Vijayapatha – ವಿಜಯಪಥ
Friday, November 1, 2024
NEWSಉದ್ಯೋಗನಮ್ಮಜಿಲ್ಲೆ

KSRTC ಶಿಶುಕ್ಷು ತರಬೇತಿಗೆ ಎಸ್ಸೆಸ್ಸೆಲ್ಸಿ, ಐಟಿಐ ಉತ್ತೀರ್ಣರಾದವರಿಂದ ಅರ್ಜಿ

ತರಬೇತಿಗೆ ಆಯ್ಕೆಯಾದವರಿಗೆ ಮಾಸಿಕ 8 ಸಾವಿರ ಶಿಷ್ಯವೇತನ  l ಅರ್ಜಿ ಸಲ್ಲಿಕೆಗೆ ಸೆಪ್ಟೆಂಬರ್ 30 ಕೊನೆಯ ದಿನಾಂಕ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಚಿಕ್ಕಬಳ್ಳಾಪುರ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಚಿಕ್ಕಬಳ್ಳಾಪುರ ವಿಭಾಗದ ವತಿಯಿಂದ ಎಸ್‌ಎಸ್‌ಎಲ್‌ಸಿ ಮತ್ತು ಐಟಿಐ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಮೆಕ್ಯಾನಿಕಲ್ ಡೀಸೆಲ್, ಫಿಟ್ಟರ್, ವೆಲ್ಡರ್, ಎಲೆಕ್ಟ್ರೀಷಿಯನ್ ತಾಂತ್ರಿಕ ವೃತ್ತಿ ವಿಭಾಗಗಳಲ್ಲಿ ಶಿಷ್ಯವೇತನದೊಂದಿಗೆ ಪೂರ್ಣ ಅವಧಿಯ ಉಚಿತ ಶಿಶುಕ್ಷು ತರಬೇತಿ ನೀಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.  18ರಿಂದ 40 ವರ್ಷದೊಳಗಿನವರು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಸೆಪ್ಟೆಂಬರ್ 30 ಆಗಿದೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಐಟಿಐ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಒಂದು ವರ್ಷದ ತರಬೇತಿ ಮತ್ತು ಎಸ್‌ಎಸ್‌ಎಲ್‌ಸಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ತರಬೇತಿಯ ಅವಧಿ ಎರಡು ವರ್ಷಗಳಾಗಿರುತ್ತದೆ. ಮೆಕ್ಯಾನಿಕಲ್ ಡೀಸೆಲ್, ಫಿಟ್ಟರ್, ವೆಲ್ಡರ್, ಎಲೆಕ್ಟಿçಷಿಯನ್ ತಾಂತ್ರಿಕ ವೃತ್ತಿ ವಿಭಾಗಗಳಲ್ಲಿ ಒಟ್ಟು 90 ವಿದ್ಯಾರ್ಥಿಗಳಿಗೆ ಶಿಶುಕ್ಷು ತರಬೇತಿ ನೀಡಲು ಅವಕಾಶವಿದೆ. ನಿಗದಿತ ತರಬೇತಿ ಅವಧಿ ಯಶಸ್ವಿಯಾಗಿ ಪೂರೈಸಿದವರಿಗೆ ನಿಗಮದಿಂದಲೇ ಪ್ರಮಾಣ ನೀಡಲಾಗುತ್ತದೆ.

ತರಬೇತಿಗೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಮೊದಲನೆಯ ವರ್ಷ ಪ್ರತಿ ತಿಂಗಳು 8 ಸಾವಿರ ರೂಪಾಯಿ ಹಾಗೂ ಎರಡನೆಯ ವರ್ಷ 9 ಸಾವಿರ ರೂಪಾಯಿ ಶಿಷ್ಯವೇತನವನ್ನು ನೀಡಲಾಗುತ್ತದೆ. ತರಬೇತಿಗೆ ಆಯ್ಕೆಯಾದ ವಿದ್ಯಾರ್ಥಿಗಳನ್ನು ನಿಗಮದ ವಿಭಾಗೀಯ ಕಾರ್ಯಾಗಾರ ಅಥವಾ ವಿಭಾಗೀಯ ಕಚೇರಿ ವ್ಯಾಪ್ತಿಯ ಘಟಕಗಳಲ್ಲಿ ತರಬೇತಿಗೆ ನಿಯೋಜಿಸಲಾಗುವುದು.

ಈ ತಾಂತ್ರಿಕ ವಿಭಾಗಗಳಲ್ಲಿ ತರಬೇತಿಯನ್ನು ಪೂರೈಸಿ ಪ್ರಮಾಣ ಪತ್ರ ಹೊಂದಿದಲ್ಲಿ ವಿವಿಧ ಖಾಸಗಿ ಮತ್ತು ಸರ್ಕಾರಿ ವಲಯದ ಕೈಗಾರಿಕೆಗಳ ತಾಂತ್ರಿಕ ವಿಭಾಗಗಳಲ್ಲಿ ಹೆಚ್ಚಿನ ಉದ್ಯೋಗಾವಕಾಶಗಳಿರುತ್ತವೆ. ಎಸ್‌ಎಸ್‌ಎಲ್‌ಸಿ ಮತ್ತು ಐಟಿಐ ವಿದ್ಯಾರ್ಹತೆ ಪಡೆದು ಸೂಕ್ತ ಉದ್ಯೋಗಕ್ಕಾಗಿ ಎದುರು ನೋಡುತ್ತಿರುವ ವಿದ್ಯಾರ್ಥಿ, ಯುವಜನರಿಗೆ ಈಶಿಶುಕ್ಷು (ಅಪ್ರೆಂಟಿಸ್) ತರಬೇತಿ ಸುವರ್ಣಾವಕಾಶವನ್ನು ಒದಗಿಸಿಕೊಡಲಿದೆ.

