
ಬೆಂಗಳೂರು ಗ್ರಾಮಾಂತರ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಕಾರ್ಯ ನಿರ್ವಹಿಸುತ್ತಿರು ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ದೇವನಾಯಕನಹಳ್ಳಿ ದೇವನಹಳ್ಳಿ ತಾಲೂಕು ಹಾಗೂ ಡಾ.ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆ ಗಿಡ್ಡಪ್ಪನಹಳ್ಳಿ ಹೊಸಕೋಟೆ ತಾಲೂಕು ವಸತಿ ಶಾಲೆಗಳಲ್ಲಿ 6ನೇ ತರಗತಿ ಪ್ರವೇಶಕ್ಕೆ ಆನ್ ಲೈನ್ (Online) ಮೂಲಕ ಅರ್ಜಿ ಸಲ್ಲಿಸಲು ಮಾರ್ಚ್ 10 ಕೊನೆಯ ದಿನಾಂಕ ನಿಗದಿಪಡಿಸಲಾಗಿತ್ತು, ಪ್ರಸ್ತುತ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮಾರ್ಚ್ 25ಕ್ಕೆ ವಿಸ್ತರಿಸಲಾಗಿದೆ.
ಅರ್ಜಿ ಸಲ್ಲಿಸುವವರು ಮಾರ್ಚ್ 25 ರೊಳಗೆ https://sevasindhuservices.karnataka.gov.in ವೆಬ್ಸೈಟ್ ಮುಖಾಂತರ ಅರ್ಜಿ ಸಲ್ಲಿಸಬಹುದಾಗಿದೆ.
ವಸತಿ ಶಾಲೆಗಳಲ್ಲಿ ಶೇ.75ರಷ್ಟು ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ಹಾಗೂ ಶೇ 25ರಷ್ಟು ಹಿಂದುಳಿದ ವರ್ಗ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಪ್ರವೇಶ ಪರೀಕ್ಷೆಯಲ್ಲಿ ಪಡೆದ ಅಂಕಗಳಿಗೆ ಅನುಗುಣವಾಗಿ ಹಾಗೂ ರೋಸ್ಟರ್ ನಿಯಮದಂತೆ ಪ್ರವೇಶ ನೀಡಲಾಗುವುದು.
ಹೆಚ್ಚಿನ ವಿವರಗಳಿಗಾಗಿ ಆಯಾ ವಸತಿ ಶಾಲೆಯ ಪ್ರಾಂಶುಪಾಲರನ್ನು ಸಂಪರ್ಕಿಸುವುದು. ಪ್ರಾಂಶುಪಾಲರು, ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ (ರಾಜ್ಯ ಪಠ್ಯಕ್ರಮ), ದೇವನಾಯಕನಹಳ್ಳಿ, ದೂ.ಸಂ- 7338227541, 9632249214.
ಪ್ರಾಂಶುಪಾಲರು, ಡಾ.ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆ (ಸಿ.ಬಿ.ಎಸ್.ಸಿ) ಗಿಡ್ಡಪ್ಪನಹಳ್ಳಿ, ಹೊಸಕೋಟೆ ತಾಲೂಕು, ದೂ.ಸಂ- 8660971267, 9740729196.
ತಾಲ್ಲೂಕು ಅಲ್ಪಸಂಖ್ಯಾತರ ವಿಸ್ತರಣಾಧಿಕಾರಿಗಳ ಕಛೇರಿ ಹೊಸಕೋಟೆ ಮತ್ತು ತಾಲ್ಲೂಕು ಮಾಹಿತಿ ಕೇಂದ್ರ ದೂ.ಸಂ- 080-27682882, 080- 27931899, 9845622337. 7676905779, 9986874875, 8660197516.
ಜಿಲ್ಲಾ ಅಧಿಕಾರಿಗಳ ಕಚೇರಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಬೆಂಗಳೂರು (ಗ್ರಾ) ಜಿಲ್ಲೆ. ನಂ.216, 2ನೇ ಮಹಡಿ, ಬೀರಸಂದ್ರ ಗ್ರಾಮ, ಕುಂದಾಣ ಹೋಬಳಿ, ದೇವನಹಳ್ಳಿ-562110. ದೂ.ಸಂ- 080-29787455. ಸಂಪರ್ಕಿಸಬಹುದಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿಗಳು ತಿಳಿಸಿದ್ದಾರೆ.