NEWSಉದ್ಯೋಗದೇಶ-ವಿದೇಶ

ನೌಕರರಿಗೆ ಗುಡ್‌ನ್ಯೂಸ್‌ ಕೊಟ್ಟ ಆಂಧ್ರ ಸರ್ಕಾರ: ನಿವೃತ್ತಿ ವಯಸ್ಸು 62ರಿಂದ 65ಕ್ಕೆ ಏರಿಕೆ

ವಿಜಯಪಥ ಸಮಗ್ರ ಸುದ್ದಿ

ಅಮರಾವತಿ: ಕಳೆದ ವರ್ಷವಷ್ಟೇ ಸರ್ಕಾರಿ ನೌಕರರ ನಿವೃತ್ತಿ ವಯಸ್ಸನ್ನು 60 ವರ್ಷದಿಂದ 62 ವರ್ಷಕ್ಕೆ ಏರಿಸುವ ಸುಗ್ರೀವಾಜ್ಞೆ ಹೊರಡಿಸಿದ್ದ ಆಂಧ್ರಪ್ರದೇಶದ ಜಗನ್ ಮೋಹನ್ ರೆಡ್ಡಿ ಸರ್ಕಾರ ಇಂದು ಮತ್ತೆ 62ರಿಂದ 65 ವರ್ಷಕ್ಕೆ ಹೆಚ್ಚಿಸಿ ಆದೇಶ ಹೊರಡಿಸಿದೆ.

ಈ ನಿಯಮ ಜನವರಿ 1, 2023ರಿಂದಲೇ ಜಾರಿಗೆ ಬರುವಂತೆ ಕ್ರಮವಹಿಸಲಾಗಿದೆ ಎಂದು ಸರ್ಕಾರ ತಿಳಿಸಿದೆ. ಸರ್ಕಾರದ ನಿರ್ಧಾರವು ನೌಕರರಲ್ಲೂ ಅಚ್ಚರಿ ಮೂಡಿಸಿದೆ. ನಿವೃತ್ತಿ ವಯಸ್ಸನ್ನು ಹೆಚ್ಚಿಸಿ ಎಂದು ಸರ್ಕಾರಿ ನೌಕರರು ಯಾರೂ ಪ್ರತಿಭಟನೆ ಮಾಡಿಲ್ಲ. ಆದರೂ ಸರ್ಕಾರ ನಿವೃತ್ತಿ ವಯಸ್ಸನ್ನು ಹೆಚ್ಚಿಸಿದೆ.

ಈ ಹಿಂದೆ ತೆಲಂಗಾಣ ಮತ್ತು ಮಧ್ಯಪ್ರದೇಶದಲ್ಲೂ ನೌಕರರ ನಿವೃತ್ತಿ ವಯಸ್ಸನ್ನು ಏರಿಸಿವೆ. ತೆಲಂಗಾಣದಲ್ಲಿ ಸರ್ಕಾರಿ ನೌಕರರ ನಿವೃತ್ತಿ ವಯಸ್ಸನ್ನು 58 ರಿಂದ 61ಕ್ಕೆ ಹೆಚ್ಚಿಸಲಾಗಿದೆ. ಮಧ್ಯಪ್ರದೇಶದಲ್ಲಿ ನಿವೃತ್ತಿ ವಯಸ್ಸು 62. ಕೇಂದ್ರ ಸರ್ಕಾರದಲ್ಲಿ ಸರ್ಕಾರಿ ನೌಕರರ ನಿವೃತ್ತಿ ವಯಸ್ಸು 60 ಆಗಿದೆ. ಆದರೆ ಇದೀಗ ಆಂಧ್ರಪ್ರದೇಶ ಸರ್ಕಾರ ನಿವೃತ್ತಿ ವಯಸ್ಸನ್ನು 3 ವರ್ಷ ಮುಂದೆ ಹಾಕಿದೆ.

ಕಳೆದ ವರ್ಷ 2022ರ ಜನವರಿ 1ರಿಂದ ಜಾರಿಗೆ ಬರುವಂತೆ 60 ವರ್ಷವಿದ್ದ ನಿವೃತ್ತಿ ವಯಸ್ಸನ್ನು 62ಕ್ಕೆ ಏರಿಕೆ ಮಾಡಿ ಆದೇಶ ಹೊರಡಿಸಲಾಗಿತ್ತು. ಆ ಆದೇಶ ಹೊರಡಿಸಿ ಒಂದು ವರ್ಷ ತುಂಬುತಿದ್ದಂತ್ತೆ ಮತ್ತೆ 3 ಮೂರು ವರ್ಷ ಹೆಚ್ಚಿಸಿ ಇಂದು ಆದೇಶ ಹೊರಡಿಸಿದ್ದು, ನೌಕರರಿಗೆ ಸಂತಸ ಹೆಚ್ಚಿಸಿದೆ.

ಆದರೆ, ಕೆಲವರು ದಕ್ಷಿಣ ರಾಜ್ಯದ ಆರ್ಥಿಕ ಸ್ಥಿತಿ ಕ್ಷೀಣಿಸುತ್ತಿರುವುದರಿಂದ ಆಂಧ್ರ ರಾಜ್ಯದ ನೌಕರರ ನಿವೃತ್ತಿ ವಯಸ್ಸನ್ನು 65ಕ್ಕೆ ಹೆಚ್ಚಿಸುವ ಕ್ರಮವನ್ನು ತೆಗೆದುಕೊಳ್ಳಲಾಗಿದೆ ಎಂದು ಹೇಳಿದ್ದಾರೆ.

ಆಂಧ್ರಪ್ರದೇಶದ ಸರ್ಕಾರಿ ನೌಕರರ ಭವಿಷ್ಯ ನಿಧಿ, ಗ್ರಾಚ್ಯುಯಿಟಿ ಮತ್ತು ಇತರ ಪ್ರಯೋಜನಗಳು ಸರಾಸರಿ ಸುಮಾರು 30 ಲಕ್ಷ ರೂ. ಆಗಿದೆ. ಅನೇಕ ಸಿಬ್ಬಂದಿಗೆ ನಿವೃತ್ತಿ ಪ್ರಯೋಜನಗಳ ಪಾವತಿಯನ್ನು ಎರಡು ವರ್ಷಗಳವರೆಗೆ ಮುಂದೂಡಬಹುದು. ಪಿಂಚಣಿ ಹಾಗೂ ಇತರ ನಿವೃತ್ತಿ ಪ್ರಯೋಜನಗಳ ಮೇಲೆ ಸರ್ಕಾರವು ಮಾಡುವ ವೆಚ್ಚವನ್ನು ಮುಂದೂಡುತ್ತದೆ ಎಂದು ಹೇಳುತ್ತಿದ್ದಾರೆ.

ಆದೇಶದ ಪ್ರತಿಗಾಗಿ ಇಲ್ಲಿ ಕ್ಲಿಕ್‌ಮಾಡಿ: GO MS NO15. ANDHRA PRADESH

Leave a Reply

error: Content is protected !!
LATEST
NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು