NEWSಉದ್ಯೋಗನಮ್ಮಜಿಲ್ಲೆ

ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆಯ ಸೌಲಭ್ಯ ಪಡೆಯಲು ಕುಶಲಕರ್ಮಿಗಳಿಂದ ಅರ್ಜಿ ಆಹ್ವಾನ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು ಗ್ರಾಮಾಂತರ: ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆಯಡಿ 18 ವೃತ್ತಿಯ ಕುಶಲಕರ್ಮಿಗಳು ಯೋಜನೆಯ ಸೌಲಭ್ಯ ಪಡೆಯ ಬಹುದಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಎನ್. ಶಿವಶಂಕರ್ ತಿಳಿಸಿದ್ದಾರೆ.

ವೃತ್ತಿ ಅಭಿವೃದ್ಧಿಗೊಳಿಸಿ ಕೊಳ್ಳುವಿಕೆ, ವೃತ್ತಿ ಉನ್ನತೀಕರಣಗೊಳಿಸಲು ಅಗತ್ಯ ತರಬೇತಿ, ಉಪಕರಣ ಕಿಟ್ ಮತ್ತು ಬಡ್ಡಿ ರಿಯಾಯಿತಿ ದರದಲ್ಲಿ ಆರ್ಥಿಕ ನೆರವು, ಮತ್ತು ಮಾರುಕಟ್ಟೆ ಸೌಲಭ್ಯ ಒದಗಿಸುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ. ಈ ನಿಟ್ಟಿನಲ್ಲಿ 18 ವೃತ್ತಿಯ ಕುಶಲಕರ್ಮಿಗಳು ಈ ಯೋಜನೆಯಡಿ ಸೌಲಭ್ಯ ಪಡೆಯಬಹುದಾಗಿದೆ ಎಂದಿದ್ದಾರೆ.

ಬಡಗಿ, ಕಮ್ಮಾರಿಕೆ, ಚಮ್ಮಾರಿಕೆ, ಅಕ್ಕಸಾಲಿಗ, ದೋಬಿ, ಕುಂಬಾರಿಕೆ, ಟೈಲರ್, ಕೌರಿಕ, ಶಿಲ್ಪಿ, ಪೊರಕೆ ತಯಾರಿಕೆ/ ತೆಂಗಿನ ನಾರಿನ ಉತ್ಪನ್ನ ನೇಯ್ಗೆ ಬುಟ್ಟಿ ತಯಾರಿಕೆ, ಗೊಂಬೆ ತಯಾರಿಕೆ, ಮೀನು ಬಲೆ ಮಾಡುವವರು, ಹೂವಿನ ಹಾರ ತಯಾರಿಕೆ, ಬೀಗ ತಯಾರಕರು, ರಕ್ಷಾ ಕವಚ ತಯಾರಕರು, ಹ್ಯಾಮರ್ ಮತ್ತು ಟೂಲ್ ಕಿಟ್ ತಯಾರಿಕೆ, ದೋಣಿ ತಯಾರಿಕೆಯಲ್ಲಿ ತೊಡಗಿರುವ ಕುಶಲಕರ್ಮಿಗಳು ಅರ್ಜಿ ಸಲ್ಲಿಸಬಹುದು.

ನಿಗದಿಪಡಿಸಿದ 18 ವೃತ್ತಿಗಳಲ್ಲಿ ಒಂದು ವೃತ್ತಿಯಲ್ಲಿ ತೊಡಗಿದಂತ ಕಾರ್ಮಿಕರು, 18 ವರ್ಷ ಪೂರೈಸಿರಬೇಕು, ಕಳೆದ 5 ವರ್ಷಗಳಲ್ಲಿ ಈ ವೃತ್ತಿಯಲ್ಲಿ ಸ್ವಯಂ ಉದ್ಯೋಗ ಕೈಗೊಳ್ಳಲು ರಾಜ್ಯ / ಕೇಂದ್ರ ಪುರಸ್ಕೃತ ಯಾವುದೇ ಯೋಜನೆಗಳಲ್ಲಿ ಸಾಲ ಸೌಲಭ್ಯ ಪಡೆದಿರಬಾರದು, ಆದರೆ ಮುದ್ರಾ ಮತ್ತು PM SWANIDI ಯೋಜನೆಗಳ ಫಲಾನುಭವಿಗಳು ಅರ್ಜಿ ಸಲ್ಲಿಸಬಹುದು. ಸರ್ಕಾರಿ ಸೇವೆಯಲ್ಲಿರುವವರು ಮತ್ತು ಅವರ ಕುಟುಂಬದ ಸದಸ್ಯರು ಈ ಯೋಜನೆಯಡಿ ಸೌಲಭ್ಯ ಪಡೆಯಲು ಅರ್ಹವಿರುವುದಿಲ್ಲ.

ಈ ಯೋಜನೆಯಡಿ ಸೌಲಭ್ಯ ಪಡೆಯಲಿಚ್ಛಿಸುವ ಆಸಕ್ತ ಅಭ್ಯರ್ಥಿಗಳು ಹತ್ತಿರದ ಸಾಮಾನ್ಯ ಸೇವಾ ಕೇಂದ್ರ (Common Service Centre) ಗಳಲ್ಲಿ, ಆಧಾರ್ ಕಾರ್ಡ್, ರೇಷನ್ ಕಾರ್ಡ್ ಮತ್ತು ಬ್ಯಾಂಕ್ ಖಾತೆ ಪುಸ್ತಕದೊಂದಿಗೆ, ಖುದ್ದಾಗಿ ಅರ್ಜಿದಾರರೇ ಭೇಟಿ ನೀಡಿ ನೊಂದಾಯಿಸಿಕೊಳ್ಳಲು ಈ ಮೂಲಕ ಕೋರಿದೆ.

ವಿವರಗಳಿಗಾಗಿ ಆಯಾ ತಾಲೂಕಿನ ಕೈಗಾರಿಕಾ ವಿಸ್ತರಣಾಧಿಕಾರಿಗಳನ್ನು ಸಂಪರ್ಕಿಸಿ ಹಾಗೂ ಹೆಚ್ಚಿನ ಮಾಹಿತಿಗಾಗಿ ದೊಡ್ಡಬಳ್ಳಾಪುರ, ದೇವನಹಳ್ಳಿ- 9448844948 ಹೊಸಕೋಟೆ-9743217605 ನೆಲಮಂಗಲ-9902740998 ದೂರವಾಣಿ ಸಂಖ್ಯೆಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ತಿಳಿಸಿದ್ದಾರೆ.

Leave a Reply

error: Content is protected !!
LATEST
NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು