₹600 ಕೋಟಿಗೂ ಅಧಿಕ ವೆಚ್ಚದ ಅನುಭವ ಮಂಟಪ ವರ್ಷದೊಳಗೆ ಪೂರ್ಣಗೊಳಿಸಿ ಲೋಕಾರ್ಪಣೆ: ಸಿಎಂ ಸಿದ್ದರಾಮಯ್ಯ

ಮೈಸೂರು: ನಮ್ಮ ಸರ್ಕಾರ ಆರಂಭಿಸಿದ ₹600 ಕೋಟಿಗೂ ಅಧಿಕ ವೆಚ್ಚದ ಅನುಭವ ಮಂಟಪವನ್ನು ಮುಂದಿನ ವರ್ಷ ಪೂರ್ಣಗೊಳಿಸಿ ಲೋಕಾರ್ಪಣೆಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಅವರು ಇಂದು ನಗರದ ಕಲಾಮಂದಿರದಲ್ಲಿ ಬಸವ ಬಳಗಗಳ ಒಕ್ಕೂಟ, ಅಖಿಲ ಭಾರತ ವೀರಶೈವ-ಲಿಂಗಾಯತ ಮಹಾಸಭಾ ಆಯೋಜಿಸಿದ್ದ “ಬಸವ ಜಯಂತಿ-2025” “ನಮ್ಮ ನಡೆ ಅನುಭವ ಮಂಟಪದ ಕಡೆ” ಕಾರ್ಯಕ್ರಮ ಉದ್ಘಾಟಿಸಿ ಮಾನಾಡಿದರು
ಸಕಲ ವೃತ್ತಿಗಳೂ ಪವಿತ್ರ ಎನ್ನುವ ಮಹಾನ್ ಮಾನವೀಯ ಸಂದೇಶವನ್ನು ಜಗತ್ತಿಗೆ ನೀಡಿದ ಬಸವಣ್ಣನವರು ಕ್ರಾಂತಿಪುರುಷ ಮಾತ್ರವಲ್ಲ, ವಿಶ್ವ ವಿಖ್ಯಾತ ಆರ್ಥಿಕ ತಜ್ಞರೂ ಆಗಿದ್ದರು. ಕಾಯಕ ಮತ್ತು ದಾಸೋಹದ ಶ್ರಮ ಸಂಸ್ಕೃತಿಯ ಮಹತ್ವವನ್ನು ಬಸವಣ್ಣ ಇಡೀ ವಿಶ್ವಕ್ಕೆ ನೀಡಿದರು ಎಂದರು.
ಬಸವಾದಿ ಶರಣರಿಂದ ಆದ ಜಾತಿ ವ್ಯವಸ್ಥೆ ವಿರುದ್ಧದ ಸಾಮಾಜಿಕ ಕ್ರಾಂತಿ ಪ್ರಪಂಚದ ಬೇರೆ ಎಲ್ಲೂ ನಡೆದಿಲ್ಲ. ಸಮ ಸಮಾಜ ಮತ್ತು ಜಾತ್ಯತೀತ ಸಮಾಜ ನಿರ್ಮಾಣಕ್ಕಾಗಿ ಹೋರಾಡಿದ ಬಸವಾದಿ ಶರಣರು ನುಡಿದಂತೆ ನಡೆದರು ಎಂದು ತಿಳಿಸಿದರು.
ಇನ್ನು ಜಾತಿ, ವರ್ಗ ರಹಿತ ಮಾನವೀಯ ಸಮಾಜ ಅವರ ತುಡಿತವಾಗಿತ್ತು. ಬಸವಾದಿ ಶರಣರ ಅನುಭಾವವೇ ವಚನಗಳಾಗಿವೆ. ವಚನ ಎಂದರೆ ಮಾತು. ಕನ್ನಡ ಸಾಹಿತ್ಯದಲ್ಲಿ ವಚನ ಮತ್ತು ದಾಸ ಸಾಹಿತ್ಯ ದೊಡ್ಡ ಮೈಲಿಗಲ್ಲು. ಅಕ್ಷರ ಸಂಸ್ಕೃತಿಯಿಂದ ವಂಚಿತರನ್ನಾಗಿ ಮಾಡಲಾಗಿದ್ದವರಿಗೆ ವಚನ ಸಾಹಿತ್ಯ ಆಡು ಮಾತಿನ ಮೂಲಕ ತಲುಪಿತು ಎಂದರು.
