NEWSಉದ್ಯೋಗನಮ್ಮರಾಜ್ಯ

ಕರಾವಳಿ ಕಾವಲು ಪೊಲೀಸ್ ಪಡೆಯಲ್ಲಿ ವಿವಿಧ 25 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕರ್ನಾಟಕ ರಾಜ್ಯದ ಪೊಲೀಸ್‌ ಇಲಾಖೆಯಲ್ಲಿ ವಿವಿಧ ಹುದ್ದೆಗಳು ಖಾಲಿ ಇದ್ದು ಕೂಡಲೇ ಅರ್ಜಿ ಹಾಕುವಂತೆ ಪೊಲೀಸ್ ಅಧೀಕ್ಷಕರು ತಿಳಿಸಿದ್ದಾರೆ.

ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಪೊಲೀಸ್ ಅಧೀಕ್ಷಕರು ಕರಾವಳಿ ಕಾವಲು ಪೊಲೀಸ್ ಪಡೆ ಮತ್ತು ಸದಸ್ಯರು ತಾಂತ್ರಿಕ ಸಿಬ್ಬಂದಿ ನೇಮಕಾತಿ ಸಮಿತಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ನೇಮಕಾತಿ ಪ್ರಕ್ರಿಯೆ ಆರಂಭಿಸಿದೆ.

ಒಟ್ಟು 25 ತಾಂತ್ರಿಕ ಸಿಬ್ಬಂದಿ (Technical Staff) ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳುತ್ತಿದೆ. ಹೀಗಾಗಿ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದ್ದು, ಮಾರ್ಚ್ 8, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.

ಕರಾವಳಿ ಕಾವಲು ಪೊಲೀಸ್ ಪಡೆ ಉಡುಪಿ ಘಟಕದಲ್ಲಿ 5 ವರ್ಷಗಳ ಅವಧಿಗೆ ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಅಭ್ಯರ್ಥಿಗಳು ಆಫ್​ಲೈನ್​/ ಪೋಸ್ಟ್​ ಮೂಲಕ ಅರ್ಜಿ ಸಲ್ಲಿಸಬಹುದು.

ಯಾವ್ಯಾವ ಹುದ್ದೆಗಳಿವೆ?: ಬೋಟ್ ಕ್ಯಾಪ್ಟನ್- 6, ಸಹಾಯಕ ಬೋಟ್ ಕ್ಯಾಪ್ಟನ್- 7, ಮೋಟಾರ್ ಲಾಂಚ್, ಮೆಕ್ಯಾನಿಕ್- 2, ಇಂಜಿನ್ ಡ್ರೈವರ್- 10, ಒಟ್ಟು 25 ಹುದ್ದೆಗಳು.

ಹುದ್ದೆಯ ಶ್ರೇಣಿ: ಬೋಟ್ ಕ್ಯಾಪ್ಟನ್- ಪೊಲೀಸ್ ಉಪನಿರೀಕ್ಷಕರು
ಸಹಾಯಕ ಬೋಟ್ ಕ್ಯಾಪ್ಟನ್- ಸಹಾಯಕ ಪೊಲೀಸ್ ಉಪನಿರೀಕ್ಷಕರು
ಮೋಟಾರ್ ಲಾಂಚ್ ಮೆಕ್ಯಾನಿಕ್- ಸಹಾಯಕ ಪೊಲೀಸ್ ಉಪನಿರೀಕ್ಷಕರು
ಇಂಜಿನ್ ಡ್ರೈವರ್- ಪೊಲೀಸ್ ಹೆಡ್ ಕಾನ್ಸ್​ಟೇಬಲ್

ಅರ್ಹತೆಗಳು? ನೇವಿ/ ಕೋಸ್ಟ್​ಗಾರ್ಡ್​/ ಬಿಎಸ್​ಎಫ್​ (ವಾಟರ್ ವಿಂಗ್​) ನಿಂದ ನಿವೃತ್ತಗೊಂಡ ಅಧಿಕಾರಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಸಂಬಂಧಿಸಿದ ವಯೋಮಿತಿ, ವಿದ್ಯಾರ್ಹತೆ, ಅನುಭವ ಮತ್ತು ಷರತ್ತು ಹಾಗೂ ನಿಬಂಧನೆಗಳನ್ನು ಪೊಲೀಸ್ ಅಧೀಕ್ಷಕರು ಕರಾವಳಿ ಕಾವಲು ಪೊಲೀಸ್ ಪಡೆ ಇವರಿಂದ ಕಚೇರಿ ವೇಳೆಯಲ್ಲಿ ಅಥವಾ ಅಧಿಕೃತ ವೆಬ್​ಸೈಟ್ ksp.gov.in ಗೆ ಭೇಟಿ ನೀಡಿ ಪಡೆದುಕೊಳ್ಳಬಹುದು.

ಅರ್ಜಿ ಸಲ್ಲಿಸುವುದು ಹೇಗೆ?: ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಮಾರ್ಚ್​ 8, 2023 ಸಂಜೆ 5.30 ರೊಳಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.

ಪೊಲೀಸ್ ಅಧೀಕ್ಷಕರು
ಕರಾವಳಿ ಕಾವಲು ಪೊಲೀಸ್
ಉಡುಪಿ ಮತ್ತು ಸದಸ್ಯರು ತಾಂತ್ರಿಕ ಸಿಬ್ಬಂದಿ
ನೇಮಕಾತಿ ಸಮಿತಿ ಕರ್ನಾಟಕ.

ಈಗಾಗಲೇ ಅರ್ಜಿ ಸಲ್ಲಿಕೆ 20/02/2023 ರಿಂದ ಆರಂಭವಾಗಿದ್ದು, ಅರ್ಜಿ ಸಲ್ಲಿಸಲು ಕೊನೆಯ ದಿನ: ಮಾರ್ಚ್ 8, 2023 ಆಗಿದೆ. ಹೆಚ್ಚಿನ ಮಾಹಿತಿಗೆ ದೂ. ಸಂಖ್ಯೆ: 0820-2538120, 2538150, ಫ್ಯಾಕ್ಸ್ ಸಂಖ್ಯೆ: 2535100 ಅನ್ನು ಸಂಪರ್ಕಿಸಬಹುದು.

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