NEWSನಮ್ಮರಾಜ್ಯ

ವಿಕಲಚೇತನರ ಆರೈಕೆಗಾಗಿ ₹1000 ಪ್ರೋತ್ಸಾಹ ಧನ ಪಡೆಯಲು ಅರ್ಜಿ ಆಹ್ವಾನ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು ಗ್ರಾಮಾಂತರ : ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ 2024-25ನೇ ಸಾಲಿನಲ್ಲಿ ಸೆರೆಬ್ರಲ್ ಪಾಲ್ಸಿ, ಮಸ್ಕುಲರ್ ಡಿಸ್ಕೋಪಿ, ಪಾರ್ಕಿನ್ಸ್‌ನ್ಸ್ ಮತ್ತು ಮಲ್ಟಿಪಲ್ ಸ್ಕ್ಲೆರೊಸಿಸ್ ವಿಕಲಚೇತನ ವ್ಯಕ್ತಿಗಳ ಆರೈಕೆದಾರರು ಪ್ರತಿ ಮಾಹೆ(ತಿಂಗಳು) 1000 ರೂಪಾಯಿಗಳ ಪ್ರೋತ್ಸಾಹಧನ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿನ ಸೆರೆಬ್ರಲ್ ಪಾಲ್ಸಿ, ಮಸ್ಕುಲರ್ ಡಿಸ್ಕೋಪಿ, ಪಾರ್ಕಿನ್ಸ್‌ನ್ಸ್ ಮತ್ತು ಮಲ್ಟಿಪಲ್ ಸ್ಕ್ಲೆರೊಸಿಸ್ ವಿಕಲಚೇತನರು ಅವರ ಆರೈಕೆದಾರರು ಅಗತ್ಯ ದಾಖಲಾತಿಗಳೊಂದಿಗೆ, ವಿಆರ್‌ಡಬ್ಲ್ಯೂ/ಯುಆರ್‌ಡಬ್ಲ್ಯೂ/ಎಂಆರ್ಡಬ್ಲ್ಯೂ/ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿಗೆ ಅಕ್ಟೋಬರ್ 30 ರೊಳಗೆ ಅರ್ಜಿ ಸಲ್ಲಿಸಿ ಈ ಸೌಲಭ್ಯವನ್ನು ಪಡೆಯಬಹುದಾಗಿದೆ.

ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು: ವಿಕಲಚೇತನರ ವಿಶಿಷ್ಟ ಗುರುತಿನ (ಯುಡಿಐಡಿ), ವಿಕಲಚೇತನರ ಆಧಾರ್ ಕಾರ್ಡ್, ಜಂಟಿ ಭಾವಚಿತ್ರ (ವಿಕಲಚೇತನರ ಮತ್ತು ಆರೈಕೆದಾರರ), ಆರೈಕೆದಾರರ ಬ್ಯಾಂಕ್ ಪಾಸ್ ಬುಕ್ ಪ್ರತಿ, ಆರೈಕೆದಾರರ ಆಧಾರ್ ಕಾರ್ಡ್.

ಹೆಚ್ಚಿನ ಮಾಹಿತಿಗಾಗಿ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಯವರ ಕಛೇರಿ. ನಂ.3 ನೆಲಮಹಡಿ, ಜಿಲ್ಲಾಡಳಿತ ಭವನ, ಬೀರಸಂದ್ರ ಗ್ರಾಮ, ಕುಂದಾಣ ಹೋಬಳಿ, ದೇವನಹಳ್ಳಿ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ-562110 ಹಾಗೂ ವಿಕಲಚೇತನರ ಸಹಾಯವಾಣಿ ಸಂಖ್ಯೆ- 080-29787441 ಇವರನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ತಿಳಿಸಿದ್ದಾರೆ.

Leave a Reply

error: Content is protected !!
LATEST
KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ... BBMP: ಮಳೆಯಿಂದ ಸಮಸ್ಯೆ ಆಗಿದ್ದರೆ ಕೂಡಲೇ 1533ಕ್ಕೆ ಕರೆ ಮಾಡಿ ದೂರು ನೀಡಿ ದೀಪಾವಳಿ ಹಬ್ಬ ಹಿನ್ನೆಲೆ KKRTC ನೌಕರರಿಗೆ ಅ.29ರಂದೇ ವೇತನ ಕೊಡಲು ಎಂಡಿ ರಾಚಪ್ಪ ನಿರ್ದೇಶನ ನಿರಂತರ ಮಳೆ- BBMP ಎಲ್ಲ ಅಧಿಕಾರಿಗಳು ಸನ್ನದ್ಧರಾಗಿ: ತುಷಾರ್ ಗಿರಿನಾಥ್