CrimeNEWSನಮ್ಮರಾಜ್ಯ

ಹೈಕೋರ್ಟ್ ಬಿಗ್ ಶಾಕ್ ಜತೆಗೆ ಸಿಎಂ ಸಿದ್ದರಾಮಯ್ಯಗೆ ನಾಳೆ ಕೂಡ ಮಹತ್ವದ ದಿನ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಮುಡಾ ಹಗರಣ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿ ವಜಾಗೊಂಡಿದ್ದು, ಹೈಕೋರ್ಟ್‌ ಮಹತ್ವದ ತೀರ್ಪು ನೀಡಿದ ಬಳಿಕ ರಾಜ್ಯ ರಾಜಕೀಯದಲ್ಲಿ ಸಂಚಲನ ಸೃಷ್ಟಿಯಾಗಿದೆ. ಇಂದೇ ಹೈಕೋರ್ಟ್ ಬಿಗ್ ಶಾಕ್ ನೀಡಿದ್ರೆ ನಾಳೆ ಕೂಡ ಸಿದ್ದರಾಮಯ್ಯಗೆ ಮಹತ್ವದ ದಿನವಾಗಿದೆ.

ಹೈಕೋರ್ಟ್‌ನಲ್ಲಿ ಸಿಎಂ ಸಿದ್ದರಾಮಯ್ಯ ಅವರ ಅರ್ಜಿ ವಜಾಗೊಳ್ಳುತ್ತಿದ್ದಂತೆ ಅಧೀನ ನ್ಯಾಯಾಲಯಕ್ಕಿದ್ದ ತಡೆಯಾಜ್ಞೆ ಕೂಡ ತೆರವಾಗಿದೆ. ನಾಳೆ 82ನೇ CCH ಜನಪ್ರತಿನಿಧಿಗಳ ಕೋರ್ಟ್‌ನಲ್ಲಿ ಸಿದ್ದರಾಮಯ್ಯ ಅವರ ಅರ್ಜಿ ವಿಚಾರಣೆಗೆ ನಿಗದಿಯಾಗಿದೆ.

ನಾಳೆ ಬೆಳಗ್ಗೆ 10:30ಕ್ಕೆ ಮುಡಾ ಕೇಸ್‌ನ ಪ್ರಾಸಿಕ್ಯೂಷನ್‌ಗೆ ಸಂಬಂಧ ಪಟ್ಟ ಅರ್ಜಿ ವಿಚಾರಣೆಗೆ ಬರುವ ಸಾಧ್ಯತೆ ಇದ್ದು, ಕೋರ್ಟ್‌ ಕಲಾಪದ ಆರಂಭದಲ್ಲೇ ಆದೇಶ ನೀಡಲು ಅರ್ಜಿದಾರರು ಮನವಿ ಮಾಡಿದ್ದಾರೆ. ನಾಳೆ ಬೆಳಗ್ಗೆ 82ನೇ CCH ಜನಪ್ರತಿನಿಧಿಗಳ ಕೋರ್ಟ್‌ ತನಿಖೆಗೆ ಆದೇಶ ನೀಡಿದರೆ ಸಿಎಂ ಅವರ ವಿರುದ್ಧ FIR ಹಾಕಬಹುದಾಗಿದೆ.

ಸಿದ್ದುಗೆ ಹೈಕಮಾಂಡ್ ಬೆಂಬಲ!: ಸಿಎಂ ವಿರುದ್ಧ ಪ್ರಾಸಿಕ್ಯೂಸನ್‌ಗೆ ಕೋರ್ಟ್ ಅನುಮತಿ ನೀಡುತ್ತಿದ್ದಂತೆ ಕಾಂಗ್ರೆಸ್ ಹೈಕಮಾಂಡ್ ನಾಯಕರು ಸಿದ್ದರಾಮಯ್ಯಗೆ ದೂರವಾಣಿ ಕರೆ ಮಾಡಿ ಮಾತನಾಡಿದ್ದಾರೆ. ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೀವಾಲಾ ಸಿದ್ದರಾಮಯ್ಯಗೆ ಕರೆ ಮಾಡಿದ್ದರು. ಹೈಕೋರ್ಟ್ ತೀರ್ಪಿನ ಬಗ್ಗೆ ಹೈಕಮಾಂಡ್ ನಾಯಕರಿಗೆ ಸಿದ್ದರಾಮಯ್ಯ ಮಾಹಿತಿ ನೀಡಿದ್ದಾರೆ.

