Please assign a menu to the primary menu location under menu

CrimeNEWSಶಿಕ್ಷಣ-

ಪರೀಕ್ಷೆ ವೇಳೆ ಕಾಪಿ ಹೊಡೆದ ಕಾರಣ- ತರಗತಿಯಿಂದ ಹೊರಹಾಕಿದ್ದಕ್ಕೆ ಮನನೊಂದು ವಿದ್ಯಾರ್ಥಿ ಆತ್ಮಹತ್ಯೆ: ಟೀಚರ್‌ ವಿರುದ್ಧ FIR

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಪರೀಕ್ಷೆ ವೇಳೆ ಕಾಪಿ ಹೊಡೆದೆ ಎಂದು ಸ್ವಲ್ಪಹೊತ್ತು ತರಗತಿಯಿಂದ ಟೀಚರ್ ಹೊರಹಾಕಿದ್ದಕ್ಕೆ ಮನನೊಂದು ವಿದ್ಯಾರ್ಥಿ ಮೋಹಿನ್ ಎಂಬಾತ ಅಪಾರ್ಟ್ಮೆಂಟ್‌ನ ಹದಿನಾಲ್ಕನೇ ಮಹಡಿಯಿಂದ ಹಾರಿ ಆತ್ಮಹತ್ಯೆಗೆ ಶರಣಾದ ಘಟನೆ ಬೆಂಗಳೂರಿನಲ್ಲಿ ನಿನ್ನೆ ನಡೆದಿತ್ತು. ಆದರೀಗ ಈ ಪ್ರಕರಣ ಸಂಬಂಧ ಶಾಲಾ ಟೀಚರ್ ವಿರುದ್ಧ ಪ್ರಕರಣ ದಾಖಲಾಗಿದೆ.

ಬೆಂಗಳೂರಿನ ನಾಗವಾರ ಬಳಿಯ ಆರ್ ಆರ್ ಸಿಗ್ನೇಚರ್ ಅಪಾರ್ಟ್ಮೆಂಟ್‌ನಿಂದ ಹಾರಿ ಮೋಹಿನ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮಹಮ್ಮದ್ ನೂರ್, ನೋಹೇರಾ ದಂಪತಿಯ ಒಬ್ಬನೇ ಮಗನಾಗಿದ್ದ ಮೋಹಿನ್ ಖಾಸಗಿ ಸ್ಕೂಲ್‍ನಲ್ಲಿ ಎಸ್‍ಎಸ್‍ಎಲ್‍ಸಿ ಓದುತ್ತಿದ್ದ. ಪರೀಕ್ಷೆ ನಡೆಯುತ್ತಿದ್ದ ವೇಳೆ ಕಾಪಿ ಹೊಡೆಯುತ್ತಿದ್ದ ಅದನ್ನು ಕಂಡ ಶಿಕ್ಷಕರು ತರಗತಿಯಿಂದ ಹೊರಹಾಕಿದ್ದರು.

ಈ ಹಿನ್ನೆಲೆಯಲ್ಲಿ ಬೆಳಗ್ಗೆ ಹನ್ನೊಂದು ಗಂಟೆಗೆ ಸ್ಕೂಲ್‍ನಿಂದ ಮೋಹಿನ್ ಹೊರಬಂದಿದ್ದನು. ಘಟನೆಯಿಂದ ಮನನೊಂದ ಮೋಹಿನ್ ಸಂಜೆ ಐದು ಗಂಟೆ ವೇಳೆಗೆ ಸಿಗ್ನೇಚರ್ ಅಪಾರ್ಟ್ಮೆಂಟ್‌ನ ಹದಿನಾಲ್ಕನೇ ಮಹಡಿಯಿಂದ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದ. ಆ ಬಳಿಕ ಪೋಷಕರು ನೀಡಿರುವ ದೂರಿನ್ವಯ ಸಂಪಿಗೆಹಳ್ಳಿ ಪೊಲೀಸರು ಟೀಚರ್ ವಿರುದ್ಧ ಎಫ್‍ಐಆರ್ ದಾಖಲಿಸಿದ್ದಾರೆ.