ಸಂಸ್ಕೃತ ಕಲಿಯುವ ಶೂದ್ರರ ಕಿವಿಗೆ ಕಾದ ಸೀಸ ಹುಯ್ಯುವ ಶಿಕ್ಷೆ ಇದ್ದುದ್ದರಿಂದ ಶೂದ್ರ ಸಮುದಾಯ ಶಿಕ್ಷಣದಿಂದ ವಂಚಿತರಾದರು. ನನ್ನ ಅಪ್ಪ, ಅಮ್ಮ ಇಬ್ಬರೂ ಶಿಕ್ಷಣದಿಂದ ವಂಚಿತರಾಗಿದ್ದರು. ರಾಜಪ್ಪ ಮೇಸ್ಟ್ರು ಕಾರಣದಿಂದ ನಾನು ನೇರವಾಗಿ ಐದನೇ ತರಗತಿಗೆ ದಾಖಲಾಗಿ ಶಿಕ್ಷಣ ಪಡೆದು ಎರಡು ಬಾರಿ ಮುಖ್ಯಮಂತ್ರಿಯಾದೆ. ಅಂಬೇಡ್ಕರ್ ಅವರ ಕಾರಣದಿಂದ ನನಗೆ ಶಿಕ್ಷಣ ಸಿಕ್ಕರೆ, ಸಂವಿಧಾನದ ಕಾರಣದಿಂದ ನಾನು ಮುಖ್ಯಮಂತ್ರಿಯಾದೆ ಎಂದು ಹೇಳಿದರು.
ಬಸವ ಬಳಗಗಳ ಒಕ್ಕೂಟದ ಬೇಡಿಕೆಯಂತೆ ಬಸವ ಭವನ ನಿರ್ಮಿಸಲು ಹೆಚ್ಚಿನ ಅನುದಾನವನ್ನು ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಭರವಸೆ ನೀಡಿದರು. ಸಮಾರಂಭದಲ್ಲಿ ಸುತ್ತೂರು ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಸಚಿವ ಎಚ್.ಸಿ.ಮಹದೇವಪ್ಪ ಸೇರಿದಂತೆ ಹಲವರು ಇದ್ದರು.
Related

You Might Also Like
ಆ.5ರಿಂದ ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ ಅಂಗವಾಗಿ ಒಂದು ದಿನದ ಸಾಮೂಹಿಕ ಉಪವಾಸ ಸತ್ಯಾಗ್ರಹ ಆರಂಭ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ನೌಕರರಿಗೆ ಬರಬೇಕಾಗದ 38 ತಿಂಗಳ ಹಿಂಬಾಕಿಯನ್ನು ಸರ್ಕಾರ ಕೂಡಲೇ ಬಿಡುಗಡೆ ಮಾಡಬೇಕು ಹಾಗೂ 2024ರ ಜನವರಿ 1ರಿಂದ...
EPS Pensioners Protest: ಅಧಿವೇಶನ ಮುಗಿಯುವುದರೊಳಗೆ ಬೇಡಿಕೆ ಈಡೇರದಿದ್ದರೆ ಉಗ್ರ ಹೋರಾಟ: ನಂಜುಂಡೇಗೌಡ ಎಚ್ಚರಿಕೆ
ಬೆಂಗಳೂರು: ಇದೇ ಜುಲೈ 21ರಿಂದ ಪಾರ್ಲಿಮೆಂಟ್ ಅಧಿವೇಶನ ಪ್ರಾರಂಭವಾಗಿದ್ದು, ಈ ಅಧಿವೇಶನ ಮುಗಿಯುವುದರೊಳಗೆ ನಮ್ಮ ಬೇಡಿಕೆಗಳನ್ನು ಈಡೇರಿಸದೆ ಹೊದಲ್ಲಿ ನಾವು ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಬಿಎಂಟಿಸಿ...
ಸಮಾನ ವೇತನಕ್ಕೆ ಆಗ್ರಹಿಸಿ ಅನಿರ್ದಿಷ್ಟಾವಧಿ ಉಪವಾಸ ಧರಣಿ ಸತ್ಯಾಗ್ರಹ ಮಾಡುತ್ತಿದ್ದ ಸಾರಿಗೆ ನೌಕರರ ಮುಖಂಡರ ಬಂಧನ
ಸಾರಿಗೆ ನೌಕರರ ಹೋರಾಟ ಹತ್ತಿಕ್ಕಿದ ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಕೊಟ್ಟ ಭರವಸೆ ಈಡೇರಿಸುವ ಬದಲಿಗೆ ದೌರ್ಜನ್ಯ ಎಸಗಿದ ಕಾಂಗ್ರೆಸ್ ಸರ್ಕಾರ ಬೆಂಗಳೂರು: ಸಮಾನ ವೇತನ,...
ರೈತರು ಮರ ಕಟಾವು ಮಾಡುವ ನಿಯಮ ಸರಳಗೊಳಿಸಿ: ಅತ್ತಹಳ್ಳಿ ದೇವರಾಜ್ ಒತ್ತಾಯ
ಮೈಸೂರು: ರೈತರು ತಮ್ಮ ಜಮೀನಿನಲ್ಲಿ ಇರುವ ಮರ ಕಟಾವು ಮಾಡಿ ಸಾಗಾಣಿಕೆ ಮಾಡಿಕೊಳ್ಳುವ ನಿಯಮ ಸರಳೀಕರಣ ಗೊಳಿಸಿಲು ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರು ಕ್ರಮ ಕೈಗೊಳ್ಳಬೇಕು...
