CrimeNEWSರಾಜಕೀಯ

ಮತ್ತೊಬ್ಬ ಬಿಎಂಟಿಸಿ ಚಾಲಕ ಆತ್ಮಹತ್ಯೆ: ಸಚಿವ ಶ್ರೀರಾಮುಲು ರಾಜೀನಾಮೆಗೆ ಎಎಪಿ ಆಗ್ರಹ – ಮನೆಗೆ ಮುತ್ತಿಗೆ ಹಾಕಿ ಪ್ರತಿಭಟಿಸುವ ಎಚ್ಚರಿಕೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಒಂದೇ ದಿನ ಮೂವರು ಸಾರಿಗೆ ನೌಕರರು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಾಸುವ ಮುನ್ನವೇ ಮತ್ತೊಬ್ಬ  ಬಿಎಂಟಿಸಿ 25ರ ಘಟಕದ ಚಾಲಕ  ಈಶಣ್ಣ ಗುರುವಾರ ಬೆಳಗ್ಗೆ  ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹೀಗಾಗಿ ನಿಗಮದ ಅಧಿಕಾರಿಗಳು ಮತ್ತು ಸಾರಿಗೆ ಸಚಿವರ ವಿರುದ್ಧ ಆಮ್‌ ಆದ್ಮಿ ಪಾರ್ಟಿಯ ಬೆಂಗಳೂರು ನಗರಾಧ್ಯಕ್ಷ ಮೋಹನ್‌ ದಾಸರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಿಎಂಟಿಸಿ ಚಾಲಕ ಈಶಣ್ಣ.

ಇನ್ನು ನೌಕರರ ಸಮಸ್ಯೆ ಆಲಿಸದ ಸಾರಿಗೆ ಸಚಿವ ಶ್ರೀರಾಮುಲು ರಾಜೀನಾಮೆ ನೀಡಬೇಕು, ಇಲ್ಲದಿದ್ದರೆ, ಅವರ ಮನೆಗೆ ನೂರಾರು ಕಾರ್ಯಕರ್ತರೊಂದಿಗೆ ಮುತ್ತಿಗೆ ಹಾಕುತ್ತೇವೆ ಎಂದು ಆಮ್‌ ಆದ್ಮಿ ಪಾರ್ಟಿಯ ರಾಜ್ಯ ಕಚೇರಿಯಲ್ಲಿ ಇಂದು ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮೋಹನ್‌ ದಾಸರಿ ಎಚ್ಚರಿಕೆ ನೀಡಿದರು.

ಕೆಲವು ದಿನಗಳ ಹಿಂದೆಯಷ್ಟೇ ಕೇವಲ 24 ಗಂಟೆಗಳ ಅಂತರಲ್ಲಿ ಮೂವರು ಸಾರಿಗೆ ನೌಕರರು ಆತ್ಮಹತ್ಯೆ ಮಾಡಿಕೊಂಡಿದ್ದರು. ಆ ವೇಳೆ ಆಮ್‌ ಆದ್ಮಿ ಪಾರ್ಟಿ ನಾಯಕರು ನೌಕರರ ಪರವಾಗಿ ದನಿ ಎತ್ತಿದ್ದರು. ಈ ಕಾರಣಕ್ಕೆ ಸುಮಾರು 18 ಎಎಪಿ ನಾಯಕರ ವಿರುದ್ಧ ಪೊಲೀಸರು ಎಫ್‌ಐಆರ್‌ ದಾಖಲಿಸಿಕೊಂಡಿದ್ದಾರೆ. ನೌಕರರ ಪರ ದನಿ ಎತ್ತುವರರನ್ನು ಹತ್ತಿಕ್ಕಲು ಸಚಿವ ಶ್ರೀರಾಮುಲು ಹಾಗೂ ಬಿಎಂಟಿಸಿ ಅಧ್ಯಕ್ಷ ನಂದೀಶ್‌ ರೆಡ್ಡಿಯವರು ಪೊಲೀಸ್‌ ಇಲಾಖೆಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಆದರೆ ಇದಕ್ಕೆಲ್ಲ ನಾವು ಹೆದರುವುದಿಲ್ಲ ಎಂಬುದನ್ನು ಅವರು ಅರ್ಥ ಮಾಡಿಕೊಳ್ಳಬೇಕು ಎಂದು ಹೇಳಿದರು.

ಸಾರಿಗೆ ನೌಕರರ ಸಮಸ್ಯೆಗಳನ್ನು ಬಗೆಹರಿಸುವುದರಲ್ಲಿ ಸಚಿವ ಶ್ರೀರಾಮುಲು ಸಂಪೂರ್ಣ ವಿಫಲರಾಗಿದ್ದಾರೆ. ಅವರಿಗೆ ಹಣ ಮಾಡುವುದು ಮುಖ್ಯವಾಗಿದೆಯೇ ಹೊರತು ಸಾರಿಗೆ ವ್ಯವಸ್ಥೆಯ ಅಭಿವೃದ್ಧಿ ಹಾಗೂ ನೌಕರರ ಹಿತ ಬೇಕಾಗಿಲ್ಲ ಎಂದು ಆರೋಪಿಸಿದರು.

ಇನ್ನು ಬಿಎಂಟಿಸಿ ಅಧ್ಯಕ್ಷ ನಂದೀಶ್‌ ರೆಡ್ಡಿಯವರು ಹಾಗೂ ಕೆಲವು ಉನ್ನತ ಅಧಿಕಾರಿಗಳಿಂದಾಗಿ ಇಲಾಖೆಯಲ್ಲಿ ಭ್ರಷ್ಟಾಚಾರ ಮಿತಿಮೀರಿದೆ. ಭ್ರಷ್ಟಾಚಾರಕ್ಕೆ ಸಹಕರಿಸದ ಪ್ರಾಮಾಣಿಕ ನೌಕರರು ನಿರಂತರವಾಗಿ ಕಿರುಕುಳ ಅನುಭವಿಸಬೇಕಾಗಿದೆ ಎಂದು ಕಿಡಿಕಾರಿದರು.

ನೌಕರರ ಬಗ್ಗೆ ಕಿಂಚಿತ್ತೂ ಕಾಳಜಿ ಇಲ್ಲದ ಶ್ರೀರಾಮುಲು ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವ ಮೂಲಕ ಸಾರಿಗೆ ಸಂಸ್ಥೆಯ ಘನತೆ ಉಳಿಸಬೇಕು. ಇಲ್ಲದಿದ್ದರೆ ಮಂಗಳವಾರ ಶ್ರೀರಾಮುಲು ನಿವಾಸದೆದುರು ಆಮ್‌ ಆದ್ಮಿ ಪಾರ್ಟಿ ವತಿಯಿಂದ ಬೃಹತ್‌ ಪ್ರತಿಭಟನೆ ನಡೆಸಿ ಮುತ್ತಿಗೆ ಹಾಕಲಾಗುವುದು ಎಂದು ಮೋಹನ್‌ ದಾಸರಿ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಆಮ್‌ ಆದ್ಮಿ ಪಾರ್ಟಿ ಮುಖಂಡರಾದ ಚನ್ನಪ್ಪಗೌಡ ನೆಲ್ಲೂರು ಹಾಗೂ ಸುರೇಶ್‌ ರಾಥೋಡ್‌ ಮತ್ತಿತರರು ಭಾಗವಹಿಸಿದ್ದರು.

Leave a Reply

error: Content is protected !!
LATEST
ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ...