NEWSಉದ್ಯೋಗನಮ್ಮಜಿಲ್ಲೆನಮ್ಮರಾಜ್ಯ

ಸ್ವಯಂ ಉದ್ಯೋಗ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು ಗ್ರಾಮಾಂತರ: 2023-24ನೇ ಸಾಲಿನ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ ಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರೀಶ್ಚಿಯಾನ್, ಜೈನ್, ಬೌದ್ದ, ಸಿಖ್ಖರು, ಪಾರ್ಸಿಗಳು ಹಾಗೂ ಆಂಗ್ಲೋ ಇಂಡಿಯನ್ ಅಲ್ಪಸಂಖ್ಯಾತರಿಗೆ ಸ್ವಯಂ ಉದ್ಯೋಗ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.

ಯೋಜನೆಯ ಸದುಪಯೋಗ ಪಡೆದುಕೊಳ್ಳಲು, ಅರ್ಜಿಗಳನ್ನು ಆನ್‌ಲೈನ್ ವೆಬ್‌ಸೈಟ್ (https://kmdconline.karnataka.gov.in) ಮುಖಾಂತರ ಫೆಬ್ರವರಿ 29 ರೊಳಗೆ ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

2024-25ನೇ ಸಾಲಿನ ನಿಗಮದ ಯೋಜನೆಯಾದ ಸ್ವಯಂ ಉದ್ಯೋಗ ಯೋಜನೆಯಡಿಯಲ್ಲಿ ಅಲ್ಪಸಂಖ್ಯಾತರ ಸಮುದಾಯದ ಜನರಿಗೆ ವ್ಯಾಪಾರ, ಸಣ್ಣ ಪ್ರಮಾಣದ ಗುಡಿ ಕೈಗಾರಿಕೆ ಸೇವಾ ಕ್ಷೇತ್ರ, ಕೃಷಿ ಆಧಾರಿತ ಚಟುವಟಿಕೆಗಳು ಮುಂತಾದವುಗಳನ್ನು ಪ್ರಾರಂಭಿಸಲು ಸಾಲ ಮತ್ತು ಸಹಾಯಧನ ಒದಗಿಸಲಾಗುವುದು.

ಆರ್ಥಿಕ ಚಟುವಟಿಕೆಗಾಗಿ ರಾಷ್ಟ್ರಿಕೃತ ಬ್ಯಾಂಕ್/ ಹಣಕಾಸು ಸಂಸ್ಥೆಗಳಿಂದ ಪಡೆಯುವ ಸಾಲಕ್ಕಾಗಿ ನಿಗಮದಿಂದ ಘಟಕ ವೆಚ್ಚದ ಶೇ 33% ಆಥಾವ ಗರಿಷ್ಠ ಮಿತಿ ರೂ.1.00 ಲಕ್ಷದ ಸಹಾಯಧನ ನೀಡಲಾಗುವುದು. ಅರ್ಜಿದಾರರು ಧಾರ್ಮಿಕ ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿದವರಾಗಿರಬೇಕು.

ಅರ್ಜಿದಾರರು ಕರ್ನಾಟಕ ಕಾಯಂ ನಿವಾಸಿಯಾಗಿರಬೇಕು. ಆರ್ಜಿದಾರರ ವಯಸ್ಸು 18 ರಿಂದ 55 ವರ್ಷಗಳ ನಡುವೆ ಇರಬೇಕು. ಎಲ್ಲ ಮೂಲಗಳಿಂದ ಕುಟುಂಬದ ವಾರ್ಷಿಕ ಆದಾಯ ಗ್ರಾಮೀಣ ಪ್ರದೇಶದಲ್ಲಿ 81000 ರೂ.ಗಳು ಹಾಗೂ ನಗರ ಪ್ರದೇಶದಲ್ಲಿ 1,03,000 ರೂ.ಗಳಿಗಿಂತ ಕಡಿಮೆ ಇರಬೇಕು.

