CrimeNEWSದೇಶ-ವಿದೇಶ

ಹೋಟೆಲ್‌ನಲ್ಲಿ ಊಟಮಾಡುತ್ತಿದ್ದಾಗಲೇ ಐಎಎಸ್‌ ಅಧಿಕಾರಿ ಕುಸಿದು ಬಿದ್ದು ಸಾವು

ವಿಜಯಪಥ ಸಮಗ್ರ ಸುದ್ದಿ

ಮುಂಬೈ: ಊಟ ಮಾಡುವಾಗ ಕುಸಿದು ಬಿದ್ದು 57 ವರ್ಷದ ಐಎಎಸ್ ಅಧಿಕಾರಿಯೋಬ್ಬರು ನಿಧನರಾಗಿರುವುದು ಮುಂಬೈನ ಹೋಟೆಲ್‌ವೊಂದರಲ್ಲಿ ನಡೆದಿದೆ.

ಮಹಾರಾಷ್ಟ್ರ ಲೋಕೋಪಯೋಗಿ ಇಲಾಖೆ ಕಾರ್ಯದರ್ಶಿ ಐಎಎಸ್ ಅಧಿಕಾರಿ ಪ್ರಶಾಂತ್​ ದತ್ತಾತ್ರೇ ನವಘರೆ ಮೃತಪಟ್ಟವರು.  ನವಘರೆ ಅವರು ದಿಢೀರ್‌ ಕುಸಿದು ಬಿದ್ದು  ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

ಘಟನೆ ವಿವರ: ಬುಧವಾರ ರಾತ್ರಿ ಕಾಲಾ ಗೋದಾ ನೇಬರ್​ಹುಡ್​ ಹೋಟೆಲ್​ನಲ್ಲಿ ಊಟ ಮಾಡುತ್ತಿದ್ದರು, ಈ ವೇಳೆ ಕುಸಿದು ಬಿದ್ದು ಕ್ಷಣಾರ್ಧದಲ್ಲೇ ಜೀವ ಬಿಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಊಟ ಮಾಡುವ ವೇಳೆ ಅಲರ್ಜಿಯ ಲಕ್ಷಣ ಇವರಲ್ಲಿ ಕಂಡು ಬಂತು. ಈ ವೇಳೆ ಅವರು ಹಠಾತ್​ಪ್ರಜ್ಞೆ ತಪ್ಪಿದ್ದಾರೆ. ತಕ್ಷಣವೇ ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ಆದರೆ ಅಷ್ಟರಲ್ಲಾಗಲೇ ಅವರ ಹೃದಯ ಬಡಿತ ನಿಂತುಹೋಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ಮಾತಾ ರಾಮಾಬಾಯಿ ಅಂಬೇಡ್ಕರ್​ ಮಾರ್ಗ್​ ಪೊಲೀಸ್​​ ಠಾಣೆಯಲ್ಲಿ ಪ್ರಶಾಂತ್​ದತ್ತಾತ್ರೇ ನವಘರೆ ಅವರ ಹಠಾತ್​ ಸಾವಿನ ವರದಿ ದಾಖಲಾಗಿದ್ದು ಮುಂದಿನ ಕ್ರಮವನ್ನು ಪೊಲೀಸರು ಕೈಗೊಂಡಿದ್ದಾರೆ.

Leave a Reply

error: Content is protected !!
LATEST
ಡಿ.9ರಿಂದ ವಿಧಾನಮಂಡಳ ಅಧಿವೇಶನ, ಉಕ ಪ್ರಗತಿಗೆ ಒತ್ತು: ಸ್ಪೀಕರ್ ಖಾದರ್ ವಿವಿಧ ಬೇಡಿಕೆಗಳ  ಈಡೇರಿಸಿ ಆಗ್ರಹಿಸಿ ಇಪಿಎಸ್ ಪಿಂಚಣಿದಾರರ ಪ್ರತಿಭಟನೆ: ಅಧಿಕಾರಿಗಳ ವಿರುದ್ಧ ಆಕ್ರೋಶ ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