ಬೆಂಗಳೂರು: ರಾಜ್ಯ ಸರ್ಕಾರ ಕಾರ್ಮಿಕರು ಮತ್ತು ಅವರ ಮಕ್ಕಳಿಗೆ ಉತ್ತಮ ಯೋಜನೆಗಳನ್ನು ಜಾರಿ ಮಾಡುತ್ತಲೇ ಬರುತ್ತಿದೆ. ಇದೀಗ ಶೈಕ್ಷಣಿಕವಾಗಿ ಕಾರ್ಮಿಕರ ಮಕ್ಕಳನ್ನು ಮುಂದೆ ತರುವ ನಿಟ್ಟಿನಲ್ಲಿ ಮತ್ತು ಸಮಾಜದಲ್ಲಿ ಉತ್ತಮ ವ್ಯಕ್ತಿಗಳಾಗಿಸಲು ಮುಂದಾಗಿದೆ.
ಸದ್ಯ ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿಗೆ ವಂತಿಕೆ ಪಾವತಿಸುವ ಸಂಘಟಿತ ಕಾರ್ಮಿಕರ ಮಕ್ಕಳು ಪ್ರೌಢ ಶಾಲೆಯಿಂದ ಸ್ನಾತಕೋತ್ತರ ಪದವಿಯವರೆಗೆ ಹಾಗೂ ವೈದ್ಯಕೀಯ, ಇಂಜಿನಿಯರಿಂಗ್‌ನಲ್ಲಿ ವ್ಯಾಸಂಗ ಮಾಡುತ್ತಿದ್ದರೆ ಅಂತ ಮಕ್ಕಳಿಂದ 2024-25ನೇ ಸಾಲಿಗೆ ಶೈಕ್ಷಣಿಕ ಪ್ರೋತ್ಸಾಹಧನ ಸಹಾಯಕ್ಕೆ ಕರ್ನಾಟಕ ಕಾರ್ಮಿಕ ಮಂಡಳಿಯ ವೆಬ್‍ಸೈಟ್ www.klwbapps.karnataka.gov.in ಮೂಲಕ ಅರ್ಜಿ ಆಹ್ವಾನಿಸಿದೆ.
ಶೈಕ್ಷಣಿಕ ಪ್ರೋತ್ಸಾಹಧನ ಸಹಾಯ ಬಯಸುವ ವಿದ್ಯಾರ್ಥಿಗಳು ಹಿಂದಿನ ವರ್ಷದಲ್ಲಿ ಸಾಮಾನ್ಯ ವರ್ಗ ಶೇ.50, ಪ.ಜಾ, ಪ.ಪಂ.ಶೇಕಡ 45ರಷ್ಟು ಅಂಕ ಪಡೆದು ತೇರ್ಗಡೆ ಹೊಂದಿರಬೇಕು ಹಾಗೂ ಕಾರ್ಮಿಕರ ಮಾಸಿಕ ವೇತನ 35,000 ರೂಪಾಯಿಗಿಂತ ಮೀರಿರಬಾರದು. ಅರ್ಜಿ ಸಲ್ಲಿಸಲು 2025ರ ಜನವರಿ 31 ಕೊನೆಯ ದಿನಾಂಸ ಆಗಿದೆ.
ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿ, ಕಾರ್ಮಿಕ ಕಲ್ಯಾಣ ಭವನ, ನಂ.48, 1ನೇ & 2ನೇ ಮಹಡಿ, ಮತ್ತಿಕೆರೆ ಮುಖ್ಯರಸ್ತೆ, ಯಶವಂತಪುರ, ಬೆಂಗಳೂರು ಇಲ್ಲಿಗೆ ಭೇಟಿ ನೀಡಬಹುದಾಗಿದೆ. ಅಥವಾ ದೂರವಾಣಿ ಸಂಖ್ಯೆ 080-23475188, 8277291175, 8277120505, 9141585402, 9141602562ಗೆ ಕರೆ ಮಾಡಬಹುದು ಎಂದು ಕಾರ್ಮಿಕ ಅಧಿಕಾರಿ ತಿಳಿಸಿದ್ದಾರೆ.