CrimeNEWSನಮ್ಮಜಿಲ್ಲೆ

ಬ್ಯಾಗ್‍ನಲ್ಲಿ ಸಿಕ್ಕ ಶವ ಪ್ರಕರಣಕ್ಕೆ ಸ್ಫೋಟಕ ತಿರುವು : ಮನೆ ಕೆಲಸದಾಕೆ ಜೊತೆ ಲೈಂಗಿಕ ಕ್ರಿಯೆಯಲ್ಲಿ ತೊಡಗಿದ್ದಾಗ ವೃದ್ಧ ಸಾವು

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಪುಟ್ಟೇನಹಳ್ಳಿ ವೃದ್ಧರ ಶವ ಬ್ಯಾಗ್‍ನಲ್ಲಿ ಪತ್ತೆ ಪ್ರಕರಣಕ್ಕೆ ಸ್ಫೋಟಕ ತಿರುವು ಸಿಕ್ಕಿದೆ. ಆ ವೃದ್ಧ ಮನೆ ಕೆಲಸದಾಕೆ ಜೊತೆ ಲೈಂಗಿಕ ಕ್ರಿಯೆಯಲ್ಲಿ ತೊಡಗಿದ್ದಾಗ ಹೃದಯಾಘಾತಕ್ಕೀಡಾಗಿ ಮೃತಪಟ್ಟರು ಎಂಬ ಸತ್ಯ ಪೊಲೀಸರ ತನಿಖೆಯಿಂದ ಹೊರಬಿದ್ದಿದೆ.

ನವೆಂಬರ್ 16 ರಂದು ಮೊಮ್ಮಗನನ್ನು ಬ್ಯಾಡ್ಮಿಂಟನ್ ಕ್ಲಾಸ್‍ಗೆ ಕರೆದುಕೊಂಡು ಹೋಗಿದ್ದ ವೃದ್ಧ ಬಾಲಸುಬ್ರಮಣಿಯನ್ (67) ಸಂಜೆ 4:55ರ ವೇಳೆಗೆ ಸೊಸೆಗೆ ಕರೆ ಮಾಡಿ ಹೊರಗಡೆ ಕೆಲಸ ಇದೆ ಎಂದು ತಿಳಿಸಿದ್ದಾರೆ. ಬಳಿಕ ಕರೆ ಮಾಡಿದರೆ ಅವರ ಫೋನ್ ಸ್ವಿಚ್ ಆಫ್ ಆಗಿತ್ತು. ಆ ನಂತರ ಮಗ ಠಾಣೆಗೆ ನಾಪತ್ತೆ ದೂರು ದಾಖಲಿಸಿದ್ದರು.

ಈ ಬಗ್ಗೆ ತನಿಖೆ ಆರಂಭಿಸಿದ ಪೊಲೀಸರಿಗೆ ಶಾಕ್ ಕಾದಿತ್ತು. ನ.18 ರಂದು ಪುಟ್ಟೇನಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ಚೀಲ ಮತ್ತು ಬೆಡ್‍ಶೀಟ್‍ನಲ್ಲಿ ಸುತ್ತಿದ್ದ ಮೃತದೇಹವೊಂದು ಜೆ.ಪಿ. ನಗರದ 6ನೇ ಹಂತದ ಸಮೀಪ ಪತ್ತೆಯಾಗಿತ್ತು. ಇದು ಬಾಲಸುಬ್ರಮಣಿಯನ್ ಎಂದು ಗುರುತಿಸಲಾಗಿತ್ತು. ಬಳಿಕ ವೃದ್ಧನ ಸಾವಿನ ಬಗ್ಗೆ ಅನುಮಾನ ಮೂಡಿತ್ತು.

ಆದರೆ, ದೇಹದ ಮೇಲೆ ಯಾವುದೇ ಗಾಯಗಳು ಕಂಡು ಬಂದಿಲ್ಲ. ಹೇಗೆ ಮೃತಪಟ್ಟರು ಎಂದು ತಲೆಕೆಡಿಸಿಕೊಂಡರು ಪೊಲೀಸರು. ಈ ವೇಳೆ ಸಿಡಿಆರ್ ಪರಿಶೀಲಿಸಿದಾಗ ಶಾಕಿಂಗ್ ವಿಚಾರ ಬೆಳಕಿಗೆ ಬಂದಿತ್ತು.

