Please assign a menu to the primary menu location under menu

NEWSನಮ್ಮಜಿಲ್ಲೆ

ಬ್ಯಾಟರಿ ಚಾಲಿತ ವ್ಹೀಲ್‌ಚೇರ್‌ ವಿತರಣೆಗೆ ವಿಕಲಚೇತನರಿಂದ ಅರ್ಜಿ ಆಹ್ವಾನ

ವಿಜಯಪಥ ಸಮಗ್ರ ಸುದ್ದಿ

ದೇವನಹಳ್ಳಿ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ 2024-25ನೇ ಸಾಲಿನಲ್ಲಿ ದೈಹಿಕ ವಿಕಲಚೇತನರಿಗೆ ಬ್ಯಾಟರಿ ಚಾಲಿತ ವ್ಹೀಲ್‌ಚೇರ್‌ಗಳನ್ನು ವಿತರಿಸಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿರುವ ಅರ್ಹ ವಿಕಲಚೇತನರು ಯೋಜನೆಯ ಸೌಲಭ್ಯ ಪಡೆಯಲು ಆನ್ ಲೈನ್ ಮೂಲಕ ಸೇವಾ ಸಿಂಧು ( https://sevasindhu.Karnataka.gov.in/ ) ಪೊರ್ಟಲ್ ನಲ್ಲಿ ಜನವರಿ 21 ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.

ವಿಕಲಚೇತನರು ಭಾರತದ ಪ್ರಜೆಯಾಗಿದ್ದು, ಕರ್ನಾಟಕದಲ್ಲಿ ಕನಿಷ್ಟ 10ವರ್ಷಗಳು ವಾಸವಾಗಿರಬೇಕು. ಈ ಯೋಜನೆ ಸೌಲಭ್ಯ ಪಡೆಯಲು ಕುಟುಂಬ ವಾರ್ಷಿಕ ಆದಾಯ ರೂ 2.00 ಲಕ್ಷಗಳಿಗಿಂತ ಕಡಿಮೆ ಇರಬೇಕು. ವಿಕಲಚೇತನರ ಅಧಿನಿಯಮದಲ್ಲಿ ಸೂಚಿಸಿರುವ ಹಾಗೂ ವೈದ್ಯಕೀಯ ಪ್ರಾಧಿಕಾರದಿಂದ ನೀಡಿರುವ ಗುರುತಿನ ಚೀಟಿಯೊಂದಿಗೆ ದೃಢೀಕೃತ ವೈದ್ಯಕೀಯ ಪ್ರಮಾಣ ಪತ್ರ ಸಲ್ಲಿಸಬೇಕು. ಇತರೆ ಇಲಾಖೆಗಳು ಅಥವಾ ಸಂಘ ಸಂಸ್ಥೆಗಳಿಂದ ಬ್ಯಾಟರಿ ಚಾಲಿತ ವೀಲ್ ಚೇರ್ ಪಡೆದಿದ್ದಲ್ಲಿ ಅಂತಹವರು ಅರ್ಹರಾಗಿರುವುದಿಲ್ಲ.

ಈ ಸೌಲಭ್ಯ ಪಡೆಯುವ ದೈಹಿಕ ವಿಕಲಚೇತನರು ಶೇ75% ಮತ್ತು ಅದಕ್ಕಿಂತ ಹೆಚ್ಚಿನ ದೈಹಿಕ ವಿಕಲಚೇತನರಾಗಿದ್ದು ಯಂತ್ರಚಾಲಿತ ದ್ವಿಚಕ್ರ ಮೋಟಾರು ವಾಹನವನ್ನು ಚಾಲನೆ ಮಾಡಲು ಸಾಮಾರ್ಥ್ಯ ಹೊಂದಿರದ ಹಾಗೂ ಕನಿಷ್ಟ ಒಂದು ಕೈ ಒಂದು ಕಣ್ಣು ಸ್ವಾಧೀನದಲ್ಲಿದ್ದು ಹಾಗೂ ಬ್ಯಾಟರಿಚಾಲಿತ ವ್ಹೀಲ್ ಚೇರ್ ಚಲಾಯಿಸಲು ಇತರೇ ಎಲ್ಲಾ ರೀತಿಯಲ್ಲಿ ಸದೃಢವಾಗಿರುವ ವಿಕಲಚೇತನರಾಗಿರಬೇಕು.

