NEWSಕ್ರೀಡೆ

ಹಾರ್ದಿಕ್ ಪಾಂಡ್ಯಗೆ ಮತ್ತೊಂದು ಬ್ಯಾಡ್‌ ನ್ಯೂಸ್‌ : ಮುಂಬೈ ಇಂಡಿಯನ್ಸ್​ಗೆ ಬಿಗ್ ಶಾಕ್

ವಿಜಯಪಥ ಸಮಗ್ರ ಸುದ್ದಿ

ಪಿಎಲ್ 2024 ರಲ್ಲಿ ಸತತ ಎರಡು ಪಂದ್ಯಗಳನ್ನು ಸೋತಿರುವ ಮುಂಬೈ ಇಂಡಿಯನ್ಸ್​ಗೆ ಇದೀಗ ಮತ್ತೊಂದು ಆಘಾತ ಉಂಟಾಗಿದೆ. ತಂಡದ ಸ್ಟಾರ್ ಆಟಗಾರ ಸೂರ್ಯಕುಮಾರ್ ಯಾದವ್ ಮುಂದಿನ ಕೆಲ ಪಂದ್ಯಗಳಲ್ಲೂ ಆಡಲು ಸಾಧ್ಯವಾಗುವುದಿಲ್ಲ ಎಂಬ ಸುದ್ದಿ ಹೊರಬಿದ್ದಿದೆ.

ಇಂಡಿಯನ್ ಪ್ರೀಮಿಯರ್ ಲೀಗ್ ಇತಿಹಾಸದಲ್ಲಿ ಐದು ಬಾರಿ ಚಾಂಪಿಯನ್ ಆಗಿರುವ ಮುಂಬೈ ಇಂಡಿಯನ್ಸ್ ಐಪಿಎಲ್ 2024 ರಲ್ಲಿ ಕೆಟ್ಟ ಆರಂಭ ಪಡೆದುಕೊಂಡಿದೆ. ಟೂರ್ನಮೆಂಟ್ ಈಗಷ್ಟೇ ಆರಂಭಗೊಂಡಿದ್ದರೂ ಹಾರ್ದಿಕ್ ಪಾಂಡ್ಯ ನೇತೃತ್ವದ ಮುಂಬೈ ತಂಡ ಗುಜರಾತ್ ಟೈಟಾನ್ಸ್ ಮತ್ತು ಎಸ್​ಆರ್​ಹೆಚ್ ವಿರುದ್ಧ ಸತತ ಎರಡು ಪಂದ್ಯಗಳಲ್ಲಿ ಸೋತಿದೆ.

ಈ ಸೋಲಿನ ಹಿನ್ನಡೆ ನಡುವೆ ಮುಂಬೈ ಇಂಡಿಯನ್ಸ್​ಗೆ ಮತ್ತೊಂದು ಆಘಾತ ಉಂಟಾಗಿದೆ. ತಂಡದ ಸ್ಟಾರ್ ಆಟಗಾರ ಸೂರ್ಯಕುಮಾರ್ ಯಾದವ್ ಮುಂದಿನ ಕೆಲ ಪಂದ್ಯಗಳಲ್ಲೂ ಆಡಲು ಸಾಧ್ಯವಾಗುವುದಿಲ್ಲ ಎಂಬ ಸುದ್ದಿ ಹೊರಬಿದ್ದಿದೆ. ವಿಶ್ವದ ನಂಬರ್ ಒನ್ ಟಿ20 ಬ್ಯಾಟ್ಸ್‌ಮನ್ ಸೂರ್ಯಕುಮಾರ್ ಯಾದವ್ ಸ್ಪೋರ್ಟ್ಸ್ ಹರ್ನಿಯಾ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದು, ಇದುವರೆಗೂ ಚೇತರಿಸಿಕೊಳ್ಳಲು ಸಾಧ್ಯವಾಗಿಲ್ಲ.

ಸೂರ್ಯ ಇನ್ನೂ ಸಂಪೂರ್ಣ ಫಿಟ್ ಆಗಿರದ ಕಾರಣ ಎನ್​ಸಿಎನಿಂದ ಆಡಲು ಅನುಮತಿ ಪಡೆದಿಲ್ಲ. ಹೀಗಾಗಿ ಅವರು ಮುಂಬರುವ ಕೆಲವು ಐಪಿಎಲ್ ಪಂದ್ಯಗಳಿಂದ ಹೊರಗುಳಿಯಲಿದ್ದಾರೆ. ಇವರ ಪುನರಾಗಮನ ಸ್ವಲ್ಪ ಸಮಯ ತೆಗೆದುಕೊಳ್ಳಬಹುದು ಎಂದು ಬಿಸಿಸಿಐ ಮೂಲಗಳನ್ನು ಉಲ್ಲೇಖಿಸಿ ಸುದ್ದಿ ಸ್ವೀಕರಿಸಲಾಗಿದೆ.