ಬಾಲಸುಬ್ರಮಣಿಯನ್ ಕಾಲ್ ಹಿಸ್ಟರಿ ಜಾಲಾಡಿದಾಗ ನಿರಂತರವಾಗಿ ಮಹಿಳೆಯೊಬ್ಬರ ಜತೆಗೆ ಸಂಪರ್ಕದಲ್ಲಿ ಇದ್ದದ್ದು ತಿಳಿಯಿತು. ಇನ್ನು ಸಾರಕ್ಕಿ ಸಿಗ್ನಲ್ ಬಳಿ ವೃದ್ಧರ ಲಾಸ್ಟ್ ಲೊಕೇಶನ್ ದಾಖಲಾಗಿತ್ತು. ಹೀಗಾಗಿ ಆ ಮಹಿಳೆ ಯಾರು ಅನ್ನೋದರ ಕುರಿತು ಖಾಕಿ ಬೆನ್ನು ಹತ್ತಿತ್ತು. ತನಿಖೆ ವೇಳೆ ಬಾಲಸುಬ್ರಮಣಿಯನ್ ಮನೆಗೆ ಬರುತ್ತಿದ್ದ ಮನೆ ಕೆಲಸದಾಕೆ ಮೇಲೆ ಅನುಮಾನ ಮೂಡಿತ್ತು. ನಂತರ ಆಕೆಯನ್ನು ವಿಚಾರಣೆಗೆ ಒಳಪಡಿಸಿದಾಗ ಸಾವಿನ ಸತ್ಯ ಬಯಲಾಯಿತು.

ನವೆಂಬರ್ 16 ರಂದು ಮೊಮ್ಮಗನನ್ನು ಬ್ಯಾಡ್ಮಿಂಟನ್ ಕ್ಲಾಸ್‍ಗೆ ಕರೆದುಕೊಂಡು ಹೋಗಿದ್ದ ವೃದ್ಧ ಬಾಲಸುಬ್ರಮಣಿಯನ್ ಅಲ್ಲಿಂದ ಮನೆ ಕೆಲಸದಾಕೆ ಮನೆಗೆ ಹೋಗಿದ್ದರು. ಅಲ್ಲಿ ಕೆಲಸದಾಕೆ ಜೊತೆಗೆ ಲೈಂಗಿಕ ಕ್ರಿಯೆ ನಡೆಸುವಾಗ ಹೃದಯಾಘಾತಕ್ಕೀಡಾಗಿದ್ದಾರೆ.

ಇನ್ನು ವೃದ್ಧ ಹೃದಯಾಘಾತದಿಂದ ಸಾವನ್ನಪ್ಪಿದ್ದರಿಂದ ಗಾಬರಿಗೊಂಡ ಮನೆಕೆಲಸದಾಕೆ ತನ್ನ ಗಂಡನಿಗೆ ಈ ಬಗ್ಗೆ ಮಾಹಿತಿ ನೀಡಿದ್ದಳು. ನಂತರ ಮನೆಗೆ ಬಂದ ಗಂಡ ಮತ್ತು ಸಹೋದರ ಸೇರಿ ಸುಬ್ರಮಣಿಯನ್ ಮೃತದೇಹವನ್ನು ಪ್ಲಾಸ್ಟಿಕ್‌ ಬ್ಯಾಗ್‍ನಲ್ಲಿ ಕಟ್ಟಿ ತೆಗೆದುಕೊಂಡು ಹೋಗಿ ರಸ್ತೆ ಮಧ್ಯೆ ಹಾಕಿ ಬಂದಿದ್ದರು.

ಪೊಲೀಸ್ ವಿಚಾರಣೆ ವೇಳೆ ಮನೆ ಕೆಲಸದಾಕೆ ನಡೆದ ವಿಚಾರವನ್ನು ಹೇಳಿದ್ದು, ಲೈಂಗಿಕ ಕ್ರಿಯೆಯಲ್ಲಿ ತೊಡಗಿದ್ದಾಗ ಸಾವು ಆಯ್ತು. ನಮ್ಮ ಮನೆಯಲ್ಲೇ ಮೃತಪಟ್ಟರು. ಕೊಲೆ ಪ್ರಕರಣದಲ್ಲಿ ಪೊಲೀಸರು ಎಲ್ಲಿ ನನ್ನನ್ನು ಬಂಧಿಸುತ್ತಾರೆ ಎಂದು ಹೆದರಿ ಹೀಗೆ ಮಾಡಿದ್ದೇವೆ ಎಂದು ಹೇಳಿದ್ದಾಳೆ.