ಈ ಸೌಲಭ್ಯ ಪಡೆಯುವ ದೈಹಿಕ ವಿಕಲಚೇತನರು ಸರ್ಕಾರದಿಂದ ಯಂತ್ರಚಾಲಿತ ದ್ವಿಚಕ್ರ ವಾಹನವನ್ನು ಪಡೆದಿರಬಾರದು. ಬ್ಯಾಟರಿ ಚಾಲಿತ ವ್ಹೀಲ್ ಚೇರ್‌ನ್ನು ಅವರ ಜೀವತಾವದಿಯಲ್ಲಿ ಯಾವುದೇ ಕಾರಣಕ್ಕೂ ಪರಭಾರೆ ಮಾಡಬಾರದು ಮಾಡಿದ್ದು ಕಂಡು ಬಂದಲ್ಲಿ ಅಂತಹವರ ಮೇಲೆ ಕಾನೂನು ಕ್ರಮ ಜರುಗಿಸಿ ಸರ್ಕಾರಕ್ಕೆ ಮುಟ್ಟುಗೋಲು ಹಾಕಿಕೊಳ್ಳಲಾಗುವುದು.

ಹೆಚ್ಚಿನ ಮಾಹಿತಿಗಾಗಿ ವಿಕಲಚೇತನರ ಮಾಹಿತಿ ಸಲಹಾ ಕೇಂದ್ರ ದೂರವಾಣಿ ಸಂಖ್ಯೆ-080-29787441 ಅನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿ ತಿಳಿಸಿದ್ದಾರೆ.

Leave a Reply

error: Content is protected !!
LATEST
ಬ್ಯಾಟರಿ ಚಾಲಿತ ವ್ಹೀಲ್‌ಚೇರ್‌ ವಿತರಣೆಗೆ ವಿಕಲಚೇತನರಿಂದ ಅರ್ಜಿ ಆಹ್ವಾನ ₹390 ಕೋಟಿ ಹೂಡಿಕೆಯ ಬ್ಯಾಟರಿ ಫ್ಯಾಕ್ಟರಿಗೆ ಶಂಕುಸ್ಥಾಪನೆ : ಸಚಿವ ಪಾಟೀಲ್‌ ಕನ್ನಡ ಚಿತ್ರರಂಗದ ಹಿರಿಯ ನಟ ಸರಿಗಮ ವಿಜಿ ವಿಧಿವಶ ಬೆಳಗಾವಿ: ಸಚಿವರ ಕಾರು ಅಪಘಾತ- ಲಕ್ಷ್ಮೀ ಹೆಬ್ಬಾಳ್ಕರ್ ಬೆನ್ನು ಮೂಳೆ ಮುರಿತ BMTC ಕಂಡಕ್ಟರ್‌: 1ನೇ ಮದುವೆ ಮುಚ್ಚಿಟ್ಟು ಯುವತಿ ಜತೆ ಲವ್ವಿಡವ್ವಿ - ಬಳಿಕ ತಾಳಿ ಕಟ್ಟಿ ಗರ್ಭಿಣಿ ಮಾಡಿ ವಲ್ಲೆ ಎನ್ನು... KSRTC: ಪ್ರಯಾಣಿಕರು ಕಳೆದುಕೊಂಡಿದ ಬೆಲೆ ಬಾಳುವ ಬ್ಯಾಗ್‌ ಮರಳಿಸಿ ಪ್ರಾಮಾಣಿಕತೆ ಮೆರೆದ ತುರುವೇಕೆರೆ ಘಟಕದ ನೌಕರರು ಇಂದು ಮಕರ ಸಂಕ್ರಾಂತಿ ಹಬ್ಬದ ಸಂಭ್ರಮ -ಕಿಚಡಿ ಮುದ್ದೆ, ಪೊಂಗಲ್‌ ರುಚಿಯ ಸವಿ ಮೈಸೂರು: ಬೇಡಿಕೆ ಈಡೇರಿಕೆಗೆ ಮೀನಮೇಷ ಎಣಿಸುತ್ತಿರುವ ಪ್ರಧಾನಿ, ಕೃಷಿ ಮಂತ್ರಿಗಳ ಪ್ರತಿಕೃತಿ ದಹಿಸಲು ಯತ್ನಿಸಿದ ರೈತರ ಬ... ಹೈಪರ್‌ಟೆನ್ಷನ್: ಭಾರತದ ಯುವಜನತೆಗೆ ಅಡಗಿದ ಅಪಾಯ: ಡಾ.ಸಾಯಿಶಂಕರ್ ಹುಬ್ಬಳ್ಳಿ: ಸಾರಿಗೆ ನೌಕರರಿಗೆ ಸರಿ ಸಮಾನ ವೇತನ ಜಾರಿಗೆ ಸಿಎಂ ಒತ್ತಾಯಿಸಿ: ಸಚಿವರಿಗೆ ವಾಯವ್ಯ ವಲಯ ನೌಕರರ ಕೂಟ ಮನವಿ