ಈ ತರಬೇತಿಗೆ ಅರ್ಜಿ ಸಲ್ಲಿಸಲು ಈ ಹಿಂದೆ ಸೆಪ್ಟೆಂಬರ್ 26 ಕೊನೆಯ ದಿನಾಂಕ ಎಂದು ನಿಗದಿಪಡಿಸಲಾಗಿತ್ತು. ಈಗ ಸೆಪ್ಟೆಂಬರ್ 30 ರವರೆಗೆ ವಿಸ್ತರಿಸಿದ್ದು, ಆಸಕ್ತರು ಇದರ ಪ್ರಯೋಜನ ಪಡೆಯಬಹುದಾಗಿದೆ. ಆಸಕ್ತ ವಿದ್ಯಾರ್ಥಿಗಳು ಈ ಶಿಶುಕ್ಷು ತರಬೇತಿಯ ಪ್ರಯೋಜನ ಪಡೆದು ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳಬೇಕೆಂದು ನಿಗಮದ ಚಿಕ್ಕಬಳ್ಳಾಪುರ ವಿಭಾಗೀಯ ನಿಯಂತ್ರಾಣಧಿಕಾರಿ ಹಿಮವರ್ಧನ ನಾಯ್ಡು ಅಲ್ಲೂರಿ ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗೆ ಮೊ: ನಂ.7760990353 ಮತ್ತು 8553825063ನ್ನು ಸಂಪರ್ಕಿಸ ಬಹುದು. https://www.apprenticeshipindia.gov.in/

Leave a Reply

error: Content is protected !!
LATEST
KSRTC: ದೀಪಾವಳಿ ಹಬ್ಬದಲ್ಲೂ ಕರ್ತವ್ಯ ನಿರತ ನಾಡಿನ ಸೈನಿಕರಾದ ಸಾರಿಗೆ ನೌಕರರಿಗೆ ಸಲಾಮ್‌! ಬೆಲೆ ಏರಿಕೆ ಬಿಸಿ ನಡುವೆಯೂ ಹಣತೆ, ಹೂವು, ಪಟಾಕಿ, ಹಣ್ಣುಗಳ ವ್ಯಾಪಾರ ವಹಿವಾಟು ಜೋರು ಚನ್ನಪಟ್ಟಣದಲ್ಲಿ ಬಿಜೆಪಿ ಜೆಡಿಎಸ್ ಕಾರ್ಯಕರ್ತರ ಬೃಹತ್ ಸಮಾವೇಶ: ನಿಖಿಲ್ ಗೆಲುವಿಗೆ ಒಗ್ಗಟ್ಟು ಪ್ರದರ್ಶನ ತೂಬಗೆರೆ ಗ್ರಾಮ ಪಂಚಾಯಿತಿಗೆ ಅವಿರೋಧವಾಗಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ - ಸರ್ಕಾರ, ಅಧಿಕಾರಿಗಳ ವಿರುದ್ಧ ಆಕ್ರೋಶ ವರ್ಷ ಮೂರು ಮರೆಯದ ನೆನಪು ನೂರಾರು: ಸಹೋದರ ಪುನೀತ್‌ ಸ್ಮರಿಸಿದ ರಾಘಣ್ಣ ಕೌಟುಂಬಿಕ ಕಲಹ: ರೈಲಿಗೆ ತಲೆಕೊಟ್ಟು ಜೀವನ ಕೊನೆಗಾಣಿಸಿಕೊಂಡ ಮಹಿಳೆ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಸಾವಿರಕ್ಕೂ ಹೆಚ್ಚು ಹುದ್ದೆಗಳು ಖಾಲಿ: ಈಗಲೇ ಅರ್ಜಿ ಹಾಕಿ ಬಿಬಿಎಂಪಿ: ಅನಧಿಕೃತ ಹೆಚ್ಚುವರಿ ಮಹಡಿಗಳು, ಪಾದಚಾರಿ ಮಾರ್ಗ ಒತ್ತುವರಿ ತೆರವು KSRTC ಸಮಸ್ತ 4ನಿಗಮಗಳ ಅಧಿಕಾರಿಗಳು ನೌಕರರು ಒಗ್ಗಟ್ಟಾಗಿ: ಇಟ್ಟಿರುವ ಬೇಡಿಕೆಗಳ ಈಡೇರಿಸಿಕೊಳ್ಳುವತ್ತ ಚಿಂತಿಸಿದರೆ ಅಸಾ...