಗಿರಿ ಅಂತ್ಯ ಹಾಡಬೇಕು ಹಾಗೂ ಮುಂದಿನ ದಿನಗಳಲ್ಲಿ ಇಂತಹ ಘಟನೆ ಮರುಕಳಿಸಬಾರದೆಂಬ ಉದ್ದೇಶದಿಂದ ಪೊಲೀಸರಿಗೆ ದೂರು ನೀಡಿದ್ದೇವೆ. ಸರ್ಕಾರಿ ಶಾಲೆಗಳು, ಸರ್ಕಾರಿ ಆರೋಗ್ಯ ಕೇಂದ್ರಗಳು ಅಭಿವೃದ್ಧಿ ಹೊಂದಿ, ಜನಸಮಾನ್ಯರಿಗೆ ನೆರವಾಗಬೇಕೆಂಬುದು ಆಮ್‌ ಆದ್ಮಿ ಪಾರ್ಟಿಯ ದೃಢ ನಿಲುವಾಗಿದ್ದು, ಇಂತಹ ಬೆದರಿಕೆಗಳಿಗೆ ಹೆದರಿ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದು ಕೆ.ಮಥಾಯಿ ಹೇಳಿದರು.

ಆಮ್‌ ಆದ್ಮಿ ಪಾರ್ಟಿಯ ಅನೇಕ ಮುಖಂಡರು, ಕಾರ್ಯಕರ್ತರು ಇದ್ದರು.

Leave a Reply

error: Content is protected !!
LATEST
KSRTC: ದೀಪಾವಳಿ ಹಬ್ಬದಲ್ಲೂ ಕರ್ತವ್ಯ ನಿರತ ನಾಡಿನ ಸೈನಿಕರಾದ ಸಾರಿಗೆ ನೌಕರರಿಗೆ ಸಲಾಮ್‌! ಬೆಲೆ ಏರಿಕೆ ಬಿಸಿ ನಡುವೆಯೂ ಹಣತೆ, ಹೂವು, ಪಟಾಕಿ, ಹಣ್ಣುಗಳ ವ್ಯಾಪಾರ ವಹಿವಾಟು ಜೋರು ಚನ್ನಪಟ್ಟಣದಲ್ಲಿ ಬಿಜೆಪಿ ಜೆಡಿಎಸ್ ಕಾರ್ಯಕರ್ತರ ಬೃಹತ್ ಸಮಾವೇಶ: ನಿಖಿಲ್ ಗೆಲುವಿಗೆ ಒಗ್ಗಟ್ಟು ಪ್ರದರ್ಶನ ತೂಬಗೆರೆ ಗ್ರಾಮ ಪಂಚಾಯಿತಿಗೆ ಅವಿರೋಧವಾಗಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ - ಸರ್ಕಾರ, ಅಧಿಕಾರಿಗಳ ವಿರುದ್ಧ ಆಕ್ರೋಶ ವರ್ಷ ಮೂರು ಮರೆಯದ ನೆನಪು ನೂರಾರು: ಸಹೋದರ ಪುನೀತ್‌ ಸ್ಮರಿಸಿದ ರಾಘಣ್ಣ ಕೌಟುಂಬಿಕ ಕಲಹ: ರೈಲಿಗೆ ತಲೆಕೊಟ್ಟು ಜೀವನ ಕೊನೆಗಾಣಿಸಿಕೊಂಡ ಮಹಿಳೆ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಸಾವಿರಕ್ಕೂ ಹೆಚ್ಚು ಹುದ್ದೆಗಳು ಖಾಲಿ: ಈಗಲೇ ಅರ್ಜಿ ಹಾಕಿ ಬಿಬಿಎಂಪಿ: ಅನಧಿಕೃತ ಹೆಚ್ಚುವರಿ ಮಹಡಿಗಳು, ಪಾದಚಾರಿ ಮಾರ್ಗ ಒತ್ತುವರಿ ತೆರವು KSRTC ಸಮಸ್ತ 4ನಿಗಮಗಳ ಅಧಿಕಾರಿಗಳು ನೌಕರರು ಒಗ್ಗಟ್ಟಾಗಿ: ಇಟ್ಟಿರುವ ಬೇಡಿಕೆಗಳ ಈಡೇರಿಸಿಕೊಳ್ಳುವತ್ತ ಚಿಂತಿಸಿದರೆ ಅಸಾ...