CrimeNEWSಬೆಂಗಳೂರು

ಬಿಬಿಎಂಪಿ ಮೈದಾನದ ಗೇಟ್ ಬಿದ್ದು 11 ವರ್ಷದ ಬಾಲಕ ಮೃತ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಬಿಬಿಎಂಪಿ ಮೈದಾನದ ಗೇಟ್ ಬಿದ್ದು 11 ವರ್ಷದ ಮಗು ಮೃತಪಟ್ಟಿರುವ ಘಟನೆ ಮಲ್ಲೇಶ್ವರಂನಲ್ಲಿ ನಡೆದಿದೆ.

ವಿಜಯಕುಮಾರ್ ಮತ್ತು ಪ್ರಿಯಾ ದಂಪತಿಯ ಮಗ ನಿರಂಜನ್ ಮೃತ ಬಾಲಕ. ಆಟ ಆಡಲು ಮೈದಾನದ ಗೇಟ್ ಓಪನ್ ಮಾಡುತ್ತಿದ್ದಂತೆ ಮಗುವಿನ ಮೇಲೆಯೇ ಗೇಟ್ ಬಿದ್ದಿದೆ.

ಈ ವೇಳೆ ತಲೆಗೆ ತೀವ್ರ ಪೆಟ್ಟು ಬಿದ್ದಿದ್ದು, ಕೂಡಲೇ ಸ್ಥಳೀಯರು ಕೆ.ಸಿ.ಜನರಲ್ ಆಸ್ಪತ್ರೆ ಕರೆದುಕೊಂಡು ಹೋಗಿದ್ದಾರೆ. ಆದರೆ, ದುರಾದೃಷ್ಟವಶಾತ್ ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದೆ.

ಮೃತ ನಿರಂಜನ್ ಮಲ್ಲೆಶ್ವರಂನ ಬಿಬಿಎಂಪಿ ಶಾಲೆಯಲ್ಲಿ 5ನೇ ತರಗತಿಯಲ್ಲಿ ಓದುತ್ತಿದ್ದ. ಜತೆಗೆ ತಂದೆ ವಿಜಯಕುಮಾರ್ ಆಟೋ ಚಾಲಕರಾಗಿದ್ದು, ಮಲ್ಲೇಶ್ವರನ ಫೈಪ್ ಲೈನ್‌ನಲ್ಲಿ ಈ ಕುಟುಂಬ ವಾಸವಾಗಿತ್ತು.

ಘಟನೆಯ ವಿಷಯ ತಿಳಿದ ಮಲ್ಲೇಶ್ವರಂ ಪೊಲೀಸರು ಸ್ಥಳಕ್ಕೆ‌ ಭೇಟಿ ನೀಡಿ ಪರಿಶೀಲನೆ ನಡೆಸಿ ಮುಂದಿನ  ಕ್ರಮ ಕೈಗೊಂಡಿದ್ದಾರೆ.

Leave a Reply

error: Content is protected !!
LATEST
ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು ಗಂಭೀರ ಸ್ವರೂಪ ಪಡೆಯುತ್ತಿದೆ ದೆಹಲಿ ರೈತರ ಹೋರಾಟ: ನ.26ರಿಂದ ಉಪವಾಸ ಸತ್ಯಾಗ್ರಹ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಸಾಗರದಂತೆ ಬನ್ನಿ: ಮೀರಾ ಶಿವಲಿಂಗಯ್ಯ ಕರೆ SC, ST ಅಲೆಮಾರಿ ಸಮುದಾಯಗಳ ಯೋಜನೆಗಳು ಸದ್ಬಳಕೆ ಆಗಬೇಕು: ಡಿಸಿ ಶಿವಶಂಕರ ಸಿಮೆಂಟ್ ಲಾರಿಗೆ ಕಾರು ಡಿಕ್ಕಿ: ತಂದೆ, 2ವರ್ಷದ ಮಗು ಮೃತ, ತಾಯಿ ಸ್ಥಿತಿ ಗಂಭೀರ KSRTC: ವಾರದೊಳಗೆ ವೇತನ ಹೆಚ್ಚಳದ 38ತಿಂಗಳ ಹಿಂಬಾಕಿ ನಿವೃತ್ತ ನೌಕರರ ಬ್ಯಾಂಕ್‌ ಖಾತೆಗೆ ಜಮಾ! ಚೆಂಡು ಹೂವಿನ ಬೆಲೆ ತೀವ್ರ ಕುಸಿತ- ರಸ್ತೆ ಬದಿ ಹೂ ಸುರಿದು ಬೆಳೆಗಾರ ರೈತರ ಅಕ್ರೋಶ