ಪಾಲಕರು ನೀಡಿರುವ ದೂರಿನ್ವಯ ಪ್ರಾಥಮಿಕವಾಗಿ ಶಾಲೆಯ ಶಿಕ್ಷಕರನ್ನು ವಿಚಾರಣೆ ನಡೆಸಿದ ಪೊಲೀಸರು ಐಪಿಸಿ ಸೆಕ್ಷನ್ 306 ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪ್ರಕರಣ ಸಂಬಂಧ ಕ್ಲಾಸ್ ಟೀಚರ್, ಅಪಾರ್ಟ್ಮೆಂಟ್‌ನ ಭದ್ರತಾ ಸಿಬ್ಬಂದಿ ಸೇರಿದಂತೆ ಘಟನೆಯ ಬಗ್ಗೆ ಪ್ರತ್ಯಕ್ಷದರ್ಶಿಗಳಿಂದ ಪೊಲೀಸರು ಮಾಹಿತಿ ಕಲೆ ಹಾಕಿದರು.

ವಿಚಾರಣೆ ವೇಳೆ ವಿದ್ಯಾರ್ಥಿಯನ್ನು ಕೊಠಡಿಯ ಮುಂಭಾಗ ನಿಲ್ಲಿಸಿದ್ದ ಶಿಕ್ಷಕಿ ಶಾಲೆಯಿಂದ ಹೊರಗೆ ವಿದ್ಯಾರ್ಥಿಯನ್ನು ಕಳುಹಿಸಿರಲಿಲ್ಲ. ಆದರೆ ಸ್ವಲ್ಪ ಹೊತ್ತಿನ ಬಳಿಕ ಟೀಚರ್ ಕೊಠಡಿಯ ಹೊರಬಂದು ನೋಡಿದಾಗ ಆತ ಇರಲಿಲ್ಲ. ಆಗ ಶಾಲಾ ಶಿಕ್ಷಕರು ಸಂಪೂರ್ಣ ಶಾಲೆಯನ್ನು ಹುಡುಕಾಡಿದ್ದರು. ವಿದ್ಯಾರ್ಥಿ ಕಾಣದಿದ್ದಾಗ ತಕ್ಷಣವೇ ಅವರ ಪೋಷಕರಿಗೆ ಮಾಹಿತಿ ನೀಡಿದ್ದಾರೆ.

ಅಪಾರ್ಟ್ಮೆಂಟ್‌ ಪ್ರವೇಶ ಹೇಗೆ?: ಮೋಹಿನ್ ಮನೆಯಿರುವುದು ಅಪಾರ್ಟ್ಮೆಂಟ್‌ ಮುಂಭಾಗದ ರಸ್ತೆಯ ಬದಿಯಲ್ಲಾಗಿದೆ. ಅಪಾರ್ಟ್ಮೆಂಟ್‌ಗೆ ಅಪರಿಚಿತ ಎಂಟ್ರಿ ಇಲ್ಲ, ಆದರೂ ಹೇಗೆ ಅಪಾರ್ಟ್ಮೆಂಟ್‌ನ ಟೆರೇಸ್‍ಗೆ ಮೋಹಿನ್ ಹೋದ ಎಂಬುದರ ಬಗ್ಗೆ ಪ್ರಶ್ನೆ ಇತ್ತು. ಇದು ಪೊಲೀಸರ ತನಿಖೆ ವೇಳೆ ಬಯಲಾಗಿದೆ.

ಮೋಹಿನ್ ಅಪಾರ್ಟ್ಮೆಂಟ್‌ಗೆ ಹೋಗುವಾಗ ಅದೇ ಅಪಾರ್ಟ್ಮೆಂಟ್‌ನ ವಿದ್ಯಾರ್ಥಿಯ ಜೊತೆಗೆ ಒಳ ಹೋಗಿದ್ದ ಆ ಅಪಾರ್ಟ್ಮೆಂಟ್‌ನ ವಿದ್ಯಾರ್ಥಿಗೂ ಮೋಹಿನ್ ಗೊತ್ತಿರಲಿಲ್ಲ. ಇನ್ನೊಬ್ಬ ವಿದ್ಯಾರ್ಥಿಯೊಂದಿಗೆ ಈತ ಅಪಾರ್ಟ್ಮೆಂಟ್‌ಗೆ ಹೋಗಿದ್ದರಿಂದ ಸೆಕ್ಯೂರಿಟಿಯವರು ಗೊಂದಲಕ್ಕೀಡಾಗಿದ್ದರು. ಮೋಹಿನ್ ಸಮವಸ್ತ್ರ ಧರಿಸಿದ್ದರಿಂದ ಸೆಕ್ಯೂರಿಟಿಗೆ ಗೊಂದಲಕ್ಕೀಡಾಗಿ ಒಳಬಿಟ್ಟಿದ್ದರು ಎಂಬ ಸತ್ಯ ವಿಚಾರಣೆ ವೇಳೆ ಬಯಲಾಗಿದೆ.

