NEWSನಿಮ್ಮ ಪತ್ರಬೆಂಗಳೂರು

ಬ್ಯೂಟಿ ಪಾರ್ಲರ್‌ ನಿರ್ವಹಣೆ ಕುರಿತ ಉಚಿತ ತರಬೇತಿಗಾಗಿ ಅರ್ಜಿ ಆಹ್ವಾನ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು ಗ್ರಾಮಾಂತರ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್‌ ಮತ್ತು ಕೆನರಾ ಬ್ಯಾಂಕ್‌ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್‌ಸೆಟ್‌ ಸಂಸ್ಥೆಯ ವತಿಯಿಂದ ಬ್ಯೂಟಿ ಪಾರ್ಲರ್‌ ನಿರ್ವಹಣೆ ಕುರಿತ 30 ದಿನಗಳ ಉಚಿತ ತರಬೇತಿಯನ್ನು ಹಮ್ಮಿಕೊಳ್ಳಲಾಗಿದ್ದು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ ಹಾಗೂ ತುಮಕೂರು ಜಿಲ್ಲಾ ವ್ಯಾಪ್ತಿಯ ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವತಿಯರಿಂದ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಬಿಪಿಎಲ್‌ ಕಾರ್ಡ್‌ ಅಥವಾ ಜಾಬ್‌ ಕಾರ್ಡ್‌ ಹಾಗೂ ಆಧಾರ್‌ ಕಾರ್ಡ್‌ನ್ನು ಕಡ್ಡಾಯವಾಗಿ ಹೊಂದಿರಬೇಕು. ಆಸಕ್ತರು ತಮ್ಮ ಹೆಸರನ್ನು ನೋಂದಾಯಿಸಲು ಮೇ 23 ಕೊನೆಯ ದಿನವಾಗಿದೆ.

ತರಬೇತಿಯ ಅವಧಿಯಲ್ಲಿ ಉಚಿತವಾಗಿ ಊಟ ಮತ್ತು ವಸತಿ ನೀಡಲಾಗುವುದು ಹಾಗೂ ತರಬೇತಿಯ ಅವಧಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರವನ್ನು ವಿತರಿಸಲಾಗುವುದು.

ಆಸಕ್ತರು ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ರುಡ್‌ಸೆಟ್‌ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಅಥವಾ ಮೊಬೈಲ್‌ ಸಂಖ್ಯೆ: 9113880324, 9740982585, 8884554510, 9241482541 ಅನ್ನು ಸಂಪರ್ಕಿಸಬಹುದಾಗಿದೆ ಎಂದು ರುಡ್‌ಸೆಟ್‌ ಸಂಸ್ಥೆಯ ಬೆಂಗಳೂರು ಶಾಖೆಯ ನಿರ್ದೇಶಕ ಜೆ.ಆನಂದ್‌ ತಿಳಿಸಿದ್ದಾರೆ.

error: Content is protected !!
LATEST
ರಾಜಕಾಲುವೆ ಒತ್ತುವರಿ ತೆರವುಗೊಳಿಸಿ, ನೆರೆ ಭೀತಿಯಿಂದ ಬೆಂಗಳೂರಿಗರ ರಕ್ಷಿಸಿ: ಡಿಸಿಎಂಗೆ ಎಎಪಿ ರಾಜ್ಯಾಧ್ಯಕ್ಷ ಆಗ್ರಹ ಮಧ್ಯಮ ವರ್ಗದ ವ್ಯಕ್ತಿ ಕೇಳಿದ ಪ್ರಶ್ನೆಗೆ ಉತ್ತರಿಸಲಾಗದೆ ಮೌನಕ್ಕೆ ಶರಣಾದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ BBMP-ಡೆಂಗ್ಯೂ ನಿಯಂತ್ರಣಕ್ಕೆ ಮುನ್ನೆಚ್ಚರಿಕೆ : ಸುರಳ್ಕರ್ ವಿಕಾಸ್ ಕಿಶೋರ್ ಉಚಿತ ಕೋಳಿ ಸಾಕಾಣಿಕೆ ತರಬೇತಿಗೆ 18 ರಿಂದ 45 ವರ್ಷದವರಿಂದ ಅರ್ಜಿ ಆಹ್ವಾನ ಪ್ರತಿಷ್ಠಿತ ಶಾಲೆಗಳಿಗೆ ಸೇರ ಬಯಸುವ ಮಕ್ಕಳಿಂದ ಅರ್ಜಿ ಆಹ್ವಾನ: ಷರತ್ತು ಅನ್ವಯ ವಸತಿ ಶಾಲೆಗಳಲ್ಲಿ ಪ್ರಥಮ ಪಿಯುಸಿ ತರಗತಿ ಪ್ರವೇಶಕ್ಕೆ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ KSRTC: ₹8.76 ಲಕ್ಷ ನಷ್ಟವುಂಟು ಮಾಡಿರುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ಸರ್ಕಾರದ ಮುಖ್ಯ ಕಾರ್ಯದರ್ಶ... BMTC ಚಾಲಕರಿಗೆ ಕೂಡಲೇ ವೇತನ ಪಾವತಿಸಿ: ಎಎಪಿಯ ಜಗದೀಶ್ ವಿ. ಸದಂ ಆಗ್ರಹ ಬಸವನಹಳ್ಳಿ: ನಿವೃತ್ತ ಸಹಾಯಕ ತೋಟಗಾರಿಕಾ ಇಲಾಖೆಯ ನಿರ್ದೇಶಕ ಚಿಕ್ಕಮಾಯಿಗೌಡರ ಪತ್ನಿ ಸಿದ್ದಮ್ಮ ನಿಧನ KSRTC ನೌಕರರ 2024ರ ವೇತನ ಪರಿಷ್ಕರಣೆ, 38 ತಿಂಗಳ ಹಿಂಬಾಕಿ ಬಿಡುಗಡೆಗೆ ಜೂನ್‌ 6ರಬಳಿಕ ನಿರ್ಧಾರ: ರಾಮಲಿಂಗಾರೆಡ್ಡಿ