ವಿಜಯಪುರ: ಕಲುಷಿತ ನೀರು ಕುಡಿದ 30ಕ್ಕೂ ಹೆಚ್ಚು ಮಂದಿ ಅಸ್ವಸ್ಥ: ಗ್ರಾಮದಲ್ಲೇ ಬೀಡುಬಿಟ್ಟ ವೈದ್ಯರ ತಂಡ
ವಿಜಯಪುರ: ಕಲುಷಿತ ನೀರು ಕುಡಿದ 30ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿರುವ ಘಟನೆ ಜಿಲ್ಲೆಯ ನಿಡಗುಂದಿ ತಾಲೂಕಿನ ಬ್ಯಾಲಿಹಾಳದಲ್ಲಿ ನಡೆದಿದೆ. ಗ್ರಾಮಕ್ಕೆ ಗ್ರಾಮ ಪಚಾಯಿತಿಯಿಂದ ಸರಬರಾಜು ಮಾಡಿರುವ ನೀರು...
KSRTC ನಾಲ್ಕೂ ನಿಗಮಗಳ ಸಾರಿಗೆ ನೌಕರರ ವೇತನ ಹೆಚ್ಚಳಕ್ಕೆ ಆಗ್ರಹಿಸಿ ಅನಿರ್ದಿಷ್ಟಾವಧಿ ಉಪವಾಸ-ಧರಣಿ ಸತ್ಯಾಗ್ರಹ ಆರಂಭ
ಬೆಂಗಳೂರು: ಸಾರಿಗೆ ನೌಕರರಿಗೆ ಸರಿ ಸಮಾನ ವೇತನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಸಂಘಟನೆಗಳ ಒಕ್ಕೂಟ ಇಂದಿನಿಂದ (ಜು.29)...
ಅಂಗವಿಕಲರ ಬಸ್ಪಾಸ್ ಸೇರಿ ಎಲ್ಲ ಸರ್ಕಾರಿ ಸೌಲಭ್ಯಗಳಿಂದ ವಂಚಿತ ಅಂಗವಿಕಲ ಭೀಮಪ್ಪನಿಗೆ ಬೇಕಿದೆ ಸರ್ಕಾರದ ಆಸರೆ !
ತುಮಕೂರು: ಜಿಲ್ಲೆ ಹೊಸಹಳ್ಳಿ ಗ್ರಾಮ, ರೆಡ್ಡಿಹಳ್ಳಿ ಗ್ರಾಮಪಂಚಾಯಿತಿ ಮಿಡಿಗೆಸಿ, ಮಧುಗಿರಿ ತಾಲೂಕಿನ ಅಂಗವಿಕಲ ಭೀಮಪ್ಪನಿಗೆ ಸರ್ಕಾರಿ ಸೌಲಭ್ಯ ಸಿಗಬೇಕಿದೆ. ಪೋಲಿಯೋಗೆ ಒಳಗಾಗಿರುವ ಭೀಮಪ್ಪನಿಗೆ ಬೆರಳಿನ ಗುರುತು ಸಹ...
ನೀರಿನ ಒಳಹರಿವು ಹೆಚ್ಚಾದ ಹಿನ್ನೆಲೆ ತಲಕಾಡು ನಿಸರ್ಗ ಧಾಮಕ್ಕೆ ಬರುವ ಪ್ರವಾಸಿಗರಿಗೆ ನಿರ್ಬಂಧ
ಮೈಸೂರು: ನೀರಿನ ಒಳಹರಿವು ಹೆಚ್ಚಾದ ಹಿನ್ನೆಲೆಯಲ್ಲಿ, ಜಿಲ್ಲೆಯ ತಿ.ನರಸೀಪುರ ತಾಲೂಕಿನ ತಲಕಾಡು ನಿಸರ್ಗ ಧಾಮಕ್ಕೆ ಬರುವ ಪ್ರವಾಸಿಗರಿಗೆ ನಿರ್ಬಂಧ ವಿಧಿಸಿ ತಾಲೂಕು ಆಡಳಿತ ಆದೇಶ ಹೊರಡಿಸಿದೆ. ಕೆಅರ್ಎಸ್,...
KSRTC: ನಾಳೆಯಿಂದ ಸಾರಿಗೆ ನೌಕರರ ಉಪವಾಸ-ಧರಣಿ ಸತ್ಯಾಗ್ರಹ: ಚಂದ್ರಶೇಖರ್
ಬೆಂಗಳೂರು: ಸಾರಿಗೆ ನೌಕರರಿಗೆ ಸರಿ ಸಮಾನ ವೇತನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಸಂಘಟನೆಗಳ ಒಕ್ಕೂಟ ನಾಳೆಯಿಂದ (ಜು.29)...