NEWSನಮ್ಮಜಿಲ್ಲೆನಮ್ಮರಾಜ್ಯ

ಇಂದಿನಿಂದ ಗೃಹಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಕೆ ಆರಂಭ- ಸಲ್ಲಿಸುವುದು ಬಹಳ ಸುಲಭ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಜುಲೈ 1ರಿಂದ ಜಾರಿಯಾಗಲಿರುವ ಸರ್ಕಾರದ ಎರಡನೇ ಗ್ಯಾರಂಟಿ ಗೃಹಜ್ಯೋತಿ ಯೋಜನೆಗೆ ಇಂದಿನಿಂದ ಅರ್ಜಿ ಸಲ್ಲಿಕೆ ಆರಂಭಗೊಂಡಿದೆ. ಸೇವಾ ಸಿಂಧು ಪೋರ್ಟಲ್​ನಲ್ಲಿ ಕೆಲ ಬದಲಾವಣೆಯಿಂದಾಗಿ ಅರ್ಜಿ ಸಲ್ಲಿಕೆಗೆ ವಿಳಂಬವಾಗಿತ್ತು. ಸದ್ಯ ಎಲ್ಲವೂ ಸರಿಯಾಗಿದ್ದು ಭಾನುವಾರದಿಂದ ಅರ್ಜಿ ಸಲ್ಲಿಸಬಹುದಾಗಿ ಎಂದು ಸರ್ಕಾರ ತಿಳಿಸಿದೆ.

ಗೃಹಜ್ಯೋತಿಗೆ ಅರ್ಜಿ ಸಲ್ಲಿಸುವುದು ಹೇಗೆ?: ಗೃಹಜ್ಯೋತಿ ಯೋಜನೆಯಡಿ ಸೇವಾ ಸಿಂಧು ಪೋರ್ಟಲ್ ಮೂಲಕ ನೋಂದಣಿಗೆ ಅವಕಾಶ ಕಲ್ಪಿಸಲಾಗಿದೆ.  https://sevasindhugs.karnataka.gov.in/ ವೆಬ್​ಸೈಟ್​ಗೆ ಭೇಟಿ ನೀಡುವ ಮೂಲಕ ಮೊಬೈಲ್, ಕಂಪ್ಯೂಟರ್, ಲ್ಯಾಪ್​ಟಾಪ್​ನಲ್ಲೂ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ 1912 ಸಂಪರ್ಕಿಸಬಹುದಾಗಿದೆ.

ಬೆಂಗಳೂರು ಒನ್, ಕರ್ನಾಟಕ ಒನ್, ಗ್ರಾಮ ಒನ್, ನಾಡ ಕಚೇರಿ, ಗ್ರಾ.ಪಂ. ಕಚೇರಿ, ವಿದ್ಯುತ್​ ಕಚೇರಿಗಳಲ್ಲಿ ನೋಂದಾಯಿಸಬಹುದು. ಆಧಾರ್ ಕಾರ್ಡ್, ಖಾತೆ ಸಂಖ್ಯೆ (Acc Id), ಮೊಬೈಲ್ ಸಂಖ್ಯೆ, ಮನೆ ಬಾಡಿಗೆ ಕರಾರು ಪತ್ರ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ.

ಇತ್ತೀಚಿಗೆ ಗೃಹ ಜ್ಯೋತಿ ಯೋಜನೆಗೆ ಇದೇ ಜೂನ್‌ 15 ರಿಂದ ಅರ್ಜಿ ಸಲ್ಲಿಕೆ ಆರಂಭವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಇಂಧನ ಸಚಿವ ಕೆ.ಜೆ. ಜಾರ್ಜ್‌ ಅವರು ಹೇಳಿದ್ದರು. ಆದರೆ ತಾಂತ್ರಿಕ ದೋಷ ಹಿನ್ನೆಲೆಯಲ್ಲಿ ಸೇವಾಸಿಂಧು ಆಪ್​ ಮೂಲಕ ಅರ್ಜಿ ಸಲ್ಲಿಸಲು ವಿಳಂಬವಾಗಿತ್ತು. ಇದರಿಂದ ಸರ್ಕಾರ ಅರ್ಜಿ ಸಲ್ಲಿಸುವ ದಿನಾಂಕ ಮುಂದೂಡಿತ್ತು. ಹೀಗಾಗಿ ಗೃಹಜ್ಯೋತಿ ಯೋಜನೆಗೆ ನೋಂದಣಿ ಇಂದಿನಿಂದ ಅರ್ಜಿ ಸಲ್ಲಿಸಲು ಕೋರಿದೆ.

Leave a Reply

error: Content is protected !!
LATEST
160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ ಮೇಲುಸೇತುವೆ-ಕೆಳಸೇತುವೆಗಳ ನಿರ್ವಹಣೆ ಸರಿಯಾಗಿ ಮಾಡಿ: ತುಷಾರ್ ಗಿರಿನಾಥ್