Leave a Reply

error: Content is protected !!
LATEST
BMTC ದಕ್ಷಿಣ ವಿಭಾಗದ 7 ಘಟಕಗಳಲ್ಲೂ ಚಾಲನಾ ಸಿಬ್ಬಂದಿಯೇ ಕಸಗುಡಿಸಬೇಕು- ಕಂಡು ಕಾಣದಂತೆ ವರ್ತಿಸುವ ಡಿಸಿ ಆಶಾಲತಾ ಮೇಡಂ! KKRTC: ಬಾಲ ಬಿಚ್ಚಿದರೇ ನಿಮ್ಮ ತಲೆಗಳನ್ನು ಉರುಳಿಸಬೇಕಾಗುತ್ತದೆ ಎಂದು ನೌಕರರಿಗೆ ಜೀವ ಬೇದರಿಕೆ ಹಾಕಿದ ಡಿಎಂ ಎತ್ತಂಗಡಿ ಸಿಎಂ ಸ್ವಕ್ಷೇತ್ರ ರಂಗಸಮುದ್ರ ಸ್ಮಶಾನ ಭೂಮಿ ಮೇಲು ಬಿದ್ದ ವಕ್ಫ್‌ ಕಣ್ಣು- ಪಹಣಿಯಲ್ಲಿ 2021-22ರಿಂದ ವಕ್ಫ್‌ ಬೋರ್ಡ್ ಹ... BMTC: ಆದಾಯ ಸಂಗ್ರಹಣೆಯಲ್ಲಿ 2ನೇ ಘಟಕ ಪ್ರಥಮ-ಎಲ್ಲರನ್ನೂ ಅಭಿನಂದಿಸಿದ ಸಾರಿಗೆ ಸಚಿವರು, ಅಧಿಕಾರಿಗಳು KKRTC ವಿಜಯಪುರ ವಿಭಾಗದಲ್ಲಿ ಅಂದು ಡ್ಯೂಟಿಗೆ ಹತ್ತಿಸಿದ ಅಧಿಕಾರಿಗಳೇ ಇಂದು ಚಾಲಕನಿಗೆ ಮುಳುವಾಗಿ ನಿಂತಿದ್ದಾರಾ? ನಾಳೆ KSRTC ನೌಕರರಿಗೆ ನಗದು ರಹಿತಾ ವೈದ್ಯಕೀಯ ಚಿಕಿತ್ಸಾ ಯೋಜನೆ ಜಾರಿ ಸಂಬಂಧ ಎಂಡಿ ಅಧ್ಯಕ್ಷತೆಯಲ್ಲಿ ಸಭೆ BMTC: 7ದಿನಗಳಿಂದ LMSನಲ್ಲಿ ರಜೆ ಹಾಕಲಾಗದೆ ನೌಕರರ ಪರದಾಟ- ಸಮಸ್ಯೆ ಗೊತ್ತಿದ್ದರೂ ಅಧಿಕಾರಿಗಳು ಮೌನ BMTC: ಬಸ್‌ ಚಲಾಯಿಸುತ್ತಿದ್ದಾಗಲೇ ಹೃದಯಾಘಾತದಿಂದ ಚಾಲಕ ನಿಧನ- ಸಾರಿಗೆ ಸಚಿವರು, ಎಂಡಿ ಸಂತಾಪ BMTC ಚಿಕ್ಕಲ್ಲಸಂದ್ರ: ಅವೈಜ್ಞಾನಿಕ ಸುತ್ತುವಳಿ ಸಮಯ ನಿಗದಿ ಮಾಡಿರುವುದಲ್ಲದೆ ವ್ಯಕ್ತಿಯೊಬ್ಬನ ದೂರಿಗೆ ಮಣೆಹಾಕಿ ನೌಕರರ... "ಲೋಕಾ"ವಿಚಾರಣೆ ಬಳಿಕ ಮುಗುಳ್ನಗುತ್ತಲೇ ಹೊರ ಬಂದ ಸಿಎಂ ಸಿದ್ದರಾಮಯ್ಯ