Please assign a menu to the primary menu location under menu

NEWS

ಕಾರ್ಮಿಕರ ಮಕ್ಕಳ ಶೈಕ್ಷಣಿಕ ಪ್ರೋತ್ಸಾಹಧನ ಸಹಾಯಕ್ಕೆ ಅರ್ಜಿ ಆಹ್ವಾನ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ರಾಜ್ಯ ಸರ್ಕಾರ ಕಾರ್ಮಿಕರು ಮತ್ತು ಅವರ ಮಕ್ಕಳಿಗೆ ಉತ್ತಮ ಯೋಜನೆಗಳನ್ನು ಜಾರಿ ಮಾಡುತ್ತಲೇ ಬರುತ್ತಿದೆ. ಇದೀಗ ಶೈಕ್ಷಣಿಕವಾಗಿ ಕಾರ್ಮಿಕರ ಮಕ್ಕಳನ್ನು ಮುಂದೆ ತರುವ ನಿಟ್ಟಿನಲ್ಲಿ ಮತ್ತು ಸಮಾಜದಲ್ಲಿ ಉತ್ತಮ ವ್ಯಕ್ತಿಗಳಾಗಿಸಲು ಮುಂದಾಗಿದೆ.

ಸದ್ಯ ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿಗೆ ವಂತಿಕೆ ಪಾವತಿಸುವ ಸಂಘಟಿತ ಕಾರ್ಮಿಕರ ಮಕ್ಕಳು ಪ್ರೌಢ ಶಾಲೆಯಿಂದ ಸ್ನಾತಕೋತ್ತರ ಪದವಿಯವರೆಗೆ ಹಾಗೂ ವೈದ್ಯಕೀಯ, ಇಂಜಿನಿಯರಿಂಗ್‌ನಲ್ಲಿ ವ್ಯಾಸಂಗ ಮಾಡುತ್ತಿದ್ದರೆ ಅಂತ ಮಕ್ಕಳಿಂದ 2024-25ನೇ ಸಾಲಿಗೆ ಶೈಕ್ಷಣಿಕ ಪ್ರೋತ್ಸಾಹಧನ ಸಹಾಯಕ್ಕೆ ಕರ್ನಾಟಕ ಕಾರ್ಮಿಕ ಮಂಡಳಿಯ ವೆಬ್‍ಸೈಟ್  www.klwbapps.karnataka.gov.in  ಮೂಲಕ ಅರ್ಜಿ ಆಹ್ವಾನಿಸಿದೆ.

ಶೈಕ್ಷಣಿಕ ಪ್ರೋತ್ಸಾಹಧನ ಸಹಾಯ ಬಯಸುವ ವಿದ್ಯಾರ್ಥಿಗಳು ಹಿಂದಿನ ವರ್ಷದಲ್ಲಿ ಸಾಮಾನ್ಯ ವರ್ಗ ಶೇ.50, ಪ.ಜಾ, ಪ.ಪಂ.ಶೇಕಡ 45ರಷ್ಟು ಅಂಕ ಪಡೆದು ತೇರ್ಗಡೆ ಹೊಂದಿರಬೇಕು ಹಾಗೂ ಕಾರ್ಮಿಕರ ಮಾಸಿಕ ವೇತನ 35,000 ರೂಪಾಯಿಗಿಂತ ಮೀರಿರಬಾರದು. ಅರ್ಜಿ ಸಲ್ಲಿಸಲು 2025ರ ಜನವರಿ 31 ಕೊನೆಯ ದಿನಾಂಸ ಆಗಿದೆ.

ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿ, ಕಾರ್ಮಿಕ ಕಲ್ಯಾಣ ಭವನ, ನಂ.48, 1ನೇ & 2ನೇ ಮಹಡಿ, ಮತ್ತಿಕೆರೆ ಮುಖ್ಯರಸ್ತೆ, ಯಶವಂತಪುರ, ಬೆಂಗಳೂರು ಇಲ್ಲಿಗೆ ಭೇಟಿ ನೀಡಬಹುದಾಗಿದೆ. ಅಥವಾ ದೂರವಾಣಿ ಸಂಖ್ಯೆ 080-23475188, 8277291175, 8277120505, 9141585402, 9141602562ಗೆ ಕರೆ ಮಾಡಬಹುದು ಎಂದು ಕಾರ್ಮಿಕ ಅಧಿಕಾರಿ ತಿಳಿಸಿದ್ದಾರೆ.

Leave a Reply

error: Content is protected !!
LATEST
ಮದುವೆಗೆ ಒಪ್ಪಿ ಬಳಿಕ ತಿರಸ್ಕರಿಸಿದ ಪ್ರಿಯತಮೆ: ಕೋಪಗೊಂಡು ಇರಿದ ಪ್ರಿಯತಮ ಬಾಲಿವುಡ್ ನಟ ಸೈಫ್ ಅಲಿ ಖಾನ್‌ಗೆ ಚಾಕು ಇರಿದಿದ್ದ ಆರೋಪಿ ಸೆರೆ ಬೀದರ್: ಸಿಬ್ಬಂದಿ ಹತ್ಯೆಮಾಡಿ 93 ಲಕ್ಷ ದೋಚಿ ಪರಾರಿಯಾಗಿದ್ದ ಖದೀಮರ ಬಂಧನ ದುಷ್ಕರ್ಮಿಗಳಿಂದ ಇರಿತಕ್ಕೊಳಗಾಗಿದ್ದ ನಟ ಸೈಫ್‌ ಅಲಿ ಖಾನ್‌ ಪ್ರಾಣಾಪಾಯದಿಂದ ಪಾರು ಎಟಿಎಂಗೆ ಹಣ ತುಂಬಲು ಬಂದ ಎಸ್‌ಬಿಐ ಸಿಬ್ಬಂದಿ ಮೇಲೆ ಖದೀಮರಿಂದ ಗುಂಡಿನ ದಾಳಿ- ಓರ್ವ ಸಾವು, ₹93 ಲಕ್ಷ ದೋಚಿ ಪರಾರಿ ಬ್ಯಾಟರಿ ಚಾಲಿತ ವ್ಹೀಲ್‌ಚೇರ್‌ ವಿತರಣೆಗೆ ವಿಕಲಚೇತನರಿಂದ ಅರ್ಜಿ ಆಹ್ವಾನ ₹390 ಕೋಟಿ ಹೂಡಿಕೆಯ ಬ್ಯಾಟರಿ ಫ್ಯಾಕ್ಟರಿಗೆ ಶಂಕುಸ್ಥಾಪನೆ : ಸಚಿವ ಪಾಟೀಲ್‌ ಕನ್ನಡ ಚಿತ್ರರಂಗದ ಹಿರಿಯ ನಟ ಸರಿಗಮ ವಿಜಿ ವಿಧಿವಶ ಬೆಳಗಾವಿ: ಸಚಿವರ ಕಾರು ಅಪಘಾತ- ಲಕ್ಷ್ಮೀ ಹೆಬ್ಬಾಳ್ಕರ್ ಬೆನ್ನು ಮೂಳೆ ಮುರಿತ BMTC ಕಂಡಕ್ಟರ್‌: 1ನೇ ಮದುವೆ ಮುಚ್ಚಿಟ್ಟು ಯುವತಿ ಜತೆ ಲವ್ವಿಡವ್ವಿ - ಬಳಿಕ ತಾಳಿ ಕಟ್ಟಿ ಗರ್ಭಿಣಿ ಮಾಡಿ ವಲ್ಲೆ ಎನ್ನು...