ಅರ್ಜಿದಾರರ ಕುಟುಂಬದ ಯಾವುದೇ ಸದಸ್ಯರು ಕೇಂದ್ರ / ರಾಜ್ಯ ಸರ್ಕಾರಿ /PSU ಉದ್ಯೋಗಿಯಾಗಿರಬಾರದು. ಆರ್ಜಿದಾರರು ಕೆಎಂಡಿಸಿಯಲ್ಲಿ ಸುಸ್ತಿದಾರರಾಗಿರಬಾರದು. ಅರ್ಜಿ ಸಲ್ಲಿಸಬೇಕಾದ ವೆಬ್ ವಿಳಾಸ (https://kmdconline.karnataka.gov.in) ಅರ್ಜಿ ಸಲ್ಲಿಸಬೇಕಾದ ಕಚೇರಿ ವಿಳಾಸ ಜಿಲ್ಲಾ ವ್ಯವಸ್ಥಾಪಕರು, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ(ನಿ), ನಂ.1599, ವೈ.ಎನ್.ಬಿಲ್ಡಂಗ್ ಹೊಸ ಬಸ್ ಸ್ಟಾಂಡ್ ಹಿಂಭಾಗ, ಯಲಹಂಕ ಬೀದಿ, ದೇವನಹಳ್ಳಿ – 562110.

ಬೆಂಗಳೂರು ಗ್ರಾಮಾಂತರಜಿಲ್ಲೆ. ದೂರವಾಣಿ ಸಂಖ್ಯೆ 080-27681786 ಸಹಾಯವಾಣಿ ಸಂಖ್ಯೆ 8277799990 ಅನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ(ನಿ) ದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.

Leave a Reply

error: Content is protected !!
LATEST
ಅಪಾರ್ಟ್‌ಮೆಂಟ್‌ನಲ್ಲಿ ಸ್ಯಾಂಡಲ್‌ವುಡ್‌ ನಟ, ನಿರ್ದೇಶಕ ಗುರುಪ್ರಸಾದ್‌ ಆತ್ಮಹತ್ಯೆ ಹಾಸನಾಂಬೆ ದರ್ಶನ ಅಂತ್ಯ-ಹರಿದು ಬಂತ್ತು ₹9 ಕೋಟಿಗೂ ಅಧಿಕ ಆದಾಯ ನ.3ರಂದುಇಪಿಎಸ್ ಪಿಂಚಿಣಿದಾರರ ಮಾಸಿಕ ಸಭೆ: ನಿವೃತ್ತ ನೌಕರರ ಸಂಘದ ಕಾರ್ಯಧ್ಯಕ್ಷ ನಂಜುಂಡೇಗೌಡ KSRTCಯ ಸಮಸ್ತ ನೌಕರರ ಸಮಸ್ಯೆ, ಅಸಮಾಧಾನದ ನಡುವೆಯೂ ಕನ್ನಡ ರಾಜ್ಯೋತ್ಸವ ಆಚರಣೆ ತುಂಬಾ ವಿಜೃಂಭಣೆ ಕನ್ನಡ- ಕನ್ನಡಿಗರ ನಿಂದಿಸಿದರೆ ಕಠಿಣ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ಅನ್ಯ ಭಾಷಿಕರಿಗೆ ಅಭಿಮಾನದಿಂದ ಕನ್ನಡ ಕಲಿಸಿ: ಪುರಸಭೆ ಅಧ್ಯಕ್ಷೆ ಪಂಕಜಾ ಕನ್ನಡ ಭಾಷೆ ಅತ್ಯಂತ ಶ್ರೀಮಂತ ಭಾಷೆ: ಶ್ರೀಗಂಗಾಧರ ಶಿವಾಚಾರ್ಯ ಸ್ವಾಮೀಜಿ KSRTC: ದೀಪಾವಳಿ ಹಬ್ಬದಲ್ಲೂ ಕರ್ತವ್ಯ ನಿರತ ನಾಡಿನ ಸೈನಿಕರಾದ ಸಾರಿಗೆ ನೌಕರರಿಗೆ ಸಲಾಮ್‌! ಬೆಲೆ ಏರಿಕೆ ಬಿಸಿ ನಡುವೆಯೂ ಹಣತೆ, ಹೂವು, ಪಟಾಕಿ, ಹಣ್ಣುಗಳ ವ್ಯಾಪಾರ ವಹಿವಾಟು ಜೋರು ಚನ್ನಪಟ್ಟಣದಲ್ಲಿ ಬಿಜೆಪಿ ಜೆಡಿಎಸ್ ಕಾರ್ಯಕರ್ತರ ಬೃಹತ್ ಸಮಾವೇಶ: ನಿಖಿಲ್ ಗೆಲುವಿಗೆ ಒಗ್ಗಟ್ಟು ಪ್ರದರ್ಶನ