ದಿಢೀರ್ ಶಾಸಕಾಂಗ ಪಕ್ಷದ ಸಭೆ: ಹೈಕೋರ್ಟ್ ತೀರ್ಪಿನ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ದಿಢೀರ್ ಶಾಸಕಾಂಗ ಪಕ್ಷದ ಸಭೆ ಕರೆದಿದ್ದಾರೆ. ನಾಳೆಯೇ ಶಾಸಕಾಂಗ ಪಕ್ಷದ ಸಭೆ ಕರೆದು ಮುಡಾ ಹಗರಣದ ಕುರಿತು ಸಮಾಲೋಚನೆ ನಡೆಸಲು ಮುಂದಾಗಿದ್ದಾರೆ.

ಕಾನೂನು ಸಂಕಷ್ಟದ ಸಂದರ್ಭದಲ್ಲಿ ಸಿಎಂ ಅವರು ಶಾಸಕರ ಬೆಂಬಲ ಗಟ್ಟಿಗೊಳಿಸಿಕೊಳ್ಳಲು ಮುಂದಾಗಿದ್ದಾರೆ. ಹೈಕೋರ್ಟ್ ತೀರ್ಪು ನೀಡಿದ ಬೆನ್ನಲ್ಲೆ ಶಾಸಕರ ಅಭಿಪ್ರಾಯ ಆಲಿಸುವುದು. ಜತೆಗೆ ಪ್ರತಿಪಕ್ಷಗಳಾದ ಬಿಜೆಪಿ, ಜೆಡಿಎಸ್ ವಿರುದ್ಧ ಹೋರಾಟದ ಬಗ್ಗೆ ಚರ್ಚೆ ನಡೆಸಲು ಸಿಎಂ ಮುಂದಾಗಿದ್ದಾರೆ.

Leave a Reply

error: Content is protected !!
LATEST
ಕೌಶಲ್ಯ ಅಭಿವೃದ್ಧಿ ಕೇಂದ್ರ ಸ್ಥಾಪನೆಗಾಗಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆಗೆ ಮನವಿ ಸಲ್ಲಿಸಿದ ಕೆಎಚ್‌ಎಂ ಹೈಕೋರ್ಟ್ ಬಿಗ್ ಶಾಕ್ ಜತೆಗೆ ಸಿಎಂ ಸಿದ್ದರಾಮಯ್ಯಗೆ ನಾಳೆ ಕೂಡ ಮಹತ್ವದ ದಿನ ಮುಡಾ ಹಗರಣ: ಸಿಎಂ ಸಿದ್ದರಾಮಯ್ಯ ಅರ್ಜಿ ವಜಾ- ಗವರ್ನರ್ ಆದೇಶ ಎತ್ತಿ ಹಿಡಿದ ಹೈಕೋರ್ಟ್‌ ಬೆಂಗಳೂರು ಗ್ರಾಮಾಂತರ: ಉನ್ನತ ಗ್ರಾಮ ಅಭಿಯಾನದಡಿ ಜಿಲ್ಲೆಯ 14 ಗ್ರಾಮಗಳು ಆಯ್ಕೆ: ಜಿಲ್ಲಾಧಿಕಾರಿ ಡಾ.ಶಿವಶಂಕರ್ ಮಾನಸಿಕ ಆರೋಗ್ಯ ಸಮಾಲೋಚಕರ  ಹುದ್ಧೆಗೆ ಅರ್ಜಿ ಆಹ್ವಾನ ಬಿಬಿಎಂಪಿ ಮೈದಾನದ ಗೇಟ್ ಬಿದ್ದು 11 ವರ್ಷದ ಬಾಲಕ ಮೃತ KSRTC ಚಾ.ನಗರ ವಿ.ಕಾರ್ಯಾಗಾರದಿಂದ ಅಕ್ರಮವಾಗಿ ಖಾಸಗಿಯವರಿಗೆ ರವಾನೆಯಾದ ಇಂಜಿನ್‌ ಟ್ರಾಲಿ, ಸ್ಟ್ಯಾಂಡ್‌ ಫ್ರಿಡ್ಜ್‌ನಲ್ಲಿದ್ದ ಮಹಾಲಕ್ಷ್ಮೀ ದೇಹದ 32 ಪೀಸ್‌ಗಳು ಹೇಳುತ್ತಿವೆ ಭಯಾನಕ ಸತ್ಯ ಬಡವರು-ಮಧ್ಯಮ ವರ್ಗದವರಿಗೆ ಕೈಗೆಟುಕುವ ದರದಲ್ಲಿ ನಿವೇಶನ ವಿತರಣೆ: ಡಾ.ಬಸ್ತಿ ರಂಗಪ್ಪ KSRTC ನಿರ್ದೇಶಕರ ಆದೇಶಕ್ಕೂ ಕಿಮ್ಮತ್ತಿಲ್ಲ: ಅಮಾನತು ತೆರವು ಮಾಡದೆ ಚಾಲಕನಿಗೆ ಮಾನಸಿಕ ಹಿಂಸೆ ಕೊಡುತ್ತಿರುವ ತುಮಕೂರು ...