Leave a Reply

error: Content is protected !!
LATEST
ದುಷ್ಕರ್ಮಿಗಳಿಂದ ಇರಿತಕ್ಕೊಳಗಾಗಿದ್ದ ನಟ ಸೈಫ್‌ ಅಲಿ ಖಾನ್‌ ಪ್ರಾಣಾಪಾಯದಿಂದ ಪಾರು ಎಟಿಎಂಗೆ ಹಣ ತುಂಬಲು ಬಂದ ಎಸ್‌ಬಿಐ ಸಿಬ್ಬಂದಿ ಮೇಲೆ ಖದೀಮರಿಂದ ಗುಂಡಿನ ದಾಳಿ- ಓರ್ವ ಸಾವು, ₹93 ಲಕ್ಷ ದೋಚಿ ಪರಾರಿ ಬ್ಯಾಟರಿ ಚಾಲಿತ ವ್ಹೀಲ್‌ಚೇರ್‌ ವಿತರಣೆಗೆ ವಿಕಲಚೇತನರಿಂದ ಅರ್ಜಿ ಆಹ್ವಾನ ₹390 ಕೋಟಿ ಹೂಡಿಕೆಯ ಬ್ಯಾಟರಿ ಫ್ಯಾಕ್ಟರಿಗೆ ಶಂಕುಸ್ಥಾಪನೆ : ಸಚಿವ ಪಾಟೀಲ್‌ ಕನ್ನಡ ಚಿತ್ರರಂಗದ ಹಿರಿಯ ನಟ ಸರಿಗಮ ವಿಜಿ ವಿಧಿವಶ ಬೆಳಗಾವಿ: ಸಚಿವರ ಕಾರು ಅಪಘಾತ- ಲಕ್ಷ್ಮೀ ಹೆಬ್ಬಾಳ್ಕರ್ ಬೆನ್ನು ಮೂಳೆ ಮುರಿತ BMTC ಕಂಡಕ್ಟರ್‌: 1ನೇ ಮದುವೆ ಮುಚ್ಚಿಟ್ಟು ಯುವತಿ ಜತೆ ಲವ್ವಿಡವ್ವಿ - ಬಳಿಕ ತಾಳಿ ಕಟ್ಟಿ ಗರ್ಭಿಣಿ ಮಾಡಿ ವಲ್ಲೆ ಎನ್ನು... KSRTC: ಪ್ರಯಾಣಿಕರು ಕಳೆದುಕೊಂಡಿದ ಬೆಲೆ ಬಾಳುವ ಬ್ಯಾಗ್‌ ಮರಳಿಸಿ ಪ್ರಾಮಾಣಿಕತೆ ಮೆರೆದ ತುರುವೇಕೆರೆ ಘಟಕದ ನೌಕರರು ಇಂದು ಮಕರ ಸಂಕ್ರಾಂತಿ ಹಬ್ಬದ ಸಂಭ್ರಮ -ಕಿಚಡಿ ಮುದ್ದೆ, ಪೊಂಗಲ್‌ ರುಚಿಯ ಸವಿ ಮೈಸೂರು: ಬೇಡಿಕೆ ಈಡೇರಿಕೆಗೆ ಮೀನಮೇಷ ಎಣಿಸುತ್ತಿರುವ ಪ್ರಧಾನಿ, ಕೃಷಿ ಮಂತ್ರಿಗಳ ಪ್ರತಿಕೃತಿ ದಹಿಸಲು ಯತ್ನಿಸಿದ ರೈತರ ಬ...