ಆದಾಗ್ಯೂ, ಬಿಸಿಸಿಐ ಸೂರ್ಯಕುಮಾರ್ ಯಾದವ್ ವಿಚಾರದಲ್ಲಿ ಯಾವುದೇ ಆತುರದ ನಿರ್ಧಾರ ತೆಗೆದುಕೊಳ್ಳಲು ಬಯಸುತ್ತಿಲ್ಲ. ಏಕೆಂದರೆ ಐಪಿಎಲ್ ನಂತರ ಟಿ20 ವಿಶ್ವಕಪ್ ಜೂನ್‌ನಲ್ಲಿ ವೆಸ್ಟ್ ಇಂಡೀಸ್ ಮತ್ತು ಅಮೆರಿಕದಲ್ಲಿ ನಡೆಯಲಿದ್ದು, ಅಲ್ಲಿ ಇವರ ಪಾತ್ರ ಪ್ರಮುಖವಾಗಿರುತ್ತದೆ. ಹೀಗಾಗಿ ಐಪಿಎಲ್ ಆಡಿಲ್ಲದಿದ್ದರೂ ವಿಶ್ವಕಪ್​ಗೆ ಇವರು ಬೇಕು ಎಂಬ ನಿರ್ಧಾರದಲ್ಲಿದೆ ಬಿಸಿಸಿಐ.

ಸೂರ್ಯಕುಮಾರ್ ಯಾದವ್ ಅನುಪಸ್ಥಿತಿಯಲ್ಲಿ ಮುಂಬೈ ತಂಡ ಪಂಜಾಬ್​ನ ಸ್ಫೋಟಕ ಬ್ಯಾಟರ್ ನಮನ್ ಧೀರ್​ಗೆ ಅವಕಾಶ ನೀಡುತ್ತಿದೆ. ಈ ಬಲಗೈ ಬ್ಯಾಟ್ಸ್‌ಮನ್ ಇದುವರೆಗಿನ ಎರಡೂ ಪಂದ್ಯಗಳಲ್ಲಿ 50 ರನ್ ಗಳಿಸಿದ್ದಾರೆ. ಸೂರ್ಯಕುಮಾರ್ ಆದಷ್ಟು ಬೇಗ ಮರಳಲಿ ಎಂದು ಮುಂಬೈ ತಂಡ ಬಯಸುತ್ತದೆ. ಹಾರ್ದಿಕ್ ಪಡೆ ಸೋಮವಾರ ರಾಜಸ್ಥಾನ್ ರಾಯಲ್ಸ್ ಅನ್ನು ಎದುರಿಸಲಿದೆ.

Leave a Reply

error: Content is protected !!
LATEST
KSRTC: ಏಪ್ರಿಲ್‌-ಜೂನ್‌ ಪೀಕ್‌ ಸೀಸನ್‌ ಎಂದು ಚಾಲನಾ ಸಿಬ್ಬಂದಿಗಳಿಗೆ ರಜೆ ಕೊಡದೆ ಹಿಂಸಿಸುತ್ತಿರುವ ಅಧಿಕಾರಿಗಳು..! ಬಿಜೆಪಿ ರಾಜಕೀಯ ಲಾಭಕ್ಕೆ ನೇಹಾ ಪ್ರಕರಣ ಬಳಸಿಕೊಳ್ಳುತ್ತಿರುವುದು ನಾಚಿಕೆಗೇಡಿನ ವಿಚಾರ: ಜಗದೀಶ್ ವಿ. ಸದಂ IVRS, ಬಲ್ಕ್ SMS ಮೂಲಕ ಮತದಾರರಿಗೆ ಮೊಬೈಲ್‌ ಸಂದೇಶ: ತುಷಾರ್ ಗಿರಿನಾಥ್ KSRTC: ವೇತನ ಸಮಸ್ಯೆ ಪರಿಹರಿಸದೆ ಅಸಡ್ಡೆ ತೋರಲು ಇವರು ಕಾರಣಗಳು....!? ರಾಜಕೀಯ ಪಕ್ಷಗಳ ಚುನಾವಣಾ ಪ್ರಣಾಳಿಕೆಗಳು ಜನರ ವಂಚಿಸುವ ಮಂತ್ರ ದಂಡಗಳು : ಕುರುಬೂರ್‌ ಶಾಂತಕುಮಾರ್‌ 'ನಮ್ಮ ನಡೆ ಮತಗಟ್ಟೆಯ ಕಡೆ' ಜಾಗೃತಿ ಜಾಥಾಗೆ ಮನೋಜ್ ಕುಮಾರ್ ಮೀನಾ, ತುಷಾರ್ ಗಿರಿನಾಥ್ ಚಾಲನೆ ಕೊಡಗು: ಹುಲಿದಾಳಿಗೆ ಅಸ್ಸಾಂ ಮೂಲದ ಕಾರ್ಮಿಕ ಬಲಿ ತಾಳವಾಡಿ: ಜಮೀನಿಗೆ ನುಗ್ಗುತ್ತಿರುವ ಕಾಡಾನೆ ಹಿಮ್ಮೆಟ್ಟಿಸಿದ ರೈತರು ನಗರಸಭೆ ಉಪಾಧ್ಯಕ್ಷೆ ಪುತ್ರ ಸೇರಿ ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ : ಬೆಚ್ಚಿಬಿದ್ದ ಜನತೆ ಇಂದು ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನ: 102 ಕ್ಷೇತ್ರಗಳಲ್ಲಿ ಆರಂಭ